Belekeri Iron ore case: ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಮಧ್ಯಂತರ ವೈದ್ಯಕೀಯ ಜಾಮೀನು ವಿಸ್ತರಿಸಿದ ಹೈಕೋರ್ಟ್
MLA Satish Sail: ಇಡಿ ದಾಖಲಿಸಿದ್ದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮಧ್ಯಂತರ ವೈದ್ಯಕೀಯ ಜಾಮೀನನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ರದ್ದುಪಡಿಸಿತ್ತು. ಇದನ್ನು ಪ್ರಶ್ನಿಸಿ ಸತೀಶ್ ಸೈಲ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾ. ಎಸ್ ಸುನೀಲ್ ದತ್ ಯಾದವ್ ಅವರಿದ್ದ ಏಕಸದಸ್ಯ ಪೀಠ ವಿಚಾರಣೆ ನಡೆಸಿ, ಗುರುವಾರದವರೆಗೆ ಜಾಮೀನು ವಿಸ್ತರಣೆ ಮಾಡಿದೆ.
-
ಬೆಂಗಳೂರು, ನ.11: ಬೇಲೆಕೇರಿ ಬಂದರಿನಿಂದ ಅಕ್ರಮವಾಗಿ ಅದಿರು ಸಾಗಣೆ (Belekeri Iron ore case) ಮತ್ತು ಮಾರಾಟ ಆರೋಪಕ್ಕೆ ಸಂಬಂಧಿಸಿ ಇಡಿ ದಾಖಲಿಸಿರುವ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ (Satish Sail) ಅವರಿಗೆ ನ.13ರವರೆಗೆ ಮಧ್ಯಂತರ ವೈದ್ಯಕೀಯ ಜಾಮೀನನ್ನು ವಿಸ್ತರಿಸಿ ಹೈಕೋರ್ಟ್ ಆದೇಶಿಸಿದೆ. ಅಲ್ಲದೇ, ಶಾಸಕ ಸೈಲ್ ಅವರನ್ನು ಆರೋಗ್ಯ ತಪಾಸಣೆಗೆ ಒಳಪಡಿಸಲು ವೃತ್ತಿಪರ ವೈದ್ಯರ ಹೆಸರನ್ನು ಇಡಿ ಸೂಚಿಸಬೇಕು ಎಂದು ನಿರ್ದೇಶಿಸಿದೆ.
ವಿಚಾರಣೆಗೆ ಸಹಕಾರ ನೀಡುತ್ತಿಲ್ಲ ಎಂಬ ಕಾರಣಕ್ಕೆ ಈಚೆಗೆ ಹೊರಡಿಸಿರುವ ಜಾಮೀನುರಹಿತ ಬಂಧನ ವಾರಂಟ್ ಮತ್ತು ಇಡಿ ದಾಖಲಿಸಿದ್ದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮಧ್ಯಂತರ ವೈದ್ಯಕೀಯ ಜಾಮೀನನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ರದ್ದುಪಡಿಸಿತ್ತು. ಇದನ್ನು ಪ್ರಶ್ನಿಸಿ ಸತೀಶ್ ಸೈಲ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾ. ಎಸ್ ಸುನೀಲ್ ದತ್ ಯಾದವ್ ಅವರಿದ್ದ ಏಕಸದಸ್ಯ ಪೀಠ ವಿಚಾರಣೆ ನಡೆಸಿದೆ.
ಸತೀಶ್ ಸೈಲ್‌ಗೆ ಮಂಜೂರು ಮಾಡಲಾಗಿರುವ ವೈದ್ಯಕೀಯ ಮಧ್ಯಂತರ ಜಾಮೀನನ್ನು ಗುರುವಾರದವರೆಗೆ ವಿಸ್ತರಿಸಲಾಗಿದೆ. ಈ ಮಧ್ಯೆ, ಸೈಲ್ ಅವರ ಆರೋಗ್ಯ ಪರಿಸ್ಥತಿಗೆ ಸಂಬಂಧಿಸಿದ ದಾಖಲೆಯನ್ನು ಪರಿಶೀಲಿಸಿ ಅದನ್ನು ಖಾತರಿಪಡಿಸಲು ಯಾವ ವೈದ್ಯರನ್ನು ನೇಮಿಸಬೇಕು ಎಂಬುದಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಸಲಹೆ ನೀಡಬೇಕು ಎಂದು ಕೋರ್ಟ್ ಆದೇಶಿಸಿದ.ೆ
ಸತೀಶ್ ಸೈಲ್ ಅವರು ಅನಾರೋಗ್ಯಪೀಡಿತರಾಗಿದ್ದರೆ ವೈದ್ಯಕೀಯ ದಾಖಲೆಯನ್ನು ಖಾತರಿಪಡಿಸಬೇಕು. ಈ ವಿಚಾರದ ಕುರಿತು ಯೋಚಿಸಿ, ತಿಳಿಸಿ ಎಂದು ಎಎಸ್‌ಜಿ ಕಾಮತ್‌ಗೆ ಸೂಚಿಸಿದ ಪೀಠವು ವಿಚಾರಣೆಯನ್ನು ನವೆಂಬರ್ 13ಕ್ಕೆ ಮುಂದೂಡಿದೆ.
