Namma Metro Phase 3: ನಮ್ಮ ಮೆಟ್ರೋ 3ನೇ ಹಂತದ ಕಾಮಗಾರಿಗೆ ಪ್ರಧಾನಿ ಮೋದಿ ಶಂಕುಸ್ಥಾಪನೆ
Prime Minister Modi: ಪ್ರಧಾನಮಂತ್ರಿ ಮೋದಿ ಅವರು ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ ಐಐಐಟಿ ಸಭಾಂಗಣದಲ್ಲಿ ಬೆಂಗಳೂರು ಮೆಟ್ರೋ 3ನೇ ಹಂತದ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿದರು. 15,610 ಕೋಟಿ ವೆಚ್ಚದಲ್ಲಿ ಮೆಟ್ರೋ 3ನೇ ಹಂತದ ಯೋಜನೆ ನಿರ್ಮಾಣ ಮಾಡಲಾಗುತ್ತಿದ್ದು, 44 ಕಿಮೀ ಉದ್ದದ ಕಿತ್ತಳೆ ಮಾರ್ಗದಲ್ಲಿ 31 ಎಲಿವೇಟೆಡ್ ನಿಲ್ದಾಣಗಳು ಇರಲಿವೆ.


ಬೆಂಗಳೂರು: ನಗರದಕ್ಕೆ ಆಗಮಿಸಿರುವ ಪ್ರಧಾನಿ ನರೇಂದ್ರ ಮೋದಿ ಇಂದು ನಮ್ಮ ಮೆಟ್ರೋದ ಯೆಲ್ಲೋ ಲೈನ್ ಮತ್ತು ವಂದೇ ಭಾರತ್ ರೈಲಿಗೆ ಚಾಲನೆ ನೀಡಿದ್ದಾರೆ. ಇದಾದ ಬಳಿಕ ಅವರು ಮೆಟ್ರೋ 3ನೇ ಹಂತದ ಕಾಮಗಾರಿಗೆ (Namma Metro Phase 3) ಅವರು ಶಂಕುಸ್ಥಾಪನೆ ನೆರವೇರಿಸಿದರು. ಈ ವೇಳೆ ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿ.ಕೆ.ಕುಮಾರ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
ಪ್ರಧಾನಮಂತ್ರಿ ಮೋದಿ ಅವರು ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ ಐಐಐಟಿ ಸಭಾಂಗಣದಲ್ಲಿ ಬೆಂಗಳೂರು ಮೆಟ್ರೋ 3ನೇ ಹಂತದ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿದರು. 15,610 ಕೋಟಿ ವೆಚ್ಚದಲ್ಲಿ ಮೆಟ್ರೋ 3ನೇ ಹಂತದ ಯೋಜನೆ ನಿರ್ಮಾಣ ಮಾಡಲಾಗುತ್ತಿದ್ದು, 44.65 ಕಿಮೀ ಉದ್ದದ ಕಿತ್ತಳೆ ಮಾರ್ಗದಲ್ಲಿ 31 ಎತ್ತರಿಸಿದ (ಎಲಿವೇಟೆಡ್) ನಿಲ್ದಾಣಗಳು ಇರಲಿವೆ.
ಮೆಟ್ರೋ 3ನೇ ಹಂತದ ಕಿತ್ತಳೆ ಮಾರ್ಗದ ವಿವರ
ಮೆಟ್ರೋ ರೈಲು ಯೋಜನೆಯ ಮೂರನೇ ಹಂತದ ಕಿತ್ತಳೆ ಮಾರ್ಗವು 44.65 ಕಿ.ಮೀ. ಉದ್ದದ ಎಲಿವೇಟೆಡ್ ಮಾರ್ಗವಾಗಿದ್ದು, ಒಟ್ಟು 31 ನಿಲ್ದಾಣಗಳನ್ನು ಒಳಗೊಂಡಿದೆ. ಈ ಯೋಜನೆಯು ಎರಡು ಕಾರಿಡಾರ್‌ಗಳನ್ನು ಒಳಗೊಂಡಿದೆ. ಕಾರಿಡಾರ್-1 ಮತ್ತು ಕಾರಿಡಾರ್-2 ಅನ್ನು ಅಂದಾಜು 15,611 ಕೋಟಿ ರೂಪಾಯಿ ವೆಚ್ಚವಾಗಲಿದೆ.
