ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಖಾತೆ ಹಂಚಿಕೆ ಬೆನ್ನಲ್ಲೇ ಆರೋಗ್ಯ ಸಚಿವರು ಫುಲ್‌ ಹೈಅಲರ್ಟ್‌; ನೆಲದ ಮೇಲೆ ಗರ್ಭಿಣಿ ಕೂತಿದ್ದನ್ನು ಕಂಡು ವೈದ್ಯರಿಗೆ ಕ್ಲಾಸ್

ಹೊಸ ಸಂಪುಟ ರಚಿಸಿ ಖಾತೆ ಹಂಚಿಕೆ ಆಗುತ್ತಿದ್ದಂತೆ ಸಚಿವರು ಫುಲ್‌ ಅಲರ್ಟ್‌ ಆಗಿದ್ದಾರೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ಯು ಟಿ ಖಾದರ್ ಅವರು ಜಯನಗರ ಸಾರ್ವಜನಿಕ ಆಸ್ಪತ್ರೆಗೆ ದಿಢೀರ್ ಭೇಟಿ ಕೊಟ್ಟಿದ್ದಾರೆ. ಮಧ್ಯರಾತ್ರಿ 12 ಗಂಟೆ ಸುಮಾರಿಗೆ ಜಯನಗರ ಜನರಲ್ ಆಸ್ಪತ್ರೆಗೆ ಭೇಟಿ ನೀಡಿದರು.

ಖಾತೆ ಹಂಚಿಕೆ ಬೆನ್ನಲ್ಲೇ ಆರೋಗ್ಯ ಸಚಿವರು ಫುಲ್‌ ಹೈಅಲರ್ಟ್‌

ಸಂಗ್ರಹ ಚಿತ್ರ -

Vishakha Bhat Heggar
Vishakha Bhat Heggar Jun 5, 2026 12:24 PM

ಬೆಂಗಳೂರು: ಹೊಸ ಸಂಪುಟ ರಚಿಸಿ ಖಾತೆ ಹಂಚಿಕೆ ಆಗುತ್ತಿದ್ದಂತೆ ಸಚಿವರು ಫುಲ್‌ ಅಲರ್ಟ್‌ ಆಗಿದ್ದಾರೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ (Health Minister) ಯು ಟಿ ಖಾದರ್ (UT Khader) ಅವರು ಜಯನಗರ ಸಾರ್ವಜನಿಕ ಆಸ್ಪತ್ರೆಗೆ ದಿಢೀರ್ ಭೇಟಿ ಕೊಟ್ಟಿದ್ದಾರೆ. ಮಧ್ಯರಾತ್ರಿ 12 ಗಂಟೆ ಸುಮಾರಿಗೆ ಜಯನಗರ ಜನರಲ್ ಆಸ್ಪತ್ರೆಗೆ ಭೇಟಿ ನೀಡಿದ ಯುಟಿ ಖಾದರ್​ ಅವರು, ಆಸ್ಪತ್ರೆ ಸಿಬ್ಬಂದಿ ಬಗ್ಗೆ ಪರಿಶೀಲನೆ, ಸ್ವಚ್ಛತೆ, ರೋಗಿಗಳಿಗೆ ಚಿಕಿತ್ಸೆ ವಿಧಾನ, ತುರ್ತು ಸರ್ಕಾರಿ ಆಸ್ಪತ್ರೆಗಳ ಅವ್ಯವಸ್ಥೆ ಪರಿಶೀಲನೆ ನಡೆಸಿದರು.

