Teachers Recruitment 2026: 15,000 ಶಿಕ್ಷಕರ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆ?
15 ಸಾವಿರ ಹುದ್ದೆಗಳನ್ನು ಜಿಲ್ಲಾ ಹಂತದಲ್ಲಿ ಹಂಚಿಕೆ ಮಾಡಲಾಗಿದೆ. ಪ್ರಾಥಮಿಕ ಹಂಚಿಕೆ ಶಾಲೆಗಳಿಗೆ ಆಯಾ ಶೈಕ್ಷಣಿಕ ಜಿಲ್ಲಾವಾರು ಹಾಗೂ ಪ್ರೌಢ ಶಾಲೆಗಳಿಗೆ ವಿಭಾಗಾವಾರು ಅಧಿಸೂಚನೆ ಹೊರಡಿಸಲಾಗಿದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 7 ಕೊನೆಯ ದಿನವಾಗಿದೆ.
ಸಾಂದರ್ಭಿಕ ಚಿತ್ರ. -
ಬೆಂಗಳೂರು: ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಶಾಲಾ ಶಿಕ್ಷಣ ಇಲಾಖೆಯು ಗುಡ್‌ನ್ಯೂಸ್ ನೀಡಿದೆ. ಪ್ರಾಥಮಿಕ ಶಾಲೆ ಹಾಗೂ ಪ್ರೌಢಶಾಲೆಗಳ ಒಟ್ಟು 15,000 ಶಿಕ್ಷಕರ ಹುದ್ದೆಗಳ ನೇಮಕಾತಿಗೆ (Teachers Recruitment 2026) ಅಧಿಕೃತ ಅಧಿಸೂಚನೆ ಹೊರಡಿಸಲಾಗಿದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 7 ಕೊನೆಯ ದಿನವಾಗಿದೆ.
ಈ ನೇಮಕಾತಿಯಲ್ಲಿ ಸಾಮಾನ್ಯ ವಿಷಯ ಶಿಕ್ಷಕರು, ಕಂಪ್ಯೂಟರ್ ಶಿಕ್ಷಕರು ಹಾಗೂ ದೈಹಿಕ ಶಿಕ್ಷಣ ಶಿಕ್ಷಕರ (ಗ್ರೇಡ್ 2) ಹುದ್ದೆಗಳು ಸೇರಿವೆ. ಕಲ್ಯಾಣ ಕರ್ನಾಟಕ ಭಾಗದ ಸ್ಥಳೀಯ ವೃಂದದ ಹುದ್ದೆಗಳು ಸೇರಿದಂತೆ ಜಿಲ್ಲಾವಾರು ಮತ್ತು ವಿಷಯವಾರು ಖಾಲಿ ಹುದ್ದೆಗಳ ಸಂಪೂರ್ಣ ಪಟ್ಟಿಯನ್ನು ಇಲಾಖೆಯು ಬಿಡುಗಡೆ ಮಾಡಿದೆ.
ಪ್ರಮುಖ ದಿನಾಂಕಗಳು
ಆನ್‌ಲೈನ್ ಅರ್ಜಿ ಸಲ್ಲಿಕೆ ಆರಂಭ: ಆಗಸ್ಟ್ 18
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: ಸೆಪ್ಟೆಂಬರ್ 07
ಅರ್ಜಿ ಶುಲ್ಕ ಪಾವತಿಗೆ ಕೊನೆಯ ದಿನ: ಸೆಪ್ಟೆಂಬರ್ 10
ಸ್ಪರ್ಧಾತ್ಮಕ ಪರೀಕ್ಷೆ ದಿನಾಂಕ: ಅಕ್ಟೋಬರ್ 05 ಮತ್ತು 06
ಜಿಲ್ಲಾವಾರು ಶಿಕ್ಷಕರ ಹುದ್ದೆಗಳ ಪಟ್ಟಿ

ಪರೀಕ್ಷಾ ವೇಳಾಪಟ್ಟಿ
ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಜಿಲ್ಲಾಮಟ್ಟದಲ್ಲಿ ನಡೆಸಲಾಗುತ್ತಿದ್ದು, ವೇಳಾಪಟ್ಟಿ ಕೆಳಗಿನಂತಿದೆ.
