ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಖಾಸಗಿ ಆಸ್ಪತ್ರೆಗಳಲ್ಲಿ ನ.1ರಿಂದ ದರಪಟ್ಟಿ

ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಹಾಗೂ ಔಷಧ ದರಪಟ್ಟಿಯನ್ನು ಸಾರ್ವಜನಿಕರಿಗೆ ಕಾಣುವಂತೆ ಪ್ರಕಟಿಸುವ ಕುರಿತು ನ.1ರಿಂದ ಕ್ರಮ ಕೈಗೊಳ್ಳಲು ಚಿಂತನೆ ನಡೆಸಲಾಗಿದೆ. ಬೆಂಗಳೂರಿನ ಆರೋಗ್ಯ ಸೌಧದಲ್ಲಿ ಖಾಸಗಿ ಆಸ್ಪತ್ರೆಗಳು ಮತ್ತು ನರ್ಸಿಂಗ್ ಹೋಮ್‌ಗಳ ಸಂಘಟನೆ (ಫನಾ) ಪದಾಧಿಕಾರಿ ಗಳೊಂದಿಗೆ ಮಹತ್ವದ ಸಭೆ ನಡೆಸಿದ ಆರೋಗ್ಯ ಸಚಿವ ಯು.ಟಿ.ಖಾದರ್, ಆಸ್ಪತ್ರೆಗಳ ಸುಲಿಗೆ ಪ್ರವೃತ್ತಿ ಮತ್ತು ಅತಿಯಾದ ದರ ವಸೂಲಿ ವಿರುದ್ಧ ತೀವ್ರ ಅಸಮಾಧಾನ ಹೊರ ಹಾಕಿದ್ದಾರೆ.

ಖಾಸಗಿ ಆಸ್ಪತ್ರೆಗಳಲ್ಲಿ ನ.1ರಿಂದ ದರಪಟ್ಟಿ

-

Profile
Ashok Nayak Oct 23, 2026 9:36 AM

ಬೆಂಗಳೂರು: ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಹಾಗೂ ಔಷಧ ದರಪಟ್ಟಿಯನ್ನು ಸಾರ್ವಜನಿಕರಿಗೆ ಕಾಣುವಂತೆ ಪ್ರಕಟಿಸುವ ಕುರಿತು ನ.1ರಿಂದ ಕ್ರಮ ಕೈಗೊಳ್ಳಲು ಚಿಂತನೆ ನಡೆಸಲಾಗಿದೆ.

ಬೆಂಗಳೂರಿನ ಆರೋಗ್ಯ ಸೌಧದಲ್ಲಿ ಖಾಸಗಿ ಆಸ್ಪತ್ರೆಗಳು ಮತ್ತು ನರ್ಸಿಂಗ್ ಹೋಮ್‌ಗಳ ಸಂಘಟನೆ (ಫನಾ) ಪದಾಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಿದ ಆರೋಗ್ಯ ಸಚಿವ ಯು.ಟಿ.ಖಾದರ್(U T Khader), ಆಸ್ಪತ್ರೆಗಳ ಸುಲಿಗೆ ಪ್ರವೃತ್ತಿ ಮತ್ತು ಅತಿಯಾದ ದರ ವಸೂಲಿ ವಿರುದ್ಧ ತೀವ್ರ ಅಸಮಾಧಾನ ಹೊರಹಾಕಿದ್ದಾರೆ.

