ಫೋಟೋ ಗ್ಯಾಲರಿ ವಿಶ್ವವಾಣಿ ಪ್ರಾಪರ್ಟಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Girish mattannavar: ಗಿರೀಶ್‌ ಮಟ್ಟಣ್ಣವರ್‌ಗೆ ಸಂಕಷ್ಟ, ಶಾಸಕರ ಭವನದಲ್ಲಿ ಬಾಂಬ್‌ ಇಟ್ಟ ಪ್ರಕರಣಕ್ಕೆ ಮರುಜೀವ

bomb threat: ಪ್ರಕರಣ ಈಗಾಗಲೇ ಕೋರ್ಟ್‌ನಲ್ಲಿ ಖುಲಾಸೆಯಾಗಿದ್ದರೂ ಹೊಸ ಸಾಕ್ಷ್ಯಾಧಾರಗಳ ಹಿನ್ನೆಲೆಯಲ್ಲಿ ಪುನಃ ತನಿಖೆ ನಡೆಸುವ ಅಗತ್ಯವಿದೆ. ಪ್ರಕರಣ ಖುಲಾಸೆಯಾದ ಬಳಿಕವೂ ಹಲವು ಸಂದರ್ಭಗಳಲ್ಲಿ ಈ ಕುರಿತು ಮಟ್ಟಣ್ಣವರ್‌ ಮಾತನಾಡಿದ್ದಾರೆ ಎಂದು ಪ್ರಶಾಂತ್ ಸಂಬರಗಿ ದೂರಿನಲ್ಲಿ ತಿಳಿಸಿದ್ದಾರೆ.

ಗಿರೀಶ್‌ ಮಟ್ಟಣ್ಣವರ್‌ಗೆ ಸಂಕಷ್ಟ, ಶಾಸಕರ ಭವನದ ಬಾಂಬ್‌ ಪ್ರಕರಣಕ್ಕೆ ಮರುಜೀವ

-

ಹರೀಶ್‌ ಕೇರ ಹರೀಶ್‌ ಕೇರ Oct 11, 2025 8:12 AM

ಬೆಂಗಳೂರು: ರಾಜಧಾನಿಯ ಶಾಸಕರ ಭವನದ ಬಳಿ ಗಿರೀಶ್‌ ಮಟ್ಟಣ್ಣವರ್‌ (Girish mattannavar) ಬಾಂಬ್ (bomb threat) ಇಟ್ಟಿದ್ದ ಆರೋಪಕ್ಕೆ ಸಂಬಂಧಿಸಿದಂತೆ ಪ್ರಕರಣದ ಬಗ್ಗೆ ಮರು ತನಿಖೆ ನಡೆಸುವಂತೆ ಒತ್ತಾಯಿಸಿ ಬೆಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿಗೆ ಹಾಗೂ ಗೃಹ ಕಾರ್ಯದರ್ಶಿಗಳಿಗೆ ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಸಂಬರಗಿ ದೂರು ನೀಡಿದ್ದಾರೆ. ಶಾಸಕರ ಭವನದ ಬಳಿ ಬಾಂಬ್ ಇಟ್ಟಿದ್ದ ಪ್ರಕರಣವನ್ನು ಮರುತನಿಖೆ ನಡೆಸಬೇಕು ಹಾಗೂ NIA ತನಿಖೆಗೆ ವಹಿಸಬೇಕು ಎಂದು ಆಗ್ರಹಿಸಿರುವ ಪ್ರಶಾಂತ್ ಸಂಬರಗಿ (Prashant sambargi) ತಾವೇ ಬಾಂಬ್ ತಯಾರಿಸಿ ಇಟ್ಟಿದ್ದಾಗಿ ಒಪ್ಪಿಕೊಂಡಿರುವ ರೀತಿಯಲ್ಲಿ ಗಿರೀಶ್ ಮಟ್ಟಣ್ಣವರ್ ಹೇಳಿರುವ ಹಲವು ವಿಡಿಯೋಗಳನ್ನು ದಾಖಲೆ ರೂಪದಲ್ಲಿ ನೀಡಿದ್ದಾರೆ.

ಪ್ರಕರಣ ಈಗಾಗಲೇ ಕೋರ್ಟ್‌ನಲ್ಲಿ ಖುಲಾಸೆಯಾಗಿದ್ದರೂ ಹೊಸ ಸಾಕ್ಷ್ಯಾಧಾರಗಳ ಹಿನ್ನೆಲೆಯಲ್ಲಿ ಪುನಃ ತನಿಖೆ ನಡೆಸುವ ಅಗತ್ಯವಿದೆ. ಪ್ರಕರಣ ಖುಲಾಸೆಯಾದ ಬಳಿಕವೂ ಹಲವು ಸಂದರ್ಭಗಳಲ್ಲಿ ಈ ಕುರಿತು ಮಟ್ಟಣ್ಣವರ್‌ ಮಾತನಾಡಿದ್ದಾರೆ ಎಂದು ಪ್ರಶಾಂತ್ ಸಂಬರಗಿ ದೂರಿನಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: Dharmasthala Case: ಗಿರೀಶ್‌ ಮಟ್ಟಣ್ಣವರ್‌ ವಿರುದ್ಧ ಮತ್ತೊಂದು ಎಫ್‌ಐಆರ್‌

