ಪ್ರಯಾಣಿಕರೇ ಗಮನಿಸಿ; ಯುಗಾದಿ, ರಂಜಾನ್ ಗೆ ಊರಿಗೆ ತೆರಳಲು KSRTCಯಿಂದ 2,000 ವಿಶೇಷ ಬಸ್‌ಗಳ ಸಂಚಾರ
ಯುಗಾದಿ ಮತ್ತು ರಂಜಾನ್ ಹಬ್ಬದ ಹಿನ್ನೆಲೆಯಲ್ಲಿ ಪ್ರಯಾಣಿಕರಿಗೆ ಅನುಕೂಲವಾಗುವಂತೆ ಮಹತ್ವದ ಕ್ರಮ ಕೈಗೊಂಡಿದೆ. ಮಾರ್ಚ್ 18ರಿಂದ ರಾಜ್ಯಾದ್ಯಂತ ಒಟ್ಟು 2,000 ವಿಶೇಷ ಹೆಚ್ಚುವರಿ ಕೆಸ್‌ಆರ್‌ಟಿಸಿ ಬಸ್‌ಗಳು ಸಂಚರಿಸಲಿದ್ದು, ಪ್ರಯಾಣಿಕರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಕೇಳಲಾಗಿದೆ.
ಸಂಗ್ರಹ ಚಿತ್ರ -
ಯುಗಾದಿ ಮತ್ತು ರಂಜಾನ್ ಹಬ್ಬದ ಹಿನ್ನೆಲೆಯಲ್ಲಿ ಪ್ರಯಾಣಿಕರಿಗೆ ಅನುಕೂಲವಾಗುವಂತೆ ಕೆಎಸ್‌ಆರ್‌ಟಿಸಿ ಮಹತ್ವದ ಕ್ರಮ ಕೈಗೊಂಡಿದೆ. ಮಾರ್ಚ್ 18ರಿಂದ ರಾಜ್ಯಾದ್ಯಂತ ಒಟ್ಟು 2,000 ವಿಶೇಷ ಹೆಚ್ಚುವರಿ ಕೆಸ್‌ಆರ್‌ಟಿಸಿ ಬಸ್‌ಗಳು ಸಂಚರಿಸಲಿದ್ದು, ಪ್ರಯಾಣಿಕರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಕೇಳಲಾಗಿದೆ. ಮಾರ್ಚ್ 18ರಿಂದ ಮಾರ್ಚ್ 20ರವರೆಗೆ ಬೆಂಗಳೂರಿನ ವಿವಿಧ ನಿಲ್ದಾಣಗಳಿಂದ ರಾಜ್ಯದ ಪ್ರಮುಖ ನಗರಗಳು ಹಾಗೂ ನೆರೆ ರಾಜ್ಯಗಳಿಗೆ ವಿಶೇಷ ಬಸ್‌ಗಳು ಸಂಚಾರ ಮಾಡಲಿವೆ.
ವೇಳಾಪಟ್ಟಿ ಹೇಗಿದೆ
ಯುಗಾದಿ ಹಾಗೂ ರಂಜಾನ್‌ಗೆ ಅನುಕೂಲವಾಗುವಂತೆ ಮಾರ್ಚ್ 18ರಿಂದ ಮಾರ್ಚ್ 20ರವರೆಗೆ ಬಸ್‌ಗಳ ಸಂಚಾರ ಇರಲಿದೆ. ಬಳಿಕ ಊರಿನಿಂದ ಮರುವವರಿಗಾಗಿ ಮಾರ್ಚ್ 22 ರಂದು ವಿವಿಧ ಜಿಲ್ಲೆಗಳಿಂದ ಬೆಂಗಳೂರಿಗೆ ಮರಳಲು ವಿಶೇಷ ಬಸ್ಗಳ ವ್ಯವಸ್ಥೆ ಮಾಡಲಾಗಿದೆ.
ಕೆಂಪೇಗೌಡ ಬಸ್ ನಿಲ್ದಾಣ (ಮೆಜೆಸ್ಟಿಕ್): ಇಲ್ಲಿಂದ ಶಿವಮೊಗ್ಗ, ಹಾಸನ, ಧರ್ಮಸ್ಥಳ, ಮಂಗಳೂರು, ಶೃಂಗೇರಿ, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ರಾಯಚೂರು, ಬಳ್ಳಾರಿ, ಕಲಬುರಗಿ ಹಾಗೂ ಹೊರರಾಜ್ಯದ ತಿರುಪತಿ, ವಿಜಯವಾಡ, ಹೈದರಾಬಾದ್ ನಗರಗಳಿಗೆ ಬಸ್ಗಳು ಲಭ್ಯವಿವೆ. ಮೈಸೂರು ರಸ್ತೆ ಬಸ್ ನಿಲ್ದಾಣ: ಮೈಸೂರು, ಮಡಿಕೇರಿ ಹಾಗೂ ವಿರಾಜಪೇಟೆ ಮಾರ್ಗದ ಬಸ್ಗಳು ಇಲ್ಲಿಂದ ಕಾರ್ಯಾಚರಣೆ ನಡೆಸಲಿವೆ.
