ಬಿಗ್​ಬಾಸ್ ಫೋಟೋ ಗ್ಯಾಲರಿ ವಿಶ್ವವಾಣಿ ಪ್ರಾಪರ್ಟಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

DK Shivakumar: ಖಾಸಗಿ, ಸರ್ಕಾರಿ ಕಟ್ಟಡಗಳಲ್ಲಿ ತಿಂಗಳಿಡೀ ಕನ್ನಡ ಧ್ವಜ ಹಾರಾಟ ಕಡ್ಡಾಯ ; ಡಿಕೆ ಶಿವಕುಮಾರ್‌

ಕನ್ನಡ ರಾಜ್ಯೋತ್ಸವದ ಮಹತ್ವವನ್ನು ಸಾರುವ ಸಲುವಾಗಿ ಖಾಸಗಿ ಮತ್ತು ಸರ್ಕಾರಿ ಕಟ್ಟಡಗಳಲ್ಲಿ ನವೆಂಬರ್‌ ತಿಂಗಳಿಡೀ ಕನ್ನಡ ಬಾವುಟ ಹಾರಿಸುವ ಕುರಿತು ಶೀಘ್ರ ಆದೇಶ ಹೊರಡಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಹೇಳಿದ್ದಾರೆ. ಎಲ್ಲಾ ಕನ್ನಡಿಗರನ್ನು ಒಗ್ಗೂಡಿಸಬೇಕು. ಕನ್ನಡಿಗರ ತ್ಯಾಗ, ಬಲಿದಾನ, ಶ್ರಮವನ್ನು ನಾವುಗಳು ಮರೆಯಬಾರದು. ಅನೇಕ ಹಿರಿಯರು ಈ ಭಾಷೆ, ನೆಲ,‌ ಜಲ, ಬಾವುಟದ ಗೌರವವನ್ನು ಕಾಪಾಡಿದ್ದಾರೆ. ದೇಶದ ಯಾವ ರಾಜ್ಯವೂ ಧ್ವಜ, ನಾಡಗೀತೆ ಹೊಂದಿಲ್ಲ. ಆದರೆ ನಾವು ಇವೆರಡನ್ನೂ ಹೊಂದಿದ್ದೇವೆ ಎಂದು ಅವರು ಹೇಳಿದರು.

ಖಾಸಗಿ, ಸರ್ಕಾರಿ ಕಟ್ಟಡಗಳಲ್ಲಿ ತಿಂಗಳಿಡೀ ಕನ್ನಡ ಧ್ವಜ ಹಾರಾಟ ಕಡ್ಡಾಯ

-

Vishakha Bhat Vishakha Bhat Nov 2, 2025 8:26 AM

ಬೆಂಗಳೂರು: ಕನ್ನಡ ರಾಜ್ಯೋತ್ಸವದ ಮಹತ್ವವನ್ನು ಸಾರುವ ಸಲುವಾಗಿ ಖಾಸಗಿ (DK Shivakumar) ಮತ್ತು ಸರ್ಕಾರಿ ಕಟ್ಟಡಗಳಲ್ಲಿ ನವೆಂಬರ್‌ ತಿಂಗಳಿಡೀ ಕನ್ನಡ ಬಾವುಟ ಹಾರಿಸುವ ಕುರಿತು ಶೀಘ್ರ ಆದೇಶ ಹೊರಡಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಹೇಳಿದರು. ವಿಧಾನಸೌಧದ ಆವರಣದಲ್ಲಿ ತಾಯಿ ಭುವನೇಶ್ವರಿ ಪ್ರತಿಮೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಪುಷ್ಪ ನಮನ ಸಲ್ಲಿಸಿ ನಂತರ ಅವರು ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದರು.

