ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

Karnataka Budget 2026: ರಾಜ್ಯ ಬಜೆಟ್‌ ದಿನಾಂಕ ಸದ್ಯದಲ್ಲಿಯೇ ನಿಗದಿ: ಸಿಎಂ ಸಿದ್ದರಾಮಯ್ಯ

2026-27ನೇ ಸಾಲಿನ ಬಜೆಟ್‌ಗೆ ಪೂರ್ವಭಾವಿಯಾಗಿ ಸದ್ಯ ವಿವಿಧ ಇಲಾಖೆಗಳ ಸಚಿವರು ಹಾಗೂ ಅಧಿಕಾರಿಗಳೊಂದಿಗೆ ಸಿಎಂ ಸಿದ್ದರಾಮಯ್ಯ ಅವರು ಸಭೆಗಳನ್ನು ನಡೆಸುತ್ತಿದ್ದಾರೆ. ಇಲಾಖೆಗಳ ಅನುದಾನದ ಬೇಡಿಕೆ ಸ್ವೀಕರಿಸಿ, ನೂತನ ಕಾರ್ಯಕ್ರಮಗಳ ಬಗ್ಗೆ ಸಮಾಲೋಚನೆ ನಡೆಸಿದ್ದು, ಶೀಘ್ರದಲ್ಲೇ ಬಜೆಟ್‌ ದಿನಾಂಕವನ್ನು ಘೋಷಿಸಲಿದ್ದಾರೆ.

ರಾಜ್ಯ ಬಜೆಟ್‌ ದಿನಾಂಕ ಸದ್ಯದಲ್ಲಿಯೇ ನಿಗದಿ: ಸಿಎಂ ಸಿದ್ದರಾಮಯ್ಯ

ಸಿಎಂ ಸಿದ್ದರಾಮಯ್ಯ (ಸಂಗ್ರಹ ಚಿತ್ರ) -

Prabhakara R
Prabhakara R Feb 11, 2026 1:55 PM

ಬೆಂಗಳೂರು, ಫೆಬ್ರವರಿ 11: ವಿವಿಧ ಇಲಾಖೆಗಳೊಂದಿಗೆ ಸಭೆಗಳನ್ನು ನಡೆಸಲಾಗುತ್ತಿದ್ದು, ಆಯವ್ಯಯದ (Karnataka Budget 2026) ದಿನಾಂಕವನ್ನು ಸದ್ಯದಲ್ಲಿಯೇ ತಿಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ತಿಳಿಸಿದರು. ಅವರು ಇಂದು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ವರಿಷ್ಠರ ತೀರ್ಮಾನದಂತೆ ನಡೆಯುತ್ತೇವೆ

ಪತ್ರಕರ್ತರು ನಾಯಕತ್ವ ಬದಲಾವಣೆ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸುತ್ತಾ, ಪತ್ರಕರ್ತರು ಪದೇ ಪದೇ ಒಂದೇ ವಿಷಯವನ್ನು ಕೇಳಬಾರದು. ನಾಯಕತ್ವ ಬದಲಾವಣೆ ಬಗ್ಗೆ ಪಕ್ಷದ ವರಿಷ್ಠರು ತೀರ್ಮಾನಿಸಿದರೆ ಅದರಂತೆ ನಾನು ಮತ್ತು ಉಪಮುಖ್ಯಮಂತ್ರಿಗಳಿಬ್ಬರೂ ನಡೆದುಕೊಳ್ಳುತ್ತೇವೆ ಎಂದರು.

ಸ್ವಂತ ಖರ್ಚಿನಲ್ಲಿ ಶಾಸಕರ ವಿದೇಶ ಪ್ರವಾಸ

ಶಾಸಕರು ವಿದೇಶ ಪ್ರವಾಸ ಕೈಗೊಳ್ಳುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಎಂ ಎಲ್ ಎ ಗಳು ಮತ್ತು ಎಂಎಲ್ ಸಿ ಗಳು ತಮ್ಮ ಸ್ವಂತ ಖರ್ಚಿನಲ್ಲಿ ವಿದೇಶ ಪ್ರವಾಸ ಕೈಗೊಳ್ಳುತ್ತಿದ್ದಾರೆ ಎಂದರು.

