ಕರಾವಳಿಯಲ್ಲಿ ಮುಂದುವರಿದ ಮಳೆಯಾರ್ಭಟ; ಯೆಲ್ಲೋ ಅಲರ್ಟ್ ಘೋಷಣೆ
Karnataka Weather: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂಗಾರು ಮಳೆ ಆರ್ಭಟ ಜೋರಾಗಿಯೇ ಇದೆ. ಬೆಂಗಳೂರು ಸೇರಿ ಒಂದಷ್ಟು ಜಿಲ್ಲೆಗಳಲ್ಲಿ ಮಳೆಯೇ ಮಾಯವಾದಂತೆ ಆಗಿದೆ. ಕರಾವಳಿ ಭಾಗದ ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ಭಾರಿ ಮಳೆಯಾಗುತ್ತಿದೆ. ಕರಾವಳಿ ಜಿಲ್ಲೆಗಳಿಗೆ ಇಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಸಂಗ್ರಹ ಚಿತ್ರ -
ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂಗಾರು ಮಳೆ ಆರ್ಭಟ ಜೋರಾಗಿಯೇ ಇದೆ. ಬೆಂಗಳೂರು ಸೇರಿ ಒಂದಷ್ಟು ಜಿಲ್ಲೆಗಳಲ್ಲಿ ಮಳೆಯೇ ಮಾಯವಾದಂತೆ ಆಗಿದೆ. ಕರಾವಳಿ ಭಾಗದ ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ಭಾರಿ ಮಳೆಯಾಗುತ್ತಿದೆ. ಕರಾವಳಿ ಜಿಲ್ಲೆಗಳಿಗೆ ಇಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಇನ್ನುಳಿದ ಭಾಗಗಳಲ್ಲಿ ಸಾಧರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಆಗಸ್ಟ್ 4 ಮತ್ತು 5ರಂದು ಉತ್ತರ ಕನ್ನಡ, ಉಡುಪಿಯಲ್ಲಿ ನಿರಂತರ ಗಾಳಿಯೊಂದಿಗೆ ಭಾರಿ ಮಳೆಯಾಗಲಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗಾಳಿಯೊಂದಿಗೆ ಹಗುರ ಮಳೆಯಾಗಲಿದೆ. ಆಗಸ್ಟ್ 6ರಿಂದ ಕರಾವಳಿ ಭಾಗದ ಮೂರೂ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆಯನ್ನ ಹವಾಮಾನ ಇಲಾಖೆ ನೀಡಿದೆ. ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಆಗಸ್ಟ್ 4ರಿಂದ ಆಗಸ್ಟ್ 9ರವರೆಗೂ ಸಾಧಾರಣ ಮಳೆಯಾಗಲಿದೆ. ಆದರೆ ಗಾಳಿಯ ಪ್ರಮಾಣ ಹೆಚ್ಚಾಗಿ ಇರಲಿದೆ.
ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಭಾಗಗಳಲ್ಲಿ ಆಗಸ್ಟ್ 9ರವರೆಗೂ ಭಾರಿ ಮಳೆಯೇ ಮುಂದುವರಿಯಲಿದ್ದು, ಇನ್ನುಳಿದಂತೆ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ.
Vitamin C: ಮಳೆಗಾಲ ಮತ್ತು ರೋಗನಿರೋಧಕ ಶಕ್ತಿ: ಮಳೆಗಾಲದಲ್ಲಿ ವಿಟಮಿನ್ C ಏಕೆ ಮುಖ್ಯ?
ಬೆಂಗಳೂರಲ್ಲಿ ಮಳೆಯೇ ಇಲ್ಲದಂತಾಗಿದೆ. ಎಲ್ಲೋ ಒಮ್ಮೊಮ್ಮೆ ಹಗುರ, ಚದುರಿದ ಮತ್ತು ಸಾಧಾರಣ ಮಳೆಯಾಗುತ್ತಿದೆ. ಬೆಂಗಳೂರಲ್ಲಿ ಮುಂಗಾರು ಪೂರ್ವ ಮಳೆಯಾಗಿತ್ತು. ಆದರೆ, ಮಾನ್ಸೂನ್ ಕಾಲಿಟ್ಟ ಮೇಲೆ ಅಷ್ಟೆಲ್ಲ ಮಳೆಯಾಗುತ್ತಿಲ್ಲ. ಇನ್ನು ಜುಲೈ ತಿಂಗಳಲ್ಲಂತೂ ಬೆಂಗಳೂರಲ್ಲಿ ಮಳೆಯ ಕೊರತೆ ತೀವ್ರವಾಗಿ ಕಾಣಿಸಿದೆ. ಕಳೆದ 108ವರ್ಷಗಳಲ್ಲಿ ಇದು ಎರಡನೇ ಬಾರಿಗೆ ಜುಲೈ ತಿಂಗಳಲ್ಲಿ ಇಷ್ಟು ಮಳೆ ಕಡಿಮೆಯಾಗಿದ್ದು ಎಂದು IMD ತಿಳಿಸಿದೆ. ಜುಲೈ ತಿಂಗಳಲ್ಲಿ ಬೆಂಗಳೂರಲ್ಲಿ ಕೇವಲ 23 ಮಿಮೀ ಮಳೆಯಾಗಿದೆ.