ಕಾರಿಡಾರ್-1: ಜೆ.ಪಿ. ನಗರದ 4ನೇ ಹಂತದಿಂದ ಔಟರ್ ರಿಂಗ್ ರೋಡ್‌ನ ಕೆಂಪಾಪುರದವರೆಗೆ 32.15 ಕಿ.ಮೀ. ಉದ್ದದ ಮಾರ್ಗವಾಗಿದೆ. ಈ ಮಾರ್ಗವು 22 ನಿಲ್ದಾಣಗಳನ್ನು ಹೊಂದಿದ್ದು, ಕೆ.ಆರ್. ಪುರಂ-ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮಾರ್ಗ ಮತ್ತು ಹಸಿರು ಮಾರ್ಗದೊಂದಿಗೆ ಸಂಪರ್ಕವನ್ನು ಒದಗಿಸಲಿದೆ. ಸಾರಕ್ಕಿ ಜಂಕ್ಷನ್‌ನಲ್ಲಿ ಇಂಟರ್‌ಚೇಂಜ್ ನಿಲ್ದಾಣವೂ ಇರಲಿದೆ.
ಕಾರಿಡಾರ್-2: ಇದು ಮಾಗಡಿ ರಸ್ತೆಯ ಹೊಸಹಳ್ಳಿಯಿಂದ ಕಡಬಗೆರೆವರೆಗೆ 12.5 ಕಿ.ಮೀ. ಉದ್ದದ ಮಾರ್ಗವಾಗಿದ್ದು, 9 ನಿಲ್ದಾಣಗಳನ್ನು ಒಳಗೊಂಡಿದೆ. ಈ ಮಾರ್ಗವು ಡಬ್ಬಲ್ ಡೆಕ್ಕರ್ ಮಾದರಿಯಲ್ಲಿ ನಿರ್ಮಾಣವಾಗಲಿದ್ದು, ಸಂಚಾರ ದಟ್ಟಣೆಯನ್ನು ಗಣನೀಯವಾಗಿ ಕಡಿಮೆ ಮಾಡುವ ಗುರಿಯನ್ನು ಹೊಂದಿದೆ.
ಮೆಟ್ರೋ ಹಳದಿ ಮಾರ್ಗ ಹಾಗೂ ವಂದೇ ಭಾರತ್ ರೈಲುಗಳಿಗೆ ಚಾಲನೆ
ಬೆಂಗಳೂರು: ಬೆಂಗಳೂರಿಗರ ಸಂಚಾರ ಜೀವನಾಡಿ ನಮ್ಮ ಮೆಟ್ರೋ ಯೋಜನೆಯ ಹಳದಿ ಮಾರ್ಗವನ್ನು ಪ್ರಧಾನಿ ನರೇಂದ್ರ ಮೋದಿ ಲೋಕಾರ್ಪಣೆಗೊಳಿಸಿದರು. 7,610 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಿರುವ ಆರ್.ವಿ ರಸ್ತೆ - ಬೊಮ್ಮಸಂದ್ರ ನಡುವಿನ 19.15 ಕಿ.ಮೀ ಉದ್ದದ ಈ ಮಾರ್ಗದಲ್ಲಿ ಒಟ್ಟು 16 ನಿಲ್ದಾಣಗಳು ಕಾರ್ಯಾಚರಣೆ ಮಾಡಲಿವೆ.
ಇದಕ್ಕೂ ಮೊದಲು ಕೆಎಸ್‍ಆರ್ ರೈಲ್ವೆ ನಿಲ್ದಾಣದಲ್ಲಿ ಬೆಂಗಳೂರು - ಬೆಳಗಾವಿ ಒಂದೇ ಭಾರತ್ ರೈಲಿಗೆ ಚಾಲನೆ ನೀಡಿದರು. ಅಮೃತ್‍ಸರ್ - ಶ್ರೀ ಮಾತಾ ವೈಷ್ಣೋದೇವಿ ಮತ್ತು ನಾಗಪುರ್-ಪುಣೆ ವಂದೇ ಭಾರತ್ ರೈಲುಗಳಿಗೆ ಅವರು ಆನ್‍ಲೈನ್ ಮೂಲಕ ಚಾಲನೆ ನೀಡಿದರು.
ಕೆಎಸ್‍ಆರ್ ಒಂದೇ ಭಾರತ್ ರೈಲು ಉದ್ಘಾಟನೆ ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಸಿದ್ದರಾಮಯ್ಯ, ಕೇಂದ್ರ ಸಚಿವರಾದ ಅಶ್ವಿನಿ ವೈಷ್ಣವ್, ವಿ.ಸೋಮಣ್ಣ, ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಮತ್ತು ಸಂಸದ ಪಿ.ಸಿ. ಮೋಹನ್, ಪ್ರಮುಖರು ಉಪಸ್ಥಿತರಿದ್ದರು