ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ವಿವಿಧ ಮಹಾನಗರ ಪಾಲಿಕೆಗಳಲ್ಲಿ ಅನ್ಯ ಇಲಾಖೆ ಅಧಿಕಾರಿಗಳು ಮಾತೃ ಇಲಾಖೆಗೆ ವಾಪಸ್: ಲೋಕೋಪಯೋಗಿ ಇಲಾಖೆಯಲ್ಲೂ ಜಾರಿಗೆ ಆಗ್ರಹ

ಲೋಕೋಪಯೋಗಿ ಇಲಾಖೆಯಲ್ಲಿ ಹಲವು ವರ್ಷಗಳಿಂದ ಅನ್ಯ ಇಲಾಖೆಗಳ ಅಧಿಕಾರಿಗಳು ನಿಯೋ ಜನೆ ಮೇಲೆ ಕಾರ್ಯನಿರ್ವಹಿಸುತ್ತಿರುವುದರಿಂದ ಇಲಾಖೆಯ ಮೂಲ ಸಿಬ್ಬಂದಿಗೆ ಪದೋನ್ನತಿ, ವರ್ಗಾವಣೆ ಹಾಗೂ ಆಡಳಿತಾತ್ಮಕ ಅವಕಾಶಗಳಲ್ಲಿ ಅನ್ಯಾಯವಾಗುತ್ತಿದೆ ಎಂಬ ಅಸಮಾಧಾನ ವ್ಯಾಪಕವಾಗಿದೆ ಎಂದು ಅವರು ತಿಳಿಸಿದ್ದಾರೆ.

ಪಾಲಿಕೆಗಳಲ್ಲಿ ಅನ್ಯ ಇಲಾಖೆ ಅಧಿಕಾರಿಗಳು ಮಾತೃ ಇಲಾಖೆಗೆ ವಾಪಸ್

-

Profile
Ashok Nayak May 17, 2026 6:16 PM

ಬೆಂಗಳೂರು: 2026-27ನೇ ಸಾಲಿನ ಸಾರ್ವತ್ರಿಕ ವರ್ಗಾವಣೆಯಲ್ಲಿ ವಿವಿಧ ಮಹಾನಗರ ಪಾಲಿಕೆ ಗಳಲ್ಲಿ ದೀರ್ಘಕಾಲದಿಂದ ಇತರೆ ಇಲಾಖೆಗಳ ಅಧಿಕಾರಿಗಳು ಹಾಗೂ ನೌಕರರು ನಿಯೋಜನೆ ಮೇಲೆ ಕಾರ್ಯನಿರ್ವಹಿಸುತ್ತಿದ್ದವರನ್ನು ಅವರ ಮಾತೃ ಇಲಾಖೆಗೆ ಹಿಂತಿರುಗಿಸುವ ಪ್ರಕ್ರಿಯೆ ಆರಂಭ ಗೊಂಡಿದೆ.

ಇದೇ ರೀತಿ ಲೋಕೋಪಯೋಗಿ ಇಲಾಖೆಯಿಂದ ಮಾತೃ ಇಲಾಖೆಗೆ ಅಧಿಕಾರಿಗಳನ್ನು ವಾಪಸ್ ಕಳುಹಿಸುವ ಕಾರ್ಯ ಆರಂಭಿಸಬೇಕು ಎಂದು ಕರ್ನಾಟಕ ರಾಜ್ಯ ಯುವ ಸಮೂಹದ ರಾಜ್ಯಾಧ್ಯಕ್ಷ ಡಾ.ಎಸ್.ಸಂಗಮೇಶ್ ಒತ್ತಾಯಿಸಿದ್ದಾರೆ.

ಈ ಸಂಬಂಧ ಡಾ. ಎಸ್. ಸಂಗಮೇಶ್ ಮೇ 7 ರಂದು ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದು, ಮಹಾನಗರ ಪಾಲಿಕೆಗಳಂತೆ ಲೋಕೋಪಯೋಗಿ ಇಲಾಖೆಯಲ್ಲಿಯೂ ದೀರ್ಘಕಾಲದಿಂದ ನಿಯೋಜನೆ ಮೇಲೆ ಕಾರ್ಯನಿರ್ವಹಿಸುತ್ತಿರುವ ಅನ್ಯ ಇಲಾಖೆಯ ಅಧಿಕಾರಿಗಳು ಹಾಗೂ ನೌಕರ ರನ್ನು ಅವರ ಮಾತೃ ಇಲಾಖೆಗೆ ಹಿಂದಿರುಗಿಸುವಂತೆ ಮನವಿ ಮಾಡಿದ್ದರು.