ಅಕ್ಟೋಬರ್ 05:
ಪತ್ರಿಕೆ - 1: ಬೆಳಗ್ಗೆ 10ರಿಂದ ಮಧ್ಯಾಹ್ನ 12ರವರೆಗೆ
ಪತ್ರಿಕೆ - 2 (ಗಣಿತ, ಪರಿಸರ ಅಧ್ಯಯನ, ಸಮಾಜ ವಿಜ್ಞಾನ): ಮಧ್ಯಾಹ್ನ 2:30 ರಿಂದ ಸಂಜೆ 4:30 ರವರೆಗೆ.
ಅಕ್ಟೋಬರ್ 06: ಪತ್ರಿಕೆ - 2 (ದೈಹಿಕ ಶಿಕ್ಷಣ ಶಿಕ್ಷಕರು ಗ್ರೇಡ್-II): ಬೆಳಿಗ್ಗೆ 10:00 ರಿಂದ ಮಧ್ಯಾಹ್ನ 12:00 ರವರೆಗೆ
ಅಭ್ಯರ್ಥಿಗಳಿಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಅಭ್ಯರ್ಥಿಗಳು ಒಂದು ವೃಂದದ ಒಂದು ಹುದ್ದೆಗೆ ಒಂದು ಜಿಲ್ಲೆಯನ್ನು ಮಾತ್ರ ಆಯ್ಕೆಮಾಡಿಕೊಳ್ಳಬೇಕು. ಆದರೆ, ಒಂದೇ ಜಿಲ್ಲೆಯಲ್ಲಿ ಒಂದಕ್ಕಿಂತ ಹೆಚ್ಚು ವೃಂದದ ಹುದ್ದೆಗಳಿಗೂ ಅರ್ಜಿ ಸಲ್ಲಿಸಬಹುದು. ಬೇರೆ ಬೇರೆ ಜಿಲ್ಲೆಗಳಲ್ಲಿ ಬೇರೆ ಬೇರೆ ವೃಂದಕ್ಕೂ ಅರ್ಜಿ ನೀಡಬಹುದು. ಪ್ರತಿ ವೃಂದಕ್ಕೂ ಪ್ರತ್ಯೇಕ ಶುಲ್ಕ ನಿಗದಿ ಮಾಡಲಾಗಿದೆ.
ಜಿಲ್ಲಾ ಹಂತದಲ್ಲಿ ನೇಮಕಾತಿ:
ಒಟ್ಟಾರೆ 15 ಸಾವಿರ ಹುದ್ದೆಗಳನ್ನು ಜಿಲ್ಲಾ ಹಂತದಲ್ಲಿ ಹಂಚಿಕೆ ಮಾಡಲಾಗಿದೆ. ಪ್ರಾಥಮಿಕ ಹಂಚಿಕೆ ಶಾಲೆಗಳಿಗೆ ಆಯಾ ಶೈಕ್ಷಣಿಕ ಜಿಲ್ಲಾವಾರು ಹಾಗೂ ಪ್ರೌಢ ಶಾಲೆಗಳಿಗೆ ವಿಭಾಗಾವಾರು ಅಧಿಸೂಚನೆ ಹೊರಡಿಸಲಾಗಿದೆ.
ಹುದ್ದೆಗಳ ವರ್ಗೀಕರಣ, ಶೈಕ್ಷಣಿಕ ಅರ್ಹತೆ, ವಯೋಮಿತಿ ಹಾಗೂ ಇತರೆ ಸಂಪೂರ್ಣ ವಿವರಗಳಿಗಾಗಿ ಶಾಲಾ ಶಿಕ್ಷಣ ಇಲಾಖೆಯ ಅಧಿಕೃತ ವೆಬ್‌ಸೈಟ್ https://schooleducation.karnataka.gov.in/ ಗೆ ಭೇಟಿ ನೀಡಿ.