CM Siddaramaiah's Delhi visit: ಇಂದು ಸಂಜೆ ದೆಹಲಿಗೆ ಸಿಎಂ ಸಿದ್ದರಾಮಯ್ಯ ಪ್ರಯಾಣ; ಹೈಕಮಾಂಡ್ ಬುಲಾವ್ ಬಗ್ಗೆ ಹೇಳಿದ್ದೇನು?
ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಚರ್ಚೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಎರಡೂ ಬಣಗಳ ನಾಯಕರ ನಡುವಿನ ಭಿನ್ನಾಭಿಪ್ರಾಯಗಳನ್ನು ಬಗೆಹರಿಸಲು ಮುಂದಾಗಿದೆ ಎನ್ನಲಾಗಿದೆ. ಹೀಗಾಗಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಹೈಕಮಾಂಡ್ ಬುಲಾವ್ ನೀಡಿದೆ.
ಸಿಎಂ ಸಿದ್ದರಾಮಯ್ಯ -
ಬೆಂಗಳೂರು: ಕಾಂಗ್ರೆಸ್ ಹೈಕಮಾಂಡ್‌ನಿಂದ ತಮಗೆ ಬುಲಾವ್ ಬಂದಿರುವುದನ್ನು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ನನಗೆ ದೆಹಲಿಗೆ ಬರಲು ಆಹ್ವಾನ ನೀಡಲಾಗಿದೆ. ನಾಳೆ ಬೆಳಗ್ಗೆ 11 ಗಂಟೆಗೆ ಸಭೆ ನಿಗದಿಯಾಗಿದೆ. ಆದರೆ, ವಿಷಯಕ್ಕೆ ಕರೆದಿದ್ದಾರೆ ಎಂಬುದು ನನಗೆ ತಿಳಿದಿಲ್ಲ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರು ನನಗೆ ಕರೆ ಮಾಡಿ ಸಭೆಯ ದಿನಾಂಕ ಮತ್ತು ಸಮಯವನ್ನು ತಿಳಿಸಿದ್ದಾರೆ" ಎಂದು ಸಿಎಂ ಹೇಳಿದ್ದಾರೆ.
ಇದೇ ವೇಳೆ ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಹಾಗೂ ಸಿಎಂ ಸ್ಥಾನದ ಕುರಿತು ಕೇಳಿಬರುತ್ತಿರುವ ವದಂತಿಗಳ ಬಗ್ಗೆ ಪ್ರತಿಕ್ರಿಯಿಸಿದ ಅವರು, “ರಾಜಕೀಯದಲ್ಲಿ ಇಂತಹ ಊಹಾಪೋಹಗಳು ಯಾವಾಗಲೂ ಇದ್ದೇ ಇರುತ್ತವೆ” ಎಂದು ತಿಳಿಸಿದ್ದಾರೆ.
#WATCH | Bengaluru: Karnataka CM Siddaramaiah says, "I have been invited to Delhi. There is a meeting tomorrow at 11 AM; I do not know the agenda. Mr Venugopal called me to inform me about the date and time of the meeting..."
— ANI (@ANI) May 25, 2026
On the speculations around the CM post, he says,… pic.twitter.com/P5yBxV6VmE
ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಚರ್ಚೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹೈಕಮಾಂಡ್, ಎರಡೂ ಬಣಗಳ ನಾಯಕರ ನಡುವಿನ ಭಿನ್ನಾಭಿಪ್ರಾಯಗಳನ್ನು ಬಗೆಹರಿಸಲು ಮುಂದಾಗಿದೆ ಎನ್ನಲಾಗಿದೆ. ಹೀಗಾಗಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಹೈಕಮಾಂಡ್ ಬುಲಾವ್ ನೀಡಿದೆ.
Anchor Jhanvi: ಬಿಗ್‌ಬಾಸ್ ಖ್ಯಾತಿಯ ಜಾಹ್ನವಿ ರಾಜಕೀಯಕ್ಕೆ ಎಂಟ್ರಿ; ಎಚ್‌ಡಿಕೆ ಸಮ್ಮುಖದಲ್ಲಿ ಜೆಡಿಎಸ್ ಸೇರ್ಪಡೆ
ಈ ಪ್ರಮುಖ ದೆಹಲಿ ಭೇಟಿಯ ವೇಳೆ ನಾಯಕತ್ವ ಬದಲಾವಣೆ ಚರ್ಚೆ, ರಾಜ್ಯ ಸಚಿವ ಸಂಪುಟ ಪುನಾರಚನೆ ಹಾಗೂ ಮುಂಬರುವ ರಾಜ್ಯಸಭಾ ಚುನಾವಣೆಗಳ ಕಾರ್ಯತಂತ್ರಗಳ ಕುರಿತಾಗಿಯೂ ರಾಹುಲ್ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆ ಸೇರಿ ಪಕ್ಷದ ಹಿರಿಯ ನಾಯಕರೊಂದಿಗೆ ಸಿಎಂ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಅವರು ಸವಿಸ್ತಾರವಾಗಿ ಚರ್ಚಿಸಲಿದ್ದಾರೆ ಎಂದು ತಿಳಿದುಬಂದಿದೆ.