ಫೋಟೋ ಗ್ಯಾಲರಿ ಬಜೆಟ್​ T20 ವಿಶ್ವಕಪ್​ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ವಿದೇಶ ಕ್ರೈಂ ಧಾರ್ಮಿಕ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ಗ್ರಾಮ ಪಂಚಾಯಿತಿಗೆ ‘ಮಹಾತ್ಮ ಗಾಂಧಿ’ ಹೆಸರು

ಬಿಜೆಪಿ ನೇತೃತ್ವದ ಕೇಂದ್ರ ಸರಕಾರ ನರೇಗಾ ಯೋಜನೆಯಿಂದ ಗಾಂಧೀಜಿ ಹೆಸರು ಕೈಬಿಟ್ಟ ನಂತರ, ರಾಜ್ಯ ಕಾಂಗ್ರೆಸ್ ಸರಕಾರ ಸಾಧ್ಯವಾದಲ್ಲೆಲ್ಲ ಗಾಂಧೀಜಿ ಹೆಸರಿನ ಯೋಜನೆ ಗಳನ್ನು ಶುರು ಮಾಡುತ್ತಿದೆ. ಗಾಂಧೀಜಿ ಆದರ್ಶಗಳಿಗೆ ಗೌರವ ಸಲ್ಲಿಸಲು ರಾಜ್ಯದ ಎಲ್ಲಾ ಗ್ರಾಮ ಪಂಚಾಯಿತಿಗಳಿಗೆ ಮಹಾತ್ಮ ಗಾಂಧಿ ಗ್ರಾಮ ಪಂಚಾಯಿತಿ ಎಂದು ನಾಮಕರಣ ಮಾಡಲು ಸರಕಾರ ತೀರ್ಮಾನಿಸಿದೆ.

ಗ್ರಾಮ ಪಂಚಾಯಿತಿಗೆ ‘ಮಹಾತ್ಮ ಗಾಂಧಿ’ ಹೆಸರು

-

Ashok Nayak
Ashok Nayak Mar 7, 2026 3:39 PM

ನರೇಗಾದಿಂದ ಗಾಂಧೀಜಿ ಹೆಸರು ಕೈಬಿಟ್ಟ ಕೇಂದ್ರ ಸರಕಾರಕ್ಕೆ ರಾಜ್ಯ ಸರಕಾರ ಸವಾಲು

ಗಾಂಧೀಜಿ ಹೆಸರು ಚಿರಸ್ಥಾಯಿಗೊಳಿಸಲು ಕ್ರಮ, ಗ್ರಾಪಂಗಳ ಬಲವರ್ಧನೆಗೆ, ಆಸ್ತಿ ಬಳಕೆಗೆ ಹೆಜ್ಜೆ

ಬಿಜೆಪಿ ನೇತೃತ್ವದ ಕೇಂದ್ರ ಸರಕಾರ ನರೇಗಾ ಯೋಜನೆಯಿಂದ ಗಾಂಧೀಜಿ ಹೆಸರು ಕೈಬಿಟ್ಟ ನಂತರ, ರಾಜ್ಯ ಕಾಂಗ್ರೆಸ್ ಸರಕಾರ ಸಾಧ್ಯವಾದಲ್ಲೆಲ್ಲ ಗಾಂಧೀಜಿ ಹೆಸರಿನ ಯೋಜನೆ ಗಳನ್ನು ಶುರು ಮಾಡುತ್ತಿದೆ. ಗಾಂಧೀಜಿ ಆದರ್ಶಗಳಿಗೆ ಗೌರವ ಸಲ್ಲಿಸಲು ರಾಜ್ಯದ ಎಲ್ಲಾ ಗ್ರಾಮ ಪಂಚಾಯಿತಿಗಳಿಗೆ ಮಹಾತ್ಮ ಗಾಂಧಿ ಗ್ರಾಮ ಪಂಚಾಯಿತಿ ಎಂದು ನಾಮಕರಣ ಮಾಡಲು ಸರಕಾರ ತೀರ್ಮಾನಿಸಿದೆ.

