Bengaluru's Second Airport: ಬೆಂಗಳೂರಿನ 2ನೇ ಏರ್‌ಪೋರ್ಟ್‌ಗೆ ರಾಜ್ಯ ಸರ್ಕಾರದಿಂದ ಟೆಂಡರ್ ಆಹ್ವಾನ
ಪ್ರಸ್ತಾವಿತ ಬೆಂಗಳೂರಿನ ಹೊಸ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ವೇಗವಾಗಿ ಬೆಳೆಯುತ್ತಿರುವ ಬೆಂಗಳೂರು ನಗರದ ವಾಯು ಸಂಚಾರ ಬೇಡಿಕೆಯನ್ನು ಪೂರೈಸಲು ಮತ್ತು ಕರ್ನಾಟಕದ ದೀರ್ಘಕಾಲೀನ ವಾಯುಯಾನ ಮತ್ತು ಆರ್ಥಿಕ ಹಿತಾಸಕ್ತಿಗಳನ್ನು ಭದ್ರಪಡಿಸುವಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತದೆ.
ಸಚಿವ ಎಂ.ಬಿ.ಪಾಟೀಲ್. -
ಬೆಂಗಳೂರು: ನಗರದಲ್ಲಿ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ (Bengaluru's Second Airport) ಸ್ಥಾಪನೆ ಸಂಬಂಧ KSIIDC ಮತ್ತೊಂದು ದಿಟ್ಟ ಹೆಜ್ಜೆಯನ್ನು ಇರಿಸಿದೆ. ನಗರದ ಹೊರವಲಯದಲ್ಲಿ ಆಯ್ಕೆ ಮಾಡಲಾದ 3 ಸ್ಥಳಗಳನ್ನು ಎಎಐ (ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ) ಅಧಿಕಾರಿಗಳು ಸ್ಥಳ ಪರಿಶೀಲನೆ ಮಾಡಿ, ಅನೇಕ ವಿಷಯಗಳ ಕುರಿತು ಪ್ರಸ್ತಾಪ ಮಾಡಿ, ಈ ಸ್ಥಳಗಳಲ್ಲಿರುವ ಸವಾಲುಗಳ ಕುರಿತು ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ, ವಿವರವಾದ ಕಾರ್ಯತಂತ್ರ ಮತ್ತು ಕಾರ್ಯಸಾಧ್ಯತಾ ವರದಿ ಸಿದ್ಧಪಡಿಸಲು ರಾಜ್ಯ ಸರ್ಕಾರ ಟೆಂಡರ್ ಆಹ್ವಾನಿಸಿದೆ.
ಈ ಬಗ್ಗೆ ಸಚಿವ ಎಂ.ಬಿ.ಪಾಟೀಲ್ ಪ್ರತಿಕ್ರಿಯಿಸಿ, ಈ ಟೆಂಡರ್'ನಲ್ಲಿ 3-4 ಸಂಸ್ಥೆಗಳು ಭಾಗವಹಿಸಿದ್ದು, ನಿಗದಿತ ಅವಧಿಯೊಳಗೆ ಪ್ರಕ್ರಿಯೆ ಪೂರ್ಣಗೊಳ್ಳಲಿದೆ. ಅವರು ಸಲ್ಲಿಸುವ ವರದಿಯ ಆಧಾರದಲ್ಲಿ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು.
₹4,824 Crore Investment Approved; 14,525 Jobs to be Created Across Karnataka
— M B Patil (@MBPatil) March 14, 2026
At the 158th State Level Single Window Approval Committee meeting, we approved ₹4,824 crore in investments for 37 new industries and 2 expansion projects across 13 districts of Karnataka.
These… pic.twitter.com/RMzJQYL14W
ಪ್ರಸ್ತಾವಿತ ಹೊಸ ವಿಮಾನ ನಿಲ್ದಾಣವು ವೇಗವಾಗಿ ಬೆಳೆಯುತ್ತಿರುವ ಬೆಂಗಳೂರಿನ ವಾಯು ಸಂಚಾರ ಬೇಡಿಕೆಯನ್ನು ಪೂರೈಸಲು ಮತ್ತು ಕರ್ನಾಟಕದ ದೀರ್ಘಕಾಲೀನ ವಾಯುಯಾನ ಮತ್ತು ಆರ್ಥಿಕ ಹಿತಾಸಕ್ತಿಗಳನ್ನು ಭದ್ರಪಡಿಸುವಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತದೆ ಎಂದು ತಿಳಿಸಿದ್ದಾರೆ.
