ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

IPL 2026 tickets: ನಾಳಿನ ಐಪಿಎಲ್‌ ಉದ್ಘಾಟನಾ ಪಂದ್ಯಕ್ಕೆ ಶಾಸಕರಿಗೆ 2 ಟಿಕೆಟ್‌ ನೀಡಲು ಕೆಎಸ್‌ಸಿಎ ಒಪ್ಪಿಗೆ

RCB vs SRH IPL 2026 Match: ಮಾರ್ಚ್ 28ರಂದು ನಡೆಯಲಿರುವ ಐಪಿಎಲ್ ಕ್ರಿಕೆಟ್‌ನ ಉದ್ಘಾಟನಾ ಪಂದ್ಯ ವೀಕ್ಷಿಸಲು ಶಾಸಕರಿಗೆ ತಲಾ 4 ಟಿಕೆಟ್‌ಗಳನ್ನು ನೀಡಬೇಕೆಂದು ಖುದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ. ಆದರೆ, ಒಬ್ಬ ಶಾಸಕರಿಗೆ ಎರಡು ಟಿಕೆಟ್‌ನಂತೆ ಎಲ್ಲ ಶಾಸಕರಿಗೂ ಕ್ರಿಕೆಟ್ ಮ್ಯಾಚ್ ನೋಡಲು ಅವಕಾಶ ಮಾಡಿಕೊಡುತ್ತೇವೆ ಎಂದು ಕೆಎಸ್‌ಸಿಎ ತಿಳಿಸಿದೆ.

ನಾಳಿನ ಆರ್‌ಸಿಬಿ ಪಂದ್ಯಕ್ಕೆ ಶಾಸಕರಿಗೆ 2 ಟಿಕೆಟ್‌; ಕೆಎಸ್‌ಸಿಎ ಒಪ್ಪಿಗೆ

ಸಾಂದರ್ಭಿಕ ಚಿತ್ರ -

Prabhakara R
Prabhakara R Mar 27, 2026 5:29 PM

ಬೆಂಗಳೂರು: ಐಪಿಎಲ್‌ ಟಿಕೆಟ್‌ಗಾಗಿ ಸದನದಲ್ಲಿ ಶಾಸಕರು ಬೇಡಿಕೆ ಇಟ್ಟಿದ್ದರು. ಕ್ರಿಕೆಟ್‌ ಪಂದ್ಯ ವೀಕ್ಷಣೆಗೆ ಶಾಸಕರಿಗೆ ತಲಾ 5 ಟಿಕೆಟ್‌ (IPL 2026 tickets) ನೀಡಬೇಕು ಎಂಬ ಆಗ್ರಹ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರ ಸೂಚನೆ ಬೆನ್ನಲ್ಲೇ ನಾಳಿನ ಐಪಿಎಲ್‌ ಉದ್ಘಾಟನಾ ಪಂದ್ಯಕ್ಕೆ (RCB vs SRH match) ಪ್ರತಿ ಶಾಸಕರಿಗೆ ತಲಾ 2 ಟಿಕೆಟ್‌ ನೀಡಲು ಕೆಎಸ್‌ಸಿಎ ಒಪ್ಪಿಗೆ ನೀಡಿದೆ.

4 ಟಿಕೆಟ್‌ ನೀಡಲು ಸಿಎಂ ಸೂಚನೆ

ಮಾರ್ಚ್ 28ರಂದು ನಡೆಯಲಿರುವ ಐಪಿಎಲ್ ಕ್ರಿಕೆಟ್‌ನ ಉದ್ಘಾಟನಾ ಪಂದ್ಯ ವೀಕ್ಷಿಸಲು ಶಾಸಕರಿಗೆ ತಲಾ 4 ಟಿಕೆಟ್‌ಗಳನ್ನು ನೀಡಬೇಕೆಂದು ಖುದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ. ಐಪಿಎಲ್‌ ಉದ್ಘಾಟನಾ ಸಮಾರಂಭಕ್ಕೆ ಆಹ್ವಾನ ನೀಡಲು ಕೆಎಸ್‌ಸಿಎ ಅಧ್ಯಕ್ಷ ವೆಂಕಟೇಶ್ ಪ್ರಸಾದ್‌ ಆಗಮಿಸಿದ್ದ ವೇಳೆ ಟಿಕೆಟ್‌ ಕುರಿತು ಸಿಎಂ ಚರ್ಚೆ ನಡೆಸಿದ್ದಾರೆ.