ಕರ್ನಾಟಕ ಕೇವಲ ನಾಡಲ್ಲ, ಸಂಸ್ಕೃತಿಯ ಬೀಡು. ಕನ್ನಡ ಕೇವಲ ನುಡಿಯಲ್ಲ, ನಮ್ಮ ಅಂತರಂಗದ ಮಾತು. ಕಲಿತವರಿಗೆ ಅಮೃತ, ನಡೆದವರಿಗೆ ನೆರಳು, ದಾರಿದೀಪ. ಕನ್ನಡ ಎನ್ನುವುದು ಜೀವನದ ವಿಧಾನ. ಇಂತಹ ಕನ್ನಡವನ್ನು ಇಂಗ್ಲಿಷ್ ಹಾಗೂ ಹಿಂದಿ ಭಾಷೆಯ ದಾಳಿಯಿಂದ ನಾವೆಲ್ಲರೂ ಕಾಪಾಡಿಕೊಳ್ಳಬೇಕು ಎಂದು ಅವರು ಹೇಳಿದ್ದಾರೆ. ಕನ್ನಡಕ್ಕೆ ಸುಮಾರು ಎರಡು ಸಾವಿರ ವರ್ಷಗಳ ಇತಿಹಾಸವಿದೆ. ಈ ನೆಲದಲ್ಲಿ ಏನೋ ವೈಶಿಷ್ಟ್ಯ ಅಡಗಿದೆ. ಇಲ್ಲಿಗೆ ಬಂದವರು ಯಾವುದೇ ಕಾರಣಕ್ಕೂ ಮರಳಿ ಹೋಗುವುದಿಲ್ಲ. ಎಲ್ಲರನ್ನೂ ಒಳಗೊಂಡಿರುವ ನಮ್ಮ ಕರ್ನಾಟಕ ಶಾಂತಿಯಿಂದ ಕೂಡಿದೆ. ಹೊರಗಿನಿಂದ ಬಂದವರು ಸಹ ಊಟ, ವಸತಿ ಗಳಿಸಿಕೊಂಡಿದ್ದಾರೆ. ಇದೇ ನಮ್ಮ ಕನ್ನಡ ತಾಯಿ, ಭೂಮಿಯ ವಿಶೇಷ. ಇಲ್ಲಿ ಇರುವ ಅತ್ಯುತ್ತಮ ವಾತಾವರಣ ದೇಶದ ಯಾವ ಭಾಗದಲ್ಲಿಯೂ ಇಲ್ಲ. ನಮ್ಮ ಸಂಸ್ಕೃತಿ ಹಾಗೂ ನೆಲ,‌‌ ಜಲಕ್ಕೆ ಎಲ್ಲರನ್ನೂ ಆಕರ್ಷಿಸುವ ಗುಣವಿದೆ ಎಂದು ಅವರು ಹೇಳಿದ್ದಾರೆ.

ಕನ್ನಡ ಮತ್ತು ಕರ್ನಾಟಕ ಬಗ್ಗೆ ಎಲ್ಲರಿಗೂ ತಿಳಿಯುವಂತೆ ಮಾಡಲು ಖಾಸಗಿ ಮತ್ತು ಸರ್ಕಾರಿ ಕಟ್ಟಡಗಳಲ್ಲಿ ನವೆಂಬರ್‌ ತಿಂಗಳಿಡೀ ಕನ್ನಡ ಬಾವುಟ ಹಾರಿಸುವಂತೆ ಆದೇಶಿಸುವ ಚಿಂತನೆಯಿದೆ. ಈ ಕುರಿತು ಮುಂದಿನ ಸಚಿವ ಸಂಪುಟದಲ್ಲಿ ಚರ್ಚೆ ನಡೆಸಿ, ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ.

ಈ ಸುದ್ದಿಯನ್ನೂ ಓದಿ: 70th Kannada Rajyotsava: ಅದ್ದೂರಿಯಾಗಿ ಜರುಗಿದ ಕನ್ನಡ ರಾಜ್ಯೋತ್ಸವ

ಎಲ್ಲಾ ಕನ್ನಡಿಗರನ್ನು ಒಗ್ಗೂಡಿಸಬೇಕು. ಕನ್ನಡಿಗರ ತ್ಯಾಗ, ಬಲಿದಾನ, ಶ್ರಮವನ್ನು ನಾವುಗಳು ಮರೆಯಬಾರದು. ಅನೇಕ ಹಿರಿಯರು ಈ ಭಾಷೆ, ನೆಲ,‌ ಜಲ, ಬಾವುಟದ ಗೌರವವನ್ನು ಕಾಪಾಡಿದ್ದಾರೆ. ದೇಶದ ಯಾವ ರಾಜ್ಯವೂ ಧ್ವಜ, ನಾಡಗೀತೆ ಹೊಂದಿಲ್ಲ. ಆದರೆ ನಾವು ಇವೆರಡನ್ನೂ ಹೊಂದಿದ್ದೇವೆ. ವಿಧಾನಸೌಧದ ಆವರಣದಲ್ಲಿ ತಾಯಿ ಭುವನೇಶ್ವರಿ ಪ್ರತಿಮೆ ಸ್ಥಾಪಿಸಿದ್ದೇವೆ. ಫಲಕಗಳಲ್ಲಿ ಶೇ. 60ರಷ್ಟು ಕನ್ನಡ ಕಡ್ಡಾಯಗೊಳಿಸಿದ್ದೇವೆ. ಬೆಂಗಳೂರಿನಲ್ಲಿರುವ ಉದ್ದಿಮೆಗಳು, ಕಾರ್ಖಾನೆಗಳು, ವಾಣಿಜ್ಯ ಕೇಂದ್ರಗಳಲ್ಲಿ ರಾಜ್ಯೋತ್ಸವ ಆಚರಣೆ ಕಡ್ಡಾಯ ಮಾಡಿದ್ದೇವೆ ಎಂದರು. ಈ ವರ್ಷ ಸಮೃದ್ಧಿಯಿಂದ ಕೂಡಿದೆ ಎಂದು ಅವರು ಹೇಳಿದ್ದಾರೆ.