ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Bengaluru grenade case: ಬೆಂಗಳೂರಿನಲ್ಲಿ ಸಜೀವ ಗ್ರೆನೇಡ್ ಪತ್ತೆ ಪ್ರಕರಣ; ಏಳು ಅಪರಾಧಿಗಳಿಗೆ 7 ವರ್ಷ ಜೈಲು ಶಿಕ್ಷೆ ಪ್ರಕಟ

ಬೆಂಗಳೂರಿನಲ್ಲಿ ಗ್ರೆನೇಡ್ ಪತ್ತೆ ಪ್ರಕರಣದಲ್ಲಿ ಏಳು ಅಪರಾಧಿಗಳಿಗೆ 7 ವರ್ಷ ಜೈಲು ಶಿಕ್ಷೆ ವಿಧಿಸಿ ಎನ್‌ಐಎ ಕೋರ್ಟ್‌ ತೀರ್ಪು ನೀಡಿದೆ. ಬೆಂಗಳೂರಿನ ಆರ್.ಟಿ ನಗರದ ಮನೆಯಲ್ಲಿ ಆರೋಪಿಗಳು ಸಜೀವ ಗ್ರೆನೇಡ್, ಪಿಸ್ತೂಲ್, ಗುಂಡುಗಳನ್ನು ಸಂಗ್ರಹಿಸಿ ಇಟ್ಟುಕೊಂಡಿದ್ದರು. ಖಚಿತ ಮಾಹಿತಿ ಮೇರೆಗೆ 2023ರಲ್ಲಿ ಸಿಸಿಬಿ ಪೊಲೀಸರು ಸ್ಫೋಟಕ ವಸ್ತುಗಳನ್ನು ವಶಪಡಿಸಿಕೊಂಡಿದ್ದರು.

ಸಜೀವ ಗ್ರೆನೇಡ್ ಪತ್ತೆ ಪ್ರಕರಣ; ಏಳು ಅಪರಾಧಿಗಳಿಗೆ 7 ವರ್ಷ ಜೈಲು ಶಿಕ್ಷೆ

-

Prabhakara R
Prabhakara R Apr 21, 2026 10:04 PM

ಬೆಂಗಳೂರು: ನಗರದಲ್ಲಿ ಸಜೀವ ಗ್ರೆನೇಡ್ ಪತ್ತೆ ಪ್ರಕರಣಕ್ಕೆ (Bengaluru grenade case) ಸಂಬಂಧಿಸಿ 7 ಆರೋಪಿಗಳನ್ನು ದೋಷಿ ಎಂದು ಘೋಷಿಸಿರುವ ಎನ್‌ಐಎ ವಿಶೇಷ ನ್ಯಾಯಾಲಯ, ಆರೋಪಿಗಳಿಗೆ 7 ವರ್ಷ ಜೈಲು ಶಿಕ್ಷೆ ಹಾಗೂ 48 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದೆ. ಎನ್‌ಐಎ ಪರವಾಗಿ ಎಸ್‌ಪಿಪಿ ಪ್ರಸನ್ನ ಕುಮಾರ್ ಅವರು ವಾದ ಮಂಡಿಸಿದ್ದರು. ವಾದ ಆಲಿಸಿದ್ದ ನ್ಯಾಯಾಲಯ ಇಂದು ತೀರ್ಪು ನೀಡಿದೆ.

ಬೆಂಗಳೂರಿನಲ್ಲಿ 2008ರ ಮಾದರಿಯಲ್ಲಿ ಸ್ಫೋಟ ನಡೆಸಲು ಆರೋಪಿಗಳು ಸಂಚು ರೂಪಿಸಿದ್ದರು. ಇದಕ್ಕಾಗಿಯೇ ಆರ್.ಟಿ ನಗರದ ಮನೆಯಲ್ಲಿ ಸಜೀವ ಗ್ರೆನೇಡ್, ಪಿಸ್ತೂಲ್, ಗುಂಡುಗಳನ್ನು ಸಂಗ್ರಹಿಸಿ ಇಟ್ಟುಕೊಂಡಿದ್ದರು. ಖಚಿತ ಮಾಹಿತಿ ಮೇರೆಗೆ 2023ರಲ್ಲಿ ಸಿಸಿಬಿ ಪೊಲೀಸರು ಸ್ಫೋಟಕ ವಸ್ತುಗಳು, ವಾಕಿಟಾಕಿ, ಮ್ಯಾಪ್ ವಶಪಡಿಸಿಕೊಂಡಿದ್ದರು.

