ಬಿಗ್​ಬಾಸ್ ಫೋಟೋ ಗ್ಯಾಲರಿ ವಿಶ್ವವಾಣಿ ಪ್ರಾಪರ್ಟಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

MLA Satish Sail: ಅಕ್ರಮ ಹಣ ವರ್ಗಾವಣೆ ಪ್ರಕರಣ; ಶಾಸಕ ಸತೀಶ್‌ ಸೈಲ್‌ ಮಧ್ಯಂತರ ಜಾಮೀನು ರದ್ದು

Illegal Money Transfer Case: ಕಾರವಾರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಸತೀಶ್ ಸೈಲ್, ಅಕ್ರಮ ಅದಿರು ಸಾಗಾಟ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿದ್ದಾರೆ. ಇದಲ್ಲದೇ ಇವರ ಮನೆಯ ಮೇಲೆ ಇಡಿ ದಾಳಿ ನಡೆಸಿ ಕೋಟ್ಯಂತರ ರೂ. ಮೌಲ್ಯದ ಚಿನ್ನಾಭರಣ ಹಾಗೂ ನಗದು ವಶಕ್ಕೆ ಪಡೆದಿತ್ತು. ಆರೋಗ್ಯದ ಸಮಸ್ಯೆ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸತೀಶ್ ಸೈಲ್ ಇ.ಡಿ ಪ್ರಕರಣದಲ್ಲಿ ಜಾಮೀನು ಪಡೆದುಕೊಂಡಿದ್ದರು.

ಕಾರವಾರ ಶಾಸಕ ಸತೀಶ್‌ ಸೈಲ್‌ ಮಧ್ಯಂತರ ಜಾಮೀನು ರದ್ದು

-

Prabhakara R
Prabhakara R Nov 7, 2025 9:07 PM

ಬೆಂಗಳೂರು, ನ.7: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ (Illegal Money Transfer Case) ಸಂಬಂಧಿಸಿ ಶಾಸಕ ಸತೀಶ್‌ ಸೈಲ್‌ಗೆ ನೀಡಿದ್ದ ಮಧ್ಯಂತರ ಜಾಮೀನು ರದ್ದಾಗಿದೆ. ಬೇಲೆಕೇರಿ ಬಂದರಿನಿಂದ ಅಕ್ರಮ ಅದಿರು ಸಾಗಾಟ ಪ್ರಕರಣ‌ದಲ್ಲಿ ಶಿಕ್ಷೆಗೊಳಗಾಗಿದ್ದ ಕಾರವಾರದ ಶಾಸಕ ಸತೀಶ್ ಸೈಲ್‌ಗೆ (MLA Satish Sail) ನ.7 ರ ವರೆಗೆ ಜಾಮೀನು ವಿಸ್ತರಣೆ ಮಾಡಿ ಜನಪ್ರತಿನಿಧಿಗಳ ನ್ಯಾಯಾಲಯ ಆದೇಶ ಮಾಡಿತ್ತು. ಇದೀಗ ಸತೀಶ್ ಸೈಲ್‌ಗೆ ಮಧ್ಯಂತರ ಜಾಮೀನನ್ನು ಕೋರ್ಟ್ ರದ್ದು ಮಾಡಿದ್ದು, ಮತ್ತೆ ಜೈಲು ಪಾಲಾಗಲಿದ್ದಾರೆ.

ಕಾರವಾರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಸತೀಶ್ ಸೈಲ್, ಅಕ್ರಮ ಅದಿರು ಸಾಗಾಟ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿದ್ದಾರೆ. ಇದಲ್ಲದೇ ಇವರ ಮನೆಯ ಮೇಲೆ ಇಡಿ ದಾಳಿ ನಡೆಸಿ ಕೋಟ್ಯಂತರ ರೂ. ಮೌಲ್ಯದ ಚಿನ್ನಾಭರಣ ಹಾಗೂ ನಗದು ವಶಕ್ಕೆ ಪಡೆದಿತ್ತು. ಆರೋಗ್ಯದ ಸಮಸ್ಯೆ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸತೀಶ್ ಸೈಲ್ ಇ.ಡಿ ಪ್ರಕರಣದಲ್ಲಿ ಜಾಮೀನು ಪಡೆದುಕೊಂಡಿದ್ದರು. ಅಕ್ಟೋಬರ್ 25 ರವರೆಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿತ್ತು.

