ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

GKVK: ಕೃಷಿ ಮೇಳ ಆಯೋಜನೆ

ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯದ ವತಿಯಿಂದ ನ.16ರಿಂದ ಮೂರು ದಿನಗಳವರೆಗೆ ಜಿ.ಕೆ.ವಿ.ಕೆ. ಆವರಣದಲ್ಲಿ ಮೂರು ದಿನಗಳವರೆಗೆ ಕೃಷಿಮೇಳ ಆಯೋಜಿಸಲಾಗಿದೆ. ಕೃಷಿಮೇಳದಲ್ಲಿ ಬರ ನಿರ್ವಹಣಾ ತಂತ್ರಜ್ಞಾನಗಳು, ಬರಕ್ಕೆ ಸೂಕ್ತವಾದ ಬೆಳೆಗಳು ಮತ್ತು ತಳಿಗಳು, ಕೃಷಿ ನಾವೀನ್ಯತೆಗಳ ಪ್ರದರ್ಶನ ಹಾಗೂ ಪ್ರಾತ್ಯಕ್ಷಿಕೆಗಳನ್ನು ಏರ್ಪಡಿಸಲಾಗಿದೆ.

GKVK: ಕೃಷಿ ಮೇಳ ಆಯೋಜನೆ

-

Profile
Ashok Nayak Nov 10, 2026 8:44 PM

ಬೆಂಗಳೂರು: ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯದ ವತಿಯಿಂದ ನ.16ರಿಂದ ಮೂರು ದಿನಗಳವರೆಗೆ ಜಿ.ಕೆ.ವಿ.ಕೆ. ಆವರಣದಲ್ಲಿ ಮೂರು ದಿನಗಳವರೆಗೆ ಕೃಷಿಮೇಳ ಆಯೋಜಿಸಲಾಗಿದೆ. ಕೃಷಿಮೇಳದಲ್ಲಿ ಬರ ನಿರ್ವಹಣಾ ತಂತ್ರಜ್ಞಾನಗಳು, ಬರಕ್ಕೆ ಸೂಕ್ತವಾದ ಬೆಳೆಗಳು ಮತ್ತು ತಳಿಗಳು, ಕೃಷಿ ನಾವೀನ್ಯತೆಗಳ ಪ್ರದರ್ಶನ ಹಾಗೂ ಪ್ರಾತ್ಯಕ್ಷಿಕೆಗಳನ್ನು ಏರ್ಪಡಿಸಲಾಗಿದೆ.

ಎಲ್ ನಿನೋ ಪರಿಣಾಮ, ಹವಾಮಾನ ವೈಪರೀತ್ಯಕ್ಕೆ ಚತುರ ಕೃಷಿ ಪದ್ಧತಿ ಮತ್ತು ಮಣ್ಣು-ನೀರು ಸಂರಕ್ಷಣೆ ಕುರಿತು ವಿಚಾರ ಸಂಕಿರಣಗಳು ನಡೆಯಲಿವೆ.

ಇದನ್ನೂ ಓದಿ: GKVK students Protest: ಜಿಕೆವಿಕೆ ವಿದ್ಯಾರ್ಥಿಗಳ ಪ್ರತಿಭಟನೆ; ಕೃಷಿ ಅಧಿಕಾರಿಗಳ ನೇಮಕಾತಿ ಗೊಂದಲ ಬಗೆಹರಿಸುವ ಭರವಸೆ ನೀಡಿದ ಸಿಎಂ

ರೈತರ ಸಮಸ್ಯೆಗಳಿಗೆ ಪರಿಹಾರ ನೀಡಲು ಸಲಹಾ ಕೇಂದ್ರ ತೆರೆಯಲಾಗುವುದು. ಪ್ರಗತಿಪರ ರೈತರು ಹಾಗೂ ರೈತ ಮಹಿಳೆಯರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ. ಈ ಮೇಳವನ್ನು ಕೃಷಿ ಸಚಿವ ಪಿ.ಎಂ. ನರೇಂದ್ರಸ್ವಾಮಿ ಕೃಷಿಮೇಳ ಉದ್ಘಾಟಿಸಲಿದ್ದು, ಸಚಿವ ಕೃಷ್ಣ ಬೈರೇಗೌಡ ಅಧ್ಯಕ್ಷತೆ ವಹಿಸಲಿದ್ದಾರೆ. ರೈತರು, ಕೃಷಿ ಆಸಕ್ತರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