ಧರ್ಮಸ್ಥಳ ಪ್ರಕರಣದಲ್ಲಿ ಸರಕಾರ, ಎಸ್‌ಐಟಿ, ಐಟಿಗೆ ಹೈಕೋರ್ಟ್‌ ನೋಟಿಸ್‌

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಅದರ ಧರ್ಮಾಧಿಕಾರಿಗಳ ವಿರುದ್ಧ ನಡೆಸಲಾಗುತ್ತಿರುವ ವ್ಯವಸ್ಥಿತ ಷಡ್ಯಂತ್ರದ (Dharmasthala Case) ಭಾಗವಾಗಿ ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣನವರ್, ಟಿ ಜಯಂತ್ ಹಾಗೂ ಎಂಡಿ ಸಮೀರ್ ಮತ್ತಿತರರ ಚಲನವಲನ, ಚಟುವಟಿಕೆಗಳು, ಹಣಕಾಸಿನ ಮೂಲ ಮತ್ತು ಅವರ ಸಂಪರ್ಕ ಜಾಲಗಳ ಬಗ್ಗೆ ಸಮಗ್ರ ತನಿಖೆ ನಡೆಸಲು ನಿರ್ದೇಶನ ನೀಡುವಂತೆ ಕೋರಿ ಕರ್ನಾಟಕ ಹೈಕೋರ್ಟ್‌ಗೆ (Karnataka high court) ಅರ್ಜಿ ಸಲ್ಲಿಕೆಯಾಗಿದ್ದು ನ್ಯಾಯಾಲಯ ಈ ಬಗ್ಗೆ ರಾಜ್ಯ ಸರಕಾರಕ್ಕೆ ಹಾಗೂ ತನಿಖಾ ಸಂಸ್ಥೆಗಳಿಗೆ ನೋಟೀಸ್ ಜಾರಿ ಮಾಡಿದೆ.

ವಿಶೇಷ ತನಿಖಾ ತಂಡಕ್ಕೆ (ಎಸ್ಐಟಿ) 2025ರ ಆಗಸ್ಟ್ 20, ಸೆಪ್ಟೆಂಬರ್ 5,8 ಮತ್ತು 9ರಂದು ಸಲ್ಲಿಸಿರುವ ಮನವಿ ಮತ್ತು ದೂರುಗಳನ್ನು ಪರಿಗಣಿಸಲು ನಿರ್ದೇಶನ ನೀಡುವಂತೆ ಕೋರಿ ಶ್ರೀ ಕ್ಷೇತ್ರ ಧರ್ಮಸ್ಥಳದ ಭಕ್ತರಾದ ಬೆಂಗಳೂರು ನಿವಾಸಿ ತೇಜಸ್ ಎ. ಗೌಡ, ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿಯ ಉಜಿರೆ ನಿವಾಸಿ ಭಾಸ್ಕರ್ ಬಡೆಕೊಟ್ಟು, ಧರ್ಮಸ್ಥಳ ನಿವಾಸಿಗಳಾದ ಸುರೇಂದ್ರ ಪ್ರಭು ಹಾಗೂ ಧನಕೀರ್ತಿ ಅರಿಗ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್‌ ಅವರ ಏಕಸದಸ್ಯ ಪೀಠ ವಿಚಾರಣೆ ನಡೆಸಿತು.

ಕೆಲ ಕಾಲ ವಾದ ಆಲಿಸಿದ ಪೀಠವು ಅರ್ಜಿಯಲ್ಲಿ ಪ್ರತಿವಾದಿಗಳನ್ನಾಗಿ ಮಾಡಲಾಗಿರುವ ರಾಜ್ಯ ಸರ್ಕಾರದ ಗೃಹ ಇಲಾಖೆ, ರಾಜ್ಯ ಪೊಲೀಸ್ ಮಹಾನಿರ್ದೇಶಕರು, ಬೆಂಗಳೂರು ನಗರ ಪೊಲೀಸ್ ಆಯುಕ್ತರು, ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಎಸ್ಐಟಿ, ಆದಾಯ ತೆರಿಗೆ ಮಂಗಳೂರು ಕೇಂದ್ರ ವಲಯ ಅಧಿಕಾರಿ, ಜಾರಿ ನಿರ್ದೇಶನಾಲಯದ ಮಂಗಳೂರು ಉಪ ವಲಯ ಕಚೇರಿಯ ನಿರ್ದೇಶಕರಿಗೆ ನೋಟಿಸ್ ಜಾರಿಗೊಳಿಸಿ, ಆಕ್ಷೇಪಣೆ ಸಲ್ಲಿಸುವಂತೆ ನಿರ್ದೇಶಿಸಿ ವಿಚಾರಣೆಯನ್ನು ಅಕ್ಟೋಬರ್ 16ಕ್ಕೆ ಮುಂದೂಡಿತು.