ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಡಿಸಿಎಂ ಡಾ.ಜಿ. ಪರಮೇಶ್ವರ್‌ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಗೆ ದಾಖಲು

G. Parameshwara: ಕರ್ನಾಟಕದ ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಮಂಗಳವಾರ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸದ್ಯ ಅವರು ಆರೋಗ್ಯವಾಗಿದ್ದಾರೆ ಎಂದು ಸಚಿವ ಯು.ಟಿ. ಖಾದರ್​​ ಮಾಹಿತಿ ನೀಡಿದ್ದಾರೆ. ವಸಂತನಗರದ ಬ್ಯಾಡ್ಮಿಂಟನ್ ಅಸೋಸಿಯೇಷನ್​​​ನಲ್ಲಿ ಆಯೋಜಿಸಲಾಗಿದ್ದ ಇಂಡಿಯಾ ಇಂಟರ್​​ನ್ಯಾಷನಲ್​​ ಚಾಲೆಂಜ್ ಉದ್ಘಾಟನಾ ಸಮಾರಂಭದಲ್ಲಿ ಭಾಗಿಗಿದ್ದ ವೇಳೆ ಪರಮೇಶ್ವರ್​​ ಅವರಿಗೆ ಆರೋಗ್ಯ ಸಮಸ್ಯೆ ಕಾಣಿಸಿಕೊಂಡಿತ್ತು.

ಡಿಸಿಎಂ ಡಾ.ಜಿ. ಪರಮೇಶ್ವರ್‌ ಆರೋಗ್ಯದಲ್ಲಿ ಏರುಪೇರು

ಡಿಸಿಎಂ ಡಾ.ಜಿ. ಪರಮೇಶ್ವರ್ (ಸಂಗ್ರಹ ಚಿತ್ರ) -

Ramesh Ballamoole
Ramesh Ballamoole Oct 27, 2026 2:53 PM

ಬೆಂಗಳೂರು, ಅ. ​​ 27: ಕರ್ನಾಟಕದ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ (G. Parameshwara) ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಮಂಗಳವಾರ (ಅಕ್ಟೋಬರ್‌ 27) ಬೆಂಗಳೂರಿನ ವೈದೇಹಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್​​, ಆರೋಗ್ಯ ಸಚಿವ ಯು.ಟಿ. ಖಾದರ್​​, ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸೇರಿ ಹಲವು ಗಣ್ಯರು ಆಸ್ಪತ್ರೆಗೆ ಭೇಟಿ ನೀಡಿ ಪರಮೇಶ್ವರ್​​ ಆರೋಗ್ಯ ವಿಚಾರಿಸಿದ್ದಾರೆ. ಡಿಸಿಎಂ ಪರಮೇಶ್ವರ್ ಆರೋಗ್ಯವಾಗಿದ್ದಾರೆ ಎಂದು ಯು.ಟಿ. ಖಾದರ್​​ ಮಾಹಿತಿ ನೀಡಿದ್ದಾರೆ.

ವಸಂತನಗರದ ಬ್ಯಾಡ್ಮಿಂಟನ್ ಅಸೋಸಿಯೇಷನ್​​​ನಲ್ಲಿ ಆಯೋಜಿಸಲಾಗಿದ್ದ ಇಂಡಿಯಾ ಇಂಟರ್​​ನ್ಯಾಷನಲ್​​ ಚಾಲೆಂಜ್ ಉದ್ಘಾಟನಾ ಸಮಾರಂಭದಲ್ಲಿ ಪರಮೇಶ್ವರ್​​ ಭಾಗಿಯಾಗಿದ್ದರು. ಈ ವೇಳೆ ಅವರ ಆರೋಗ್ಯದಲ್ಲಿ ಏರುಪೇರಾಗಿದೆ. ಹೀಗಾಗಿ ಕೂಡಲೇ ಅಲ್ಲಿಂದ ತೆರಳಿದರು.

ಪರಮೇಶ್ವರ್‌ ಅವರಿಗೆ ಹೃದಯಕ್ಕೆ ಸಂಬಂಧಿಸಿದ ಸಮಸ್ಯೆ ಆಗಿದೆ ಎಂಬ ಮಾಹಿತಿ ಇದ್ದು, ಅವರನ್ನು ಎಲ್ಲ ರೀತಿಯಿಂದಲೂ ವೈದ್ಯರು ಪರೀಕ್ಷಿಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿದೆ. ಆತಂಕಗೊಳ್ಳುವ ಅಗತ್ಯವಿಲ್ಲ, ಅವರು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಮಾಹಿತಿ ನೀಡಿವೆ.‌

ದೇವನಹಳ್ಳಿ ತಹಸೀಲ್ದಾರ್ ಕಚೇರಿಗೆ ಡಿಸಿಎಂ ಪರಮೇಶ್ವರ್‌ ದಿಢೀರ್ ಭೇಟಿ; ದಾಖಲೆಗಳ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ತೋರಿದ ಅಧಿಕಾರಿ ಸಸ್ಪೆಂಡ್‌

ಇಂದೇ ಡಿಸ್‌ಚಾರ್ಜ್‌

ಪರಮೇಶ್ವರ್‌ ಅವರ ಆರೋಗ್ಯ ಸ್ಥಿರವಾಗಿದ್ದು, ಅವರನ್ನು ಇಂದೇ ಡಿಸ್‌ಚಾರ್ಜ್‌ ಮಾಡುವುದಾಗಿ ವೈದ್ಯ ಡಾ. ಶ್ರೀನಿವಾಸ್‌ ತಿಳಿಸಿದ್ದಾರೆ. ʼʼಆಸ್ಪತ್ರೆಗೆ ಬಂದಾಗ ಹಾರ್ಟ್‌ ಬೀಟ್‌ ಜಾಸ್ತಿಯಾಗಿತ್ತು. ಅವರು ಆಸ್ಪತ್ರೆಗೆ ನಡೆದುಕೊಂಡೇ ಬಂದಿದ್ದರುʼʼ ಎಂದು ಮಾಹಿತಿ ನೀಡಿದ್ದಾರೆ.

