Caste Census: ಜಾತಿಗಣತಿ ವರದಿ ಪ್ರಶ್ನಿಸಿ ಅರ್ಜಿ: ಮಧ್ಯಂತರ ಆದೇಶಕ್ಕೆ ಹೈಕೋರ್ಟ್ ತಡೆ
ರಾಜ್ಯದಲ್ಲಿ ಜಾತಿಗಣತಿ ವರದಿ ಜಾರಿ ಸಂಬಂಧ ಈಗಾಗಲೇ ಹಲವು ಚರ್ಚೆಗಳು ನಡೆದಿವೆ. ಈ ವರದಿಯನ್ನು ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿಯನ್ನು ಸಲ್ಲಿಸಲಾಗಿದೆ. ಇದೀಗ ಹೈಕೋರ್ಟ್ ಈ ಕುರಿತು ಆದೇಶ ಹೊರಡಿಸಿದ್ದು, ಈ ಪ್ರಕರಣದಲ್ಲಿ ಮಧ್ಯಂತರ ಆದೇಶ ನೀಡಲು ಕರ್ನಾಟಕ ಹೈಕೋರ್ಟ್ ನಿರಾಕರಿಸಿದೆ. ವಿಚಾರಣೆ ಬಳಿಕ ನ್ಯಾಯಪೀಠವು ಮುಂದಿನ ವಿಚಾರಣೆಯನ್ನು ಜುಲೈ 17 ಕ್ಕೆ ಮುಂದೂಡಿದೆ.


ಬೆಂಗಳೂರು: ರಾಜ್ಯದಲ್ಲಿ ಜಾತಿಗಣತಿ ವರದಿ (Caste Census) ಜಾರಿ ಸಂಬಂಧ ಈಗಾಗಲೇ ಹಲವು ಚರ್ಚೆಗಳು ನಡೆದಿವೆ. ಈ ವರದಿಯನ್ನು ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿಯನ್ನು ಸಲ್ಲಿಸಲಾಗಿದೆ. ಇದೀಗ ಹೈಕೋರ್ಟ್ ಈ ಕುರಿತು ಆದೇಶ ಹೊರಡಿಸಿದ್ದು, ಈ ಪ್ರಕರಣದಲ್ಲಿ ಮಧ್ಯಂತರ ಆದೇಶ ನೀಡಲು ಕರ್ನಾಟಕ ಹೈಕೋರ್ಟ್ ನಿರಾಕರಿಸಿದೆ. ವಿಚಾರಣೆ ಬಳಿಕ ನ್ಯಾಯಪೀಠವು ಮುಂದಿನ ವಿಚಾರಣೆಯನ್ನು ಜುಲೈ 17 ಕ್ಕೆ ಮುಂದೂಡಿದೆ. ಈ ಸಂಬಂಧ ಏನಿದ್ದರೂ ಪ್ರತ್ಯೇಕ ಮಧ್ಯಂತರ ಅರ್ಜಿ ಸಲ್ಲಿಸಿ ಎಂದು ಅರ್ಜಿದಾರರಿಗೆ ಸೂಚಿಸಿದೆ. ಬೀದರ್‌ನ ಶಿವರಾಜ ಕಣಶೆಟ್ಟಿ, ಕೆ.ಸಿ. ಶಿವರಾಂ, ಬೆಂಗಳೂರಿನ ಬುಜೇಂದ್ರ, ನಟ ಮುಖ್ಯಮಂತ್ರಿ ಚಂದ್ರು ಹಾಗೂ ಬೆಂಗಳೂರಿನ ‘ಸಮಾಜ ಸಂಪರ್ಕ ವೇದಿಕೆ’ ಅಧ್ಯಕ್ಷ ಜಿ.ಎನ್.ಶ್ರೀಕಂಠಯ್ಯ ಮತ್ತಿತರರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಮುಖ್ಯ ನ್ಯಾಯ ಮೂರ್ತಿ ಎನ್.ವಿ.ಅಂಜಾರಿಯಾ ನೇತೃತ್ವದ ವಿಭಾಗೀಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು.
