G.S. Siddalingaiah: ಹಿರಿಯ ಸಾಹಿತಿ ಜಿ.ಎಸ್.ಸಿದ್ದಲಿಂಗಯ್ಯ ನಿಧನ
ಹಿರಿಯ ಸಾಹಿತಿ, ವಿಮರ್ಶಕ ಮತ್ತು ಕನ್ನಡ ಸಾಹಿತ್ಯ ಪರಿಷತ್‌ನ ಅಧ್ಯಕ್ಷರಾಗಿದ್ದ ಜಿ.ಎಸ್.ಸಿದ್ದಲಿಂಗಯ್ಯ ಬೆಂಗಳೂರು ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 94 ವರ್ಷ ವಯಸ್ಸಾಗಿತ್ತು. ತುಮಕೂರು ಜಿಲ್ಲೆ ಬೆಳ್ಳಾವಿಯವರಾದ ಸಿದ್ದಲಿಂಗಯ್ಯ ಶಿಕ್ಷಣ ಇಲಾಖೆಯಲ್ಲಿ ಅಧಿಕಾರಿಯಾಗಿಯೂ ಕಾರ್ಯ ನಿರ್ವಹಿಸಿದ್ದರು.

ಜಿ.ಎಸ್.ಸಿದ್ದಲಿಂಗಯ್ಯ.

ಬೆಂಗಳೂರು: ಹಿರಿಯ ಸಾಹಿತಿ, ವಿಮರ್ಶಕ ಮತ್ತು ಕನ್ನಡ ಸಾಹಿತ್ಯ ಪರಿಷತ್‌ನ ಅಧ್ಯಕ್ಷರಾಗಿದ್ದ ಜಿ.ಎಸ್.ಸಿದ್ದಲಿಂಗಯ್ಯ (G.S. Siddalingaiah) ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 94 ವರ್ಷ ವಯಸ್ಸಾಗಿತ್ತು. ತುಮಕೂರು ಜಿಲ್ಲೆ ಬೆಳ್ಳಾವಿಯವರಾದ ಸಿದ್ದಲಿಂಗಯ್ಯ ಶಿಕ್ಷಣ ಇಲಾಖೆಯಲ್ಲಿ ಅಧಿಕಾರಿಯಾಗಿಯೂ ಕಾರ್ಯ ನಿರ್ವಹಿಸಿದ್ದರು. ಕುವೆಂಪು ಅವರ ನೆಚ್ಚಿನ ಶಿಷ್ಯರಲ್ಲಿ ಒಬ್ಬರಾಗಿದ್ದ ಜಿಎಸ್ ಸಿದ್ದಲಿಂಗಯ್ಯ ನಿಧನಕ್ಕೆ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.
ಮೃತರು ಪತ್ನಿಯನ್ನು ಅಗಲಿದ್ದಾರೆ. ಮೇ 7ರ ಅಪರಾಹ್ನ 3 ಗಂಟೆಗೆ ಚಾಮರಾಜಪೇಟೆಯ ಲಿಂಗಾಯತ ರುದ್ರಭೂಮಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.
ಸಿದ್ದಲಿಂಗಯ್ಯ ಅವರು 1931ರಲ್ಲಿ ತುಮಕೂರು ಜಿಲ್ಲೆಯ ಬೆಳ್ಳಾವಿಯಲ್ಲಿ ಜನಿಸಿದರು. ಚಿತ್ರದುರ್ಗದ ಸರ್ಕಾರಿ ಕಲಾ ಕಾಲೇಜಿನಲ್ಲಿ ಕನ್ನಡ ಅಧ್ಯಾಪಕರಾಗಿ ವೃತ್ತಿ ಜೀವನ ಆರಂಭಿಸಿದ ಅವರು ವಿವಿಧ ಕಾಲೇಜುಗಳಲ್ಲಿ ಪ್ರಾಂಶುಪಾಲರಾಗಿ, ಕಾಲೇಜು ಶಿಕ್ಷಣ ಇಲಾಖೆ ನಿರ್ದೇಶಕಾಗಿ ಕರ್ತವ್ಯ ನಿರ್ವಹಿಸಿದ್ದರು.