ಪ್ರಸ್ತುತ ಸರ್ಕಾರ ಮಹಾನಗರ ಪಾಲಿಕೆಗಳಲ್ಲಿ ಕೈಗೊಂಡಿರುವ ಕ್ರಮ ಸಾರ್ವಜನಿಕ ಹಾಗೂ ಆಡಳಿ ತಾತ್ಮಕ ಹಿತದೃಷ್ಟಿಯಿಂದ ಶ್ಲಾಘನೀಯವಾಗಿದ್ದು, ಇದೇ ಮಾದರಿಯನ್ನು ಲೋಕೋಪಯೋಗಿ ಇಲಾಖೆಯಲ್ಲಿಯೂ ಜಾರಿಗೆ ತರಬೇಕೆಂದು ಅವರು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: Bangalore News: ರಿಯಾ ಡೈಮಂಡ್ಸ್ ಬೆಂಗಳೂರಿನಲ್ಲಿ ಭಾರತದ ಮೊದಲ ಪ್ರಯೋಗಾಲಯದಲ್ಲಿ ಬೆಳೆದ ವಜ್ರ ನಿಶ್ಚಿತಾರ್ಥ ಉಂಗುರ ಸ್ಟುಡಿಯೋ ಪ್ರಾರಂಭ

ಲೋಕೋಪಯೋಗಿ ಇಲಾಖೆಯಲ್ಲಿ ಹಲವು ವರ್ಷಗಳಿಂದ ಅನ್ಯ ಇಲಾಖೆಗಳ ಅಧಿಕಾರಿಗಳು ನಿಯೋಜನೆ ಮೇಲೆ ಕಾರ್ಯನಿರ್ವಹಿಸುತ್ತಿರುವುದರಿಂದ ಇಲಾಖೆಯ ಮೂಲ ಸಿಬ್ಬಂದಿಗೆ ಪದೋ ನ್ನತಿ, ವರ್ಗಾವಣೆ ಹಾಗೂ ಆಡಳಿತಾತ್ಮಕ ಅವಕಾಶಗಳಲ್ಲಿ ಅನ್ಯಾಯವಾಗುತ್ತಿದೆ ಎಂಬ ಅಸಮಾಧಾನ ವ್ಯಾಪಕವಾಗಿದೆ ಎಂದು ಅವರು ತಿಳಿಸಿದ್ದಾರೆ.

ವಿಶೇಷವಾಗಿ ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯಪಾಲಕ ಅಭಿಯಂತರರು, ಕಾರ್ಯಪಾಲಕ ಅಭಿಯಂತರರು, ಅಧೀಕ್ಷಕ ಅಭಿಯಂತರರು ಹಾಗೂ ಮುಖ್ಯ ಅಭಿಯಂತರರು ನಿಯಮಾನುಸಾರ ಪದೋನ್ನತಿ ಹೊಂದಿದರೂ ಸಹ, ಇಲಾಖೆಯಲ್ಲೇ ಸಮರ್ಪಕ ಹುದ್ದೆಗಳಲ್ಲಿ ಕಾರ್ಯನಿರ್ವಹಿಸಲು ಸೂಕ್ತ ಅವಕಾಶಗಳು ಸಿಗದೇ ಹಲವು ವರ್ಷಗಳಿಂದ ಅಸಮಾಧಾನದಲ್ಲಿರು ವುದು ಇಲಾಖೆಯ ಗಮನಕ್ಕೂ ಬಂದಿರುವ ಸಂಗತಿಯಾಗಿದೆ ಎಂದು ಅವರು ಹೇಳಿದ್ದಾರೆ.

ಅನ್ಯ ಇಲಾಖೆಗಳ ಅಧಿಕಾರಿಗಳು ದೀರ್ಘಕಾಲ ನಿಯೋಜನೆ ಮೇಲೆ ಮುಂದುವರಿಯು ತ್ತಿರುವುದರಿಂದ ಇಲಾಖೆಯ ಮೂಲ ಅಧಿಕಾರಿಗಳಿಗೆ ತಮ್ಮ ಅರ್ಹತೆ, ಅನುಭವ ಹಾಗೂ ಹಿರಿತನದ ಅನುಸಾರ ಜವಾಬ್ದಾರಿಯುತ ಹುದ್ದೆಗಳಲ್ಲಿ ಕಾರ್ಯನಿರ್ವಹಿಸುವ ಅವಕಾಶ ಕಡಿಮೆಯಾಗುತ್ತಿದೆ. ಇದರ ಪರಿಣಾಮವಾಗಿ ಅನೇಕ ಹಿರಿಯ ಅಧಿಕಾರಿಗಳು ಸಮರ್ಪಕ ಆಡಳಿತಾತ್ಮಕ ಜವಾಬ್ದಾರಿ ಗಳಿಲ್ಲದೆ, ಕೆಲ ಸಂದರ್ಭಗಳಲ್ಲಿ ಕೇವಲ ಒಂದು ದಿನ ಅಥವಾ ಅಲ್ಪಾವಧಿಗೆ ಮಾತ್ರ ಹುದ್ದೆ ನಿರ್ವಹಿಸಿ ನಿವೃತ್ತಿಯಾಗುವ ಪರಿಸ್ಥಿತಿ ನಿರ್ಮಾಣವಾಗುತ್ತಿರುವುದು ಅತ್ಯಂತ ವಿಷಾದನೀಯ ಎಂದು ಅವರು ತಿಳಿಸಿದ್ದಾರೆ.

