ಫೋಟೋ ಗ್ಯಾಲರಿ ಆಪರೇಷನ್​ ಸಿಂಧೂರ ಐಪಿಎಲ್​ ಅಕ್ಷಯ ತೃತೀಯ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Operation Sindoor: ಕಾಶ್ಮೀರದಲ್ಲಿ ಸಿಲುಕಿದ್ದ ಕರ್ನಾಟಕದ 13 ವಿದ್ಯಾರ್ಥಿಗಳನ್ನು ಕರೆತರಲು ಎಚ್‌ಡಿಕೆ ನೆರವು

Operation Sindoor: ಜಮ್ಮು ಮತ್ತು ಕಾಶ್ಮೀರದ ಶೇರ್-ಇ-ಕಾಶ್ಮೀರ ಕೃಷಿ ವಿಜ್ಞಾನ ಮತ್ತು ತಂತ್ರಜ್ಞಾನ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ಕರ್ನಾಟಕದ 13 ವಿದ್ಯಾರ್ಥಿಗಳು ಕ್ಷೇಮವಾಗಿ ನವದೆಹಲಿಗೆ ಮುಟ್ಟಿದ್ದು, ನಾಳೆ ಸಂಜೆ ಬೆಂಗಳೂರು ತಲುಪಲಿದ್ದಾರೆ ಎಂದು ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.

ಕಾಶ್ಮೀರದಿಂದ ರಾಜ್ಯದ 13 ವಿದ್ಯಾರ್ಥಿಗಳನ್ನು ಕರೆತರಲು ಎಚ್‌ಡಿಕೆ ನೆರವು

Profile Prabhakara R May 11, 2025 9:56 PM

ನವದೆಹಲಿ: ಭಾರತ ಮತ್ತು ಪಾಕಿಸ್ತಾನದ ನಡುವೆ ಉದ್ವಿಗ್ನ ಸ್ಥಿತಿ (Operation Sindoor) ನಿರ್ಮಾಣವಾಗಿರುವ ಸಂದರ್ಭದಲ್ಲಿ ಕಾಶ್ಮೀರದಲ್ಲಿ ಸಿಲುಕಿದ್ದ 13 ಕನ್ನಡಿಗ ವಿದ್ಯಾರ್ಥಿಗಳನ್ನು ವಾಪಸ್ ಕರ್ನಾಟಕಕ್ಕೆ ಕರೆತರಲು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ನೆರವಾಗಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಶೇರ್-ಇ-ಕಾಶ್ಮೀರ ಕೃಷಿ ವಿಜ್ಞಾನ ಮತ್ತು ತಂತ್ರಜ್ಞಾನ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ಕರ್ನಾಟಕದ 13 ವಿದ್ಯಾರ್ಥಿಗಳು ಸದ್ಯ ಸುರಕ್ಷಿತವಾಗಿ ನವದೆಹಲಿಗೆ ಆಗಮಿಸಿದ್ದು, ನಾಳೆ ಸಂಜೆ ಬೆಂಗಳೂರು ತಲುಪಲಿದ್ದಾರೆ.

ಈ ಬಗ್ಗೆ ಕೆಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಅವರು ಎಕ್ಸ್‌ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಶೇರ್-ಇ-ಕಾಶ್ಮೀರ ಕೃಷಿ ವಿಜ್ಞಾನ ಮತ್ತು ತಂತ್ರಜ್ಞಾನ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ಕರ್ನಾಟಕದ 13 ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ವಾಪಸ್ ಕರೆತರಲಾಗಿದೆ. ಎಲ್ಲಾ ವಿದ್ಯಾರ್ಥಿಗಳು ಕ್ಷೇಮವಾಗಿ ನವದೆಹಲಿಗೆ ಮುಟ್ಟಿದ್ದು, ನಾಳೆ ಸಂಜೆ ಬೆಂಗಳೂರು ತಲುಪಲಿದ್ದಾರೆ ಎಂದು ಹೇಳಿದ್ದಾರೆ.

