Bengaluru Murder: ನಾಯಿ ಬೆಲ್ಟ್‌ನಿಂದ ಗರ್ಭಿಣಿ ಪತ್ನಿ ಕುತ್ತಿಗೆ ಬಿಗಿದು ಕೊಂದು ಪತಿಯೂ ಆತ್ಮಹತ್ಯೆ!
ಬೆಂಗಳೂರು ನಗರದ ಸಿಕೆ ಅಚ್ಚುಕಟ್ಟು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಬೆಳಕಿಗೆ ಬಂದಿದೆ. ವ್ಯಕ್ತಿಯೊಬ್ಬ ಗರ್ಭಿಣಿ ಪತ್ನಿಯನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸ್ಥಳಕ್ಕೆ ಸಿಕೆ ಅಚ್ಚುಕಟ್ಟು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.
-
ಬೆಂಗಳೂರು: ಕೌಟುಂಬಿಕ ಕಲಹ ಹಿನ್ನೆಲೆ ಗರ್ಭಿಣಿ ಪತ್ನಿಯನ್ನು ಗಂಡ ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡಿರುವುದು ರಾಜಧಾನಿಯಲ್ಲಿ ನಡೆದಿದೆ. ಸಿಕೆ ಅಚ್ಚುಕಟ್ಟು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಆಘಾತಕಾರಿ ಘಟನೆ (Bengaluru Murder) ಬೆಳಕಿಗೆ ಬಂದಿದೆ. ಮನೋಜ್ (28), ಸ್ವಪ್ನ (26) ದಂಪತಿ ಸಾವನ್ನಪ್ಪಿದ್ದು, ಸ್ಥಳಕ್ಕೆ ಸಿಕೆ ಅಚ್ಚುಕಟ್ಟು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.
ದಂಪತಿ ಮನೋಜ್ ಮತ್ತು ಸ್ವಪ್ನ, ಮೂರು ವರ್ಷಗಳ ಹಿಂದೆ ಮದುವೆಯಾಗಿದ್ದರು. ಪ್ರಸ್ತುತ ಸ್ವಪ್ನ ನಾಲ್ಕು ತಿಂಗಳ ಗರ್ಭಿಣಿಯಾಗಿದ್ದರು. ಬೆಂಗಳೂರು ನಿವಾಸಿಯಾದ ಮನೋಜ್, ವೃತ್ತಿಯಲ್ಲಿ ಕಾರ್ಪೆಂಟರ್ ಕೆಲಸ ಮಾಡಿಕೊಂಡಿದ್ದ. ಆದರೆ, ಈತ ಕಳೆದ ನಾಲ್ಕು ದಿನದಿಂದ ಕೆಲಸಕ್ಕೆ ಹೋಗಿರಲಿಲ್ಲ. ಇವತ್ತು ಮನೆಯಲ್ಲಿ ಹೆಂಡತಿ ಜೊತೆಗೆ ಗಲಾಟೆ ಶುರುಮಾಡಿದ್ದಾನೆ.
ಜಗಳ ವಿಕೋಪಕ್ಕೆ ತಿರುಗಿ ನಾಯಿಗೆ ಹಾಕುವ ಬೆಲ್ಟ್‌ನಿಂದ ಪತ್ನಿಯ ಕುತ್ತಿಗೆ ಬಿಗಿದು ಉಸಿರುಗಟ್ಟಿಸಿ ಮನೋಜ್ ಕೊಲೆ ಮಾಡಿದ್ದಾನೆ. ಆಕೆ ಸಾವನ್ನಪ್ಪಿದ ಬಳಿಕ ಅದೇ ಬೆಲ್ಟ್‌ನಿಂದ ತಾನೂ ಫ್ಯಾನ್ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮಗ-ಸೊಸೆಯ ಸಾವು ಕಂಡು ತಾಯಿಯ ಆಕ್ರಂದನ ಮುಗಿಲು ಮುಟ್ಟಿದ್ದು, ಸದ್ಯ ಮೃತದೇಹಗಳನ್ನ ಪೊಲೀಸರು ಕಿಮ್ಸ್ ಆಸ್ಪತ್ರೆಗೆ ಶಿಫ್ಟ್ ಮಾಡಿದ್ದಾರೆ.
ಅಣ್ಣನ ಪ್ರೀತಿ ನಿರಾಕರಿಸಿದ ಯುವತಿಯನ್ನು ಚಾಕುವಿನಿಂದ ಇರಿದು ಕೊಂದ ತಮ್ಮ!