ಖಾಸಗಿ ಆಸ್ಪತ್ರೆಗಳಲ್ಲಿ ಸುಮಾರು 4 ಸಾವಿರಕ್ಕೂ ಹೆಚ್ಚು ಬಗೆಯ ಚಿಕಿತ್ಸೆಗಳಿದ್ದು, ಎಲ್ಲ ಚಿಕಿತ್ಸೆಗಳ ದರಪಟ್ಟಿಯನ್ನು ಪ್ರತ್ಯೇಕವಾಗಿ ಪ್ರಕಟಿಸುವುದು ಕಷ್ಟಸಾಧ್ಯ. ಹೀಗಾಗಿ ಪ್ರಮುಖ ಚಿಕಿತ್ಸೆಗಳ ದರಪಟ್ಟಿಯನ್ನು ಆಸ್ಪತ್ರೆಗಳಲ್ಲಿ ಸಾರ್ವಜನಿಕರಿಗೆ ಸುಲಭ ವಾಗಿ ಕಾಣುವ ಸ್ಥಳದಲ್ಲಿ ಪ್ರಕಟಿಸು ವಂತೆ ಸೂಚಿಸಲಾಗುವುದು. ಅಲ್ಲದೆ, ಎಲ್ಲ ಚಿಕಿತ್ಸೆಗಳ ದರಗಳನ್ನು ಒಳಗೊಂಡ ಪುಸ್ತಕ ಸಿದ್ಧಪಡಿಸಿ ರೋಗಿಗಳು ಹಾಗೂ ಸಾರ್ವಜನಿಕರಿಗೆ ಲಭ್ಯವಾಗುವಂತೆ ಇರಿಸುವ ಬಗ್ಗೆಯೂ ಚರ್ಚಿಸಲಾಗುತ್ತದೆ ಎಂದು ಆರೋಗ್ಯ ಇಲಾಖೆ ಸಚಿವ ಯು.ಟಿ.ಖಾದರ್ ಅವರು ತಿಳಿಸಿದ್ದಾರೆ.

ಇದನ್ನೂ ಓದಿ: Private Hospital Charges: ಖಾಸಗಿ ಆಸ್ಪತ್ರೆಗಳ ವಿಪರೀತ ಶುಲ್ಕ ವಸೂಲಿಗೆ ಬ್ರೇಕ್; ಚಿಕಿತ್ಸಾ ದರಪಟ್ಟಿ ಪ್ರದರ್ಶನಕ್ಕೆ ಸಚಿವ ಯು.ಟಿ.ಖಾದರ್‌ ಸೂಚನೆ

ವಿಮೆ ಕಂಪನಿಗಳಗೂ ಮೂಗುದಾರ: ಆಸ್ಪತ್ರೆಗಳು ಮತ್ತು ವಿಮಾ ಕಂಪನಿಗಳ ನಡುವಿನ ವ್ಯವಹಾರಗಳ ಮೇಲೂ ನಿಗಾ ಇರಿಸಲು ಸರಕಾರ ಮುಂದಾಗಿದೆ. ಒಂದು ಲಕ್ಷ ರು. ಆಗುವ ಶಸ್ತ್ರಚಿಕಿತ್ಸೆಗೆ 3 ಲಕ್ಷ ರು. ಬಿಲ್ ಕಳುಹಿಸಲಾಗುತ್ತದೆ. ಅಂತಿಮವಾಗಿ 50 ಸಾವಿರ ರು. ಅನ್ನು ರೋಗಿಯ ಕಡೆಯವರೇ ಭರಿಸಬೇಕೆಂದು ಹೇಳುತ್ತಾರೆ. ವಿಮಾ ಕಂಪನಿಗಳು ಎಲ್ಲೋ ದೂರದಲ್ಲಿ ಕುಳಿತು ಸರಿಯಾಗಿ ಸ್ಪಂದಿಸುವುದಿಲ್ಲ. ಈ ಅನ್ಯಾಯವನ್ನು ಯಾರಲ್ಲಿ ಕೇಳುವುದು? ಹಾಗಾಗಿ ಶೀಘ್ರದಲ್ಲೇ ಇನ್ಶೂರೆನ್ಸ್ ಕಂಪನಿಗಳ ಜತೆಗೂ ಪ್ರತ್ಯೇಕ ಸಭೆ ನಡೆಸಿ ಕಟ್ಟುನಿಟ್ಟಿನ ನಿಯಮಗಳನ್ನು ರೂಪಿಸಲಾಗುವುದು ಯು.ಟಿ.ಖಾದರ್ ಎಚ್ಚರಿಕೆ ನೀಡಿದರು. ‌

