Karnataka Weather: ಇಂದಿನ ಹವಾಮಾನ; ಮೈಸೂರು, ಚಾಮರಾಜನಗರ ಸೇರಿ ವಿವಿಧ ಜಿಲ್ಲೆಗಳಲ್ಲಿ ಮಳೆ ನಿರೀಕ್ಷೆ
ಕರ್ನಾಟಕದಲ್ಲಿ ಚಳಿಯ ತೀವ್ರತೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದೆ. ಬೆಂಗಳೂರು ಸೇರಿ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಸೋಮವಾರ ಕೂಡ ಮೋಡ ಕವಿದ ವಾತಾವರಣ ಕಂಡುಬಂದಿತ್ತು. ಇಂದು ಕೂಡ ಅದೇ ರೀತಿಯ ಸ್ಥಿತಿ ಮುಂದುವರಿಯುವ ಸಾಧ್ಯತೆ ಇದೆ. ಇನ್ನು ಮುಂದಿನ 6 ದಿನ ರಾಜ್ಯದಲ್ಲಿ ಹವಾಮಾನ ಹೇಗಿರಲಿದೆ ಎಂಬ ಕುರಿತ ವರದಿ ಇಲ್ಲಿದೆ.
ಸಾಂದರ್ಭಿಕ ಚಿತ್ರ -
ಬೆಂಗಳೂರು, ಡಿ.2: ರಾಜಧಾನಿ ಬೆಂಗಳೂರು ಸೇರಿ ದಕ್ಷಿಣ ಒಳನಾಡಿನ ವಿವಿಧ ಜಿಲ್ಲೆಗಳಲ್ಲಿ ಸೋಮವಾರ ಮೋಡ ಕವಿದ ವಾತಾವರಣವಿತ್ತು. ಅಲ್ಲದೇ ತೀವ್ರ ಚಳಿಯಿಂದ ಹಗಲಲ್ಲೂ ಮೈ ನಡುಗುವ ಸ್ಥಿತಿ ಕಂಡುಬಂದಿತ್ತು. ಇನ್ನು ಹಾಗೆಯೇ ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳವರೆಗೆ ಭಾಗಶಃ ಮೋಡ ಕವಿದ ವಾತಾವರಣ (Karnataka Weather) ಇರಲಿದ್ದು, ಕೆಲವು ಪ್ರದೇಶಗಳಲ್ಲಿ ಬೆಳಗಿನ ಜಾವದಲ್ಲಿ ದಟ್ಟ ಮಂಜು ಬೀಳುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 26 ಡಿಗ್ರಿ ಸೆ. ಮತ್ತು 18 ಸೆ. ಇರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇಂದು (ಡಿ.2) ಕರಾವಳಿ ಹಾಗೂ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯುವ ಸಾಧ್ಯತೆ ಇದೆ. ಇನ್ನು ದಕ್ಷಿಣ ಒಳನಾಡಿನ ಚಾಮರಾಜನಗರ, ರಾಮನಗರ, ಮೈಸೂರು, ಚಿಕ್ಕಬಳ್ಳಾಪುರ ಮತ್ತು ಮಂಡ್ಯ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಕಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಒಣಹವೆ ಇರುವ ಸಾಧ್ಯತೆ ಇದೆ.
ಡಿ.3ರಂದು ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆ ಹಾಗೂ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳಲ್ಲಿ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಒಣಹವೆ ಇರುವ ಸಾಧ್ಯತೆ ಇದೆ.
ಚಳಿಗಾಲದ ಆರೋಗ್ಯಕ್ಕೆ ಗಿಡಮೂಲಿಕೆ ಚಹಾಗಳನ್ನು ಕುಡಿದ್ರೆ ಈ ಪ್ರಯೋಜನ
ಡಿ.4ರಂದು ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಕೊಡಗು, ಹಾಸನ, ಚಿಕ್ಕಮಗಳೂರು, ಚಾಮರಾಜನಗರ, ಮೈಸೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ, ಚಿಕ್ಕಬಳ್ಳಾಪುರ, ಕೋಲಾರ ಮತ್ತು ತುಮಕೂರು ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಕಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ಮಂಡ್ಯ, ಶಿವಮೊಗ್ಗ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಒಣಹವೆ ಇರುವ ಸಾಧ್ಯತೆ ಇದೆ.
ಡಿ.5ರಂದು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಕೊಡಗು, ಹಾಸನ ಜಿಲ್ಲೆಗಳಲ್ಲಿ ಒಂದೋ ಎರಡೋ ಕಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಒಣಹವೆ ಇರುವ ಸಾಧ್ಯತೆ ಇದೆ.
ಡಿ.6 ಮತ್ತು 7ರಂದು ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಒಣ ಹವಾಮಾನ ಮುಂದುವರಿಯುವ ಸಾಧ್ಯತೆಯಿದೆ.