ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ವಾಹನ ಸವಾರರೇ ಗಮನಿಸಿ; ಈ ದಿನಾಂಕದ ವರೆಗೆ ಪೀಣ್ಯ ಎಲಿವೇಟೆಡ್ ಫ್ಲೈಓವರ್ ರಾತ್ರಿ ವೇಳೆ ಬಂದ್

Peenya Elevated Flyover: ರಾಷ್ಟ್ರೀಯ ಹೆದ್ದಾರಿ 4ರ ಭಾಗವಾಗಿರುವ ಪೀಣ್ಯ ಎಲಿವೇಟೆಡ್ ಫ್ಲೈಓವರ್‌ನ ಮೇಲ್ಮೈ ಡಾಂಬರೀಕರಣ ಕಾಮಗಾರಿ ಆರಂಭವಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ನಿನ್ನೆಯಿಂದ (ಜುಲೈ 27) ಆಗಸ್ಟ್ 5 ರವರೆಗೆ ರಾತ್ರಿ ವೇಳೆ ವಾಹನ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ.

ಈ ದಿನಾಂಕದ ವರೆಗೆ ಪೀಣ್ಯ ಎಲಿವೇಟೆಡ್ ಫ್ಲೈಓವರ್ ರಾತ್ರಿ ವೇಳೆ ಬಂದ್

ಸಂಗ್ರಹ ಚಿತ್ರ -

Vishakha Bhat Heggar
Vishakha Bhat Heggar Jul 28, 2026 8:16 AM

ರಾಷ್ಟ್ರೀಯ ಹೆದ್ದಾರಿ 4ರ ಭಾಗವಾಗಿರುವ ಪೀಣ್ಯ ಎಲಿವೇಟೆಡ್ ಫ್ಲೈಓವರ್‌ನ (Peenya Elevated Flyover ) ಮೇಲ್ಮೈ ಡಾಂಬರೀಕರಣ ಕಾಮಗಾರಿ ಆರಂಭವಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ನಿನ್ನೆಯಿಂದ (ಜುಲೈ 27) ಆಗಸ್ಟ್ 5 ರವರೆಗೆ ರಾತ್ರಿ ವೇಳೆ ವಾಹನ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ. ವಾಹನ ಸವಾರರು ಪರ್ಯಾಯ ಮಾರ್ಗಗಳನ್ನು ಬಳಸುವಂತೆ ಬೆಂಗಳೂರು ಸಂಚಾರ ವಿಭಾಗ ಪೊಲೀಸರು ಮಾಹಿತಿ ನೀಡಿದ್ದಾರೆ.

ಮಾಹಿತಿ ನೀಡಿ, ಬೆಂಗಳೂರು ಸಂಚಾರ ವಿಭಾಗ ಪೊಲೀಸರು ಮಾಧ್ಯಮ ಪ್ರಕಟಣೆ ಹೊರಡಿಸಿದ್ದು, ‘‘ಪೀಣ್ಯ ಸಂಚಾರ ಪೊಲೀಸ್ ಠಾಣೆಯ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ-4ರ ಪೀಣ್ಯ ಎಲಿವೇಟೆಡ್ ಫ್ಲೈಓವರ್ (ಡಾ. ಶ್ರೀ ಶಿವಕುಮಾರ ಸ್ವಾಮೀಜಿ ಮೇಲ್ಸೇತುವೆ) ಮೇಲೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಡಾಂಬರೀಕರಣ ಕಾಮಗಾರಿ ಕೈಗೊಂಡಿದೆ.’’‘‘ಸಾರ್ವಜನಿಕರ ಸುಗಮ ಸಂಚಾರದ ದೃಷ್ಟಿಯಿಂದ ಇಂದಿನಿಂದ ಆಗಸ್ಟ್​​ 05 ರವರೆಗೆ ರಾತ್ರಿ 10 ಗಂಟೆಯಿಂದ ಬೆಳಗೆ 5 ಗಂಟೆಯವರೆಗೆ ಹಾಗೂ ಈ ಅವಧಿಯಲ್ಲಿ ಶನಿವಾರ ಮತ್ತು ಭಾನುವಾರ ರಾತ್ರಿ 12 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೆ ಪೀಣ್ಯ ಎಲಿವೇಟೆಡ್ ಫ್ಲೈಓವರ್ ಮೇಲೆ ಬೆಂಗಳೂರು ನಗರ ಕಡೆಗೆ ಬರುವ ಎಲ್ಲಾ ರೀತಿಯ ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗಿದೆ’’.

CM DK Shivakumar: ಬೆಂಗಳೂರಿನಾಚೆಗೆ ಮತ್ತಷ್ಟು ಹೊಸ ಬೆಂಗಳೂರುಗಳ ನಿರ್ಮಾಣ: ಸಿಎಂ ಡಿ.ಕೆ. ಶಿವಕುಮಾರ್

ಪರ್ಯಾಯ ಮಾರ್ಗಗಳು ಹೀಗಿವೆ

ನೆಲಮಂಗಲದಿಂದ ಬೆಂಗಳೂರು ಕಡೆಗೆ ಸಂಚರಿಸುವ ವಾಹನಗಳು ಕೆನ್ನಮೆಟಲ್ ಫ್ಯಾಕ್ಟರಿ ಹತ್ತಿರ ಫ್ಲೈಓವರ್ ಕೆಳಭಾಗದ ಎನ್.ಹೆಚ್.-4 ಮತ್ತು ಸರ್ವಿಸ್ ರಸ್ತೆ ಮೂಲಕ 8ನೇ ಮೈಲಿ ತಲುಪಿ, ದಾಸರಹಳ್ಳಿ, ಜಾಲಹಳ್ಳಿ ಕ್ರಾಸ್, ಪೀಣ್ಯ ಪೊಲೀಸ್ ಠಾಣೆ ಜಂಕ್ಷನ್, ಎಸ್.ಆರ್.ಎಸ್ ಜಂಕ್ಷನ್ ಹಾಗೂ ಗೊರಗುಂಟೆಪಾಳ್ಯ ಮೂಲಕ ಸಂಚರಿಸಬಹುದಾಗಿದೆ.

ಜು.27 ರಿಂದ ಆ.5ರವರೆಗೆ ರಾತ್ರಿ 10 ಗಂಟೆಯಿಂದ ಬೆಳಗೆ 5 ಗಂಟೆಯವರೆಗೆ ಹಾಗೂ ಈ ಅವಧಿಯ ಶನಿವಾರ ಮತ್ತು ಭಾನುವಾರ ರಾತ್ರಿ 12 ರಿಂದ ಬೆಳಗ್ಗೆ 5 ಗಂಟೆಯವರೆಗೆ ಮೇಲ್ಸೇತುವೆಯಲ್ಲಿ ಎಲ್ಲ ಮಾದರಿಯ ವಾಹನಗಳ ಸಂಚಾರವನ್ನು ಪೊಲೀಸರು ನಿಷೇಧಿಸಿದ್ದಾರೆ.