ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

KCET 2026: ಸಿಇಟಿ 2026 ದಿನಾಂಕ ಪ್ರಕಟ; ನೋಂದಣಿ ಯಾವಾಗ ಪ್ರಾರಂಭ?

2026ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆ (UGCET-26) ಯನ್ನು ಏಪ್ರಿಲ್ 23 ಮತ್ತು 24ರಂದು ನಡೆಸಲಾಗುವುದು. ಹೊರನಾಡು ಮತ್ತು ಗಡಿ ನಾಡು ಕನ್ನಡಿಗ ಅಭ್ಯರ್ಥಿಗಳಿಗೆ ಏ.22ರಂದು ಕನ್ನಡ ಭಾಷಾ ಪರೀಕ್ಷೆ ನಡೆಯಲಿದೆ ಎಂದು ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್ ತಿಳಿಸಿದ್ದಾರೆ.

ಸಿಇಟಿ 2026 ದಿನಾಂಕ ಪ್ರಕಟ; ನೋಂದಣಿ ಯಾವಾಗ ಪ್ರಾರಂಭ?

ಸಾಂದರ್ಭಿಕ ಚಿತ್ರ -

Prabhakara R
Prabhakara R Jan 2, 2026 9:42 PM

ಬೆಂಗಳೂರು: 2026ನೇ ಸಾಲಿನ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕಾಗಿ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (ಕೆಸಿಇಟಿ) ವೇಳಾಪಟ್ಟಿ ಪ್ರಕಟವಾಗಿದೆ. ಏಪ್ರಿಲ್ 23 ಮತ್ತು 24ರಂದು ಸಿಇಟಿ ನಡೆಯಲಿದ್ದು, ಜನವರಿ 17ರಿಂದ ಆನ್‌ಲೈನ್ ಮೂಲಕ ಅಭ್ಯರ್ಥಿಗಳು ಪರೀಕ್ಷೆಗೆ (KCET 2026) ನೋಂದಣಿ ಮಾಡಿಕೊಳ್ಳಬಹುದಾಗಿದೆ. ಈ ಬಗ್ಗೆ ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್ ಅವರು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ.

2026ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆ (UGCET-26) ಯನ್ನು ಏಪ್ರಿಲ್ 23 ಮತ್ತು 24ರಂದು ನಡೆಸಲಾಗುವುದು. ಹೊರನಾಡು ಮತ್ತು ಗಡಿ ನಾಡು ಕನ್ನಡಿಗ ಅಭ್ಯರ್ಥಿಗಳಿಗೆ ಏ.22ರಂದು ಕನ್ನಡ ಭಾಷಾ ಪರೀಕ್ಷೆ ನಡೆಯಲಿದೆ. ಈ ಪರೀಕ್ಷೆಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಜನವರಿ 17ರಿಂದ ಆರಂಭವಾಗಲಿದೆ ಎಂದು ಸಚಿವರು ತಿಳಿಸಿದ್ದು, ಇದೇ ಸಂದರ್ಭದಲ್ಲಿ ಸಚಿವರು ಇತರ ಪರೀಕ್ಷೆಗಳ ವೇಳಾ ಪಟ್ಟಿಯನ್ನೂ ಪ್ರಕಟಿಸಿದ್ದಾರೆ.

ಕ್ರೈಸ್ ಪರೀಕ್ಷೆ ಮಾರ್ಚ್ 1, ಪಿಜಿಸಿಇಟಿ (ಎಂಬಿಎ, ಎಂಸಿಎ) ಪರೀಕ್ಷೆ ಮೇ 14ರಂದು, ಪಿಜಿಸಿಇಟಿ (ಎಂಇ/ಎಂ.ಟೆಕ್) ಹಾಗೂ ಡಿಸಿಇಟಿ ಪರೀಕ್ಷೆಗಳು ಮೇ 23ರಂದು ನಡೆಯಲಿವೆ. ಎಂಎಸ್ಸಿ ನರ್ಸಿಂಗ್, ಎಂಪಿಟಿ, ಎಂ.ಎಸ್ಸಿ-ಎಎಚ್ ಎಸ್ ಪರೀಕ್ಷೆಗಳು ಜು.18ರಂದು, ಅಕ್ಟೋಬರ್ 11ರಂದು ಕೆಸೆಟ್ ಹಾಗೂ ನವೆಂಬರ್ 21ರಂದು ಎಂ-ಫಾರ್ಮಾ ಹಾಗೂ ಫಾರ್ಮಾ-ಡಿ ಪರೀಕ್ಷೆ ಗಳನ್ನು ನಡೆಸಲಾಗುವುದು ಎಂದು ಸಚಿವರು ಘೋಷಿಸಿದರು.



