ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

Cabinet Meeting: ರಾಜ್ಯ ಸಿವಿಲ್‌ ಸೇವೆ ಹುದ್ದೆಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆಗೆ ಸಚಿವ ಸಂಪುಟ ಒಪ್ಪಿಗೆ

ಸಿವಿಲ್ ಸೇವಾ ಹುದ್ದೆಗಳ ನೇಮಕಾತಿಯಲ್ಲಿ ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ನೀಡುವ ನಿರ್ಧಾರವನ್ನು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಕೈಗೊಳ್ಳಲಾಗಿದೆ. 2027ರ ಡಿಸೆಂಬರ್ 31ರವರೆಗೆ ಹೊರಡಿಸುವ ಅಧಿಸೂಚನೆಗಳಿಗೆ ಈ ನಿಯಮ ಅನ್ವಯವಾಗಲಿದೆ.

ಸಿವಿಲ್‌ ಸೇವೆ ಹುದ್ದೆಗೆ 5 ವರ್ಷ ವಯೋಮಿತಿ ಸಡಿಲಿಸಲು ಸಂಪುಟ ಒಪ್ಪಿಗೆ

ಸಾಂದರ್ಭಿಕ ಚಿತ್ರ -

Prabhakara R
Prabhakara R Jan 22, 2026 8:30 PM

ಬೆಂಗಳೂರು: ರಾಜ್ಯ ಸಿವಿಲ್‌ ಸೇವೆ ಹುದ್ದೆಗಳ ನೇಮಕಾತಿಗೆ ಐದು ವರ್ಷ ವಯೋಮಿತಿ ಸಡಿಲಿಕೆ, 22 ಹಿಂದುಳಿದ/ ದಲಿತ ಮಠಗಳಿಗೆ ಜಾಗ ಮಂಜೂರು, ಅಲೆಮಾರಿ, ಅರೆ ಅಲೆಮಾರಿ ಸಮುದಾಯದ ಜನರಿಗೆ ಮನೆ ನಿರ್ಮಾಣಕ್ಕೆ ನೆರವು ಸೇರಿ ಪ್ರಮುಖ ನಿರ್ಣಯಗಳಿಗೆ ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ (Cabinet Meeting) ಅನುಮೋದನೆ ನೀಡಲಾಗಿದೆ.

ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

  • ಸಿವಿಲ್ ಸೇವಾ ಹುದ್ದೆಗಳ ನೇಮಕಾತಿಯಲ್ಲಿ ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆಯ ನಿರ್ಧಾರವನ್ನು ಕೈಗೊಳ್ಳಲಾಗಿದೆ. 2027ರ ಡಿಸೆಂಬರ್ 31ರವರೆಗೆ ಹೊರಡಿಸುವ ಅಧಿಸೂಚನೆಗಳಿಗೆ ಈ ನಿಯಮ ಅನ್ವಯವಾಗಲಿದೆ.
  • 22 ಹಿಂದುಳಿದ, ದಲಿತ ಮಠಗಳಿಗೆ ಜಾಗ ಮಂಜೂರು ಮಾಡಲು ಸಂಪುಟ ಒಪ್ಪಿಗೆ ನೀಡಿದೆ. ಬೆಂಗಳೂರು ನಗರ‌ ಜಿಲ್ಲೆ, ಉತ್ತರ ತಾಲೂಕಿನ ದಾಸನಪುರ ಹೋಬಳಿಯಲ್ಲಿ ಜಾಗ ಮಂಜೂರಿಗೆ ಒಪ್ಪಿಗೆ ನೀಡಲಾಗಿದೆ. ರಾವುತ್ತನಹಳ್ಳಿ ಗ್ರಾಮದ ಸರ್ವೇ 57, 58 ರಲ್ಲಿರುವ ಸರ್ಕಾರಿ ಜಮೀನು ದಲಿತ, ಹಿಂದುಳಿದ ವರ್ಗಗಳ‌ 22 ಮಠಗಳಿಗೆ ಮಂಜೂರು ಮಾಡಲು ಸಮ್ಮತಿಸಲಾಗಿದೆ.
  • ರಾಜ್ಯದ ಅಲೆಮಾರಿ, ಅರೆ ಅಲೆಮಾರಿ ಸಮುದಾಯದ ಜನರಿಗೆ ಮನೆ ನಿರ್ಮಾಣಕ್ಕೆ ಸರ್ಕಾರದ ಸಹಾಯ ಹಸ್ತ ಚಾಚಲು ನಿರ್ಧರಿಸಿದೆ. 1200 ಚದರ ಅಡಿ ವಿಸ್ತೀರ್ಣದ ನಿವೇಶನದಲ್ಲಿ 600 ಚದರ ಅಡಿಗಳ ವಿಸ್ತೀರ್ಣದ ಮನೆಯನ್ನು ಮೂಲಭೂತ ಸೌಕರ್ಯ ಒಳಗೊಂಡಂತೆ ನಿರ್ಮಿಸಲು 100 ಕೋಟಿ ಮೊತ್ತದಲ್ಲಿ ನಿರ್ಮಿಸಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.
  • ಬೆಂಗಳೂರಿನ ಎಚ್‌ಎಸ್‌ಆರ್‌ ಬಡಾವಣೆಯಲ್ಲಿನ KEONICS ಸೌಲಭ್ಯ “CATS (Center for Applied Al for Tech Solutions)” ಹೆಸರಿಸಲಾದ AI ಉತ್ಕೃಷ್ಟತಾ ಕೇಂದ್ರ (AI-CoE) ಅನ್ನು 20 ಕೋಟಿಗಳ ಅಂದಾಜು ಮೊತ್ತದಲ್ಲಿ NASSCOM ಸಹಯೋಗದೊಂದಿಗೆ ಸ್ಥಾಪಿಸಲು ಆಡಳಿತಾತ್ಮಕ ಅನುಮೋದನೆ.
  • ಪೌಷ್ಠಿಕ ಆಹಾರ ಯೋಜನೆಯಡಿ ರಾಜ್ಯದ 08 ಜಿಲ್ಲೆಗಳಲ್ಲಿ ಒಟ್ಟು 50,046 ಪರಿಶಿಷ್ಟ ಪಂಗಡಗಳಿಗೆ ಸೇರಿದ ಕುಟುಂಬಗಳಿಗೆ ಆಹಾರ ಪದಾರ್ಥಗಳನ್ನು ఒಟ್ಟು ರೂ. 145.03 ಕೋಟಿಗಳ ಅಂದಾಜು ಮೊತ್ತದಲ್ಲಿ (ಪ್ರತಿ ಕಿಟ್‌ ಅಂದಾಜು ರೂ.2415.38/- ರಂತೆ) ಖರೀದಿಸಿ ಮುಂದಿನ 12 ತಿಂಗಳವರೆಗೆ ವಿತರಿಸಲು ಆಡಳಿತಾತ್ಮಕ ಅನುಮೋದನೆ.
  • ಕೊಪ್ಪಳ ಜಿಲ್ಲೆಯ ತಳಕಲ್‌ನಲ್ಲಿ GTTC-MSDC (ಬಹು ಕೌಶಲ್ಯಾಭಿವೃದ್ಧಿ ಕೇಂದ್ರ)ದ ಎರಡನೇ ಹಂತದ ನಿರ್ಮಾಣ ಕಾಮಗಾರಿ ಗಳನ್ನು KKRDB ಅನುದಾನದಿಂದ ರೂ.66.75 ಕೋಟಿಗಳ ಅಂದಾಜು ಮೊತ್ತದಲ್ಲಿ ಕೈಗೊಳ್ಳಲು ಆಡಳಿತಾತ್ಮಕ ‌ ಅನುಮೋದನೆ.

ಬೆಂಗಳೂರಿನಲ್ಲಿ ಅತ್ಯಂತ ವೇಗವಾಗಿ ಬೆಳವಣಿಗೆ ಹೊಂದುತ್ತಿರುವ ಹುದ್ದೆ ಎಐ ಎಂಜಿನಿಯರ್: ಲಿಂಕ್ಡ್‌ ಇನ್ 'ಜಾಬ್ಸ್ ಆನ್ ದಿ ರೈಸ್ 2026' ವರದಿ ಬಿಡುಗಡೆ