ಅಗತ್ಯ ಔಷಧಗಳ ದರ ನಿಯಂತ್ರಣಕ್ಕೂ ಮಹತ್ವದ ಹೆಜ್ಜೆ: ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯ ಕ್ರಮದ ಬೆನ್ನ, ಇದೀಗ ರೋಗಿಗಳಿಗೆ ಹೊರೆಯಾಗುತ್ತಿರುವ ಇತರ ಅಗತ್ಯ ಔಷಧಗಳ ದರ ನಿಯಂತ್ರಣಕ್ಕೂ ಆರೋಗ್ಯ ಇಲಾಖೆ ಮಹತ್ವದ ಹೆಜ್ಜೆ ಇಟ್ಟಿದೆ. ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸಾ ವೆಚ್ಚ ಮಾತ್ರವಲ್ಲದೆ ವೈದ್ಯರ ಪ್ರಿಸ್ಕ್ರಿಪ್ಷನ್ ಇಲ್ಲದೆ ನೀಡಲಾಗದ ಶೆಡ್ಯೂಲ್ಡ್ ಔಷಧಗಳ ದರಪಟ್ಟಿ ಯನ್ನೂ ಸಾರ್ವಜನಿಕರಿಗೆ ಕಾಣುವಂತೆ ಪ್ರದರ್ಶಿಸುವುದನ್ನು ಸರಕಾರ ಕಡ್ಡಾಯ ಗೊಳಿಸಿದೆ. ಔಷಧಗಳ ಮೂಲ ದರವನ್ನು (ಬೇಸ್ ಪ್ರೈಸ್) ಕಂಪನಿಗಳೇ ನಿಗದಿಪಡಿಸುತ್ತವೆ. ಇದರಲ್ಲಿ ಆಸ್ಪತ್ರೆ‌ ಗಳ ಪಾತ್ರವೇನೂ ಇಲ್ಲ.

ಫ್ಯಾಕ್ಟರಿ ಹಂತದ ಮೂಲ ದರ ಇಳಿಕೆಗೆ ಕ್ರಮ ಕೈಗೊಳ್ಳಿ ಎಂದು ಖಾಸಗಿ ಆಸ್ಪತ್ರೆಗಳ ಮುಖ್ಯಸ್ಥರು ಮನವಿ ಮಾಡಿದರು. ಜತೆಗೆ ಚಿಕಿತ್ಸೆ ಹಾಗೂ ಔಷಧಗಳ ದರ ಪ್ರದರ್ಶನ ಫಲಕಗಳನ್ನು ಅಳವಡಿ ಸಲು 6 ತಿಂಗಳ ಕಾಲಾವಕಾಶ ನೀಡುವಂತೆ ಕೋರಿದರು. ಈ ಮನವಿಯನ್ನು ಖಾದರ್ ನೇರವಾಗಿ ನಿರಾಕರಿಸಿದ್ದಾರೆ. ಆರು ತಿಂಗಳು ಕಾಲಾವಕಾಶ ನೀಡಲು ಸಾಧ್ಯವಿಲ್ಲ. ಅಧಿಕಾರಿಗಳೊಂದಿಗೆ ಚರ್ಚಿಸಿ ಎಷ್ಟು ಸಮಯಾವಕಾಶ ನೀಡಬೇಕೆಂದು ತೀರ್ಮಾನಿಸುತ್ತೇನೆ. ನಾನ್ ಶೆಡ್ಯೂಲ್ಡ್ ಔಷಧಗಳ ದರದ ವಿಚಾರ ನ್ಯಾಯಾಲಯದಲ್ಲಿದ್ದು, ಕೋರ್ಟ್ ನಿರ್ದೇಶನದ ಬಳಿಕ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಚಿವ ಯು.ಟಿ.ಖಾದರ್ ಸ್ಪಷ್ಟಪಡಿಸಿದರು