ಬೆಂಗಳೂರು: ಸಹೋದರನ ಪ್ರೀತಿ ನಿರಾಕರಿಸಿದ್ದಕ್ಕೆ ಯುವತಿಯನ್ನು ತಮ್ಮ ಚಾಕುವಿನಿಂದ ಇರಿದು ಹತ್ಯೆ ಮಾಡಿರುವ ಘಟನೆ (Bengaluru Murder) ನಗರದ ಜೀವನ್ ಭೀಮಾನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಅಮೃತಾ ಹತ್ಯೆಯಾದ ಯುವತಿ. ಈಕೆಯನ್ನು ಹತ್ಯೆ ಮಾಡಿದ ಆರೋಪದಡಿ ಪ್ರಿಯಕರ ಧನುಷ್ ಹಾಗೂ ಆತನ ಸಹೋದರ ಸೂರ್ಯನನ್ನು ಬಂಧಿಸಲಾಗಿದೆ.
ಜುಲೈ 13ರಂದು ಘಟನೆ ನಡೆದಿದ್ದು, ಮೂರು ದಿನಗಳ ಕಾಲ ಆಸ್ಪತ್ರೆಯಲ್ಲಿದ್ದ ಅಮೃತಾ, ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾಳೆ. ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನು ಸಿ.ವಿ.ರಾಮನ್ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಎಚ್ಎಎಲ್ ಕೋಡಿಚಿಕ್ಕನಹಳ್ಳಿಯಲ್ಲಿ ಅಮೃತಾ ಕುಟುಂಬ ವಾಸವಾಗಿದ್ದು, ಈಕೆ ನಾಲ್ಕನೇ ವರ್ಷದ ಕಾನೂನು ಪದವಿ ವ್ಯಾಸಂಗ ಮಾಡುತ್ತಿದ್ದಳು. ಮೂರು ವರ್ಷಗಳ ಹಿಂದೆ ಓಂ ಶಕ್ತಿ ಮಾಲೆ ಹಾಕುವ ವೇಳೆ ಅಮೃತಾಗೆ ಧನುಷ್ ಪರಿಚಯವಾಗಿದ್ದ. ಈ ಪರಿಚಯ ನಂತರ ಪ್ರೀತಿಗೆ ತಿರುಗಿತ್ತು. ಆದರೆ, ಧನುಷ್ ತನಗೆ ಈಗಾಗಲೇ ಮದುವೆಯಾಗಿ ವಿಚ್ಛೇದನವಾಗಿದ್ದು, ಒಂದು ಮಗು ಇರುವುದನ್ನು ಮುಚ್ಚಿಟ್ಟಿದ್ದ. ಈ ಸತ್ಯ ತಿಳಿಯುತ್ತಿದ್ದಂತೆ ಅಮೃತಾ ಆತನಿಂದ ದೂರವಾಗಿದ್ದಳು.
Kalaburagi Jail Incident: 40 ಗಂಟೆ ಕಳೆದರೂ ಸಿಗದ ಇಬ್ಬರು ಕೈದಿಗಳು; ತೀವ್ರಗೊಂಡ ಶೋಧ
ಇದರಿಂದ ಆಕ್ರೋಶಗೊಂಡ ಧನುಷ್‌ನ ತಮ್ಮ ಸೂರ್ಯ, ಅಣ್ಣನ ಪ್ರೀತಿ ನಿರಾಕರಿಸಿದವಳನ್ನು ಬಿಡುವುದಿಲ್ಲ ಎಂದು ಹೇಳಿಕೊಂಡು ಕಳೆದ ಜುಲೈ 13ರಂದು ಸಂಜೆ ಯುವತಿಯ ಮನೆಯ ಬಳಿ ತೆರಳಿ ಗಲಾಟೆ ಮಾಡಿ, ಆಕೆಯ ಬೆನ್ನು ಮತ್ತು ಎದೆಗೆ ಮನಬಂದಂತೆ ಚಾಕುವಿನಿಂದ ಇರಿದಿದ್ದ. ರಕ್ತದ ಮಡುವಿನಲ್ಲಿ ಬಿದ್ದು ಒದ್ದಾಡುತ್ತಿದ್ದ ಅಮೃತಾಳನ್ನು ತಕ್ಷಣವೇ ಕುಟುಂಬಸ್ಥರು ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ಮೂರು ದಿನಗಳ ಕಾಲ ಸಾವು-ಬದುಕಿನ ನಡುವೆ ಹೋರಾಡಿ ಚಿಕಿತ್ಸೆ ಫಲಕಾರಿಯಾಗದೇ, ಜುಲೈ 15ರಂದು ಸಂಜೆ ಆಸ್ಪತ್ರೆಯಲ್ಲಿ ಆಕೆ ಸಾವನ್ನಪ್ಪಿದ್ದಾಳೆ. ಸದ್ಯ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.