ಈ ಸುದ್ದಿಯನ್ನೂ ಓದಿ | Pavitra Gowda: ಪವಿತ್ರಾ ಗೌಡಗೆ ಮತ್ತೆ ಶಾಕ್; ಜಾಮೀನು ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್
64 ಕೋಟಿ ರೂ. ಮೌಲ್ಯದ ಆಸ್ತಿ ಮುಟ್ಟುಗೋಲು
ಬೆಂಗಳೂರು: ಬೇಲೆಕೇರಿ ಬಂದರಿನಿಂದ ಕಬ್ಬಿಣದ ಅದಿರು ಕದ್ದು ಸಾಗಿಸಿದ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಅವರಿಗೆ ಸೇರಿದ 64 ಕೋಟಿ ರೂ. ಮೌಲ್ಯದ ಸ್ಥಿರಾಸ್ತಿಗಳನ್ನು ಜಾರಿ ನಿರ್ದೇಶನಾಲಯವು (ಇ.ಡಿ) ಮುಟ್ಟುಗೋಲು ಹಾಕಿಕೊಂಡಿದೆ. ಗೋವಾದ ವಾಸ್ಕೋಡಗಾಮಾದ 'ಅವರ್ ಲೇಡಿ ಮರ್ಸಸ್' ವಾಣಿಜ್ಯ ಸಂಕೀರ್ಣ, ದಕ್ಷಿಣ ಗೋವಾದ ಮರ್ಮಗೋವಾ ತಾಲೂಕಿನ ವಿವಿಧೆಡೆ ಇರುವ 16,850 ಚದರ ಮೀಟರ್ ಅಳತೆಯ ಕೃಷಿ ಜಮೀನುಗಳು, 12,500 ಚದರ ಮೀಟರ್ ಅಳತೆಯ ನಿವೇಶನಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ. ಈ ಸ್ಥಿರಾಸ್ತಿಗಳ ಮಾರ್ಗದರ್ಶಿ ಮೌಲ್ಯವೇ ₹21 ಕೋಟಿಯಷ್ಟಾಗುತ್ತದೆ ಎಂದು ಇ.ಡಿ ತಿಳಿಸಿದೆ.
ಬೇಲೆಕೇರಿ ಬಂದರಿನಲ್ಲಿ ಗಣಿ ಮತ್ತು ಭೂವಿಜ್ಞಾನ ಇಲಾಖೆಯು ವಶಕ್ಕೆ ಪಡೆದು ಸಂಗ್ರಹಿಸಿದ್ದ 5 ಲಕ್ಷ ಟನ್‌ಗಳಷ್ಟು ಕಬ್ಬಿಣದ ಅದಿರಿನಲ್ಲಿ, 1.54 ಲಕ್ಷ ಟನ್‌ಗಳಷ್ಟು ಅದಿರನ್ನು ಸತೀಶ್ ಸೈಲ್ ಅವರ ಒಡೆತನದ ಎಸ್‌ಎಂಎಸ್‌ಪಿಎಲ್ ಕಂಪನಿಯು ಚೀನಾಕ್ಕೆ ರಫ್ತು ಮಾಡಿತ್ತು. ಎಂವಿ ಕೊಲಂಬಿಯ ಮತ್ತು ಎಂವಿ ಮ್ಯಾಡರಿನ್ ಎಂಬ ಹಡಗುಗಳ ಮೂಲಕ ಈ ಅದಿರನ್ನು ಸಾಗಿಸಲಾಗಿತ್ತು ಎಂದು ವಿವರಿಸಿದೆ.
ಚೀನಾದಲ್ಲಿ ಮತ್ತೊಂದು ಕಂಪನಿಯನ್ನು ತರೆದು, ಆ ಕಂಪನಿಯು ಈ ಅದಿರನ್ನು ಖರೀದಿಸಿದಂತೆ ದಾಖಲೆ ಸೃಷ್ಟಿಸಲಾಗಿತ್ತು. ವಾಸ್ತವದಲ್ಲಿ ಬೇರೆಯದ್ದೇ ಕಂಪನಿಗೆ ಅದಿರನ್ನು ಮಾರಾಟ ಮಾಡಲಾಗಿತ್ತು ಎಂದಿದೆ.