ಲೋಕೋಪಯೋಗಿ ಇಲಾಖೆಯ ಅನೇಕ ಹಿರಿಯ ಅಧಿಕಾರಿಗಳು ತಮ್ಮ ಸಂಪೂರ್ಣ ಸೇವಾ ಅವಧಿಯನ್ನು ಇಲಾಖೆಯ ಅಭಿವೃದ್ಧಿ ಹಾಗೂ ಸಾರ್ವಜನಿಕ ಕಾಮಗಾರಿಗಳಿಗೆ ಸಮರ್ಪಿಸಿದ್ದರೂ, ಸೇವಾ ನಿವೃತ್ತಿಯ ಕೊನೆಯ ಹಂತದಲ್ಲಿ ತಮ್ಮದೇ ಇಲಾಖೆಯಲ್ಲಿ ಸಮರ್ಪಕ ಹುದ್ದೆ ಅಥವಾ ಕಾರ್ಯನಿರ್ವಹಣೆಯ ಅವಕಾಶ ಸಿಗದೆ, ಅನಿವಾರ್ಯವಾಗಿ ಬೇರೆ ಇಲಾಖೆಯಲ್ಲಿ ಕಾರ್ಯ ನಿರ್ವಹಿಸಿ ನಿವೃತ್ತಿಯಾಗುತ್ತಿರುವ ಘಟನೆಗಳು ನಡೆಯುತ್ತಿರುವುದು ಇಲಾಖೆಗೆ ಅತ್ಯಂತ ಬೇಸರದ ಹಾಗೂ ಅವಮಾನಕರ ಸಂಗತಿಯಾಗಿದೆ ಎಂದು ಡಾ.ಎಸ್.ಸಂಗಮೇಶ್ ತಿಳಿಸಿದ್ದಾರೆ.

ಹಲವು ಸಂದರ್ಭಗಳಲ್ಲಿ ಲೋಕೋಪಯೋಗಿ ಇಲಾಖೆಯ ಮೂಲ ಅಧಿಕಾರಿಗಳು ಪದೋನ್ನತಿ ಹೊಂದಿದ ನಂತರವೂ ತಮ್ಮದೇ ಇಲಾಖೆಯಲ್ಲಿ ಹುದ್ದೆ ಲಭ್ಯವಾಗದೆ, ಇತರೆ ಇಲಾಖೆಗಳಲ್ಲಿಯೇ ಕಾರ್ಯನಿರ್ವಹಿಸಿ ನಿವೃತ್ತಿಯಾಗುತ್ತಿರುವುದು ಆಡಳಿತಾತ್ಮಕ ದೌರ್ಬಲ್ಯವನ್ನು ತೋರಿಸುತ್ತದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಲೋಕೋಪಯೋಗಿ ಇಲಾಖೆಯಲ್ಲಿ ದೀರ್ಘಕಾಲ ಸೇವೆ ಸಲ್ಲಿಸಿರುವ ಮೂಲ ಅಧಿಕಾರಿಗಳು ತಮ್ಮದೇ ಇಲಾಖೆಯಲ್ಲಿ ಸಮರ್ಪಕ ಅವಕಾಶಗಳಿಲ್ಲದೆ ನಿವೃತ್ತಿಯಾಗುವ ಪರಿಸ್ಥಿತಿ ಎದುರಿಸುತ್ತಿರು ವುದು ಆಡಳಿತಾತ್ಮಕ ಸಮತೋಲನ ಹಾಗೂ ಸಿಬ್ಬಂದಿ ಹಿತದೃಷ್ಟಿಯಿಂದ ಪರಿಗಣಿಸಬೇಕಾದ ಗಂಭೀರ ವಿಷಯವಾಗಿದೆ ಎಂದು ಅವರು ಹೇಳಿದ್ದಾರೆ. ಸರ್ಕಾರ ಹಾಗೂ ಸಂಬಂಧಿತ ಸಚಿವರು ಇದೇ ರೀತಿಯ ಕಟ್ಟುನಿಟ್ಟಿನ ಕ್ರಮವನ್ನು ಲೋಕೋಪಯೋಗಿ ಇಲಾಖೆಯಲ್ಲಿಯೂ ಶೀಘ್ರ ಜಾರಿಗೆ ತಂದು, ಇಲಾಖೆಯ ಮೂಲ ಅಧಿಕಾರಿಗಳು ಮತ್ತು ನೌಕರರಿಗೆ ನ್ಯಾಯ ಒದಗಿಸಬೇಕೆಂದು ಹೇಳಿದ್ದಾರೆ.