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಹೆಸರನ್ನು ಚಿರಸ್ಥಾಯಿಗೊಳಿಸುವ ಉದ್ದೇಶದಿಂದ ರಾಜ್ಯದ ಎಲ್ಲಾ ಗ್ರಾಮ ಪಂಚಾಯಿತಿಗಳನ್ನು ಮಹಾತ್ಮ ಗಾಂಧಿ ಗ್ರಾಮ ಪಂಚಾಯಿತಿ ಎಂದು ನಾಮಕರಣ ಮಾಡಲಾಗುತ್ತಿದೆ. ಗ್ರಾಮ ಪಂಚಾಯಿತಿಗಳ ಆಸ್ತಿಗಳ ನಗದೀಕರಣ ಮತ್ತು ಮೌಲ್ಯವರ್ಧನೆಗೆ ಸ್ಥಳೀಯ ಆರ್ಥಿಕ ಬಲವರ್ಧನೆ ಕಾರ್ಯಕ್ರಮವನ್ನು ಆರಂಭಿಸಲಾಗುತ್ತದೆ.

ಈ ಯೋಜನೆಯಡಿ ಪ್ರಾಯೋಗಿಕವಾಗಿ ಪ್ರತಿ ವಿಭಾಗದ ಐದು ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ, ಅವಶ್ಯವಿರುವ ಸೌಲಭ್ಯಗಳನ್ನು ಒಳಗೊಂಡ ಆದಾಯೋತ್ಪನ್ನ ಘಟಕ ಗಳನ್ನು ಪ್ರಸಕ್ತ ವರ್ಷ 25 ಕೋಟಿ ರು.ಗಳ ವೆಚ್ಚದಲ್ಲಿ ಸ್ಥಾಪಿಸಿ ನಿರ್ವಹಿಸಲಾಗುತ್ತದೆ.

ಇದನ್ನೂ ಓದಿ: Karnataka Budget 2026: ಬಜೆಟ್‌ನಲ್ಲಿ ಪ್ರವಾಸೋದ್ಯಮಕ್ಕೆ ಆದ್ಯತೆ: ಅಡಿಗಾಸ್‌ ಯಾತ್ರಾ ಸ್ವಾಗತ

ವಿದ್ಯುಚ್ಛಕ್ತಿ ಬಿಲ್ಲುಗಳ ಪಾವತಿಯಲ್ಲಿ ಗ್ರಾಮ ಪಂಚಾಯಿತಿಗಳನ್ನು ಸ್ವಯಂ ಸುಸ್ಥಿರ ಗೊಳಿಸಲು ಹಾಗೂ ಅವಶ್ಯವಿರುವ ವಾರ್ಷಿಕ ಅಂದಾಜು 4000 ವ್ಯಾಟ್ ವಿದ್ಯುಚ್ಛಕ್ತಿ ಯನ್ನು ಉತ್ಪಾದಿಸುವ ನಿಟ್ಟಿನಲ್ಲಿ ರಾಜ್ಯದ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಸೋಲಾರ್ ಮೈಕ್ರೋ ಗ್ರಿಡ್‌ಗಳನ್ನು ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಸ್ಥಾಪಿಸುವ ‘ಅನಂತ; ಯೋಜನೆ ಜಾರಿಗೊಳಿಸಲಾಗುತ್ತದೆ.

ಐದನೇ ರಾಜ್ಯ ಹಣಕಾಸು ಆಯೋಗವು 2026-2030ರ ವರದಿಯನ್ನು ಸಲ್ಲಿಸಿದೆ. ಸ್ಥಳೀಯ ಸಂಸ್ಥೆಗಳಿಗೆ ಹಂಚಿಕೆ ಮಾಡುತ್ತಿರುವ ರಾಜ್ಯ ಸರಕಾರದ ಸಾಲೇತರ ನಿವ್ವಳ ಸ್ವಂತ ರಾಜಸ್ವ ಆದಾಯದ ಪ್ರಮಾಣವನ್ನು ಶೇ.48ರಿಂದ ಶೇ.50ಕ್ಕೆ ಹೆಚ್ಚಿಸಲಾಗುವುದು. ಇದರಲ್ಲಿ ಶೇ.35ರಷ್ಟನ್ನು ಪಂಚಾಯತ್ ರಾಜ್ ಸಂಸ್ಥೆಗಳಿಗೆ ಹಾಗೂ ಶೇ.15ರಷ್ಟನ್ನು ನಗರ ಸ್ಥಳೀಯ ಸಂಸ್ಥೆಗಳಿಗೆ ಹಂಚಿಕೆ ಮಾಡಲಾಗುತ್ತದೆ.