ಆದರೆ, ಆರೋಗ್ಯ ಸಮಸ್ಯೆ ಹಾಗೂ ಚಿಕಿತ್ಸೆ ಕಾರಣದಿಂದ ಜಾಮೀನು ವಿಸ್ತರಿಸುವಂತೆ ಸೈಲ್ ಕೋರಿದ್ದ ಅರ್ಜಿಯನ್ನು ಪರಿಗಣಿಸಿದ್ದ ಜನಪ್ರತಿನಿಧಿಗಳ ನ್ಯಾಯಾಲಯ ನ.7 ರ ವರೆಗೆ ಜಾಮೀನು ವಿಸ್ತರಿಸಿ ಆದೇಶಿಸಿತ್ತು. ಇದೀಗ ಶಾಸಕನ ಮಧ್ಯಂತರ ಜಾಮೀನು ರದ್ದಾಗಿದೆ.

ಈ ಸುದ್ದಿಯನ್ನೂ ಓದಿ | Uttara Kannada News: ಕಟ್ಟಡ ಕಾಮಗಾರಿ ವೇಳೆ ಲಿಫ್ಟ್‌ ಕುಸಿದು ಇಬ್ಬರು ಕಾರ್ಮಿಕರ ಸಾವು

ಏನಿದು ಪ್ರಕರಣ?

2010ರಲ್ಲಿ ಬೇಲೇಕೇರಿ ಬಂದರಿನಲ್ಲಿ ನಡೆದಿದ್ದ ಕಬ್ಬಿಣದ ಅದಿರು ಅಕ್ರಮ ಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಣ ಅಕ್ರಮ ವರ್ಗಾವಣೆ ನಡೆದಿತ್ತು. ಈ ಪ್ರಕರಣದಲ್ಲಿ ಸುಮಾರು 200 ಕೋಟಿ ರೂ.ಗೂ ಅಧಿಕ ನಷ್ಟ ಉಂಟಾಗಿತ್ತು. ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇ.ಡಿ.) ತನಿಖೆ ಆರಂಭಿಸಿತ್ತು. ಆಗಸ್ಟ್ 13 ಮತ್ತು 14ರಂದು ಇ.ಡಿ. ಅಧಿಕಾರಿಗಳು ಶಾಸಕ ಸತೀಶ್‌ ಸೈಲ್‌ ಅವರ ಮನೆ, ಕಚೇರಿ, ದೆಹಲಿ ಹಾಗೂ ಗೋವಾ ಸೇರಿದಂತೆ ಹಲವು ಕಡೆ ದಾಳಿ ನಡೆಸಿದ್ದರು. ಈ ವೇಳೆ ಕೋಟ್ಯಂತರ ರೂಪಾಯಿ ನಗದು ಹಾಗೂ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳಲಾಗಿತ್ತು.

ಸೆಪ್ಟೆಂಬರ್ 9ರಂದು ಶಾಸಕ ಸತೀಶ್‌ ಸೈಲ್‌ ಅವರನ್ನು ಇ.ಡಿ. ಬಂಧಿಸಿ, ಹೆಚ್ಚಿನ ವಿಚಾರಣೆಗಾಗಿ ತಮ್ಮ ವಶಕ್ಕೆ ಪಡೆದಿತ್ತು. ಆದರೆ, ಕಸ್ಟಡಿಯಲ್ಲಿರುವಾಗಲೇ ಸೈಲ್‌ ಅವರು ಅನಾರೋಗ್ಯಕ್ಕೆ ತುತ್ತಾಗಿದ್ದರು. ಈ ಹಿನ್ನೆಲೆಯಲ್ಲಿ ನ್ಯಾಯಾಲಯ ಅವರಿಗೆ ಮಧ್ಯಂತರ ಜಾಮೀನು ಮಂಜೂರು ಮಾಡಿತ್ತು. ಇದೀಗ ಆ ಜಾಮೀನು ಅವಧಿಯನ್ನು ನವೆಂಬರ್ 7ರವರೆಗೆ ವಿಸ್ತರಿಸಲಾಗಿತ್ತು.