ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ವಾಹನ ಸವಾರರೇ ಗಮನಿಸಿ; ಏರ್‌ಪೋರ್ಟ್, ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್‌ಗಳಲ್ಲಿ ಸಂಚಾರ ನಿರ್ಬಂಧ ನಿಯಮ ಸಡಿಲ

ಸಿಲಿಕಾನ್ ಸಿಟಿಯ ಪ್ರಮುಖ ಫ್ಲೈಓವರ್‌ಗಳಲ್ಲಿ ಸಂಚಾರ ದಟ್ಟಣೆ ಹಾಗೂ ಅಪಘಾತಗಳನ್ನು ತಡೆಯುವ ನಿಟ್ಟಿನಲ್ಲಿ ಬೆಂಗಳೂರು ಸಂಚಾರ ಪೊಲೀಸ್ (BTP) ಇತ್ತೀಚೆಗೆ ಜಾರಿಗೆ ತಂದಿದ್ದ ಕಠಿಣ ನಿಯಮಗಳಲ್ಲಿ ಮಹತ್ವದ ಬದಲಾವಣೆ ಮಾಡಲಾಗಿದೆ. ಈ ಹಿಂದೆ 5 ಕಾರಿಡಾರ್‌ಗಳ ಪೈಕಿ, 4 ಕಾರಿಡಾರ್‌ಗಳಲ್ಲಿ ನಿರ್ಬಂಧವನ್ನು ಅನುಷ್ಠಾನಕ್ಕೆ ತರಲಾಗಿತ್ತು.

ಏರ್‌ಪೋರ್ಟ್, ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್‌ನಲ್ಲಿ ಸಂಚಾರ ನಿರ್ಬಂಧ ಸಡಿಲ

ಸಂಗ್ರಹ ಚಿತ್ರ -

Vishakha Bhat Heggar
Vishakha Bhat Heggar Sep 9, 2026 9:42 AM

ಬೆಂಗಳೂರು: ಸಿಲಿಕಾನ್ ಸಿಟಿಯ ಪ್ರಮುಖ ಫ್ಲೈಓವರ್‌ಗಳಲ್ಲಿ ಸಂಚಾರ ದಟ್ಟಣೆ ಹಾಗೂ ಅಪಘಾತಗಳನ್ನು ತಡೆಯುವ ನಿಟ್ಟಿನಲ್ಲಿ ಬೆಂಗಳೂರು ಸಂಚಾರ ಪೊಲೀಸ್ (BTP) ಇತ್ತೀಚೆಗೆ ಜಾರಿಗೆ ತಂದಿದ್ದ ಕಠಿಣ ನಿಯಮಗಳಲ್ಲಿ ಮಹತ್ವದ ಬದಲಾವಣೆ ಮಾಡಲಾಗಿದೆ. ಇತ್ತೀಚೆಗಷ್ಟೇ (Airport and Electronic City flyover) ವಿಧಿಸಲಾಗಿದ್ದ ದ್ವಿಚಕ್ರ ವಾಹನಗಳು ಮತ್ತು ಆಟೋರಿಕ್ಷಾಗಳ ಸಂಪೂರ್ಣ ನಿಷೇಧದ ಆದೇಶವನ್ನು ಸದ್ಯಕ್ಕೆ ತಡೆಹಿಡಿಯಲಾಗಿದ್ದು, ವಾಹನ ಸವಾರರು ಎಂದಿನಂತೆ ಸಂಚರಿಸಲು ಅನುಮತಿ ನೀಡಲಾಗಿದೆ.

ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತೆರಳುವ ಮಾರ್ಗದ ಮೇಲ್ಸೇತುವೆ ಹಾಗೂ ಎಲೆಕ್ಟ್ರಾನಿಕ್ ಸಿಟಿ ಮೇಲ್ಸೇತುವೆಯಲ್ಲಿ ಬೈಕ್‌ ಸಂಚಾರಕ್ಕೆ ಅವಕಾಶ ಕಲ್ಪಿಸಿ ಸಂಚಾರ ಪೊಲೀಸರು ಆದೇಶಿಸಿದ್ದಾರೆ. ಈ ಹಿಂದೆ ಈ ಎರಡೂ ಮೇಲ್ಸೇತುವೆಯಲ್ಲಿ ಬೈಕ್‌ ಸೇರಿ ವಿವಿಧ ಮಾದರಿಯ ವಾಹನಗಳ ಸಂಚಾರವನ್ನು ನಿಗದಿತ ಅವಧಿಯಲ್ಲಿ ನಿರ್ಬಂಧಿಸಲಾಗಿತ್ತು. ನಗರದ 5 ಮೇಲ್ಸೇತುವೆಯಲ್ಲಿ ವಿವಿಧ ಮಾದರಿಯ ವಾಹನಗಳ ಸಂಚಾರ ನಿರ್ಬಂಧಿಸಲಾಗಿತ್ತು.

