Karnataka Weather: ಯೆಲ್ಲೋ ಅಲರ್ಟ್; ಇಂದು ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಅಬ್ಬರಿಸಲಿದೆ ಮಳೆ!
ರಾಜ್ಯದ ಕರಾವಳಿಯಲ್ಲಿ ಗಂಟೆಗೆ 40-50 ರಿಂದ 60 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದ್ದು, ಈ ಅವಧಿಯಲ್ಲಿ ಮೀನುಗಾರರು ಸಮುದ್ರ ಪ್ರದೇಶಗಳಿಗೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆ ಇದೆ.
ಸಾಂದರ್ಭಿಕ ಚಿತ್ರ -
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಮೂರು ದಿನ ಭರ್ಜರಿ ಮಳೆಯಾಗುವ ಮುನ್ಸೂಚನೆ ಸಿಕ್ಕಿದೆ. ಹಾಗೆಯೇ ಇಂದು ಕರಾವಳಿ ಜಿಲ್ಲೆಗಳು ಹೊರತುಪಡಿಸಿ ಉಳಿದೆಲ್ಲಾ ಜಿಲ್ಲೆಗಳಿಗೆ ಯೆಲ್ಲೋ ನೀಡಿದ್ದು, ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 29°C ಮತ್ತು 20°C ಇರುವ ಸಾಧ್ಯತೆ ಇದೆ.
ಇನ್ನು ಕರಾವಳಿಯಲ್ಲಿ ಗಂಟೆಗೆ 40-50 ರಿಂದ 60 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದ್ದು, ಈ ಅವಧಿಯಲ್ಲಿ ಮೀನುಗಾರರು ಸಮುದ್ರ ಪ್ರದೇಶಗಳಿಗೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.
ಇಂದು ಕರಾವಳಿ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನಲ್ಲಿ ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಬೀದರ್, ಕಲಬುರಗಿ, ಯಾದಗಿರಿ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಬಿರುಗಾಳಿಯೊಂದಿಗೆ ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು (ಗ್ರಾಮಾಂತರ), ಬೆಂಗಳೂರು (ನಗರ), ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಕೆಲವೆಡೆ ಬಿರುಗಾಳಿ ಸಹಿತ ಹಗುರದಿಂದ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ಇನ್ನು ಜೂನ್ 15ರಂದು ಕರಾವಳಿ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಲಘು ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಬೆಂಗಳೂರು (ಗ್ರಾಮಾಂತರ), ಬೆಂಗಳೂರು (ನಗರ), ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಮತ್ತು ತುಮಕೂರು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
Health Tips: ತ್ವಚೆಯ ಸೌಂದರ್ಯ ಹೆಚ್ಚಿಸಬೇಕೇ? ಅಕ್ಕಿ ತೊಳೆದ ನೀರು ಕುಡಿಯಿರಿ!
ಜೂನ್ 16ರಂದು ಕರಾವಳಿ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಲಘು ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಬೆಂಗಳೂರು (ಗ್ರಾಮಾಂತರ), ಬೆಂಗಳೂರು (ನಗರ), ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಮತ್ತು ತುಮಕೂರು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.