ಟಿಕೆಟ್ ದರದಲ್ಲಿ ವಿಶೇಷ ರಿಯಾಯಿತಿ:
ಪ್ರಯಾಣಿಕರನ್ನು ಪ್ರೋತ್ಸಾಹಿಸಲು ಕೆಎಸ್ಆರ್ಟಿಸಿ ಆಕರ್ಷಕ ರಿಯಾಯಿತಿಗಳನ್ನು ಘೋಷಿಸಿದೆ. ನಾಲ್ಕು ಅಥವಾ ಅದಕ್ಕಿಂತ ಹೆಚ್ಚಿನ ಪ್ರಯಾಣಿಕರು ಒಟ್ಟಿಗೆ ಟಿಕೆಟ್ ಕಾಯ್ದಿರಿಸಿದರೆ ಮೂಲ ಪ್ರಯಾಣ ದರದಲ್ಲಿ 5% ರಿಯಾಯಿತಿ ಸಿಗಲಿದೆ. ಹೋಗುವ ಮತ್ತು ಬರುವ ಟಿಕೆಟ್ಗಳನ್ನು ಒಟ್ಟಿಗೆ ಕಾಯ್ದಿರಿಸಿದಲ್ಲಿ ಪ್ರಯಾಣ ದರದಲ್ಲಿ 10% ರಿಯಾಯಿತಿ ನೀಡಲಾಗುವುದು.
ಪ್ರಯಾಣಿಕರಿಗೆ ಗುಡ್ ನ್ಯೂಸ್: ಕೆಎಸ್‌ಆರ್‌ಟಿಸಿಯ ಹೊಸ 115 ಬಸ್‌ಗಳಿಗೆ ಹಸಿರು ನಿಶಾನೆ
KSRTC ಹೊಸ 70 ಪಲ್ಲಕ್ಕಿ ಸ್ಲೀಪರ್ ಬಸ್‌ಗಳಿಗೆ ಚಾಲನೆ
ಕೆಎಸ್‌ಆರ್‌ಟಿಸಿ ನೂತನ 45 ಕರ್ನಾಟಕ ಸಾರಿಗೆ ಹಾಗೂ 70 ಪಲ್ಲಕ್ಕಿ ಎಸಿ ಸ್ಲೀಪರ್ ಬಸ್‌ಗಳನ್ನು ರಸ್ತೆಗಿಳಿಸಿದೆ. ಹೊಸ ಬಸ್‌ಗಳಿಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿಯವರು ಬೆಂಗಳೂರಿನಲ್ಲಿ ಹಸಿರು ನಿಶಾನೆ ತೋರಿದರು. ಹೊಸ ಬಸ್‌ಗಳು ಬೆಂಗಳೂರಿನಿಂದ ರಾಜ್ಯದ ಹಲವು ಪ್ರಮುಖ ಮಾರ್ಗಗಳಿಗೆ ಸಂಚಾರ ನಡೆಸಲಿವೆ. ಪಲ್ಲಕ್ಕಿ ನಾನ್ ಎಸಿ ಬಸ್‌ಗಳು ಉಡುಪಿ, ಮಂಗಳೂರು, ಮೈಸೂರು, ಧರ್ಮಸ್ಥಳ, ಶೃಂಗೇರಿ, ಹೊರನಾಡು, ಆಗುಂಬೆ, ಚಿಕ್ಕಮಗಳೂರು, ದಾವಣಗೆರೆ, ಚಿತ್ರದುರ್ಗ, ಹಂಪಿ, ರಾಯಚೂರು, ಜಮಖಂಡಿ, ಪುತ್ತೂರು, ಕಾಣಿಯೂರು, ಕುಕ್ಕೆ ಸುಬ್ರಹ್ಮಣ್ಯ, ಕಾಸರಗೋಡು, ಮಂತ್ರಾಲಯ, ತಿರುಚಿ, ಕೊಜಿಕ್ಕೋಡ್, ಮುನ್ನಾರ್, ಪಾಂಡಿಚೇರಿ, ತಂಜಾವೂರು, ಕೊಟ್ಟಾಯಂ, ಹೈದಾರಬಾದ್, ಚೆನ್ನೈ, ಪಣಜಿ, ಮಧುರೈ, ಕುಂಭಕೋಣಂ, ಎರ್ನಾಕುಲಂಗೆ ಕಾರ್ಯಾಚರಣೆ ಮಾಡಲಾಗುತ್ತದೆ.