ಆರೋಪಿಗಳ ಬಂಧನ ಬಳಿಕ ಪ್ರಕರಣ ಎನ್‌ಐಎ ಕೈಗೆತ್ತಿಕೊಂಡು ವಿಚಾರಣೆ ಮಾಡಿತ್ತು. ವಿಚಾರಣೆ ವೇಳೆ ಆರೋಪಿಗಳು ಬೆಂಗಳೂರು ಸ್ಫೋಟದ ರೂವಾರಿ ಟಿ.ನಾಜೀರ್ ಜತೆ ಸಂಪರ್ಕ ಹೊಂದಿದ್ದರು. ಜೈಲಿನಲ್ಲಿ ನಾಜೀರ್‌ನಿಂದ ಉಗ್ರವಾದಕ್ಕೆ ಪ್ರೇರಣೆಯಾಗಿ ಜೈಲಿನಿಂದ ಹೊರಬಂದ ಬಳಿಕ ವಿವಿಧೆಡೆ ಬಾಂಬ್ ಸ್ಫೋಟಕ್ಕೆ ಸಂಚು ಹೂಡಿದ್ದರು. ಬಾಂಬ್ ಬ್ಲಾಸ್ಟ್ ಮಾಡುವ ಮೂಲಕ ಟಿ.ನಾಸೀರ್ ಅನ್ನು ಪೊಲೀಸರಿಂದ ಬಚಾವ್ ಮಾಡಲು ಆರೋಪಿಗಳು ಪ್ರಯತ್ನ ಮಾಡಿದ್ದರು ಎಂದು ತಿಳಿದುಬಂದಿದೆ.

Murder case: ಹೊಸ ಕಾರಿನೊಂದಿಗೆ ಪೂಜೆಗೆ ಬಂದವನ ಬರ್ಬರ ಕೊಲೆ, ಕಾರಿಗೂ ಬೆಂಕಿ

ಶಿವಮೊಗ್ಗ ಟ್ರಯಲ್ ಬ್ಲಾಸ್ಟ್ ಕೇಸ್‌: 3ನೇ ಅಪರಾಧಿ ಅರಾಫತ್ ಗೆ 6 ವರ್ಷ ಜೈಲು ಶಿಕ್ಷೆ

ಬೆಂಗಳೂರು: ಶಿವಮೊಗ್ಗ ಟ್ರಯಲ್ ಬ್ಲಾಸ್ಟ್ ಪ್ರಕರಣದ ಮೂರನೇ ಆರೋಪಿ ಅರಾಫತ್‌ಗೆ ಆರು ವರ್ಷ ಜೈಲು ಶಿಕ್ಷೆ ವಿಧಿಸಿ ಬೆಂಗಳೂರಿನ ಎನ್ಐಎ ವಿಶೇಷ ನ್ಯಾಯಾಲಯ ತೀರ್ಪು ಪ್ರಕಟಿಸಿದೆ. 2022ರ ಸೆಪ್ಟೆಂಬರ್‌ನಲ್ಲಿ ಶಿವಮೊಗ್ಗದ ತೀರ್ಥಹಳ್ಳಿ ಸಮೀಪ ತುಂಗಾ ನದಿ ತೀರದಲ್ಲಿ ಟ್ರಯಲ್ ಬ್ಲಾಸ್ಟ್ ನಡೆಸಿದ್ದ ಪ್ರಕರಣದಲ್ಲಿ ಈಗಾಗಲೇ ಇಬ್ಬರು ಅಪರಾಧಿಗಳಿಗೆ ತಲಾ 6 ವರ್ಷ ಶಿಕ್ಷೆ ವಿಧಿಸಲಾಗಿದೆ. ಇದೀಗ ಮೂರನೇ ಆರೋಪಿಗೆ ಶಿಕ್ಷೆ ಪ್ರಕಟವಾಗಿದೆ.

ಟ್ರಯಲ್ ಬ್ಲಾಸ್ಟ್ ಪ್ರಕರಣದಲ್ಲಿ ಎನ್ಐಎ 12 ಆರೋಪಿಗಳನ್ನು ಬಂಧಿಸಿತ್ತು. ಇನ್ನು 9 ಆರೋಪಿಗಳ ವಿಚಾರಣೆಯನ್ನು ಎನ್ಐಎ ವಿಶೇಷ ನ್ಯಾಯಾಲಯ ಮುಂದುವರಿಸಿದೆ. ಐಸಿಸ್ ಉಗ್ರ ಸಂಘಟನೆಯ ಜತೆಗೆ ನಿರಂತರವಾಗಿ ಸಂಪರ್ಕದಲ್ಲಿದ್ದ ಮತ್ತು ಉಗ್ರ ಚಟುವಟಿಕೆಗೆ ಹಣ ಸಂಗ್ರಹ ಹಾಗೂ ಯುವಕರನ್ನು ಒಗ್ಗೂಡಿಸಿದ ಆರೋಪ ಅರಾಫತ್ ಮೇಲಿದ್ದು, ಈ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಆರು ವರ್ಷ ಶಿಕ್ಷೆ ಪ್ರಕಟಿಸಲಾಗಿದೆ.