ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ವಿಶೇಷ ಚೇತನ ಮಕ್ಕಳೊಂದಿಗೆ ಹುಟ್ಟುಹಬ್ಬ ಆಚರಿಸಿ ಮಾದರಿಯಾದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

Laxmi Hebbalkar: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಬೆಂಗಳೂರಿನ ಮಲ್ಲೇಶ್ವರದಲ್ಲಿರುವ ಹಿಂದೂ ಸೇವಾ ಪ್ರತಿಷ್ಠಾನದ ಪ್ರಕಲ್ಪವಾದ ಅರುಣ ಚೇತನ ವಿಶೇಷ ಶಾಲೆಯಲ್ಲಿ ಮಕ್ಕಳೊಂದಿಗೆ ಕೇಕ್ ಕತ್ತರಿಸುವ ತಮ್ಮ ಹುಟ್ಟುಹಬ್ಬ ವಿಶೇಷವಾಗಿ ಆಚರಿಸಿಕೊಂಡರು.

ವಿಶೇಷ ಚೇತನ ಮಕ್ಕಳೊಂದಿಗೆ ಹುಟ್ಟುಹಬ್ಬ ಆಚರಿಸಿಕೊಂಡ ಹೆಬ್ಬಾಳ್ಕರ್

ವಿಶೇಷ ಚೇತನ ಮಕ್ಕಳೊಂದಿಗೆ ಹುಟ್ಟುಹಬ್ಬ ಆಚರಿಸಿಕೊಂಡ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್. -

Profile
Siddalinga Swamy Feb 19, 2026 5:52 PM

ಬೆಂಗಳೂರು, ಫೆ. 19: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ (Laxmi Hebbalkar) ವಿಶೇಷವಾಗಿ ಹಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ಬೆಂಗಳೂರಿನ ಮಲ್ಲೇಶ್ವರದಲ್ಲಿರುವ ಹಿಂದೂ ಸೇವಾ ಪ್ರತಿಷ್ಠಾನದ ಪ್ರಕಲ್ಪವಾದ ಅರುಣ ಚೇತನ ವಿಶೇಷ ಶಾಲೆಯಲ್ಲಿ ವಿಶೇಷ ಚೇತನ ಮಕ್ಕಳೊಂದಿಗೆ ಕೇಕ್ ಕತ್ತರಿಸುವ ತಮ್ಮ ಹುಟ್ಟುಹಬ್ಬ ಕೊಂಡಾಡಿದರು.

ಈ ವೇಳೆ ಮಾತನಾಡಿದ ಸಚಿವೆ, ಅರುಣ ಚೇತನ ವಿಶೇಷ ಸಂಸ್ಥೆ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿದೆ. ಸಂಸ್ಥೆಯ ಬೆಳವಣಿಗೆಗಾಗಿ ಎಲ್ಲ ರೀತಿಯ ಸಹಕಾರ ನೀಡಲಾಗುವುದು ಎಂದರು. ವಿಶೇಷ ಚೇತನ ಮಕ್ಕಳೊಂದಿಗೆ ಕೆಲ ಕಾಲ ಬೆರೆತು, ಮಾತುಕತೆ ನಡೆಸಿದರು. ಅರುಣ ಚೇತನ ವಿಶೇಷ ಸಂಸ್ಥೆ ವತಿಯಿಂದ ಸಚಿವೆಯನ್ನು ಸನ್ಮಾನಿಸಲಾಯಿತು.



ಅಂಗನವಾಡಿ ಮಕ್ಕಳೊಂದಿಗೆ ಕೇಕ್ ಕತ್ತರಿಸಿದ ಸಚಿವರು

ಮಲ್ಲೇಶ್ವರದ 18ನೇ ಕ್ರಾಸ್‌ನಲ್ಲಿರುವ ಅಂಗನವಾಡಿ ಕೇಂದ್ರದಲ್ಲಿಯೂ ಮಕ್ಕಳೊಂದಿಗೆ ಸಚಿವೆ ಕೇಕ್ ಕತ್ತರಿಸಿ ಹುಟ್ಟುಹಬ್ಬ ಆಚರಿಸಿಕೊಂಡರು.

Minister Laxmi Hebbalkar

ಇಲಾಖೆ ಸಿಬ್ಬಂದಿಯಿಂದ ಸನ್ಮಾನ

ಬೆಂಗಳೂರಿನ ವಿಧಾನಸೌಧದ ಕಚೇರಿಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಶೇಷಚೇತನರ‌ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಮಹಿಳಾ ಅಭಿವೃದ್ಧಿ ನಿಗಮ, ಸಮಗ್ರ ಮಕ್ಕಳ ರಕ್ಷಣಾ ಯೋಜನೆ (ಐಸಿಪಿಎಸ್) ಸೇರಿದಂತೆ ಇಲಾಖೆ ವ್ಯಾಪ್ತಿಯ ಅಧಿಕಾರಿಗಳು, ಸಿಬ್ಬಂದಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಹುಟ್ಟುಹಬ್ಬಕ್ಕೆ ಶುಭಕೋರಿದರು.

ಬಳಿಕ ಬೆಂಗಳೂರಿನ ಸರ್ಕಾರಿ ಗೃಹ ಕಚೇರಿಯಲ್ಲಿ ಸಿಬ್ಬಂದಿ, ಕಾಂಗ್ರೆಸ್ ಕಾರ್ಯಕರ್ತರ ಜತೆ ಕೇಕ್ ಕತ್ತರಿಸಿ ಹುಟ್ಟುಹಬ್ಬ ಆಚರಿಸಿಕೊಂಡರು‌.

ಸಿಎಂ ಬದಲಾವಣೆ ವಿಚಾರ: ಹೈಕಮಾಂಡ್‌ ನಿರ್ಧಾರಕ್ಕೆ ಬದ್ಧ ಎಂದ ಲಕ್ಷ್ಮಿ ಹೆಬ್ಬಾಳ್ಕರ್‌

ವಿಧಾನ ಪರಿಷತ್ ಸದಸ್ಯ ಚನ್ನರಾಜ್ ಹಟ್ಟಿಹೊಳಿ, ಮಹಿಳಾ ಅಭಿವೃದ್ಧಿ ನಿಮಗದ ಅಧ್ಯಕ್ಷೆ ಜಿ. ಪದ್ಮಾವತಿ, ಇಲಾಖೆಯ ಕಾರ್ಯದರ್ಶಿ ಡಾ. ಶಾಮ್ಲಾ‌ ಇಕ್ಬಾಲ್, ಮಹಿಳಾ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಮಹೇಶ್ ಬಾಬು, ಸಮಗ್ರ ಮಕ್ಕಳ ರಕ್ಷಣಾ ಯೋಜನೆಯ ನಿರ್ದೇಶಕಿ ಸ್ನೇಹಾ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ನಿರ್ದೇಶಕ ಅಶೋಕ್ ಕುಮಾರ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.