ಬಜೆಟ್‌ಗೆ ಪೂರ್ವ ಸಿದ್ಧತೆಯಾಗಿ ವಿವಿಧ ಇಲಾಖೆಗಳ ಸಭೆ

2026-27ನೇ ಸಾಲಿನ ರಾಜ್ಯ ಬಜೆಟ್‌ಗೆ ಪೂರ್ವ ಸಿದ್ಧತೆಯಾಗಿ ಸಿಎಂ ಸಿದ್ದರಾಮಯ್ಯ ಅವರು ವಸತಿ ಇಲಾಖೆ, ನಗರಾಭಿವೃದ್ಧಿ ಇಲಾಖೆ, ಬೆಂಗಳೂರು ನಗರಾಭಿವೃದ್ಧಿ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲ ಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ವಿಜ್ಞಾನ & ತಂತ್ರಜ್ಞಾನ ಮತ್ತು ಸಣ್ಣ ನೀರಾವರಿ ಇಲಾಖೆ, ಜಲಸಂಪನ್ಮೂಲ ಇಲಾಖೆ, ಇಂಧನ ಇಲಾಖೆ, ಯೋಜನೆ, ಕಾರ್ಯಕ್ರಮ ಸಂಯೋಜನೆ & ಸಾಂಖ್ಯಿಕ ಇಲಾಖೆ, ಕಂದಾಯ ಇಲಾಖೆ ಸಚಿವರು, ಅಧಿಕಾರಿಗಳ ಜೊತೆ ಮಂಗಳವಾರ ಸಭೆ ನಡೆಸಿ, ಅವರ ಬೇಡಿಕೆಗಳು ಹಾಗೂ ಇಲಾಖೆಯ ಯೋಚನೆ - ಯೋಜನೆಗಳನ್ನು ಆಲಿಸಿದ್ದಾರೆ. ಇಲಾಖೆಗಳ ನೂತನ ಕಾರ್ಯಕ್ರಮಗಳ ಮಾಹಿತಿ ಪಡೆದು, ಅಗತ್ಯ ಅನುದಾನ ಹಾಗೂ ಬೆಂಬಲ ನೀಡುವುದಾಗಿ ತಿಳಿಸಿದ್ದಾರೆ.

PM Surya Ghar Yojana: ಪಿಎಂ ಸೂರ್ಯಘರ್ ಯೋಜನೆಯಡಿ 16,000 ಕೋಟಿ ಸಬ್ಸಿಡಿ ಸಕ್ರಿಯ: ಪ್ರಲ್ಹಾದ್‌ ಜೋಶಿ

ಕೆಂಗಲ್ ಹನುಮಂತಯ್ಯ ಪ್ರಾಮಾಣಿಕ, ಧೀಮಂತ ರಾಜಕಾರಣಿ: ಸಿಎಂ

CM Siddaramaiah at Vidhanasoudha

ಬೆಂಗಳೂರು: ಮಾಜಿ ಮುಖ್ಯಮಂತ್ರಿ ದಿವಂಗತ ಕೆಂಗಲ್ ಹನುಮಂತಯ್ಯರವರು ಒಬ್ಬ ಪ್ರಾಮಾಣಿಕ ಹಾಗೂ ಧೀಮಂತ ರಾಜಕಾರಣಿ. ಸುಂದರವಾದ, ಭವ್ಯವಾದ ವಿಧಾನಸೌಧ ನಿರ್ಮಿಸಿದ ಕೀರ್ತಿ ಅವರಿಗೆ ಸಲ್ಲುತ್ತದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಮಾಜಿ ಮುಖ್ಯಮಂತ್ರಿ ಕೆಂಗಲ್ ಹನುಮಂತಯ್ಯರವರ ಜಯಂತಿ ಅಂಗವಾಗಿ ವಿಧಾನಸೌಧ ಆವರಣದಲ್ಲಿರುವ ಹನುಮಂತಯ್ಯ ಅವರ ಪ್ರತಿಮೆಗೆ ಮಂಗಳವಾರ ಮಾಲಾರ್ಪಣೆ ಮಾಡಿ ಮಾತನಾಡಿದ್ದಾರೆ.

ಕರ್ನಾಟಕದ ಏಕೀಕರಣಕ್ಕಾಗಿ ಹೋರಾಡಿದ ನಾಯಕರಾಗಿ, ಕೇಂದ್ರದ ರೈಲ್ವೆ ಮಂತ್ರಿಯಾಗಿ, ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಸಂವಿಧಾನ ರಚನಾ ಸಮಿತಿಗೆ ಅಮೂಲ್ಯ ಸಲಹೆಗಳನ್ನು ನೀಡಿ, ರಾಷ್ಟ್ರ ನಿರ್ಮಾಣದಲ್ಲಿ ಅಮೂಲ್ಯ ಕೊಡುಗೆಯನ್ನು ನೀಡಿದಂತಹ ಧೀಮಂತ ರಾಜಕಾರಣಿಯೊಬ್ಬರು ಕರ್ನಾಟಕದ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದಾರೆ.

ಕೇವಲ 47 ಗಂಟೆಯಲ್ಲೇ 14,275‌ ಬಾರ್‌ ಲೈಸೆನ್ಸ್‌ ನವೀಕರಣ; ಅಬಕಾರಿ ಇಲಾಖೆಯಿಂದ ಹೊಸ ದಾಖಲೆ

ರಾಜ್ಯದ ಪ್ರಥಮ ಚುನಾಯಿತ ಮುಖ್ಯಮಂತ್ರಿಯಾಗಿದ್ದರು. ಹನುಮಂತಯ್ಯನವರು ವಿಧಾನಸೌಧಕ್ಕೆ ಬುನಾದಿ ಹಾಕಿದರಾದರೂ, ಉದ್ಘಾಟನೆಯ ಸಂದರ್ಭದಲ್ಲಿ ಅವರು ಮುಖ್ಯಮಂತ್ರಿಯಾಗಿರಲಿಲ್ಲವೆಂಬುದು ನೋವಿನ ಸಂಗತಿ. ಅವರ ಆದರ್ಶ ಮತ್ತು ಸಿದ್ಧಾಂತಗಳು ಎಲ್ಲರಿಗೂ ಮಾರ್ಗದರ್ಶನ ನೀಡುತ್ತವೆ ಎಂದು ಹೇಳಿದ್ದಾರೆ.