Gruha Lakshmi Scheme: ಗೃಹ ಲಕ್ಷ್ಮೀ ಯೋಜನೆಗೆ ಭರ್ಜರಿ ಅನುದಾನ
ಗೃಹಲಕ್ಷ್ಮಿ ಯೋಜನೆಯಡಿ ಇಲ್ಲಿಯವರೆಗೂ ಎಲ್ಲಾ ಅರ್ಹ ಫಲಾನುಭವಿಗಳಿಗೆ ಒಟ್ಟು 62,345 ಕೋಟಿ ರು.ವೆಚ್ಚ ಭರಿಸಲಾಗಿದೆ. ಈ ಯೋಜನೆಯಡಿ 1.24 ಕೋಟಿ ಫಲಾನುಭವಿಗಳಿಗೆ ಯಶಸ್ವಿ ಯಾಗಿ ಧನಸಹಾಯ ಪಾವತಿಸಲಾಗುತ್ತಿದೆ. ಪ್ರಸಕ್ತ ವರ್ಷದಲ್ಲಿ ಈ ಯೋಜನೆಯಡಿ 28,608 ಕೋಟಿ ರು.ಗಳನ್ನು ಮೀಸಲಿರಿಸಿದೆ.
-
28608 ಕೋಟಿ ರು. ಅನುದಾನ ಮೀಸಲು
ಧನಶ್ರೀಗೆ 45 ಸಾವಿರ ರು. ಪ್ರೋತ್ಸಾಹ ಧನ
ಕಾಂಗ್ರೆಸ್ ಸರಕಾರದ ಪ್ರಮುಖ ಗ್ಯಾರಂಟಿ ಯೋಜನೆ ಗಳಂದಾದ ಗೃಹಲಕ್ಷ್ಮಿ ಯೋಜನೆಗೆ 28608 ಕೋಟಿ ರು. ಅನುದಾನ ಮೀಸಡಲಿಡಲಾಗಿದೆ. ಈ ಯೋಜನೆಯ ಮೂಲಕ ರಾಜ್ಯದ ಲಕ್ಷಾಂತರ ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ಸರಕಾರ ಬದ್ಧವಾಗಿದೆ.
ಗೃಹಲಕ್ಷ್ಮಿ ಯೋಜನೆಯಡಿ ಇಲ್ಲಿಯವರೆಗೂ ಎಲ್ಲಾ ಅರ್ಹ ಫಲಾನುಭವಿಗಳಿಗೆ ಒಟ್ಟು 62,345 ಕೋಟಿ ರು.ವೆಚ್ಚ ಭರಿಸಲಾಗಿದೆ. ಈ ಯೋಜನೆಯಡಿ 1.24 ಕೋಟಿ ಫಲಾನುಭವಿ ಗಳಿಗೆ ಯಶಸ್ವಿಯಾಗಿ ಧನಸಹಾಯ ಪಾವತಿಸಲಾಗುತ್ತಿದೆ. ಪ್ರಸಕ್ತ ವರ್ಷದಲ್ಲಿ ಈ ಯೋಜನೆ ಯಡಿ 28,608 ಕೋಟಿ ರು.ಗಳನ್ನು ಮೀಸಲಿರಿಸಿದೆ.
ಧನಶ್ರೀ ಯೋಜನೆಯ ಫಲಾನುಭವಿಗಳಿಗೆ ಪ್ರೋತ್ಸಾಹ ಧನ ಹೆಚ್ಚಳ: ಮಾಜಿ ದೇವದಾಸಿಯರ ಹಾಗೂ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಅರಿಯಲು, ಪುನರ್ವಸತಿ ಕಲ್ಪಿಸಲು ಮತ್ತು ಸರಕಾರದ ಸೌಲಭ್ಯಗಳನ್ನು ಒದಗಿಸುವ ಹಿನ್ನೆಲೆಯಲ್ಲಿ ಅವರ ನಿಖರ ಮಾಹಿತಿ ಸಂಗ್ರಹಿಸುವುದಕ್ಕಾಗಿ ಸಮೀಕ್ಷೆ ಕೈಗೊಳ್ಳಲಾಗಿದೆ.
