Fire Accident: ಬೆಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್‌ಗೆ ಬೆಂಕಿ; 10 ಕ್ಕೂ ಅಧಿಕ ಮಂದಿ ಸಜೀವ ದಹನದ ಶಂಕೆ
ಆಂಧ್ರಪ್ರದೇಶದ (Andhra Pradesh) ಕರ್ನೂಲ್‌ನಲ್ಲಿ ಶುಕ್ರವಾರ ಮುಂಜಾನೆ ಹೈದರಾಬಾದ್‌ನಿಂದ ಬೆಂಗಳೂರಿಗೆ ಪ್ರಯಾಣಿಸುತ್ತಿದ್ದ ಬಸ್‌ಗೆ ಬೆಂಕಿ ಹತ್ತಿಕೊಂಡಿದೆ. ಬಸ್‌ನಲ್ಲಿ ಸುಮಾರು 40 ಪ್ರಯಾಣಿಕರು ಪ್ರಯಾಣಿಸುತ್ತಿದ್ದರು ಎಂದು ತಿಳಿದು ಬಂದಿದೆ. 10 ಕ್ಕೂ ಅಧಿಕ ಪ್ರಯಾಣಿಕರು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ.
-
Vishakha Bhat
Oct 24, 2025 7:26 AM
ಹೈದರಾಬಾದ್: ಆಂಧ್ರಪ್ರದೇಶದ ಕರ್ನೂಲ್‌ನಲ್ಲಿ ಶುಕ್ರವಾರ ಮುಂಜಾನೆ ಹೈದರಾಬಾದ್‌ನಿಂದ ಬೆಂಗಳೂರಿಗೆ ಪ್ರಯಾಣಿಸುತ್ತಿದ್ದ ಬಸ್‌ಗೆ ಬೆಂಕಿ (Fire Accident) ಹತ್ತಿಕೊಂಡಿದೆ. ಬಸ್‌ನಲ್ಲಿ ಸುಮಾರು 40 ಪ್ರಯಾಣಿಕರು ಪ್ರಯಾಣಿಸುತ್ತಿದ್ದರು ಎಂದು ತಿಳಿದು ಬಂದಿದೆ. ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬಸ್‌ಗೆ ಬೆಂಕಿ ಹತ್ತಿಕೊಂಡಿದೆ. ಮಧ್ಯಾಹ್ನ 3 ಗಂಟೆ ಸುಮಾರಿಗೆ, ಕಾವೇರಿ ಟ್ರಾವೆಲ್ಸ್‌ನ ವೋಲ್ವೋ ಬಸ್ ಹೈದರಾಬಾದ್‌ನಿಂದ ಬೆಂಗಳೂರಿಗೆ ಹೋಗುತ್ತಿತ್ತು . ಏಕಾಏಕಿ ದ್ವಿಚಕ್ರ ವಾಹನ ಡಿಕ್ಕಿ ಹೊಡೆದ ಪರಿಣಾಮ ಬೆಂಕಿ ತಗುಲಿದೆ.
ಪ್ರಯಾಣಿಕರ ಪಟ್ಟಿಯ ಪ್ರಕಾರ, ಇಬ್ಬರು ಚಾಲಕರು ಸೇರಿದಂತೆ 40 ಜನರು ಬಸ್‌ನಲ್ಲಿದ್ದರು. 15 ಜನರನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಂಕಿ ನಿಯಂತ್ರಣದಲ್ಲಿದೆ ಎಂದು ಕರ್ನೂಲ್‌ನ ಪೊಲೀಸ್ ವರಿಷ್ಠಾಧಿಕಾರಿ ವಿಕ್ರಾಂತ್ ಪಾಟೀಲ್ ತಿಳಿಸಿದ್ದಾರೆ. 10 ಹೆಚ್ಚು ಹೆಚ್ಚು ಮಂದಿ ಸಜೀವ ದಹನವಾಗಿದ್ದಾರೆ ಎಂಬ ಮಾಹಿತಿ ದೊರಕಿದ್ದು, ನಿಖರವಾದ ಅಂಕಿ ಅಂಶ ದೊರೆಕಿಲ್ಲ. ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಅವರು ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸಿ, ಸರ್ಕಾರದ ನೆರವಿನ ಭರವಸೆ ನೀಡಿದ್ದಾರೆ.
