ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Bengaluru Rains: ಬೆಂಗಳೂರಿನ ಹಲವೆಡೆ ಭಾರಿ ಮಳೆ; ಸಂಚಾರ ದಟ್ಟಣೆಯಿಂದ ವಾಹನ ಸವಾರರ ಪರದಾಟ

ನವೆಂಬರ್ 24 ರಿಂದ 26 ರವರೆಗೆ ದಕ್ಷಿಣ ಒಳನಾಡು ಕರ್ನಾಟಕದ ಒಂದೆರಡು ಕಡೆಗಳಲ್ಲಿ ಗುಡುಗು ಮತ್ತು ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂದಿನ 24 ಗಂಟೆಗಳವರೆಗೆ ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಬೆಂಗಳೂರಿನ ಹಲವೆಡೆ ಭಾರಿ ಮಳೆ; ಸಂಚಾರ ದಟ್ಟಣೆಯಿಂದ ವಾಹನ ಸವಾರರ ಪರದಾಟ

-

Prabhakara R
Prabhakara R Nov 24, 2026 10:37 PM

ಬೆಂಗಳೂರು: ರಾಜಧಾನಿ ಬೆಂಗಳೂರಿನ ಹಲವೆಡೆ ಮಂಗಳವಾರ ಸಂಜೆ ಭಾರಿ ಮಳೆಯಾಗಿದೆ. ಬೆಳಗ್ಗಿನಿಂದಲೇ ನಗರದಾದ್ಯಂತ ಮೋಡ ಕವಿದ ವಾತಾವರಣವಿತ್ತು. ಸಂಜೆಯಾಗುತ್ತಿದ್ದಂತೆಯೇ ಏಕಾಏಕಿ ಮಳೆಯಾಗಿದ್ದರಿಂದ (Bengaluru Rains) ಮನೆಗಳಿಗೆ ತೆರಳುತ್ತಿದ್ದವರು, ಬೈಕ್ ಸವಾರರು ಕೆಲಕಾಲ ಪರದಾಡುವಂತಾಯಿತು. ಪ್ರಮುಖ ರಸ್ತೆಗಳು ಭಾರಿ ಸಂಚಾರ ದಟ್ಟಣೆಯಿಂದ ವಾಹನ ಸವಾರರು ತೊಂದರೆ ಅನುಭವಿಸಿದರು.

ಸಂಜೆ ಹೊತ್ತಿಗೆ ಮಹಾದೇವಪುರ ವಲಯ ವ್ಯಾಪ್ತಿಯಲ್ಲಿ ಹೆಚ್ಚು ಮಳೆ ಸುರಿದಿದೆ. ಎಚ್‌ಎಎಲ್‌ ವ್ಯಾಪ್ತಿಯಲ್ಲಿ 19 ಮಿ.ಮೀ ಮಳೆ ಆಗಿದೆ. ನಗರದ ಬೆಳ್ಳಂದೂರು, ವರ್ತೂರು, ಜಕ್ಕೂರು, ಉತ್ತರಹಳ್ಳಿ, ಯಲೇಚನಹಳ್ಳಿ, ಎಲೆಕ್ಟ್ರಾನಿಕ್ ಸಿಟಿ, ಹೆಗ್ಗನಹಳ್ಳಿ, ಪೀಣ್ಯ ಕೈಗಾರಿಕಾ ಪ್ರದೇಶ, ಹೆರೋಹಳ್ಳಿ, ಉಳ್ಳಲ್ಲಾ, ನಾಗಪುರ, ಕುಮಾರಸ್ವಾಮಿ ಬಡಾವಣೆ, ಚೊಕ್ಕಸಂದ್ರ, ಕೆಂಗೇರಿ, ರಾಜರಾಜೇಶ್ವರಿ ನಗರ, ಅಂಜನಾಪುರ, ಹೆಮ್ಮಿಗೆಪುರ, ಸಂಪಂಗಿ ರಾಮನಗರ ವ್ಯಾಪ್ತಿಯಲ್ಲಿ ಜೋರು ಮಳೆ ಆಗಿದೆ. ಇನ್ನು ತುಮಕೂರು ರಸ್ತೆ, ಪೀಣ್ಯ ಮೇಲ್ಸೇತುವೆ, ರಾಜರಾಜಿನಗರ, ಕೆಂಗೇರಿ, ಮೈಸೂರು ರಸ್ತೆ ಸೇರಿದಂತೆ ಪ್ರಮುಖ ರಸ್ತೆಗಳು, ಜಂಕ್ಷನ್‌ಗಳಲ್ಲಿ ಭಾರಿ ಟ್ರಾಫಿಕ್‌ ಜಾಮ್‌ ಉಂಟಾಯಿತು.

ನವೆಂಬರ್ 26ರವರೆಗೆ ದಕ್ಷಿಣ ಒಳನಾಡಿನಲ್ಲಿ ಗುಡುಗುಸಹಿತ ಮಳೆ

ನವೆಂಬರ್ 24 ರಿಂದ 26 ರವರೆಗೆ ದಕ್ಷಿಣ ಒಳನಾಡು ಕರ್ನಾಟಕದ ಒಂದೆರಡು ಕಡೆಗಳಲ್ಲಿ ಗುಡುಗು ಮತ್ತು ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂದಿನ 24 ಗಂಟೆಗಳವರೆಗೆ ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ ಸುಮಾರು 27°C ಮತ್ತು 20°C ಇರುವ ಸಾಧ್ಯತೆಯಿದೆ.