ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Minority marriage: ಅಲ್ಪಸಂಖ್ಯಾತರ ಸಾಮೂಹಿಕ ಮದುವೆ; ಪ್ರತಿ ಜೋಡಿಗೆ 50 ಸಾವಿರ ಮಂಜೂರು

ಆರ್ಥಿಕವಾಗಿ ಹಿಂದುಳಿದ ಅಲ್ಪಸಂಖ್ಯಾತ ಸಮುದಾಯದವರ ಸರಳ ವಿವಾಹಕ್ಕೆ ಪ್ರೋತ್ಸಾಹ ನೀಡಲು ಪ್ರತಿ ಜೋಡಿಗೆ 50 ಸಾವಿರ ರೂ. ಕೊಡುವ ಕಾರ್ಯಕ್ರಮಕ್ಕೆ ಸರ್ಕಾರದ ಮಂಜೂರಾತಿ ದೊರೆತಿದೆ. ರಾಜ್ಯ ಬಜೆಟ್ ನಲ್ಲಿ ಈ ಕುರಿತು ಘೋಷಣೆಯನ್ನು ಮಾಡಲಾಗಿತ್ತು.

ಸಾಮೂಹಿಕ ಮದುವೆಯಾಗುವ ಜೋಡಿಗೆ 50 ಸಾವಿರ

Vishakha Bhat Vishakha Bhat Aug 6, 2025 6:55 AM

ಬೆಂಗಳೂರು: ಆರ್ಥಿಕವಾಗಿ ಹಿಂದುಳಿದ ಅಲ್ಪಸಂಖ್ಯಾತ (minority marriage) ಸಮುದಾಯದವರ ಸರಳ ವಿವಾಹಕ್ಕೆ ಪ್ರೋತ್ಸಾಹ ನೀಡಲು ಸ್ವಯಂ ಸೇವಾ ಸಂಸ್ಥೆಗಳ ಮೂಲಕ ನಡೆಯುವ ಸಾಮೂಹಿಕ ವಿವಾಹ ವೆಚ್ಚಗಳಿಗಾಗಿ ಪ್ರತಿ ಜೋಡಿಗೆ 50 ಸಾವಿರ ರೂ. ಮತ್ತು ಕಾರ್ಯಕ್ರಮ ಆಯೋಜಿಸುವ ಸಂಸ್ಥೆಗೆ 5 ಸಾವಿರ ರೂ. ನೀಡುವ ಕಾರ್ಯಕ್ರಮಕ್ಕೆ ಸರ್ಕಾರದ ಮಂಜೂರಾತಿ ದೊರೆತಿದೆ. ರಾಜ್ಯ ಬಜೆಟ್ ನಲ್ಲಿ ಈ ಕುರಿತು ಘೋಷಿಸಲಾಗಿತ್ತು. ಇದೀಗ ಸರ್ಕಾರಿ ಆದೇಶ ಹೊರಬಿದ್ದಿದೆ. ಯೋಜನೆಯಡಿಯಲ್ಲಿ 5 ಸಾವಿರ ಜೋಡಿ ಮಿತಿ ವರೆಗೆ ವರೆಗೆ ಸಾಮೂಹಿಕ ವಿವಾಹ ಕಾರ್ಯಕ್ರಮ ಮಾಡಬಹುದಾಗಿದೆ.

ಈ ಕುರಿತು ಮಾತನಾಡಿರುವ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಝಮೀರ್ ಅಹ್ಮದ್ ಖಾನ್, ಆರ್ಥಿಕವಾಗಿ ಹಿಂದುಳಿದ ಅಲ್ಪಸಂಖ್ಯಾತ ಸಮುದಾಯದವರ ಸರಳ ವಿವಾಹಕ್ಕೆ ಪ್ರೋತ್ಸಾಹ ನೀಡಲು ಪ್ರತಿ ಜೋಡಿಗೆ 50 ಸಾವಿರ ರೂ. ಕೊಡುವ ಕಾರ್ಯಕ್ರಮಕ್ಕೆ ಸರ್ಕಾರದ ಮಂಜೂರಾತಿ ದೊರೆತಿದೆ ಎಂದು ತಿಳಿಸಿದ್ದಾರೆ. ಅಷ್ಟೇ ಅಲ್ಲದೆ, ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ 250 ಮೌಲಾನಾ ಆಜಾದ್ ಆಂಗ್ಲ ಮಾಧ್ಯಮ ಮಾದರಿ ಶಾಲೆಗಳಲ್ಲಿ ಹಂತ ಹಂತವಾಗಿ ಪಬ್ಲಿಕ್ ಶಾಲೆಗಳ ಮಾದರಿಯಲ್ಲಿ ಪೂರ್ವ ಪ್ರಾಥಮಿಕ ಹಂತದಿಂದ ಪಿಯುವರೆಗೆ ತರಗತಿ ಪ್ರಾರಂಭಿಸಲು ಘೋಷಿಸಲಾಗಿತ್ತು. ಪ್ರಸಕ್ತ ವರ್ಷ 100 ಆಜಾದ್ ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಶಾಲೆಗಳನ್ನಾಗಿ ಮೇಲ್ದರ್ಜೆಗೇರಿಸಲು ಆದೇಶ ಹೊರಡಿಸಲಾಗಿದೆ.

ಈ ಸುದ್ದಿಯನ್ನೂ ಓದಿ:English Medium classes: ಗ್ರಾಮೀಣ ವಿದ್ಯಾರ್ಥಿಗಳಿಗೆ ಗುಡ್‌ ನ್ಯೂಸ್‌; 4134 ಸರ್ಕಾರಿ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ತರಗತಿ ಆರಂಭಕ್ಕೆ ಸರ್ಕಾರ ಆದೇಶ

ಸರಳ ವಿವಾಹ ಯೋಜನೆಯಡಿ ಪ್ರೋತ್ಸಾಹ ಧನ ಪಡೆಯಲು ಅರ್ಹತೆಗಳೇನು?

  • ಕರ್ನಾಟಕ ರಾಜ್ಯದ ನಿವಾಸಿಗಳು ಅಭ್ಯರ್ಥಿಯು ಕರ್ನಾಟಕದ ರಾಜ್ಯದ ನಿವಾಸಿಯಾಗಿರಬೇಕು.
  • ಸರಳ ವಿವಾಹವಾಗುವ ದಂಪತಿಗಳಲ್ಲಿ ಯುವಕನ ವಯಸ್ಸು 21-45 ವರ್ಷಗಳು, ಯುವತಿಯ ವಯಸ್ಸು 18-42 ವರ್ಷದೊಳಗಿರಬೇಕು.
  • ಕುಟುಂಬದ ಆದಾಯ ಎಲ್ಲಾ ಮೂಲಗಳಿಂದ ಕುಟುಂಬದ ಒಟ್ಟು ವಾರ್ಷಿಕ ಆದಾಯವು ರೂ. 2 ಲಕ್ಷಕ್ಕಿಂತ ಹೆಚ್ಚಿರಬಾರದು.
  • ಕಾಲಮಿತಿ ಈ ಕಾರ್ಯಕ್ರಮವು ಮದುವೆಯಾದ ಒಂದು ವರ್ಷದ ನಂತರ ಮಾತ್ರ ಬಳಕೆಗೆ ಲಭ್ಯವಿದೆ.
  • ನೋಂದಯಿತ ಸಂಘ ಸಂಸ್ಥೆಗಳು, ಧಾರ್ಮಿಕ ಸಂಸ್ಥೆಗಳು ವ್ಯವಸ್ಥೆ ಮಾಡುವ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ವಿವಾಹವಾಗಿರಬೇಕು.