ಈ ಸಂದರ್ಭದಲ್ಲಿ ಶರಣ ಪ್ರಕಾಶ್‌ ಪಾಟೀಲ್‌, ಉನ್ನತ ಶಿಕ್ಷಣ ಇಲಾಖೆ ಕಾರ್ಯದರ್ಶಿ ಖುಷ್ಬು ಗೋಯಲ್, KEA ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ, ಆಡಳಿತಾಧಿಕಾರಿ ಇಸ್ಲಾವುದ್ದೀನ್ ಗದ್ಯಾಳ ಸೇರಿದಂತೆ ಇತರರು ಇದ್ದರು.

India Post Recruitment: ಅಂಚೆ ಇಲಾಖೆಯ 30,000 ಹುದ್ದೆಗಳಿಗೆ ಅರ್ಜಿ ಆಹ್ವಾನ; ವಿದ್ಯಾರ್ಹತೆ, ಅರ್ಜಿ ಸಲ್ಲಿಸುವ ವಿವರ ಇಲ್ಲಿದೆ

ಸಿಇಟಿ ದಿಕ್ಕೂಚಿ ಬಿಡುಗಡೆ

ಸಿಇಟಿಗೆ ನೋಂದಣಿ, ಅರ್ಜಿ ಸಲ್ಲಿಕೆ, ಅರ್ಜಿ ತಿದ್ದುಪಡಿ ಕುರಿತು ಮಾಹಿತಿ ಒದಗಿಸುವ 'ಸಿಇಟಿ ದಿಕ್ಕೂಚಿ'ಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಬಿಡುಗಡೆ ಮಾಡಿದೆ. ಸಿಇಟಿ ದಿಕ್ಕೂಚಿಯನ್ನು ಸಚಿವ ಎಂ.ಸಿ.ಸುಧಾಕರ್ ಬಿಡುಗಡೆ ಮಾಡಿದ್ದಾರೆ.

ಅತ್ಯಾಧುನಿಕ ಜಾಲತಾಣ, ಮೊಬೈಲ್ ಅಪ್ಲಿಕೇಷನ್ ಮತ್ತು ಅಭ್ಯರ್ಥಿಗಳಿಗೆ ನೆರವಾಗಲು ಚಾಟ್‌ಬಾಟ್‌ಗಳನ್ನು ರೂಪಿಸಿದ್ದರೂ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ತೊಡಕಾಗುತ್ತಿದೆ. ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿ ಎಂದು ಸಿಇಟಿ ಪ್ರಕ್ರಿಯೆಗಳನ್ನು ಹೇಗೆ ನಿರ್ವಹಿಸಬೇಕು ಎಂಬುದನ್ನು ಸಚಿತ್ರವಾಗಿ ವಿವರಿಸುವ ಕೈಪಿಡಿಯನ್ನು ರೂಪಿಸಿದ್ದೇವೆ. ಈ 'ಸಿಇಟಿ ದಿಕ್ಕೂಚಿ'ಯನ್ನು ಎಲ್ಲ ಕಾಲೇಜುಗಳಿಗೆ ತಲುಪಿಸಿ, ವಿದ್ಯಾರ್ಥಿಗಳಿಗೆ ವಿತರಿಸಲಾಗುತ್ತದೆ' ಎಂದು ಸಚಿವರು ಹೇಳಿದ್ದಾರೆ.