ತಡರಾತ್ರಿ ಆಸ್ಪತ್ರೆ ಆವರಣದಲ್ಲಿದ್ದ ಪ್ರತಿಯೊಬ್ಬರಿಂದಲೂ ಖಾದರ್​​ ಮಾಹಿತಿ ಪಡೆದಿದ್ದಾರೆ. ಸಚಿವ ಖಾದರ್ ಭೇಟಿ ವೇಳೆ ಗರ್ಭಿಣಿ ನೆಲದ ಮೇಲೆ ಕುಳಿತಿರುವುದನ್ನ ಕಂಡು ಆರೋಗ್ಯ ಸಚಿವರು ಗರಂ ಆದರು. ಮೇಲೆ ಕೂರಿಸಿ ಎಂದು ವೈದ್ಯರು ಹಾಗೂ ಸಿಬ್ಬಂದಿಯನ್ನ ತರಾಟೆಗೆ ತೆಗೆದುಕೊಂಡಿದ್ದಾರೆ. ಹೆರಿಗೆ ಕೊಠಡಿ, ಸಿಸೇರಿಯನ್ ವಾರ್ಡ್ ಸೇರಿದಂತೆ ಎಲ್ಲೆಡೆ ಪರಿಶೀಲನೆ ನಡೆಸಿದ ಖಾದರ್ ಅವರು ಸಿಬ್ಬಂದಿ ಕೊರತೆ ಬಗ್ಗೆ ಮಾಹಿತಿ ಪಡೆದಿದ್ದಾರೆ.

ಆಸ್ಪತ್ರೆ ಭೇಟಿ ಬಳಿಕ ಮಾಧ್ಯಮಗಳ ಜೊತೆ ಮಾತಾಡಿದ ಆರೋಗ್ಯ ಸಚಿವ ಯು ಟಿ ಖಾದರ್, ಆಸ್ಪತ್ರೆಯಲ್ಲಿ ನೈಜವಾದ ಪರಿಸ್ಥಿತಿ ನೋಡಲು ಬಂದೆ. ಏನೆಲ್ಲಾ ಲೋಪದೋಷವಿದೆ ನೋಡಿದ್ದೇನೆ. ಆಸ್ಪತ್ರೆಯ ಎಲ್ಲಾ ಕಡೆ ವಿಸಿಟ್ ಮಾಡಿದ್ದು, ಇವತ್ತು ಇಬ್ಬರು ವೈದ್ಯರು ಗೈರಾಗಿದ್ರೂ ಅವರಿಗೆ ನಾಳೆ ಎಚ್ಚರಿಕೆ ನೀಡಿ, ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಮಾಡುವಂತೆ ಸೂಚಿಸುತ್ತೇನೆ ಎಂದಿದ್ದಾರೆ.

CM ಡಿಕೆಶಿ ಸಂಪುಟದ ಮೊದಲ ವಿಕೆಟ್ ಪತನ; ಸಚಿವ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ ರಾಮಲಿಂಗಾ ರೆಡ್ಡಿ

ರಾಮಲಿಂಗಾ ರೆಡ್ಡಿ ರಾಜೀನಾಮೆ

ರಾಜ್ಯ ಸಚಿವ ಸಂಪುಟ ಖಾತೆ ಹಂಚಿಕೆ ಬೆನ್ನಲ್ಲೇ ಕಾಂಗ್ರೆಸ್​​ನಲ್ಲಿ ಅಸಮಾಧಾನ ಸ್ಫೋಟಗೊಂಡಿದೆ. ಜಲಸಂಪನ್ಮೂಲ ಖಾತೆ ನೀಡಿರುವುದಕ್ಕೆ ಸಚಿವ ರಾಮಲಿಂಗಾ ರೆಡ್ಡಿ (Ramalinga Reddy) ಅಸಮಾಧಾನಗೊಂಡು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಶುಕ್ರವಾರ ಬೆಳಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಹಿರಿಯ ನಾಯಕ ರಾಮಲಿಂಗಾ ರೆಡ್ಡಿ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ. "ನನಗೆ ಬೆಂಗಳೂರು ಉಸ್ತುವಾರಿ ಖಾತೆ ನೀಡುವುದಾಗಿ ಡಿ.ಕೆ.ಶಿವಕುಮಾರ್ ಅವರೇ ಹೇಳಿದ್ದರು. ಆದರೆ ನೀಡಿಲ್ಲ. ನಾನು ಆತ್ಮ ಸಾಕ್ಷಿಗೆ ವಿರುದ್ಧವಾಗಿ ಕೆಲಸ ಮಾಡುವುದಿಲ್ಲ. ಹೀಗಾಗಿ ರಾಜೀನಾಮೆ ನೀಡುತ್ತಿದ್ದೇನೆ ಎಂದು ಹೇಳಿದ್ದಾರೆ.