Gun Firing: ಪ್ರಿಯಕರನ ಪಿಸ್ತೂಲ್ ಮಿಸ್‌ಫೈರ್, ಯುವತಿಯ ಕಿಡ್ನಿಗೇ ಹಾನಿ
Miss firing: ಜು.28ರಂದು ನಿಖಿಲ್ ಟೆರೆಸ್ ಮೇಲೆ ಗನ್ ಪರಿಶೀಲನೆ ಮಾಡುತ್ತಿದ್ದರು. ಈ ವೇಳೆ ರೆಚೆಲ್ ಕೂಡ ಜೊತೆಯಲ್ಲಿದ್ದರು. ರೆಚೆಲ್ ಪ್ರಿಯಕರ ನಿಖಿಲ್ನಿಂದ ಗನ್ ಪಡೆದು ಪರಿಶೀಲನೆ ನಡೆಸುತ್ತಿದ್ದಾಗ, ಕೈತಪ್ಪಿ ಫೈರ್ ಆಗಿ ಹೊಟ್ಟೆಗೆ ಗುಂಡು ತಗುಲಿದೆ. ಕೂಡಲೇ ರೆಚೆಲ್ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸಾಂದರ್ಭಿಕ ಚಿತ್ರ

ಬೆಂಗಳೂರು: ಪ್ರಿಯಕರನ ಪಿಸ್ತೂಲ್ ಮಿಸ್ ಫೈರಿಂಗ್ (Miss Firing) ಆಗಿ ಯುವತಿಯ ಹೊಟ್ಟೆಗೆ ಗುಂಡು ತಗುಲಿದ ಘಟನೆ ಬೆಂಗಳೂರಿನ (Bengaluru) ಹೆಣ್ಣೂರು ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ರೆಚೆಲ್ ಮಿಸ್ ಫೈರಿಂಗ್ನಲ್ಲಿ ಗಂಭೀರವಾಗಿ ಗಾಯಗೊಂಡಿರುವ ಯುವತಿ. ಪ್ರಿಯಕರ ನಿಖಿಲ್ಗೆ ಸೇರಿದ ಗನ್ ಅನ್ನು ರೆಚೆಲ್ ಪರಿಶೀಲನೆ ಮಾಡುವಾಗ ಮಿಸ್ ಫೈರಿಂಗ್ ಆಗಿದೆ. ಗಾಯಾಳು ರೆಚೆಲ್ ಮತ್ತು ನಿಖಿಲ್ ಪರಸ್ಪರ ಪ್ರೀತಿಸುತ್ತಿದ್ದರು. ಇವರ ಮದುವೆಗೆ ಎರಡೂ ಕುಟುಂಬಗಳು ಸಿದ್ಧತೆ ನಡೆಸಿದ್ದವು. ದುರದೃಷ್ಟವಶಾತ್ ಈ ಘಟನೆ ನಡೆದಿದೆ.
ನಿಖಲ್ ಅವರ ಬಳಿ ಪರವಾನಗಿ ಹೊಂದಿದ ಗನ್ ಇದೆ. ಜು.28ರಂದು ನಿಖಿಲ್ ಟೆರೆಸ್ ಮೇಲೆ ಗನ್ ಪರಿಶೀಲನೆ ಮಾಡುತ್ತಿದ್ದರು. ಈ ವೇಳೆ ರೆಚೆಲ್ ಕೂಡ ಜೊತೆಯಲ್ಲಿದ್ದರು. ರೆಚೆಲ್ ಪ್ರಿಯಕರ ನಿಖಿಲ್ನಿಂದ ಗನ್ ಪಡೆದು ಪರಿಶೀಲನೆ ನಡೆಸುತ್ತಿದ್ದಾಗ, ಮಿಸ್ ಫೈರ್ ಆಗಿ ಹೊಟ್ಟೆಗೆ ಗುಂಡು ತಗುಲಿದೆ. ಕೂಡಲೇ ರೆಚೆಲ್ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಗುಂಡು ತಗುಲಿದ ಪರಿಣಾಮ ರೆಚೆಲ್ ಅವರ ಒಂದು ಕಿಡ್ನಿಗೆ ಹಾನಿಯಾಗಿದೆ. ಹೀಗಾಗಿ, ವೈದ್ಯರು ರೆಚೆಲ್ ಅವರ ಒಂದು ಕಿಡ್ನಿಯನ್ನು ಹೊರ ತೆಗೆದಿದ್ದಾರೆ. ರೆಚೆಲ್ ಅವರಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ. ಹೆಣ್ಣೂರು ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಬೆಂಗಳೂರಿನ ಅಪಾರ್ಟ್‌ಮೆಂಟ್‌ನಲ್ಲಿ ದೇಶ ವಿರೋಧಿ ಗೋಡೆ ಬರಹ!
