ಫೋಟೋ ಗ್ಯಾಲರಿ ಬಜೆಟ್​ T20 ವಿಶ್ವಕಪ್​ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ವಿದೇಶ ಕ್ರೈಂ ಧಾರ್ಮಿಕ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ಕರ್ನಾಟಕದಾದ್ಯಂತ ತಾಪಮಾನ ಹೆಚ್ಚಳ; ಹಲವು ಜಿಲ್ಲೆಗಳಲ್ಲಿ ಶುಷ್ಕ ವಾತಾವರಣ

ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ತಾಪಮಾನದಲ್ಲಿ ಏರಿಕೆ ಕಂಡು ಬಂದಿದ್ದು, ಬಹುತೇಕ ಜಿಲ್ಲೆಗಳಲ್ಲಿ ಶುಷ್ಕ ವಾತಾವರಣ ಮುಂದುವರಿದಿದೆ. ಹವಾಮಾನ ಇಲಾಖೆ ನೀಡಿರುವ ಮಾಹಿತಿ ಪ್ರಕಾರ, ಮುಂದಿನ ಕೆಲವು ದಿನಗಳ ಕಾಲವೂ ಇದೇ ರೀತಿಯ ಬಿಸಿಲಿನ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಕರ್ನಾಟಕದಾದ್ಯಂತ ತಾಪಮಾನ ಹೆಚ್ಚಳ

ಸಂಗ್ರಹ ಚಿತ್ರ -

Vishakha Bhat Heggar
Vishakha Bhat Heggar Mar 13, 2026 9:24 AM

ಬೆಂಗಳೂರು: ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ತಾಪಮಾನದಲ್ಲಿ ಏರಿಕೆ ಕಂಡು ಬಂದಿದ್ದು, ಬಹುತೇಕ ಜಿಲ್ಲೆಗಳಲ್ಲಿ ಶುಷ್ಕ ವಾತಾವರಣ (Karnataka Weather) ಮುಂದುವರಿದಿದೆ. ಹವಾಮಾನ ಇಲಾಖೆ ನೀಡಿರುವ ಮಾಹಿತಿ ಪ್ರಕಾರ, ಮುಂದಿನ ಕೆಲವು ದಿನಗಳ ಕಾಲವೂ ಇದೇ ರೀತಿಯ ಬಿಸಿಲಿನ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಬಿಸಿಲಿನ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ. ಬೆಂಗಳೂರು ಸೇರಿದಂತೆ ಹಲವು ನಗರಗಳಲ್ಲಿ ತಾಪಮಾನ 39 ಡಿಗ್ರಿ ಸೆಲ್ಸಿಯಸ್‌ವರೆಗೆ ಏರಿಕೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ಎಚ್ಚರಿಕೆ ನೀಡಿದೆ.

ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು, ಚಾಮರಾಜನಗರ, ಮೈಸೂರು, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿಯೂ ಒಣ ಹವೆಯ ವಾತಾವರಣ ಇರಲಿದೆ.

ಕರಾವಳಿಯ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣ ಹವೆಯಿರಲಿದೆ ಎಂದು ಇಲಾಖೆ ತಿಳಿಸಿದೆ. ಉತ್ತರ ಒಳನಾಡು ಭಾಗದ ಜಿಲ್ಲೆಗಳಾದ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರದಲ್ಲಿ ಕಳೆದ ಹಲವು ದಿನಗಳಿಂದ ಒಣಹವೆಯ ವಾತಾವರಣವಿದ್ದು, ಅದೇ ಮುಂದುವರಿಯಲಿದೆ.

ಮಾರ್ಚ್‌ನಲ್ಲಿ ತಾಪಮಾನ ಹೆಚ್ಚಳ

ಮಾರ್ಚ್ ತಿಂಗಳ ಎರಡನೇ ವಾರದ ನಂತರ ಬೆಂಗಳೂರಿನಲ್ಲಿ ಬಿಸಿಲಿನ ತೀವ್ರತೆ ಇನ್ನಷ್ಟು ಹೆಚ್ಚುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಳಿಗ್ಗೆ 11ರಿಂದ ಸಂಜೆ 4ರವರೆಗೆ ಅನಗತ್ಯವಾಗಿ ಹೊರಗೆ ಹೋಗದಂತೆ ಸೂಚನೆ ನೀಡಲಾಗಿದೆ. ಹೀಟ್ ಸ್ಟ್ರೋಕ್ ಹಾಗೂ ಡಿಹೈಡ್ರೇಶನ್ ಅಪಾಯ ಇರುವುದರಿಂದ ವೃದ್ಧರು, ಗರ್ಭಿಣಿಯರು, ಮಕ್ಕಳು ಮತ್ತು ಹೃದಯ ಸಂಬಂಧಿ ಕಾಯಿಲೆ ಇರುವವರು ವಿಶೇಷ ಎಚ್ಚರಿಕೆ ವಹಿಸಬೇಕು.