PM Narendra Modi: ಬೆಂಗಳೂರು-ಬೆಳಗಾವಿ ವಂದೇ ಭಾರತ್ ರೈಲಿಗೆ ಪ್ರಧಾನಿ ಮೋದಿ ಚಾಲನೆ
Vande Bharat inaugurate: ಪ್ರಧಾನಿ ನರೇಂದ್ರ ಮೋದಿ ಇಂದು ಬೆಂಗಳೂರಿನಲ್ಲಿ ನಮ್ಮ ಮೆಟ್ರೋದ ಯೆಲ್ಲೋ ಲೈನ್ ಮತ್ತು ವಂದೇ ಭಾರತ್ ರೈಲಿಗೆ ಚಾಲನೆ ನೀಡುತ್ತಿದ್ದಾರೆ. ಹೆಚ್‌ಎಎಲ್ ಏರ್‌ಪೋರ್ಟ್‌ಗೆ ಆಗಮಿಸಿದ ಪ್ರಧಾನಿ ಮೋದಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಸಿಎಂ ಸಿದ್ದರಾಮಯ್ಯ, ಮಾಜಿ ಸಿಎಂ ಯಡ್ಡಿಯೂರಪ್ಪ ಮತ್ತು ವಿಪಕ್ಷ ನಾಯಕ ಆರ್, ಅಶೋಕ್ ಅವರು ಸ್ವಾಗತಿಸಿದ್ದಾರೆ.


ಬೆಂಗಳೂರು: ನಮ್ಮ ಮೆಟ್ರೋದ(Namma Metro) ಯೆಲ್ಲೋ ಲೈನ್ ಮತ್ತು ವಂದೇ ಭಾರತ್ ರೈಲಿಗೆ ಚಾಲನೆ ನೀಡುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿಯವರು(PM Narendra Modi) ಇಂದು ರಾಜ್ಯ ರಾಜಧಾನಿ ಬೆಂಗಳೂರಿಗೆ ಆಗಮಿಸಿದ್ದಾರೆ. ಎಚ್‌ಎಲ್ ಏರ್‌ಪೋರ್ಟ್‌ಗೆ ಬಂದಿಳಿದ ಪ್ರಧಾನಿ ಮೋದಿ ಅಲ್ಲಿಂದ ಹೆಲಿಕಾಪ್ಟರ್ ಮೂಲಕ ಮೇಖ್ರಿ ಸರ್ಕಲ್ ಬಳಿ ಇರುವ ಮಿಲಿಟರಿ ಬೇಸ್‌ಗೆ ಬಂದಿಳಿದರು. ಅಲ್ಲಿಂದ ರಸ್ತೆ ಮಾರ್ಗವಾಗಿ ಬೆಂಗಳೂರಿನ ಕ್ರಾಂತಿವೀರ ಸಂಗೋಳ್ಳಿ ರಾಯಣ್ಣ ರೈಲ್ವೇ ನಿಲ್ದಾಣಕ್ಕೆ ಪ್ರಯಾಣ ಬೆಳೆಸಿದರು. ಅಸಂಖ್ಯಾ ಅಭಿಮಾನಿಗಳು ಪಕ್ಷದ ಕಾರ್ಯಕರ್ತರಿ ದಾರಿಯುದ್ದಕ್ಕೂ ನಿಂತು ಮೋದಿಗೆ ಸ್ವಾಗತಿ ಕೋರಿದರು. ಮೋದಿ.. ಮೋದಿ ಎಂದು ಕೂಗುತ್ತಿದ್ದ ತಮ್ಮ ಅಭಿಮಾನಿಗಳತ್ತ ಪ್ರಧಾನಿ ಮೋದಿ ಕಾರಿನಿಂದಲೇ ಕೈಬೀಸಿದರು.