ವೈಜ್ಞಾನಿಕ ವಿಲೇವಾರಿಗೆ ಆರೋಗ್ಯ ಇಲಾಖೆ ಸೂಚನೆ ಖಾಸಗಿ ಆಸ್ಪತ್ರೆಗಳು, ಕ್ಲಿನಿಕ್‌ಗಳು ಮತ್ತು ಪ್ರಯೋಗಾಲಯಗಳು ವೈದ್ಯಕೀಯ ತ್ಯಾಜ್ಯವನ್ನು ರಸ್ತೆ ಬದಿ, ಕೆರೆಗಳ ಸುತ್ತಮುತ್ತ ಹಾಗೂ ಅರಣ್ಯ ಪ್ರದೇಶಗಳಲ್ಲಿ ಎಸೆಯುವಂತಿಲ್ಲ. ಬದಲಿಗೆ, ನಿಗದಿತ ನಿಯಮಗಳ ಪ್ರಕಾರ ವೈಜ್ಞಾನಿಕವಾಗಿ ವಿಲೇವಾರಿ ಮಾಡಬೇಕು. ಈ ಕುರಿತು ಸಂಜೆ ನಡೆದ ಖಾಸಗಿ ವೈದ್ಯಕೀಯ ಸಂಘಟನೆಗಳ ಸಭೆಯಲ್ಲಿ ಸೂಚನೆ ನೀಡಲಾಗಿದೆ.

ಚಿಕಿತ್ಸೆಗೆ ಬಳಸಿದ ಚುಚ್ಚುಮದ್ದು, ರಕ್ತ ಮತ್ತು ದೇಹದ ದ್ರವಗಳಿಂದ ಕಲುಷಿತಗೊಂಡ ಬಟ್ಟೆ, ಉಳಿಕೆ ಔಷಧಗಳು, ಸಿರಪ್ ಸೇರಿದಂತೆ ವಿವಿಧ ಬಗೆಯ ವೈದ್ಯಕೀಯ ತ್ಯಾಜ್ಯವನ್ನು ಪ್ರತ್ಯೇಕಿಸಿ, ನಿಯಮಾನುಸಾರ ವಿಲೇವಾರಿ ಮಾಡಬೇಕು. ತ್ಯಾಜ್ಯವನ್ನು ಸಾಮಾನ್ಯ ಕಸಕ್ಕೆ ಬೆರೆಸುವುದು ಅಥವಾ ಸಾರ್ವಜನಿಕ ಸ್ಥಳಗಳಲ್ಲಿ ಎಸೆಯುವುದನ್ನು ತಪ್ಪಿಸಬೇಕು. ಸಂಬಂಧಪಟ್ಟ ಸ್ಥಳೀಯ ಸಂಸ್ಥೆಗಳ ಸಹಯೋಗದಲ್ಲಿ ತ್ಯಾಜ್ಯ ಸಂಗ್ರಹಣೆ ಮತ್ತು ವಿಲೇವಾರಿ ವ್ಯವಸ್ಥೆಯನ್ನು ಸಮರ್ಪಕ ವಾಗಿ ನಿರ್ವಹಿಸುವಂತೆ ಆರೋಗ್ಯ ಇಲಾಖೆ ಮತ್ತು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ( State Pollution Control Board) ಸೂಚಿಸಿದೆ.

image

ಖಾಸಗಿ ಆಸ್ಪತ್ರೆಗಳಲ್ಲಿ ರೋಗಿಗಳು ಮೃತ ಪಟ್ಟ ಸಂದರ್ಭದಲ್ಲಿ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸುವ ವಿಚಾರ ವಾಗಿ ಸರಕಾರ ಗಮನ ಹರಿಸಲಿದೆ. ಮೃತದೇಹ ಹಸ್ತಾಂತರ ಆಸ್ಪತ್ರೆಯ ಆದ್ಯತೆಯಾಗಿರಬೇಕು.

-ಯು.ಟಿ.ಖಾದರ್, ಆರೋಗ್ಯ ಸಚಿವ