ಇಡೀ ರಾಷ್ಟ್ರವು ಸವಾಲಿನ ಪರಿಸ್ಥಿತಿಯಲ್ಲಿರುವಾಗಲೂ ಗೌರವಾನ್ವಿತ ಪ್ರಧಾನಿ ನರೇಂದ್ರ ಮೋದಿ ಅವರು ಅವರ ಸ್ಪಷ್ಟ ಮಾರ್ಗದರ್ಶನ, ದಿಟ್ಟ ಕ್ರಮಗಳಿಂದ ಈ ಕಾರ್ಯಾಚರಣೆ ಸಾಧ್ಯವಾಗಿದೆ. ಶ್ರೀನಗರದಿಂದ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಕರೆತರಲು ಕೇಂದ್ರ ಸರಕಾರದ ಅಧಿಕಾರಿಗಳು, ಭದ್ರತಾ ಸಂಸ್ಥೆಗಳು, ರೈಲ್ವೆ ಸಿಬ್ಬಂದಿ, ಬೃಹತ್ ಕೈಗಾರಿಕೆಗಳ ಸಚಿವಾಲಯ ಮತ್ತು ಉಕ್ಕು ಸಚಿವಾಲಯದ ಅಧಿಕಾರಿಗಳು ಶ್ರಮಿಸಿದ್ದು, ಎಲ್ಲರನ್ನೂ ನಾನು ಶ್ಲಾಘಿಸುತ್ತೇನೆ ಎಂದು ತಿಳಿಸಿದ್ದಾರೆ.



ಗಡಿಯಲ್ಲಿ ಪಾಕ್‌ ಡ್ರೋನ್ ದಾಳಿ ನಡೆಸಿದ್ದರಿಂದ ಕಾಶ್ಮೀರದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಇದರಿಂದಾಗಿ ತಗಚಗೆರೆ ಗ್ರಾಮದ ಜೆಡಿಎಸ್ ಮುಖಂಡರೊಬ್ಬರು ತಮ್ಮ ಪುತ್ರ ಹರ್ಷಿತ್ ಕಾಶ್ಮೀರದಲ್ಲಿ ಓದುತ್ತಿದ್ದು, ಯುದ್ಧ ಭೀತಿಯಿರುವ ಕಾರಣ ಅವರನ್ನು ಕರ್ನಾಟಕಕ್ಕೆ ಹಿಂತಿರುಗಿಸಲು ಸಹಾಯ ಕೋರಿ, ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿಯವರಿಗೆ ಮನವಿ ಮಾಡಿಕೊಂಡಿದ್ದರು.

ಅಲ್ಲದೇ ಕರ್ನಾಟಕದ ಹಲವು ವಿದ್ಯಾರ್ಥಿಗಳು ಅಲ್ಲಿ ಓದುತ್ತಿರುವ ಮಾಹಿತಿ ಸಿಕ್ಕಿತ್ತು. ಕೂಡಲೇ ಸ್ಪಂದಿಸಿದ ಸಚಿವರು, ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿ, ವಿದ್ಯಾರ್ಥಿಗಳ ರಕ್ಷಣೆಗಾಗಿ ತಮ್ಮ ಸಚಿವಾಲಯದ ಅಧಿಕಾರಿಗಳನ್ನು ನಿಯೋಜಿಸಿದ್ದರು. ಸದ್ಯ ವಿದ್ಯಾರ್ಥಿಗಳನ್ನು ದೆಹಲಿಯ ಕರ್ನಾಟಕ ಭವನಕ್ಕೆ ಕರೆತರಲಾಗಿದ್ದು, ನಾಳೆ ಸಂಜೆ ಬೆಂಗಳೂರಿಗೆ ಆಗಮಿಸಲಿದ್ದಾರೆ.