ಮೇಖ್ರಿ ಸರ್ಕಲ್‌ನಿಂದ ನೇರವಾಗಿ ಬೆಂಗಳೂರಿನ ಕ್ರಾಂತಿವೀರ ಸಂಗೋಳ್ಳಿ ರಾಯಣ್ಣ ರೈಲ್ವೇ ನಿಲ್ದಾಣಕ್ಕೆ ಆಗಮಿಸಿದ ಪ್ರಧಾನಿ ಮೋದಿ ಬೆಂಗಳೂರಿನಿಂದ ಬೆಳಗಾವಿಗೆ ವಂದೇ ಭಾರತ್ ರೈಲಿಗೆ ಹಸಿರು ನಿಶಾನೆ ತೋರಿ ಚಾಲನೆ ನೀಡಿದ್ದಾರೆ. ಇನ್ನು ಇದು ಕರ್ನಾಟಕದ ಮೂರನೇ ವಂದೇ ಭಾರತ್ ರೈಲು ಇದಾಗಿದ್ದು, ಇದು ಎಂಟು ಜಿಲ್ಲೆಗಳನ್ನು ಹಾದು ಹೋಗುತ್ತದೆ. ಇದರ ಜೊತೆಗೆ ಪ್ರಧಾನಿ ಮೋದಿ ವರ್ಚುವಲ್ ಮೂಲಕ ಇತರೆ ಎರಡು ವಂದೇ ಭಾರತ್ ರೈಲುಗಳಿಗೆ ಚಾಲನೆ ನೀಡುತ್ತಿದ್ದಾರೆ. ಅಗಮೃತಸರ- ವೈಷ್ಣೋದೇವಿ ಕತ್ರಾ ಮತ್ತು ನಾಗ್ಪುರ- ಪುಣೆ ರೈಲುಗಳಿಗೂ ಇಂದೇ ಚಾಲನೆ ಸಿಕ್ಕಿದೆ.
ಈ ಸುದ್ದಿಯನ್ನೂ ಓದಿ: ಪ್ರಧಾನಿ ಮೋದಿಯವರ ʼದಿ ಮೋದಿ ಸ್ಟೋರಿʼ ವೆಬ್‌ಸೈಟ್ ಉದ್ಘಾಟನೆ
ಕೇಸರಿಮಯವಾದ ಬೆಂಗಳೂರು
ಹೆಚ್‌ಎಎಲ್ ಏರ್‌ಪೋರ್ಟ್‌ಗೆ ಆಗಮಿಸಿದ ಪ್ರಧಾನಿ ಮೋದಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಸಿಎಂ ಸಿದ್ದರಾಮಯ್ಯ, ಮಾಜಿ ಸಿಎಂ ಯಡ್ಡಿಯೂರಪ್ಪ ಮತ್ತು ವಿಪಕ್ಷ ನಾಯಕ ಆರ್, ಅಶೋಕ್ ಅವರು ಸ್ವಾಗತಿಸಿದ್ದರು. ಇಂದು ಪ್ರಧಾನಿ ಮೋದಿ ಆಗಮನದ ಹಿನ್ನೆಲೆ ಇಡೀ ಬೆಂಗಳೂರು ಕೇಸರೀಮಯವಾಗಿದೆ. ಮೋದಿ.. ಮೋದಿ ಎಂದು ಕಾರ್ಯಕರ್ತರ ಕೂಗುವ ಜೈಕಾರ ಮುಗಿಲುಮುಟ್ಟಿದೆ. ವಂದೇ ಭಾರತ್ ರೈಲುಗಳಿಗೆ ಚಾಲನೆ ನೀಡಿದ ಬಳಿಕ ಅವರು ರಾಗಿಗುಡ್ಡಕ್ಕೆ ತೆರಳಿ ಅಲ್ಲಿ ನಮ್ಮ ಮೆಟ್ರೋದ ಯೆಲ್ಲೋ ಲೈನ್‌ಗೆ ಹಸಿರು ನಿಶಾನೆ ತೋರಲಿದ್ದಾರೆ. ಬಳಿಕ ಮೂರನೇ ಹಂತದ ನಮ್ಮ ಮೆಟ್ರೋಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.