ಎಸ್​ ಎಲ್​ ಭೈರಪ್ಪ ನಿಧನ ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Bengaluru: ಅ.2ರಂದು ಬೆಂಗಳೂರಿನಲ್ಲಿ ಪ್ರಾಣಿವಧೆ, ಮಾಂಸ ಮಾರಾಟ ನಿಷೇಧ

“ಗಾಂಧಿ ಜಯಂತಿ” ಪ್ರಯುಕ್ತ ಗ್ರೇಟರ್ ಬೆಂಗಳೂರು ಪ್ರಾಧಿಕಾರ (Greater bengaluru) ವ್ಯಾಪ್ತಿಯ ಕಸಾಯಿಖಾನೆಯಲ್ಲಿ ಪ್ರಾಣಿವಧೆ ಹಾಗೂ ಮಾರಾಟ ಮಳಿಗೆಗಳಲ್ಲಿ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವಿಶೇಷ ಆಯುಕ್ತರು(ಆರೋಗ್ಯ & ಶಿಕ್ಷಣ) ರವರು ತಿಳಿಸಿದ್ದಾರೆ.

ಅ.2ರಂದು ಬೆಂಗಳೂರಿನಲ್ಲಿ ಪ್ರಾಣಿವಧೆ,  ಮಾಂಸ ಮಾರಾಟ ನಿಷೇಧ

-

ಹರೀಶ್‌ ಕೇರ ಹರೀಶ್‌ ಕೇರ Sep 30, 2025 7:02 AM

ಬೆಂಗಳೂರು: ಅಕ್ಟೋಬರ್ 2ರಂದು ಗಾಂಧಿ ಜಯಂತಿ (gandhi jayanthi) ಪ್ರಯುಕ್ತ ಪ್ರಾಣಿವಧೆ ಹಾಗೂ ಮಾಂಸ ಮಾರಾಟ ನಿಷೇಧಿಸಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಆದೇಶಿಸಿದೆ. ದಿನಾಂಕ 02-10-2025 (ಗುರುವಾರ) ದಂದು “ಗಾಂಧಿ ಜಯಂತಿ” ಪ್ರಯುಕ್ತ ಗ್ರೇಟರ್ ಬೆಂಗಳೂರು ಪ್ರಾಧಿಕಾರ (Greater bengaluru) ವ್ಯಾಪ್ತಿಯ ಕಸಾಯಿಖಾನೆಯಲ್ಲಿ ಪ್ರಾಣಿವಧೆ ಹಾಗೂ ಮಾರಾಟ ಮಳಿಗೆಗಳಲ್ಲಿ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವಿಶೇಷ ಆಯುಕ್ತರು(ಆರೋಗ್ಯ & ಶಿಕ್ಷಣ) ರವರು ತಿಳಿಸಿದ್ದಾರೆ.

ಜಾತಿ ಗಣತಿ ಪರಿಶೀಲನೆ

ಬೆಂಗಳೂರು ಪಶ್ಚಿಮ ನಗರ ಪಾಲಿಕೆ ಆಯುಕ್ತರಾದ ಡಾ. ರಾಜೇಂದ್ರ ಕೆ. ವಿ. ಅವರು ಸಾಮಾಜಿಕ, ಶೈಕ್ಷಣಿಕ ಸಮೀಕ್ಷಾ ಕಾರ್ಯ 2025ರ ತರಬೇತಿ ಕಾರ್ಯಗಾರಕ್ಕೆ ಭೇಟಿ ನೀಡಿ ಗಣತಿದಾರರಿಗೆ ಹಾಗೂ ಅಧಿಕಾರಿಗಳಿಗೆ ಅಗತ್ಯ ಸೂಚನೆಗಳನ್ನು ನೀಡಿದರು. ಆಯುಕ್ತರು ಗೋವಿಂದರಾಜ ನಗರ ವಿಧಾನಸಭಾ ಕ್ಷೇತ್ರದಲ್ಲಿ ಸಾಮಾಜಿಕ, ಶೈಕ್ಷಣಿಕ ಸಮೀಕ್ಷಾ ಕಾರ್ಯದ ತರಬೇತಿ ಕಾರ್ಯಗಾರಕ್ಕೆ ಹಾಗೂ ಕೆ.ಎಲ್.ಇ. ಕಾಲೇಜಿನಲ್ಲಿ ಏರ್ಪಡಿಸಿದ್ದ ರಾಜಾಜಿನಗರ ಮತ್ತು ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರಗಳ ಸಾಮಾಜಿಕ ‌ಶೈಕ್ಷಣಿಕ ಸಮೀಕ್ಷಾ ಕಾರ್ಯದ ತರಬೇತಿ ಕಾರ್ಯಗಾರಕ್ಕೆ ಭೇಟಿ ನೀಡಿದರು.

ಈ ವೇಳೆ‌ ಆಯುಕ್ತರು ಗಣತಿದಾರರಾಗಿ ನೇಮಕವಾಗಿರುವ ಸಿಬ್ಬಂದಿಗಳಿಗೆ ಸಮೀಕ್ಷಾ ಕಾರ್ಯ ನಿರ್ವಹಣೆಯ ಸಂಬಂಧ ಸಂಕ್ಷಿಪ್ತವಾಗಿ ವಿವರಿಸಿದರು ಮತ್ತು ಸಿಬ್ಬಂದಿಗಳನ್ನು ಸಮೀಕ್ಷಾ ಕಾರ್ಯ ನಿರ್ವಹಿಸಲು ಹುರಿದುಂಬಿಸಿದರು.

ಪರಿಶೀಲನೆಯ ವೇಳೆ ಆಯುಕ್ತರು ನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಸ್ವಚ್ಛತೆಗೆ ಆದ್ಯತೆ ನೀಡಿ ಸೂಕ್ತ ರೀತಿಯಲ್ಲಿ, ವ್ಯವಸ್ಥಿತವಾಗಿ ತ್ಯಾಜ್ಯ ನಿರ್ವಹಣೆಯ ಕಾರ್ಯವನ್ನು ನಿರ್ವಹಿಸಿ, ನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಸ್ವಚ್ಛತೆ ಕಾಪಾಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.