ನೂತನ ರಾಮ್‌ಜಿ ಯೋಜನೆಯಿಂದ ಅನಾಹುತಗಳು

ಬೇಡಿಕೆ ಆಧಾರಿತ ಉದ್ಯೋಗ ಖಾತರಿಯಿಂದ ದೂರ ಸರಿದು ಕೇಂದ್ರದಿಂದ ನಿರ್ಧರಿ ಸಲ್ಪಡುವ ಉದ್ಯೋಗ ಹಂಚಿಕೆ ವ್ಯವಸ್ಥೆಗೆ ಅವಕಾಶವಾಗುವುದು. ಸಂವಿಧಾನದ 73ನೇ ತಿದ್ದುಪಡಿಯ ಮೂಲ ತತ್ವಕ್ಕೆ ವಿರುದ್ಧವಾಗಿದ್ದು, ಪಂಚಾಯಿತಿಗಳ ನಿರ್ಧರಣಾಧಿಕಾರಕ್ಕೆ ಧಕ್ಕೆಯಾಗುವ ಸಾಧ್ಯತೆ ಹೆಚ್ಚಾಗಿರುತ್ತದೆ.

ಯೋಜನೆಯ ರೂಪಿಸುವಿಕೆ ಮತ್ತು ಅನುಷ್ಠಾನಗಳ ಕೇಂದ್ರೀಕರಣ ಹೆಚ್ಚಳವಾಗುವುದು. ಪರೋಕ್ಷವಾಗಿ ಗುತ್ತಿಗೆದಾರರ ಭಾಗವಹಿಸುವಿಕೆಗೆ ಅವಕಾಶ ನೀಡುವ ವ್ಯವಸ್ಥೆಯಿಂದಾಗಿ ಗ್ರಾಮೀಣ ಕಾರ್ಮಿಕರಿಗೆ ನೇರ ಉದ್ಯೋಗ ಅವಕಾಶಗಳು ಕಡಿಮೆಯಾಗುವವು.

ಕೇಂದ್ರದಿಂದ ಹೇರಲ್ಪಡುವ ಆಡಳಿತಾತ್ಮಕ ಮತ್ತು ನಿಯಾಮಕ ನಿಯಂತ್ರಣಗಳಿಂದ ಕಾಮಗಾರಿಗಳ ಸಮಯೋಚಿತ ಜಾರಿಗೆ ಅಡಚಣೆ ಉಂಟಾಗುವ ಸಾಧ್ಯತೆ ಹೆಚ್ಚಾಗಿರುತ್ತದೆ. ಗ್ರಾಮ ಪಂಚಾಯಿತಿಗಳನ್ನು ಸಬಲಗೊಳಿಸಿ ಗ್ರಾಮೀಣ ಜೀವನೋಪಾಯವನ್ನು ಬಲಪಡಿಸಿದ್ದ ಹಿಂದಿನ ವ್ಯವಸ್ಥೆಯನ್ನು ಪುನಃಸ್ಥಾಪಿಸುವಂತೆ ಕೇಂದ್ರ ಸರಕಾರವನ್ನು ತೀವ್ರವಾಗಿ ಆಗ್ರಹಿಸುತ್ತದೆ.

ಗ್ರಾಮೀಣ ಕಾರ್ಮಿಕರ ಹಕ್ಕುಗಳನ್ನು ರಕ್ಷಿಸಲು ಹಾಗೂ ವಿಕೇಂದ್ರೀಕೃತ ಆಡಳಿತದ ತತ್ವಗಳನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಅಗತ್ಯವಾದ ಎಲ್ಲಾ ಕ್ರಮಗಳನ್ನು ಕೈಗೊಳ್ಳಲು, ಅಗತ್ಯವಿದ್ದಲ್ಲಿ ಕಾನೂನು ಹೋರಾಟವನ್ನೂ ಸಹ ಕೈಗೊಳ್ಳಲು ನಮ್ಮ ಸರಕಾರ ಬದ್ಧ ವಾಗಿದೆ ಎಂದು ಸಿದ್ದರಾಮಯ್ಯ ಅವರು ಕೇಂದ್ರ ಸರಕಾರದ ವಿರುದ್ಧ ಕಿಡಿ ಕಾರಿದ್ದಾರೆ.