ಇದನ್ನೂ ಓದಿ: Karnataka Budget 2026: ಗರ್ಭಿಣಿ, ಬಾಣಂತಿಯರಿಗೆ ಅಂಗನವಾಡಿಗಳಲ್ಲಿ ರೇಷನ್ ಬದಲಿಗೆ ಮಧ್ಯಾಹ್ನದ ಬಿಸಿಯೂಟ ವ್ಯವಸ್ಥೆ
ಮಾಜಿ ದೇವದಾಸಿಯರ ಮಕ್ಕಳಿಗೆ ಉನ್ನತ ಶಿಕ್ಷಣದ ಅವಕಾಶಗಳನ್ನು ವಿಸ್ತರಿಸುವುದರ ಜತೆಗೆ ಹೆಣ್ಣುಮಕ್ಕಳಿಗೆ ಸ್ವಯಂ ಉದ್ಯೋಗ ಹಾಗೂ ವೈಯಕ್ತಿಕ ಆದಾಯೋತ್ಪನ್ನ ಚಟು ವಟಿಕೆಗಳನ್ನು ಕೈಗೊಳ್ಳಲು ಅಗತ್ಯ ಆರ್ಥಿಕ ಸಹಾಯ ನೀಡುವ ಕಾರ್ಯಕ್ರಮವನ್ನು ರೂಪಿಸಿ ಜಾರಿಗೆ ತರಲು ಐದು ಕೋಟಿ ರು.ಗಳನ್ನು ಮೀಸಲಿಡಲಾಗಿದೆ.
ಮಾಜಿ ದೇವದಾಸಿಯರು, ಲಿಂಗತ್ವ ಅಲ್ಪಸಂಖ್ಯಾತರು, ಚೇತನ ಹಾಗೂ ಧನಶ್ರೀ ಯೋಜನೆಯ ಫಲಾನುಭವಿಗಳಿಗೆ ಆದಾಯೋತ್ಪನ್ನ ಚಟುವಟಿಕೆಗಳಿಗಾಗಿ ಪ್ರಸಕ್ತ ನೀಡಲಾಗುತ್ತಿರುವ 30 ಸಾವಿರ ರು.ಪ್ರೋತ್ಸಾಹಧನ 45 ಸಾವಿರ ರು.ಗಳಿಗೆ ಹೆಚ್ಚಿಸಲಾಗು ತ್ತದೆ.
ಅಂಗನವಾಡಿಗಳಲ್ಲಿ ಮಧ್ಯಾಹ್ನದ ಬಿಸಿಯೂಟ ಮರುಸ್ಥಾಪನೆ: ಕಾಂಗ್ರೆಸ್ ಸರಕಾರದ ಹಿಂದಿನ ಅವಧಿಯಲ್ಲಿ ಗರ್ಭಿಣಿ ಮತ್ತು ಬಾಣಂತಿಯರಿಗೆ ಅಂಗನವಾಡಿ ಕೇಂದ್ರಗಳಲ್ಲಿ ಮಧ್ಯಾಹ್ನದ ಬಿಸಿಯೂಟ ನೀಡುವ ಮಾತೃಪೂರ್ಣ ಯೋಜನೆಯನ್ನು ಜಾರಿ ಗೊಳಿಸಲಾಗಿತ್ತು. ಈ ಯೋಜನೆಯು ಅವರಲ್ಲಿ ರಕ್ತಹೀನತೆ ಮತ್ತು ಅಪೌಷ್ಟಿಕತೆ ತಡೆಗಟ್ಟಲು ಸಹಕಾರಿಯಾಗಿತ್ತು. ತದನಂತರದಲ್ಲಿ, ಮಧ್ಯಾಹ್ನದ ಬಿಸಿಯೂಟದ ಬದಲಾಗಿ ಟೇಕ್ ಹೋಮ್ ರೇಷನ್‌ಗೆ ಒತ್ತು ನೀಡಲಾಗಿ, ಯೋಜನೆಯ ಮೂಲ ಉದ್ದೇಶ ಹಳಿತಪ್ಪಿ ದಂತಾಗಿರುತ್ತದೆ. ಇದನ್ನು ಪರಿಗಣಿಸಿ ಎಲ್ಲಾ ಫಲಾನುಭವಿಗಳಿಗೂ ಹಿಂದಿನಂತೆ ಅಂಗನ ವಾಡಿ ಕೇಂದ್ರಗಳಲ್ಲಿಯೇ ಪ್ರತಿದಿನ ಮಧ್ಯಾಹ್ನದ ಬಿಸಿಯೂಟ ನೀಡುವ ಯೋಜನೆಯನ್ನು ಮರುಸ್ಥಾಪಿಸಲಾಗುತ್ತದೆ.