ನೆನ್ನೆಯಷ್ಟೇ ಈ ಬಗ್ಗೆ ವಿಧಾನಸಭೆಯಲ್ಲಿ ಶಾಸಕರು ತಮಗೂ ಟಿಕೆಟ್ ನೀಡಬೇಕೆಂದು ತಮ್ಮ ಅಳಲು ತೋಡಿಕೊಂಡಿದ್ದರು. ಇದು ರಾಷ್ಟ್ರಮಟ್ಟದಲ್ಲಿ ಚರ್ಚೆಗೂ ಗ್ರಾಸವಾಗಿದೆ. ಆದರೆ, ಒಬ್ಬ ಶಾಸಕರಿಗೆ ಎರಡು ಟಿಕೆಟ್‌ನಂತೆ ಎಲ್ಲ ಶಾಸಕರಿಗೂ ಕ್ರಿಕೆಟ್ ಮ್ಯಾಚ್ ನೋಡಲು ಅವಕಾಶ ಮಾಡಿಕೊಡುತ್ತೇವೆ ಎಂದು ರಾಜ್ಯ ಸರ್ಕಾರಕ್ಕೆ ವೆಂಕಟೇಶ್‌ ಪ್ರಸಾದ್‌ ತಿಳಿಸಿರುವುದಾಗಿ ತಿಳಿದುಬಂದಿದೆ.

ಶಾಸಕರಿಗೆ ಸದ್ಯಕ್ಕೆ 2 ಟಿಕೆಟ್ ಮಾತ್ರ

ಪ್ರಸ್ತುತ ನಡೆಯುತ್ತಿರುವ ಈ ಐಪಿಎಲ್ ಸೀಸನ್‌ನಲ್ಲಿ ಟಿಕೆಟ್‌ಗಳಿಗೆ ತೀವ್ರ ಬೇಡಿಕೆ ಇರುವುದರಿಂದ ಸದ್ಯಕ್ಕೆ 2 ಟಿಕೆಟ್ ಮಾತ್ರ ನೀಡಲು ಸಾಧ್ಯ ಎಂದು ಸರ್ಕಾರಕ್ಕೆ ಕೆಎಸ್‌ಸಿಎ ತಿಳಿಸಿದೆ. ಆದರೆ, ಮುಂಬರುವ ದಿನಗಳಲ್ಲಿ ನಡೆಯುವ ಪಂದ್ಯಗಳಿಗೆ ಪ್ರತಿ ಶಾಸಕರಿಗೆ ತಲಾ 4 ಟಿಕೆಟ್‌ಗಳನ್ನು ಕಾಯ್ದಿರಿಸಲು ಸಂಸ್ಥೆಯು ಒಪ್ಪಿಗೆ ನೀಡಿದೆ. ಇದರಿಂದಾಗಿ ಟಿಕೆಟ್ ಸಿಗದೆ ಅಸಮಾಧಾನಗೊಂಡಿದ್ದ ಜನಪ್ರತಿನಿಧಿಗಳು ಕೊಂಚ ಸಮಾಧಾನಗೊಂಡಿದ್ದಾರೆ.

ವೆಂಕೆಟೇಶ್‌ ಪ್ರಸಾದ್‌ ಜತೆ ಡಿ.ಕೆ. ಶಿವಕುಮಾರ್ ಚರ್ಚೆ

ಐಪಿಎಲ್‌ ಟಿಕೆಟ್ ವಿಚಾರ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕೂಡ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಅಧ್ಯಕ್ಷ ವೆಂಕೆಟೇಶ್‌ ಪ್ರಸಾದ್‌ ಅವರ ಜತೆ ಚರ್ಚೆ ನಡೆಸಿದ್ದು, ಈ ವೇಳೆ ಪ್ರತಿ ಶಾಸಕರಿಗೆ ತಲಾ 2 ಟಿಕೆಟ್ ನೀಡಲು ಕೆಎಸ್‌ಸಿಎ ಅಧ್ಯಕ್ಷರು ತಿಳಿಸಿದ್ದಾರೆ.

ಐಪಿಎಲ್‌ನಿಂದ ಹಿಂದೆ ಸರಿದ ಬೆನ್ ಡಕೆಟ್‌ಗೆ 2 ವರ್ಷ ನಿಷೇಧ ಭೀತಿ!

ಐಪಿಎಲ್‌ ಟಿಕೆಟ್‌ ಗೊಂದಲವನ್ನು ಬಗೆಹರಿಸಲು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಕೆಎಸ್‌ಸಿಎ ಪದಾಧಿಕಾರಿಗಳೊಂದಿಗೆ ತಮ್ಮ ನಿವಾಸದಲ್ಲಿ ಮಹತ್ವದ ಮಾತುಕತೆ ನಡೆಸಿದ್ದಾರೆ. ಸುದೀರ್ಘ ಚರ್ಚೆಯ ನಂತರ, ಕ್ರೀಡಾಂಗಣದ ಆಸನ ಸಾಮರ್ಥ್ಯ ಮತ್ತು ಸಾರ್ವಜನಿಕರ ಭಾರಿ ಬೇಡಿಕೆಯನ್ನು ಪರಿಗಣಿಸಿ, ಶಾಸಕರ 5 ಟಿಕೆಟ್‌ಗಳ ಬೇಡಿಕೆಯ ಬದಲಾಗಿ ತಲಾ 2 ಟಿಕೆಟ್‌ಗಳನ್ನು ನೀಡಲು ಕೆಎಸ್‌ಸಿಎ ನಿರ್ಧರಿಸಿದೆ.