ನರೇಗಾ ಹೆಸರು ಬದಲಾವಣೆಗೆ ಸಿದ್ದು ಆಕ್ಷೇಪ

ದಾಖಲೆಯ 17ನೇ ಬಜೆಟ್ ಮಂಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ಆಯವ್ಯಯದಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಹೆಸರನ್ನು ಕೇಂದ್ರ ಸರಕಾರವು ವಿಬಿ-ಜಿ-ರಾಮ-ಜಿ ಎಂದು ಬದಲಾಯಿಸಿರುವುದರ ಬಗ್ಗೆ ಬಜೆಟ್ ಭಾಷಣದಲ್ಲಿ ಸಿದ್ದರಾಮಯ್ಯನವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಗ್ರಾಮೀಣ ಕುಟುಂಬಗಳಿಗೆ ಜೀವನೋಪಾಯ ಭದ್ರತೆಯನ್ನು ಒದಗಿಸುವ ಮಹತ್ವಾ ಕಾಂಕ್ಷೆ ಯಿಂದ ಯುಪಿಎ. ಸರಕಾರವು 2004ರಲ್ಲಿ ಜಾರಿಗೆ ತಂದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯು (ನರೇಗಾ) ಗ್ರಾಮೀಣ ಭಾಗದಲ್ಲಿ ವಿಕೇಂದ್ರೀಕೃತ ಯೋಜನೆಯನ್ನು ರೂಪಿಸುವುದಕ್ಕೆ ಉತ್ತೇಜನ ನೀಡುವುದರೊಂದಿಗೆ ಗ್ರಾಮೀಣ ಮೂಲಸೌಕರ್ಯ ಮತ್ತು ದೀರ್ಘಕಾಲೀನ ಬಾಳಿಕೆ ಬರುವ ಸಮುದಾಯ ಆಸ್ತಿಗಳ ಸೃಷ್ಟಿಗೆ ಮಹತ್ವದ ಕೊಡುಗೆಯನ್ನು ನೀಡಿರುತ್ತದೆ.

ಈ ಯೋಜನೆಯಡಿ ರಾಜ್ಯದಲ್ಲಿ ಸುಮಾರು 182 ಕೋಟಿ ಮಾನವ ದಿನಗಳ ಉದ್ಯೋಗವು ಸೃಜನೆಯಾಗಿರುತ್ತದೆ. ಒಟ್ಟಾರೆ ರು.61000 ಕೋಟಿ ವೇತನ ಪಾವತಿಸಲಾಗಿದ್ದು, ಸುಮಾರು 77 ಲಕ್ಷ ಆಸ್ತಿಗಳು ನಿರ್ಮಾಣವಾಗಿರುತ್ತವೆ. ಪ್ರಸಕ್ತ ವರ್ಷದ ಸುಮಾರು 71 ಲಕ್ಷ ಗ್ರಾಮೀಣ ಕುಟುಂಬಗಳು ಈ ಯೋಜನೆಯ ಪ್ರಯೋಜನ ಪಡೆದಿರುತ್ತವೆ.

ಕೇಂದ್ರ ಸರಕಾರವು ಈ ಯೋಜನೆಯನ್ನು ರದ್ದುಗೊಳಿಸಿ ವಿಬಿ-ಜಿ-ರಾಮ-ಜಿ ಯೋಜನೆ ಯನ್ನು ಜಾರಿಗೆ ತಂದಿದ್ದು, ಇದು ನರೇಗಾ ಯೋಜನೆಯ ಮೂಲೋದ್ದೇಶವಾದ ಹಕ್ಕು ಆಧಾರಿತ ದೃಷ್ಟಿಕೋನವನ್ನು ದುರ್ಬಲಗೊಳಿಸುವ ಕ್ರಮವಾಗಿದೆ ಹಾಗೂ ಮಹಾತ್ಮ ಗಾಂಧಿಯವರ ಗ್ರಾಮ ಸ್ವರಾಜ್ ಪರಿಕಲ್ಪನೆಗೆ ವಿರುದ್ಧವಾಗಿರುತ್ತದೆ. ಈ ಯೋಜನೆಯ ಜಾರಿಯಿಂದ ಈ ಕೆಳಗಿನ ಅನಾಹುತಗಳು ಸೃಷ್ಟಿಯಾಗಿರುತ್ತವೆ.

