ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

Karnataka Weather: ರಾಜ್ಯದಲ್ಲಿ ಮುಂದಿನ 4 ದಿನ ಅಬ್ಬರಿಸಲಿದೆ ಮಳೆ; ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!

ಕರ್ನಾಟಕ ಹವಾಮಾನ ವರದಿ: ಮಾರ್ಚ್‌ 21ರಂದು ಶನಿವಾರ ರಾಯಚೂರು, ಕೊಪ್ಪಳ, ಗದಗ, ಧಾರವಾಡ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು ಸೇರಿ ಕರ್ನಾಟಕದ 17 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ನೀಡಲಾಗಿದ್ದು, ಸಾಧಾರಣ ಮಳೆ ಗುಡುಗು ಸಹಿತ ಮಳೆಯಾಗುವ ಸಂಭವವಿದೆ.

ಯೆಲ್ಲೋ ಅಲರ್ಟ್; ರಾಜ್ಯದಲ್ಲಿ ಮುಂದಿನ 4 ದಿನ ಅಬ್ಬರಿಸಲಿದೆ ಮಳೆ!

ಸಾಂದರ್ಭಿಕ ಚಿತ್ರ -

Prabhakara R
Prabhakara R Mar 20, 2026 7:58 PM

ಬೆಂಗಳೂರು: ರಾಜ್ಯದಲ್ಲಿ ಮಳೆಯ ಅಬ್ಬರ ಮುಂದುವರಿಯುವ ಸಾಧ್ಯತೆ ಹಿನ್ನೆಲೆಯಲ್ಲಿ ಮುಂದಿನ ನಾಲ್ಕು ದಿನ ಹಲವು ಜಿಲ್ಲೆಗಳಿಗೆ‌ ಹವಾಮಾನ ಇಲಾಖೆ (karnataka weather) ಯೆಲ್ಲೋ ಅಲರ್ಟ್ ಘೋಷಿಸಿದೆ. ಮಾರ್ಚ್‌ 21ರಂದು ಶನಿವಾರ ರಾಯಚೂರು, ಕೊಪ್ಪಳ, ಗದಗ, ಧಾರವಾಡ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಉಡುಪಿ, ದಕ್ಷಿಣ ಕನ್ನಡ, ಕೊಡಗು, ಹಾಸನ, ಚಾಮರಾಜನಗರ, ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಸೇರಿ 17 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ನೀಡಲಾಗಿದ್ದು, ಸಾಧಾರಣ ಅಥವಾ ಗುಡುಗು ಸಹಿತ ಮಳೆಯಾಗುವ ಸಂಭವವಿದೆ.

ಮಾರ್ಚ್‌ 21ರಂದು ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ ಮತ್ತು ಗದಗ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಂಭವವಿದೆ. ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ಮಂಡ್ಯ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಬಿರುಗಾಳಿ (30-40 kmph) ಸಹಿತ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.

ಮಾರ್ಚ್‌ 22ರಂದು ಕರಾವಳಿ ಹಾಗೂ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಒಣ ಹವೆ ಇರುವ ಸಾಧ್ಯತೆ ಇದೆ. ಇನ್ನು ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಬಿರುಗಾಳಿ ಸಹಿತ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಂಭವವಿದೆ.

ಮಾರ್ಚ್‌ 23ರಂದು ಕರಾವಳಿ ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಒಣ ಹವೆ ಇರಲಿದೆ. ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ಮಾರ್ಚ್ 24ರಂದು ಕರಾವಳಿಯ ದಕ್ಷಿಣ ಕನ್ನಡ ಜಿಲ್ಲೆಯ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ವಿಜಯಪುರ, ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ ಮತ್ತು ಬೀದರ್ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಬಳ್ಳಾರಿ, ವಿಜಯನಗರ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಹಾಸನ ಮತ್ತು ಮಂಡ್ಯ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉಳಿದ ಜಿಲ್ಲೆಗಳಲ್ಲಿ ಒಣ ಹವೆಯಿರುವ ಸಾಧ್ಯತೆ ಇದೆ.

ಮಾರ್ಚ್‌ 25ರಂದು ದಕ್ಷಿಣ ಕನ್ನಡ ಜಿಲ್ಲೆಯ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ವಿಜಯಪುರ, ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ ಮತ್ತು ಬೀದರ್ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಬಳ್ಳಾರಿ, ವಿಜಯನಗರ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಹಾಸನ, ಮಂಡ್ಯ, ಕೋಲಾರ, ಚಿಕ್ಕಬಳ್ಳಾಪುರ ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.