ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Narendra Modi: ಆ. 10 ರಂದು ಬೆಂಗಳೂರಿಗೆ ಪ್ರಧಾನಿ ಮೋದಿ; ರೋಡ್‌ ಶೋ, ಸಮಾವೇಶ ರದ್ದು, ಕಾರ್ಯಕ್ರಮಗಳ ಪಟ್ಟಿ ಹೀಗಿರಲಿದೆ

ಬಹು ನಿರೀಕ್ಷಿತ ನಮ್ಮ ಮೆಟ್ರೋದ ಹಳದಿ ಮಾರ್ಗದ ಉದ್ಘಾಟನೆಗಾಗಿ ಪ್ರಧಾನಿ ಮೋದಿ ಬೆಂಗಳೂರಿಗೆ ಆಗಮಿಸಲಿದ್ದಾರೆ. ಬೆಂಗಳೂರು ಮೆಟ್ರೋದ ಹಳದಿ ಮಾರ್ಗವು ಬೊಮ್ಮಸಂದ್ರದಿಂದ ರಾಗಿಗುಡ್ಡದವರೆಗೆ ಸಂಪರ್ಕ ಕಲ್ಪಿಸುವ ಪ್ರಮುಖ ಯೋಜನೆಯಾಗಿದೆ. ಈ ಮಾರ್ಗವು 19.15 ಕಿಲೋಮೀಟರ್ ಉದ್ದವನ್ನು ಹೊಂದಿದೆ.

ಆ. 10 ರಂದು ಬೆಂಗಳೂರಿಗೆ ಪ್ರಧಾನಿ; ಕಾರ್ಯಕ್ರಮಗಳ ಪಟ್ಟಿ ಹೀಗಿರಲಿದೆ

Vishakha Bhat Vishakha Bhat Aug 6, 2025 8:30 AM

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು, ಆಗಸ್ಟ್ 10 ರಂದು ಬೆಂಗಳೂರಿಗೆ ಆಗಮಿಸಲಿದ್ದು, ಹಳದಿ ಮೆಟ್ರೋ ಮಾರ್ಗದ (Metro Yellow Line) ಉದ್ಘಾಟನೆ ನಡೆಸಲಿದ್ದಾರೆ. ಅಂದು ನಿಗದಿಯಾಗಿದ್ದ ಮೋದಿಯವರ ರೋಡ್ ಶೋ ಮತ್ತು ಸಾರ್ವಜನಿಕ ಸಮಾವೇಶವನ್ನು ರದ್ದುಗೊಳಿಸಲಾಗಿದೆ ಎಂದು ತಿಳಿದುಬಂದಿದೆ. ಸಮಯದ ಕೊರತೆಯನ್ನು ಕಾರಣವಾಗಿಟ್ಟುಕೊಂಡು ಭಾರತೀಯ ಜನತಾ ಪಕ್ಷ (ಬಿಜೆಪಿ) ಈ ಕಾರ್ಯಕ್ರಮಗಳನ್ನು ಕೈಬಿಡಲು ನಿರ್ಧರಿಸಿದೆ. ಮೋದಿಯವರ ಬೆಂಗಳೂರು ಭೇಟಿಯ ಸಂದರ್ಭದಲ್ಲಿ ಬಿಜೆಪಿ ಭವ್ಯ ರೋಡ್ ಶೋ ಮತ್ತು ಸಾರ್ವಜನಿಕ ಸಮಾವೇಶವನ್ನು ಆಯೋಜಿಸಿತ್ತು.

ಆದರೆ ಸಮಯದ ಕೊರತೆಯಿಂದಾಗಿ ಈ ನಿರ್ಧಾರವನ್ನು ಕೈಬಿಡಲಾಗಿದೆ. ಜಯನಗರದ ಆಟದ ಮೈದಾನದಲ್ಲಿ ಸಮಾವೇಶ ನಡೆಸಲು ಬಿಜೆಪಿ ತಯಾರಿ ನಡೆಸಿತ್ತು. ಇದೀಗ ಮೋದಿ ಅವರ ಕಾರ್ಯಕ್ರಮದ ಪಟ್ಟಿ ಬಿಡುಗಡೆಯಾಗಿದ್ದು, ಬೆಳಗ್ಗೆ 10.30ಕ್ಕೆ ಹೆಚ್ಎಎಲ್ ಏರ್ ಪೋರ್ಟ್‌ಗೆ ಮೋದಿ ಬಂದಿಳಿಯಲಿದ್ದಾರೆ. ನಂತರ 10.55ಕ್ಕೆ ಏರ್ ಪೋರ್ಟ್ ನಿಂದ ಹೆಲಿಕಾಪ್ಟರ್‌ ಮೂಲಕ ಮೇಖ್ರಿ ಸರ್ಕಲ್ ಹೆಚ್ ಕ್ಯೂಟಿಸಿ ಹೆಲಿಪ್ಯಾಡ್ ಗೆ ಆಗಮನ. ಅಲ್ಲಿಂದ ನೇರವಾಗಿ ಮೋದಿ ಕೆಎಸ್ಆರ್ ರೈಲು ನಿಲ್ದಾಣಕ್ಕೆ ಪ್ರಯಾಣ 11.15 ರಿಂದ 11.20ರವರೆಗೆ 3 ವಂದೇ ಭಾರತ್ ರೈಲುಗಳಿಗೆ ಹಸಿರು ನಿಶಾನೆ ತೋರಲಿದ್ದಾರೆ.