ಮೀಸಲಾತಿ ರಕ್ಷಣೆಗೆ ಸುಪ್ರೀಂ ಕೋರ್ಟ್‌ಗೆ ಮೊರೆ: ಪರಮೇಶ್ವರ್‌

ʼʼಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿ ಪ್ರಮಾಣ ಹೆಚ್ಚಳ ರದ್ದುಗೊಳಿಸಿರುವ ಹೈಕೋರ್ಟ್ ತೀರ್ಪಿನ ವಿರುದ್ಧ ಸುಪ್ರೀರ ಕೋರ್ಟ್‌ನಲ್ಲಿ ವಿಶೇಷ ಅನುಮತೆ ಅರ್ಜಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಸಂವಿಧಾನಬದ್ದ ಹಕ್ಕುಗಳ ರಕ್ಷಣೆಗೆ ಸರಕಾರ ಬದ್ಧವಾಗಿದ್ದು, ಈ ವಿಚಾರದಲ್ಲಿ ಯಾವುದೇ ಕಾರಣಕ್ಕೂ ರಾಜಿಯಾಗುವುದಿಲ್ಲʼʼ ಎಂದು ಡಾ.ಜಿ. ಪರಮೇಶ್ವರ ಹೇಳಿದ್ದರು.

ಸೋಮವಾರ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭಉದ್ಘಾಟಿಸಿ ಮಾತನಾಡಿದ ಅವರು, ಹೈಕೋರ್ಟ್ ತೀರ್ಪಿನ ಕುರಿತು ಮುಖ್ಯಮಂತ್ರಿ ಡಿ.ಕೆ. ಶಿವಕುಮಾ‌ರ್ ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಸುದೀರ್ಘ ಚರ್ಚೆ ನಡೆಸಲಾಗಿದೆ. ಈ ತೀರ್ಪಿನ ವಿರುದ್ದ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲೇಬೇಕು ಎಂಬ ನಿರ್ಧಾರಕ್ಕೆ ಬರಲಾಗಿದೆʼʼ ಎಂದು ತಿಳಿಸಿದ್ದರು.

ಮಾಂಜಾ ದಾರ ಬಳಕೆ ನಿಷೇಧ ಪರಿಣಾಮಕಾರಿ ಅನುಷ್ಠಾನಕ್ಕೆ ಕ್ರಮ: ಡಿಸಿಎಂ ಪರಮೇಶ್ವರ್‌

10 ಸಾಧಕರಿಗೆ ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿ ಪ್ರದಾನ

ಮಹರ್ಷಿ ವಾಲ್ಮೀಕಿ ಜಯಂತಿ ಅಂಗವಾಗಿ ರಾಜ್ಯ ಸರ್ಕಾರದ ವತಿಯಿಂದ 2026-27ನೇ ಸಾಲಿನ ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿಯನ್ನು ಪ್ರದಾನ ಮಾಡಲಾಗಿತ್ತು. ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿರುವ 10 ಸಾಧಕರಿಗೆ ಈ ಪ್ರಶಸ್ತಿ ನೀಡಲಾಗಿತ್ತು. ಶೈಕ್ಷಣಿಕ ಕ್ಷೇತ್ರದಲ್ಲಿ ಧಾರವಾಡ ಜಿಲ್ಲೆಯ ತೇಜಸ್ವಿ ಕಟ್ಟಿಮನಿ, ಸಾಹಿತ್ಯ ಕ್ಷೇತ್ರದಲ್ಲಿ ಚಿತ್ರದುರ್ಗ ಜಿಲ್ಲೆಯ ತಿಪ್ಪಣ್ಣ ಮರಿಕುಂಟೆ, ಸಾಂಸ್ಕೃತಿಕ ಸೇವೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆರ್.ಎಂ. ಮುನಿರಾಜು, ವಿಜ್ಞಾನ, ತಂತ್ರಜ್ಞಾನ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಮೈಸೂರಿನ ಡಾ. ಚಂದ್ರನಾಯಕ್ ಎಸ್. ಸೇರಿ 10 ಜನರಗೆ ಡಿಸಿಎಂ ಡಾ.ಜಿ.ಪರಮೇಶ್ವರ್ ಪ್ರಶಸ್ತಿ ಪ್ರದಾನ ಮಾಡಿದ್ದರು.

ರಾಜ್ಯದ ಸುದ್ದಿ ಓದಲು ಇಲ್ಲಿ ಕ್ಲಿಕ್‌ ಮಾಡಿ.

ʼಪ್ರವಾಸಿ ಪ್ರಪಂಚʼ ವೆಬ್‌ಸೈಟ್‌ಗೆ ಭೇಟಿ ನೀಡಲು ಇಲ್ಲಿ ಕ್ಲಿಕ್‌ ಮಾಡಿ.