5 ಕಾರಿಡಾರ್‌ಗಳ ಪೈಕಿ, 4 ಕಾರಿಡಾರ್‌ಗಳಲ್ಲಿ ನಿರ್ಬಂಧವನ್ನು ಅನುಷ್ಠಾನಕ್ಕೆ ತರಲಾಗಿತ್ತು. ಬಿಜಿಎಸ್ ಮೇಲ್ಸೇತುವೆ, ಪೀಣ್ಯ ಮೇಲ್ಸೇತುವೆ, ಡಬಲ್‌ ಡೆಕ್ಕರ್ ಮೇಲ್ಸೇತುವೆಗಳಲ್ಲಿ ವಾಹನ ಸಂಚಾರವು ಸುಗಮವಾಗಿತ್ತು. ಆದರೆ, ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ರಸ್ತೆಯಲ್ಲಿರುವ ಮೇಲ್ಸೇತುವೆ (ಸಂಜೀವ್‌ ನಗರ ಕ್ರಾಸ್‌ನಿಂದ ವಿದ್ಯಾಶಿಲ್ಪ ಜಂಕ್ಷನ್‌ವರೆಗೆ) ಸರಕು ಸಾಗಣೆ ವಾಹನಗಳು, ಬೈಕ್‌, ಹಾಗೂ ಆಟೋ ಸೇರಿದಂತೆ ಹಲವು ವರ್ಗದ ವಾಹನಗಳನ್ನು ಪ್ರವೇಶ ಮಾರ್ಗಗಳಲ್ಲೇ ಕೆಳಗಿನ ರಸ್ತೆಗೆ ತಿರುಗಿಸುವುದರಿಂದ ಸಂಚಾರ ದಟ್ಟಣೆ ಉಂಟಾಗುತ್ತಿರುವುದು ಕಂಡುಬಂದಿತ್ತು. ಇದರಿಂದ ಸಂಚಾರ ನಿಷೇಧಗೊಳಿಸಲಾಗಿತ್ತು.

. ಆದರೆ, ಕೇವಲ ಮೂರ್ನಾಲ್ಕು ದಿನಗಳ ಪ್ರಾಯೋಗಿಕ ಅನುಷ್ಠಾನದಲ್ಲೇ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಬೈಕ್‌ಗಳನ್ನು ಕೆಳಗಿನ ಸರ್ವೀಸ್ ರಸ್ತೆಗಳಿಗೆ ಡೈವರ್ಟ್ ಮಾಡಿದ್ದರಿಂದ ಕೆಳಗಿನ ರಸ್ತೆಗಳಲ್ಲಿ ಕಿಲೋಮೀಟರ್‌ಗಟ್ಟಲೆ ಟ್ರಾಫಿಕ್ ಜಾಮ್ ಉಂಟಾಗಿತ್ತು ಮತ್ತು ವಾಹನ ಸವಾರರು ಹಾಗೂ ಪೊಲೀಸರ ನಡುವೆ ತೀವ್ರ ವಾಗ್ವಾದಗಳು ನಡೆದಿದ್ದವು. ಮೆಟ್ರೋ ಕಾಮಗಾರಿಯಿಂದಾಗಿ ಈಗಾಗಲೇ ಕಿರಿದಾಗಿರುವ ಕೆಳಗಿನ ರಸ್ತೆಗಳು ಇಷ್ಟು ದೊಡ್ಡ ಪ್ರಮಾಣದ ದ್ವಿಚಕ್ರ ವಾಹನಗಳ ಒತ್ತಡ ತಡೆಯಲು ಸಾಧ್ಯವಿಲ್ಲ ಎಂಬುದನ್ನು ಅರಿತ ಸಂಚಾರ ಪೊಲೀಸರು ಸದ್ಯಕ್ಕೆ ಈ ನಿರ್ಧಾರದಿಂದ ಹಿಂದೆ ಸರಿದಿದ್ದಾರೆ.