ನವಾಡಿ ಕೇಂದ್ರಗಳ ಸಮಗ್ರ ಸುಧಾರಣೆಗೆ ಉನ್ನತ ಮಟ್ಟದ ಸಮಿತಿಯನ್ನು ರಚಿಸ ಲಾಗುತ್ತದೆ. ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಪ್ರಾಥಮಿಕ ಬಾಲ್ಯ ಆರೈಕೆ ಮತ್ತು ಶಿಕ್ಷಣ ವನ್ನು ಬಲಪಡಿಸಲು ಈ ಭಾಗದ ಜಿಗಳಲ್ಲಿ ಲಭ್ಯವಿರುವ 1668 ನಿವೇಶನಗಳಲ್ಲಿ ಅಂಗನ ವಾಡಿ ಕಟ್ಟಡಗಳ ನಿರ್ಮಾಣವನ್ನು 200 ಕೋಟಿ ರು.ಗಳ ವೆಚ್ಚದಲ್ಲಿ ಕೆಕೆಆರ್‌ಡಿಬಿ ಅನುದಾನದಿಂದ ಕೈಗೊಳ್ಳಲಾಗುತ್ತದೆ.
ಮಹಿಳೆಯರು, ಮಕ್ಕಳಿಗಾಗಿ ವಿನೂತನ ಯೋಜನೆ
ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ 139844 ಅಂಗನವಾಡಿ ಕಾರ್ಯಕರ್ತೆಯರು/ ಸಹಾಯಕಿಯರಿಗೆ ಹೆಚ್ಚುವರಿಯಾಗಿ ಒಂದು ಜತೆ ಸಮವಸವನ್ನು ವಿತರಿಸಲಾಗುತ್ತದೆ. 2026-27ನೇ ಸಾಲಿನಲ್ಲಿ ಮಕ್ಕಳ ಉದ್ದೇಶಿತ ಕಾರ್ಯಕ್ರಮಗಳಿಗಾಗಿ 63,135 ಕೋಟಿ ರು. ಮತ್ತು ಮಹಿಳಾ ಉದ್ದೇಶಿತ ಕಾರ್ಯಕ್ರಮಗಳಿಗಾಗಿ 94,663 ಕೋಟಿ ರು. ವೆಚ್ಚ ಮಾಡಲಾಗುತ್ತದೆ.
2026-27ನೇ ಸಾಲಿನಲ್ಲಿ ಜಿಲ್ಲಾ ಮಟ್ಟದಲ್ಲಿ ಹೆಚ್ಚುವರಿಯಾಗಿ 20 ಹೊಸ ಶಿಶುಪಾಲನಾ ಕೇಂದ್ರ ಸ್ಥಾಪಿಸುವ ಉದ್ದೇಶದಿಂದ ಒಂದು ಕೋಟಿ ರು. ಅನುದಾನ. ಮಹಿಳೆಯರು ಹಾಗೂ ಮಕ್ಕಳಿಗೆ ಸಂಕಷ್ಟದ ಸಂದರ್ಭದಲ್ಲಿ ತಕ್ಷಣದ ರಕ್ಷಣೆ ನೀಡುವ ಉದ್ದೇಶದಿಂದ ಅಕ್ಕಪಡೆ ಯೋಜನೆಯನ್ನು ಗೃಹ ಇಲಾಖೆಯ ಸಹಯೋಗದೊಂದಿಗೆ ಎಲ್ಲಾ ಜಿಲ್ಲೆಗಳಲ್ಲಿ ಯಶಸ್ವಿಯಾಗಿ ಅನುಷ್ಠಾನ. ಮಾದಕ ವ್ಯಸನಕ್ಕೆ ಒಳಗಾದ 18 ವರ್ಷದೊಳಗಿನ ಮಕ್ಕಳಿಗಾಗಿ ಪ್ರಾಯೋಗಿಕವಾಗಿ ಬೆಂಗಳೂರಿನ ನಿಮ್ಹಾ ಹಾಗೂ ಧಾರವಾಡದ ಡಿಮ್ಹಾ ಸಂಸ್ಥೆಗಳ ಸಹಯೋಗದೊಂದಿಗೆ ಮಾದಕ ವ್ಯಸನಿಗಳ ಪುನರ್ವಸತಿ ಕೇಂದ್ರಗಳನ್ನು ಪ್ರಾರಂಭಿಸಲಾಗುತ್ತದೆ.
ಮಹಿಳಾ ಕಲ್ಯಾಣ
ಗೃಹಲಕ್ಷ್ಮಿಗೆ ಒಟ್ಟು 62,345 ಕೋಟಿ ರು.ವೆಚ್ಚ
1.24 ಕೋಟಿ ಫಲಾನುಭವಿಗಳಿಗೆ ಧನಸಹಾಯ
ಪ್ರಸಕ್ತ ಸಾಲಿಗೆ 28,608 ಕೋಟಿ ರು.ಮೀಸಲು
ಕಲ್ಯಾಣ ಕರ್ನಾಟಕ ಅಂಗನವಾಡಿ ಕಟ್ಟಡಗಳಿಗೆ 200 ಕೋಟಿ