ಜಲಜೀವನ್‌ಗೆ ಮಿಷನ್‌ಗೆ ಕೇಂದ್ರದಿಂದ ಬಂದಿಲ್ಲ ಹಣ

ಜಲಜೀವನ್ ಮಿಷನ್ ಯೋಜನೆಯಡಿಯಲ್ಲಿ ಒಟ್ಟಾರೆ 69,488 ಕೋಟಿ ರು. ಮೊತ್ತದ ಕಾಮಗಾರಿಗಳು ಅನುಮೋದನೆಯಾಗಿದ್ದು, ಇದರಲ್ಲಿ ಕೇಂದ್ರ ಸರಕಾರದ ಪಾಲು 30888 ಕೋಟಿ ರು.ಗಳಾಗಿದ್ದು, ರಾಜ್ಯ ಸರಕಾರದ ಪಾಲು 38,600 ಕೋಟಿ ರು. ಆಗಿರುತ್ತದೆ. ಕೇಂದ್ರ ಸರ್ಕಾರದಿಂದ ಇದುವರೆಗೆ ಕೇವಲ 11,786 ಕೋಟಿ ರು. ಮಾತ್ರ ಬಿಡುಗಡೆ ಮಾಡಿದ್ದು, ಇನ್ನೂ 19,102 ಕೋಟಿ ರು. ಕೇಂದ್ರ ಸರಕಾರ ಬಿಡುಗಡೆ ಮಾಡಬೇಕಾಗಿದೆ. ರಾಜ್ಯ ಸರಕಾರದಿಂದ ಒದಗಿಸಬೇಕಾದ ಅನುದಾನದಲ್ಲಿ ಈಗಾಗಲೇ 27,098 ಕೋಟಿ ರು. ಬಿಡುಗಡೆ ಮಾಡಲಾಗಿದ್ದು, 11502 ಕೋಟಿ ರು. ಮಾತ್ರ ಬಿಡುಗಡೆ ಮಾಡಬೇಕಾಗಿರುತ್ತದೆ. ಕೇಂದ್ರ ಸರಕಾರ 2025-26ನೇ ಸಾಲಿನಲ್ಲಿ ಯಾವುದೇ ಅನುದಾನ ಬಿಡುಗಡೆ ಮಾಡದಿದ್ದರೂ ಸಹ ಈ ಯೋಜನೆಯ ಹಿತದೃಷ್ಟಿಯಿಂದ ರಾಜ್ಯ ಸರಕಾರದಿಂದ ಒಟ್ಟಾರೆ 15500 ಕೋಟಿ ರು.ಗಳಷ್ಟು ಅನುದಾನವನ್ನು ಹೆಚ್ಚುವರಿಯಾಗಿ ಬಿಡುಗಡೆ ಮಾಡಲಾಗಿದೆ. 2026-27ನೇ ಸಾಲಿನಲ್ಲಿ ಈ ಯೋಜನೆಗಾಗಿ 10,433 ಕೋಟಿ ರು.ಗಳನ್ನು ಕಾಯ್ದಿರಿಸಲಾಗಿರುತ್ತದೆ.

ಪೊಲೀಸರಿಗೆ ವಸತಿ ಸೌಲಭ್ಯ

ಇಲಾಖೆಯ ಸಿಬ್ಬಂದಿಗಳಿಗೆ ಸುಸಜ್ಜಿತ ವಸತಿಗೃಹಗಳನ್ನು ಒದಗಿಸಲು ರೂಪಿಸಿದ 2000 ಕೋಟಿ ರು.ಗಳ ಮೊತ್ತದ ಪೊಲೀಸ್ ಗೃಹ 2025 ಯೋಜನೆಗೆ ಇದುವರೆಗೆ 1257 ಕೋಟಿ ರು. ಒದಗಿಸಿದ್ದು, ಐದು ಹಂತಗಳಲ್ಲಿ 4914 ವಸತಿಗೃಹಗಳ ನಿರ್ಮಾಣ ಕಾರ್ಯ ಕೈಗೆತ್ತಿಕೊಳ್ಳ ಲಾಗಿದೆ. ಪ್ರಸಕ್ತ ಸಾಲಿನಲ್ಲಿ 250 ಕೋಟಿ ರು. ವೆಚ್ಚದಲ್ಲಿ ವಸತಿಗೃಹಗಳ ನಿರ್ಮಾಣ ಕಾಮಗಾರಿ ಕೈಗೆತ್ತಿಕೊಳ್ಳಲಾಗುತ್ತದೆ. ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯುವ ವಿಧಾನಮಂಡಲದ ಪ್ರಸಕ್ತ ವರ್ಷದಲ್ಲಿ ನಿವೇಶನ ಲಭ್ಯವಿರುವ 10 ಪೊಲೀಸ್ ಠಾಣೆ ಕಟ್ಟಡಗಳನ್ನು 30 ಕೋಟಿ ರು.ಗಳ ವೆಚ್ಚದಲ್ಲಿ ನಿರ್ಮಿಸಲಾಗುತ್ತದೆ.