ವಿಚಾರಣೆ ವೇಳೆ ಶಿವರಾಜ ಕಣಶೆಟ್ಟಿ ಅವರ ಪರ ವಕೀಲರು ವಾದ ಮಂಡಿಸಲು ಮುಂದಾಗುತ್ತಿದ್ದಂತೆಯೇ, ನ್ಯಾಯಮೂರ್ತಿಗಳು, ಈ ಪ್ರಕರಣದಲ್ಲಿ ಅವಸರವೇನಿದೆ ಎಂದು ಪ್ರಶ್ನಿಸಿದ್ದಾರೆ. ಇದಕ್ಕೆ ವಕೀಲರು ಕಳೆದ ವಿಚಾರಣೆ ವೇಳೆ ನ್ಯಾಯಪೀಠವು ನಮ್ಮ ವಾದವನ್ನು ಆಲಿಸಿದೆ. ಈ ಪ್ರಕರಣದಲ್ಲಿ ಅರ್ಜಿದಾರರಿಗೆ ಮಧ್ಯಂತರ ರಕ್ಷಣೆ ನೀಡಬೇಕು ಎಂದು ಕೋರಿದ್ದಾರೆ. ವಾದ ಪ್ರತಿವಾದ ಬಳಿಕ ನ್ಯಾಯಪೀಠ ಎರಡು ಕಡೆಯ ವಕೀಲರ ವಿವರಣೆಯನ್ನು ಲೆಕ್ಕಿಸದೆ ವಿಚಾರಣೆಯನ್ನು ಜುಲೈ 17 ಕ್ಕೆ ಮುಂದೂಡಿತು. ಕಳೆದ ವಿಚಾರಣೆ ವೇಳೆ ನ್ಯಾಯಾಲಯ, ರಾಜಕೀಯ ಮತ್ತು ಸಾಮಾಜಿಕ ವಲಯಗಳಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿರುವ ಜಾತಿ ಗಣತಿ ಕುರಿತು ಸರಕಾರ ಮುಂದಿನ ವಿಚಾರಣೆ ವೇಳೆಗೆ ತನ್ನ ನಿಲುವು ಸ್ಪಷ್ಟಪಡಿಸಬೇಕು ಎಂದು ಸೂಚನೆ ನೀಡಿತ್ತು.
ಈ ಸುದ್ದಿಯನ್ನೂ ಓದಿ: Caste Census Report: ಮುಸ್ಲಿಮರಲ್ಲಿ 99 ಜಾತಿ, ಕ್ರೈಸ್ತರಲ್ಲಿ 57 ಜಾತಿ: ಜಾತಿ ಗಣತಿ ವರದಿಯಲ್ಲಿ ಬಯಲು
ರಾಯಚೂರಿನಲ್ಲಿ ರಾಜ್ಯ ಸರ್ಕಾರ ಜಾರಿಗೊಳಿಸಲು ಮುಂದಾಗಿರುವ ಜಾತಿಗಣತಿಯ ನಿರ್ಧಾರವನ್ನು ಹಿಂಪಡೆಯುವಂತೆ ಆಗ್ರಹಿಸಿ ವೀರಶೈವ ಲಿಂಗಾಯತ ಸಮಾಜದಿಂದ ಪ್ರತಿಭಟನಾ ಮೆರವಣಿಗೆ ನಡೆಸಲಾಗಿದೆ. ಸರ್ಕಾರ ಅವೈಜ್ಞಾನಿಕ, ಅಸಂವಿಧಾನಿಕ ಜಾತಿಗಣತಿ ತಯಾರಿಸಿದೆ. ಸಮಾಜದ ಜನಸಂಖ್ಯೆಯನ್ನು ಅತ್ಯಂತ ಕಡಿಮೆ ತೋರಿಸಲಾಗಿದೆ. ಇದು ಸಮಾಜವನ್ನು ಒಡೆಯುವ ಕೃತ್ಯವಾಗಿದೆ. ಕೂಡಲೇ ವರದಿ ಕೈ ಬಿಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.