ಕರ್ನೂಲ್ ಜಿಲ್ಲೆಯ ಚಿನ್ನಾ ಟೇಕೂರ್ ಗ್ರಾಮದ ಬಳಿ ಸಂಭವಿಸಿದ ಭೀಕರ ಬಸ್ ಬೆಂಕಿ ಅಪಘಾತದ ಬಗ್ಗೆ ತಿಳಿದು ನನಗೆ ಆಘಾತವಾಗಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರ ಕುಟುಂಬಗಳಿಗೆ ನನ್ನ ಹೃತ್ಪೂರ್ವಕ ಸಂತಾಪಗಳು. ಗಾಯಗೊಂಡವರು ಮತ್ತು ಬಾಧಿತ ಕುಟುಂಬಗಳಿಗೆ ಸರ್ಕಾರಿ ಅಧಿಕಾರಿಗಳು ಸಾಧ್ಯವಿರುವ ಎಲ್ಲ ಬೆಂಬಲವನ್ನು ನೀಡುತ್ತಾರೆ" ಎಂದು ನಾಯ್ಡು ಎಕ್ಸ್‌ನಲ್ಲಿ ಟ್ವೀಟ್ ಮಾಡಿದ್ದಾರೆ. ಮಾಜಿ ಮುಖ್ಯಮಂತ್ರಿ ಮತ್ತು ವೈಎಸ್‌ಆರ್‌ಸಿಪಿ ಅಧ್ಯಕ್ಷ ವೈಎಸ್ ಜಗನ್ ಮೋಹನ್ ರೆಡ್ಡಿ ಟ್ವೀಟ್ ಮಾಡಿ, ಹಲವಾರು ಪ್ರಯಾಣಿಕರು ಸಜೀವ ದಹನವಾದ ಭೀಕರ ಬಸ್ ಅಪಘಾತದ ಬಗ್ಗೆ ತೀವ್ರ ಆಘಾತ ಮತ್ತು ದುಃಖ ವ್ಯಕ್ತಪಡಿಸಿದ್ದಾರೆ. ಈ ಘಟನೆ ಅತ್ಯಂತ ದುಃಖಕರ ಮತ್ತು ತಮ್ಮನ್ನು ತೀವ್ರವಾಗಿ ಆಘಾತಗೊಳಿಸಿದೆ ಎಂದು ರೆಡ್ಡಿ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಅಪಘಾತದಲ್ಲಿ ಪ್ರಾಣ ಕಳೆದುಕೊಂಡವರ ಕುಟುಂಬಗಳಿಗೆ ಅವರು ತಮ್ಮ ಸಂತಾಪ ಸೂಚಿಸಿದರು.
ಈ ಸುದ್ದಿಯನ್ನೂ ಓದಿ: Tiptur Accident: ತಿಪಟೂರಿನಲ್ಲಿ ಸಾರಿಗೆ ಬಸ್-ದ್ವಿಚಕ್ರ ವಾಹನ ಡಿಕ್ಕಿಯಾಗಿ ಇಬ್ಬರ ದುರ್ಮರಣ
ಸಂತ್ರಸ್ತರ ಕುಟುಂಬಗಳಿಗೆ ಆರ್ಥಿಕ ನೆರವು ಮತ್ತು ಬೆಂಬಲವನ್ನು ನೀಡಬೇಕು ಮತ್ತು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಗೊಂಡ ಪ್ರಯಾಣಿಕರಿಗೆ ಸಾಧ್ಯವಾದಷ್ಟು ಉತ್ತಮ ವೈದ್ಯಕೀಯ ಆರೈಕೆಯನ್ನು ಖಚಿತಪಡಿಸಿಕೊಳ್ಳಬೇಕು ಎಂದು ರೆಡ್ಡಿ ಸರ್ಕಾರವನ್ನು ಒತ್ತಾಯಿಸಿದರು.