ಸಮಗ್ರ ಕರ್ನಾಟಕದಲ್ಲಿ ಹೂಡಿಕೆ, ಉದ್ಯೋಗ ಸೃಷ್ಟಿ ನಿರಂತರ
ಬೆಂಗಳೂರು: ನಮ್ಮ ಸರ್ಕಾರದ ಕೈಗಾರಿಕಾ ಸ್ನೇಹಿ ನೀತಿಗಳು ಮತ್ತು ದೃಢ ನಿರ್ಧಾರಗಳ ಫಲವಾಗಿ, 158ನೇ ರಾಜ್ಯ ಮಟ್ಟದ ಏಕಗವಾಕ್ಷಿ ಅನುಮೋದನಾ ಸಮಿತಿ ಸಭೆಯಲ್ಲಿ ₹4,824 ಕೋಟಿ ಮೊತ್ತದ ಬಂಡವಾಳ ಹೂಡಿಕೆಗೆ ಅನುಮೋದನೆ ನೀಡಲಾಗಿದೆ. ಇದರೊಂದಿಗೆ 14,525ಕ್ಕೂ ಅಧಿಕ ಉದ್ಯೋಗಾವಕಾಶಗಳು ಸೃಷ್ಟಿಯಾಗುತ್ತಿದ್ದು, 13 ಜಿಲ್ಲೆಗಳಲ್ಲಿ ಕೈಗಾರಿಕಾ ವಿಸ್ತರಣೆ ಮತ್ತು 37 ಹೊಸ ಕೈಗಾರಿಕೆಗಳ ಸ್ಥಾಪನೆ ಮೂಲಕ ಸಮಗ್ರ ಅಭಿವೃದ್ಧಿಯ ದಿಕ್ಕಿನಲ್ಲಿ ನಾವು ಮತ್ತೊಂದು ಬಲವಾದ ಹೆಜ್ಜೆ ಇಟ್ಟಿದ್ದೇವೆ ಎಂದು ಸಚಿವ ಎಂ.ಬಿ.ಪಾಟೀಲ್ ತಿಳಿಸಿದ್ದಾರೆ.
₹50 ಕೋಟಿ ಮೀರಿದ 22 ಯೋಜನೆಗಳಿಂದ ₹3,908.68 ಕೋಟಿ ಹೂಡಿಕೆ ಹಾಗೂ 12,475 ಉದ್ಯೋಗಗಳು, ₹15–₹50 ಕೋಟಿ ನಡುವಿನ 15 ಯೋಜನೆಗಳಿಂದ ₹350.60 ಕೋಟಿ ಹೂಡಿಕೆ ಮತ್ತು 1,750 ಉದ್ಯೋಗಗಳು, ಜೊತೆಗೆ 2 ಹೆಚ್ಚುವರಿ ಯೋಜನೆಗಳಿಂದ ₹565.03 ಕೋಟಿ ಹೂಡಿಕೆ ಹಾಗೂ 300 ಉದ್ಯೋಗಗಳು ಸೃಷ್ಟಿಯಾಗುತ್ತಿವೆ. ಪ್ರತಿ ಜಿಲ್ಲೆಗೂ ಕೈಗಾರಿಕೆ, ಪ್ರತಿ ಮನೆಗೂ ಉದ್ಯೋಗ- ಇದು ಕೇವಲ ಘೋಷಣೆ ಅಲ್ಲ, ನಮ್ಮ ಸರ್ಕಾರ ಯಶಸ್ವಿಯಾಗಿ ಸಾಕಾರಗೊಳಿಸುತ್ತಿರುವ ದೃಢ ಸಂಕಲ್ಪ ಎಂದು ಸಚಿವರು ತಿಳಿಸಿದ್ದಾರೆ.