ಬೆಂಗಳೂರು: ರಾಮನಗರ, ಉಡುಪಿ ಬೆನ್ನಲ್ಲೇ ಬೆಂಗಳೂರಿನಲ್ಲೂ ದೇಶ ವಿರೋಧಿ ಬರಹ (Anti-national graffiti) ಕಂಡುಬಂದಿದೆ. ನಗರದ ಕೊಡಿಗೇಹಳ್ಳಿಯಲ್ಲಿಯ ಅಪಾರ್ಟ್ಮೆಂಟ್ನ ಗೋಡೆಯ ಮೇಲೆ “ನಾನು ಭಾರತವನ್ನು ಸ್ಫೋಟಿಸುತ್ತೇನೆ” (I am going to blast india) ಎಂದು ಇಂಗ್ಲಿಷ್ನಲ್ಲಿ ಬರೆಯಲಾಗಿದೆ. ಈ ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಕೊಡಿಗೇಹಳ್ಳಿ ಠಾಣೆಯ ಪೊಲೀಸರು ಪರಿಶೀಲನೆ ನಡೆಸಿದ್ದು, ದೇಶ ವಿರೋಧಿ ಬರಹ ಬರೆದ ಆರೋಪಿಗಾಗಿ ಹುಡುಕಾಟ ನಡೆಸಿದ್ದಾರೆ.
ಇತ್ತೀಚಿಗೆ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ನಿಟ್ಟೆ ಕಾಲೇಜಿನ ಮಹಿಳಾ ವಸತಿ ನಿಲಯದ ಶೌಚಾಲಯದ ಗೋಡೆಯ ಮೇಲೆ ಎರಡು ಸಮುದಾಯಗಳ ನಡುವೆ ದ್ವೇಷ ಹರಡುವ ರೀತಿ “ಹಿಂದೂಸ್ಥಾನ್ ನಹಿ ಮುಸ್ಲಿಂಸ್ಥಾನ ಬೋಲ್”. “ಮುಸ್ಲಿಂ ಜಿಂದಾಬಾದ್ ಹಿಂದೂ ಫಕ್ ಆಫ್” ಎಂದು ಓರ್ವ ವಿದ್ಯಾರ್ಥಿನಿ ಬರೆದಿದ್ದಳು. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು.
ಈ ಬಗ್ಗೆ ನಿಟ್ಟೆ ಕಾಲೇಜಿನ ಮಹಿಳಾ ವಸತಿ ನಿಲಯದ ಮ್ಯಾನೇಜರ್ ಕಾರ್ಕಳ ಪೊಲೀಸ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ದೂರಿನ ಆಧಾರದ ಮೇಲೆ ಎಫ್ಐಆರ್ ದಾಖಲಾಗಿತ್ತು. ಪ್ರಕರಣದ ತನಿಖೆ ನಡೆಸಿದ ಪೊಲೀಸರು ಸಿಸಿಟಿವಿ ದೃಶ್ಯ ಆಧರಿಸಿ ತನಿಖೆ ನಡೆಸಿದ್ದರು. ಆದರೆ, ಸರಿಯಾದ ಸಾಕ್ಷ್ಯ ಸಿಕ್ಕಿರಲಿಲ್ಲ. ಕೊನೆಗೆ ಪೊಲೀಸರು ಕೈಬರಹ ತಜ್ಞರ ಸಹಾಯದಿಂದ ವಸತಿ ನಿಲಯದಲ್ಲಿನ ವಿದ್ಯಾರ್ಥಿನಿಗಳ ಅಸೈನ್ಮೆಂಟ್ಸ್ ಹಾಗೂ ಮತ್ತೊಮ್ಮೆ ಗೋಡೆ ಬರೆಸುವ ಮೂಲಕ ಆರೋಪಿಯನ್ನು ಪತ್ತೆ ಹಚ್ಚಿದರು. ಕೇರಳ ಕಾಸರಗೋಡು ಜಿಲ್ಲೆಯ ನಿವಾಸಿ ಫಾತಿಮಾ ಶಬ್ದಾಳನ್ನು ಬಂಧಿಸಿ, ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದರು. ನ್ಯಾಯಾಲಯ ಆರೋಪಿ ಫಾತಿಮಾ ಶಬ್ದಾಗೆ ಜಾಮೀನು ಮಂಜೂರು ಮಾಡಿತ್ತು.
ಇದನ್ನೂ ಓದಿ: Dharmasthala Case: 5ನೇ ಜಾಗದಲ್ಲೂ ಸಿಗದ ಕಳೇಬರ; ಪ್ಯಾನ್- ಡೆಬಿಟ್ ಕಾರ್ಡ್ ಸಿಕ್ಕಿದೆ ಎಂಬುದು ಸುಳ್ಳು