ನಂತರ ಪ್ರಧಾನಿಯವರು 11.45ಕ್ಕೆ ಆರ್ ವಿ ರೋಡ್ ಮೆಟ್ರೋ ನಿಲ್ದಾಣಕ್ಕೆ ಆಗಮಿಸುತ್ತಾರೆ. ಬಹು ನಿರೀಕ್ಷಿತ ಹಳದಿ ಮಾರ್ಗದ ಉದ್ಘಾಟನೆಯಾಗಲಿದ್ದು, ಮೆಟ್ರೋ ಹಳದಿ ಮಾರ್ಗ(ರೀಚ್-5) ಕ್ಕೆ ಹಸಿರು ನಿಶಾನೆ ತೋರಿಸಿ, ಎಲೆಕ್ಟ್ರಾನಿಕ್ ಸಿಟಿ ನಿಲ್ದಾಣದವರೆಗೆ ಮೆಟ್ರೋದಲ್ಲಿಯೇ ಪ್ರಯಾಣ ಬೆಳೆಸಲಿದ್ದಾರೆ. ಅಲ್ಲಿಂದ 12.55ಕ್ಕೆ ಎಲೆಕ್ಟ್ರಾನಿಕ್ ಸಿಟಿ ಐಐಐಟಿ ಆಡಿಟೋರಿಯಂಗೆ ಆಗಮನ. ಮಧ್ಯಾಹ್ನ 1 ಗಂಟೆಯಿಂದ 2 ಗಂಟೆಯವರೆಗೆ ಐಐಐಟಿ ಆಡಿಟೋರಿಯಂನಲ್ಲಿ ಮೆಟ್ರೋ 3ನೇ ಹಂತದ ಯೋಜನೆಗೆ ಶಂಕುಸ್ಥಾಪನೆ ಮತ್ತು ಹಳದಿ ಮೆಟ್ರೋ ಮಾರ್ಗ ಉದ್ಘಾಟನೆ ನಡೆಯಲಿದೆ. 2.15ಕ್ಕೆ ಕಾರ್ಯಕ್ರಮ ಸ್ಥಳದಿಂದ ಹೆಲಿಕಾಫ್ಟರ್ ಮೂಲಕ ಹೆಚ್ ಎಎಲ್ ಏರ್ ಪೋರ್ಟ್ಗೆ ತೆರಳಿ ಅಲ್ಲಿಂದ 2.40ಕ್ಕೆ ದೆಹಲಿಗೆ ನಿರ್ಗಮನ.

ಹಳದಿ ಮಾರ್ಗ

ಬೆಂಗಳೂರು ಮೆಟ್ರೋದ ಹಳದಿ ಮಾರ್ಗವು ಬೊಮ್ಮಸಂದ್ರದಿಂದ ರಾಗಿಗುಡ್ಡದವರೆಗೆ ಸಂಪರ್ಕ ಕಲ್ಪಿಸುವ ಪ್ರಮುಖ ಯೋಜನೆಯಾಗಿದೆ. ಈ ಮಾರ್ಗವು 19.15 ಕಿಲೋಮೀಟರ್ ಉದ್ದವನ್ನು ಹೊಂದಿದ್ದು, ಚಾಲಕರಹಿತ ಮೆಟ್ರೋ ರೈಲು ಕಾರ್ಯಾಚರಣೆಗೆ ಸಿದ್ಧವಾಗಿದೆ. ಈ ಮಾರ್ಗವು ಬಸವನಗುಡಿಯ ರಾಷ್ಟ್ರೀಯ ವಿದ್ಯಾಲಯ ರಸ್ತೆ ನಿಲ್ದಾಣದಿಂದ ಸಿಲ್ಕ್ ಬೋರ್ಡ್, ಜಯದೇವ ಆಸ್ಪತ್ರೆಯಂತಹ ಪ್ರಮುಖ ಕೇಂದ್ರಗಳ ಮೂಲಕ ಬೊಮ್ಮಸಂದ್ರದವರೆಗೆ ವಿಸ್ತರಿಸಲಿದೆ.