Prajwal Revanna Case: ಪ್ರಜ್ವಲ್ ರೇವಣ್ಣಗೆ ಕಡ್ಡಾಯ ಜಾಮೀನು ತಿರಸ್ಕರಿಸಿದ್ದ ಕೆಳ ನ್ಯಾಯಾಲಯದ ಆದೇಶ ರದ್ದು ಮಾಡಿದ ಹೈಕೋರ್ಟ್
ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಪ್ರಕರಣವೊಂದಕ್ಕೆ ಸಂಬಂಧಿಸಿ ಕಡ್ಡಾಯ ಜಾಮೀನು ಅರ್ಜಿ ತಿರಸ್ಕರಿಸಿದ್ದ ಕೆಳ ಹಂತದ ನ್ಯಾಯಾಲಯದ ಆದೇಶವನ್ನು ಹೈಕೋರ್ಟ್ ರದ್ದುಗೊಳಿಸಿದೆ. ಪ್ರಜ್ವಲ್ ವಿರುದ್ಧ ಒಟ್ಟು ನಾಲ್ಕು ಪ್ರಕರಣಗಳಿದ್ದು, ಒಂದು ಪ್ರಕರಣದಲ್ಲಿ ಶಿಕ್ಷೆಯಾಗಿದೆ ಹಾಗೂ ಉಳಿದ 3 ಪ್ರಕರಣಗಳ ವಿಚಾರಣೆ ನಡೆಯುತ್ತಿದೆ.
-
ಬೆಂಗಳೂರು: ಅತ್ಯಾಚಾರ ಹಾಗೂ ಅಶ್ಲೀಲ ವಿಡಿಯೊ ಪ್ರಕರಣದಲ್ಲಿ ಜೈಲು ಸೇರಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಕಡ್ಡಾಯ ಜಾಮೀನು ತಿರಸ್ಕರಿಸಿದ್ದ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಆದೇಶವನ್ನು ನ್ಯಾ. ಎಂ.ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ ರದ್ದುಪಡಿಸಿದೆ.
ಗಡುವಿನೊಳಗೆ ಪೊಲೀಸರು ದೋಷಾರೋಪ ಪಟ್ಟಿ ಸಲ್ಲಿಸಿಲ್ಲ. ಹೀಗಾಗಿ, ಈ ಪ್ರಕರಣದಲ್ಲಿ ಪ್ರಜ್ವಲ್ ಕಡ್ಡಾಯ ಜಾಮೀನು ಕೋರಬಹುದು. ಆದರೆ, ಬೇರೊಂದು ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣಗೆ ಶಿಕ್ಷೆಯಾಗಿದೆ. ಆದ್ದರಿಂದ ಕಡ್ಡಾಯ ಜಾಮೀನಿನ ಅನುಕೂಲ ಪ್ರಜ್ವಲ್ ರೇವಣ್ಣಗೆ ಸಿಗುವುದಿಲ್ಲ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಅತ್ಯಾಚಾರ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಕಡ್ಡಾಯ ಜಾಮೀನು ಅರ್ಜಿ ತಿರಸ್ಕರಿಸಿದ್ದ ಆದೇಶವನ್ನು ಹೈಕೋರ್ಟ್ ರದ್ದುಗೊಳಿಸಿದೆ.
ಮಾಜಿ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಈ ಪ್ರಕರಣದಲ್ಲಿ ಅಶ್ಲೀಲ ವಿಡಿಯೊ ಮತ್ತು 47 ವರ್ಷದ ಮಹಿಳೆಯ ಮೇಲೆ ಅತ್ಯಾಚಾರ ನಡೆದಿತ್ತು. ಶಿಕ್ಷೆಯನ್ನು ಘೋಷಿಸಿದ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ್ ಗಜಾನನ್ ಭಟ್ ಅವರು ಅಪರಾಧಿಗೆ 10 ಲಕ್ಷ ರೂಪಾಯಿ ದಂಡವನ್ನೂ ವಿಧಿಸಿದ್ದರು.
ಕೆ.ಆರ್. ನಗರದ ಮನೆಕೆಲಸದ ಮಹಿಳೆಯ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಪ್ರಜ್ವಲ್ ರೇವಣ್ಣ ಅವರನ್ನು ದೋಷಿ ಎಂದು ಘೋಷಿಸಿ, ಜೀವಾವಧಿ ಶಿಕ್ಷೆ ಹಾಗೂ ದಂಡ ವಿಧಿಸಿತ್ತು. ಇವರ ವಿರುದ್ಧ ಒಟ್ಟು ನಾಲ್ಕು ಪ್ರಕರಣಗಳಿದ್ದು, ಒಂದು ಪ್ರಕರಣದಲ್ಲಿ ಶಿಕ್ಷೆಯಾಗಿದೆ ಹಾಗೂ ಉಳಿದ 3 ಪ್ರಕರಣಗಳ ವಿಚಾರಣೆ ನಡೆಯುತ್ತಿದೆ.
HMT Fake Watch Sales: ಆನ್ಲೈನ್ನಲ್ಲಿ ನಕಲಿ ಎಚ್ಎಂಟಿ ವಾಚ್ಗಳ ಮಾರಾಟ: ಫ್ಲಿಪ್ಕಾರ್ಟ್ಗೆ ನೋಟಿಸ್ ಜಾರಿ
ಅಶ್ಲೀಲ ವಿಡಿಯೋಗಳ ಪ್ರಸಾರಕ್ಕೆ ಸಂಬಂಧಿಸಿದಂತೆಯೂ ವಿಶೇಷ ತನಿಖಾ ತಂಡ (SIT) ಚಾರ್ಜ್ಶೀಟ್ ಸಲ್ಲಿಸಿದೆ. ಮಾಜಿ ಪ್ರಧಾನಿ ಎಚ್ಡಿ ದೇವೇಗೌಡರ ಮೊಮ್ಮಗ ಪ್ರಜ್ವಲ್ ರೇವಣ್ಣ ಅವರು ಪದೇ ಪದೇ ಅತ್ಯಾಚಾರ ಮತ್ತು ಅಧಿಕಾರ ದುರುಪಯೋಗಪಡಿಸಿಕೊಂಡ ಆರೋಪದ ಮೇಲೆ ಶಿಕ್ಷೆಗೊಳಗಾಗಿದ್ದಾರೆ. ಸಂತ್ರಸ್ತೆಗೆ 7 ಲಕ್ಷ ರೂಪಾಯಿ ದಂಡ ಪಾವತಿಸಲು ನ್ಯಾಯಾಲಯ ಆದೇಶಿಸಿತ್ತು.