ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

GBA elections: ಜಿಬಿಎ ಚುನಾವಣೆ ಮುಂದೂಡಲು ಕೋರಿ ಸುಪ್ರೀಂ ಕೋರ್ಟ್‌ಗೆ ರಾಜ್ಯ ಸರ್ಕಾರ ಅರ್ಜಿ

ಎಸ್​ಐಆರ್ ಪ್ರಕ್ರಿಯೆ ನಂತರ ಅಂತಿಮ ಮತದಾರರ ಪಟ್ಟಿಯನ್ನು ಅಕ್ಟೋಬರ್ 7 ರಂದು ಪ್ರಕಟಿಸಲು ದಿನಾಂಕ ನಿಗದಿಪಡಿಸಲಾಗಿದೆ. ನಿಖರ ಮತದಾರರ ಪಟ್ಟಿಯಿಲ್ಲದೆ ಚುನಾವಣೆ ನಡೆಸುವುದು ಸೂಕ್ತವಲ್ಲ. ಹಾಗಾಗಿ ಡಿಸೆಂಬರ್ 31 ರವರೆಗೆ ಜಿಬಿಎ ಚುನಾವಣೆ ಗಡುವು ವಿಸ್ತರಿಸುವಂತೆ ಸುಪ್ರೀಂ ಕೋರ್ಟ್‌ ಅನ್ನು ಸರ್ಕಾರ ಕೋರಿದೆ.

ಜಿಬಿಎ ಚುನಾವಣೆ ಮುಂದೂಡುವಂತೆ ಸುಪ್ರೀಂಗೆ ರಾಜ್ಯ ಸರ್ಕಾರ ಮನವಿ

-

Prabhakara R
Prabhakara R Jul 10, 2026 11:21 PM

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA elections) ಚುನಾವಣೆ ಮತ್ತಷ್ಟು ವಿಳಂಬವಾಗುವ ಸಾಧ್ಯತೆ ಇದೆ. ಡಿಸೆಂಬರ್‌ವರೆಗೆ ಚುನಾವಣೆ ಮುಂದೂಡಿಕೆ ಅಗತ್ಯ ಎಂದು ಸುಪ್ರೀಂಕೋರ್ಟ್‌ಗೆ (Supreme Court) ರಾಜ್ಯ ಸರ್ಕಾರ ಕೋರಿದೆ. ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಜಿಬಿಎ ಚುನಾವಣೆ ಮುಂದೂಡುವಂತೆ ರಾಜ್ಯ ಸರ್ಕಾರ ಮನವಿ ಮಾಡಿದೆ.

ಈ ಹಿಂದೆ 2026ರ ಜೂನ್ 30ರೊಳಗೆ ಜಿಬಿಎ ಚುನಾವಣೆಯನ್ನು ಪೂರ್ಣಗೊಳಿಸಲು ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿತ್ತು. ನಂತರ ಜಿಬಿಎ ವಿಸ್ತರಣಾ ಅರ್ಜಿ ಸಲ್ಲಿಸಿದ್ದರಿಂದ ಗಡುವನ್ನು ಆಗಸ್ಟ್ 31ರವರೆಗೆ ವಿಸ್ತರಿಸಿತ್ತು. ಇದೀಗ ಡಿಸೆಂಬರ್ 31 ರವರೆಗೆ ಗಡುವು ವಿಸ್ತರಿಸುವಂತೆ ಸರ್ಕಾರ ಕೋರಿದೆ.

ಬೆಂಗಳೂರಿನಲ್ಲಿ ಸುಮಾರು 1.03 ಕೋಟಿ ಮತದಾರರಿದ್ದಾರೆ. ಎಸ್‌ಐಆರ್‌ ವೇಳೆ ಸುಮಾರು 40 ಲಕ್ಷ ಮನೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕಿದೆ. ಕರಡು ಮತದಾರರ ಪಟ್ಟಿ ಪ್ರಕಟಣೆ, ಆಕ್ಷೇಪಣೆಗಳ ಸ್ವೀಕಾರ ಮತ್ತು ಅವುಗಳ ವಿಚಾರಣೆ ಇನ್ನೂ ಪೂರ್ಣಗೊಂಡಿಲ್ಲ. ಪ್ರತಿಯೊಂದು ವಿಧಾನಸಭಾ ಕ್ಷೇತ್ರದಲ್ಲಿ 1 ಲಕ್ಷಕ್ಕೂ ಹೆಚ್ಚು ಅರ್ಜಿಗಳು/ಆಕ್ಷೇಪಣೆಗಳು ಬರಬಹುದು ಎಂದು ಸರ್ಕಾರ ಅಂದಾಜಿಸಿದೆ.

ಬೆಂಗಳೂರಿಗರೇ ಎಚ್ಚರ: ರಸ್ತೆ ಬದಿ ವಾಹನ ನಿಲ್ಲಿಸಿ ಹೋದರೆ ಮರಳಿ ಸಿಗದೇ ಇರಬಹುದು! ಜಿಬಿಎಯಿಂದ ಬೃಹತ್ ತೆರವು ಕಾರ್ಯಾಚರಣೆ

ಚುನಾವಣೆ ನಡೆಸುವ ಸಿಬ್ಬಂದಿಯೇ ಎಸ್‌ಐಆರ್ ಕೆಲಸದಲ್ಲೂ ನಿರತರಾಗಿದ್ದಾರೆ. ನಿಖರ ಮತದಾರರ ಪಟ್ಟಿಯಿಲ್ಲದೆ ಚುನಾವಣೆ ನಡೆಸುವುದು ಸೂಕ್ತವಲ್ಲ. ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆಗೆ ಅಂತಿಮ ಹಾಗೂ ಸರಿಯಾದ ಮತದಾರರ ಪಟ್ಟಿ ಅಗತ್ಯ. ಹೀಗಾಗಿ, ಡಿಸೆಂಬರ್‌ವರೆಗೂ ಚುನಾವಣೆ ಮುಂದೂಡಿಕೆ ಅಗತ್ಯ ಇದೆ ಅಂತ ಸುಪ್ರೀಂಕೋರ್ಟ್ಗೆ ರಾಜ್ಯ ಸರ್ಕಾರ ಮನವಿ ಸಲ್ಲಿಸಿದೆ.