ಸಾಹಿತ್ಯ ಅಕಾಡೆಮಿಯ ವಿಶೇಷ ಗೌರವ, ರಾಜ್ಯೋತ್ಸವ ಪ್ರಶಸ್ತಿ, ಬಸವ ಪ್ರಸಸ್ತಿ, ಮಾಸ್ತಿ ಪ್ರಸಸ್ತಿ ಸೇರಿ ಹಲವು ಪುರಸ್ಕಾರಗಳಿಗೆ ಅವರು ಭಾಜನರಾಗಿದ್ದಾರೆ. ಅವರ ನಿಧನಕ್ಕೆ ಸಚಿವ ಶಿವರಾಜ್ ತಂಗಡಗಿ ಸಂತಾಪ ವ್ಯಕ್ತಪಡಿಸಿದ್ದಾರೆ. ʼʼಕವಿಯಾಗಿ, ವಿಮರ್ಶಕರಾಗಿ ಮತ್ತು ಅನುವಾದಕರಾಗಿ ಅವರು ಕನ್ನಡ ಸಾಹಿತ್ಯ ಜಗತ್ತಿಗೆ ಅನನ್ಯ ಕೊಡುಗೆ ನೀಡಿದ್ದಾರೆ. ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ ಹಲವು ಪ್ರತಿಷ್ಠಿತ ಗೌರವ ಪ್ರಶಸ್ತಿಗಳಿಗೆ ಭಾಜನರಾಗಿದ್ದ ಕವಿ ಜಿ.ಎಸ್.ಸಿದ್ದಲಿಂಗಯ್ಯ ಅವರ ನಿಧನದಿಂದ ಕನ್ನಡ ಸಾಹಿತ್ಯ ಲೋಕ ಅದ್ಭುತ ಚೇತನವನ್ನು ಕಳೆದುಕೊಂಡಿದೆʼʼ ಎಂದು ಹೇಳಿದ್ದಾರೆ.
ಈ ಸುದ್ದಿಯನ್ನೂ ಓದಿ: Begane Ramaiah: ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಸಚಿವ ಬೇಗಾನೆ ರಾಮಯ್ಯ ನಿಧನ
ಇಸ್ರೋ ಮಾಜಿ ಅಧ್ಯಕ್ಷ ಡಾ.ಕೆ. ಕಸ್ತೂರಿ ರಂಗನ್ ನಿಧನ
ಬೆಂಗಳೂರು: ಕೆಲವು ದಿನಗಳ ಹಿಂದೆ ಇಸ್ರೋ ಮಾಜಿ ಅಧ್ಯಕ್ಷ ಹಾಗೂ ನೂತನ ರಾಷ್ಟ್ರೀಯ ಶಿಕ್ಷಣ ನೀತಿಯ(ಎನ್‌ಇಪಿ) ಕರಡು ಸಮಿತಿಯ ಅಧ್ಯಕ್ಷರೂ ಆಗಿದ್ದ ಡಾ.ಕೆ.ಕಸ್ತೂರಿರಂಗನ್ (84) ಬೆಂಗಳೂರಿನ ನಿವಾಸದಲ್ಲಿ ನಿಧನರಾಗಿದ್ದರು. ಡಾ. ಕೃಷ್ಣಸ್ವಾಮಿ ಕಸ್ತೂರಿರಂಗನ್ ಅವರು ಕೇರಳದ ಎರ್ನಾಕುಲಂನಲ್ಲಿ 24 ಅಕ್ಟೋಬರ್, 1940ರಲ್ಲಿ ಜನಿಸಿದರು. 1994 ರಿಂದ 2003ರವರೆಗೆ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ)ಯ ಅಧ್ಯಕ್ಷರಾಗಿದ್ದರು. ಭಾರತೀಯ ಬಾಹ್ಯಾಕಾಶ ವಿಜ್ಞಾನಿಯಾದ ಇವರು, 2003ರಿಂದ 2009ರವರೆಗೆ ರಾಜ್ಯಸಭೆ ಸದಸ್ಯರಾಗಿದ್ದರು. ಬಳಿಕ ಭಾರತ ಸರ್ಕಾರದ ಯೋಜನಾ ಆಯೋಗದ ಸದಸ್ಯರಾಗಿದ್ದರು.