ಅ.10ಕ್ಕೆ ನದಿಗಳ ರಕ್ಷಣೆಗೆ ಆಗ್ರಹಿಸಿ ಪ್ರತಿಭಟನೆ
ಬೇಡ್ತಿ, ಅಘನಾಶಿನಿ ಮತ್ತು ಗಂಗಾವಳಿ ನದಿಗಳು ಕೇವಲ ನೀರಿನ ಮೂಲಗಳಲ್ಲ. ಕೃಷಿ, ತೋಟಗಾರಿಕೆ, ಮೀನುಗಾರಿಕೆ, ಪಶುಸಂಗೋಪನೆ ಸೇರಿದಂತೆ ಗ್ರಾಮೀಣ ಭಾಗದ ಹಲವು ಆರ್ಥಿಕ ಚಟುವಟಿಕೆಗಳು ನದಿಗಳೊಂದಿಗೆ ನೇರವಾಗಿ ಸಂಬಂಧ ಹೊಂದಿವೆ. ನದಿಗಳ ಹರಿವು ಮತ್ತು ಪರಿಸರ ವ್ಯವಸ್ಥೆಯಲ್ಲಿ ಆಗುವ ಬದಲಾವಣೆಗಳು ಸ್ಥಳೀಯ ಜನಜೀವನದ ಮೇಲೂ ಪರಿಣಾಮ ಬೀರುವ ಸಾಧ್ಯತೆ ಇದೆ ಎಂಬುದು ಪರಿಸರ ಹೋರಾಟಗಾರರ ವಾದವಾಗಿದೆ.
-
ಬೆಂಗಳೂರು: ಪಶ್ಚಿಮ ಘಟ್ಟದ ಪರಿಸರ, ನದಿಗಳು ಹಾಗೂ ಜೀವವೈವಿಧ್ಯ ಸಂರಕ್ಷಣೆಗೆ ಆಗ್ರಹಿಸಿ ವಿವಿಧ ಸಂಘಟನೆಗಳು ಮತ್ತು ಸಮುದಾಯಗಳ ಸಹಭಾಗಿತ್ವದಲ್ಲಿ ಅ.10ರಂದು ಬೆಂಗಳೂರಿನ ಫ್ರೀಡಂಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನೆಗೆ ಕರೆ ನೀಡಲಾಗಿದೆ. ಪಶ್ಚಿಮ ಘಟ್ಟದಲ್ಲಿ ಹುಟ್ಟಿ ಉತ್ತರ ಕನ್ನಡ ಹಾಗೂ ಕರಾವಳಿ ಭಾಗದ ಜನಜೀವನ ದೊಂದಿಗೆ ನಿಕಟ ಸಂಬಂಧ ಹೊಂದಿರುವ ಬೇಡ್ತಿ, ಅಘನಾಶಿನಿ ಮತ್ತು ಗಂಗಾವಳಿ ನದಿಗಳ ಸಂರಕ್ಷಣೆ ಪ್ರತಿಭಟನೆಯ ಪ್ರಮುಖ ವಿಷಯವಾಗಿದೆ.
ಈ ನದಿಗಳ ಸ್ವಾಭಾವಿಕ ಹರಿವಿಗೆ ಧಕ್ಕೆ ಉಂಟುಮಾಡುವ ಮತ್ತು ಪಶ್ಚಿಮ ಘಟ್ಟದ ಪರಿಸರ ವ್ಯವಸ್ಥೆಯ ಮೇಲೆ ಪರಿಣಾಮ ಬೀರಬಹುದಾದ ಯೋಜನೆಗಳ ಕುರಿತು ಆಕ್ಷೇಪ ವ್ಯಕ್ತಪಡಿಸಿರುವ ಸಂಘಟನೆ ಗಳು, ನದಿ ಮತ್ತು ಕಾಡಿನ ರಕ್ಷಣೆಗೆ ಜನಾಂದೋಲನ ಅಗತ್ಯ ಎಂದು ಅಭಿಪ್ರಾಯ ಪಟ್ಟಿದೆ.
ಇದನ್ನೂ ಓದಿ: Bangalore News: ರಾಜ್ಯಮಟ್ಟದ ಬ್ರಾಹ್ಮಣ ವಧು-ವರಾನ್ವೇಷಣಾ ಸಮಾವೇಶ ಹಾಗೂ ಶ್ರೀನಿವಾಸ ಕಲ್ಯಾಣೋತ್ಸವ
ಬೇಡ್ತಿ, ಅಘನಾಶಿನಿ ಮತ್ತು ಗಂಗಾವಳಿ ನದಿಗಳು ಕೇವಲ ನೀರಿನ ಮೂಲಗಳಲ್ಲ. ಕೃಷಿ, ತೋಟ ಗಾರಿಕೆ, ಮೀನುಗಾರಿಕೆ, ಪಶುಸಂಗೋಪನೆ ಸೇರಿದಂತೆ ಗ್ರಾಮೀಣ ಭಾಗದ ಹಲವು ಆರ್ಥಿಕ ಚಟುವಟಿಕೆಗಳು ನದಿಗಳೊಂದಿಗೆ ನೇರವಾಗಿ ಸಂಬಂಧ ಹೊಂದಿವೆ. ನದಿಗಳ ಹರಿವು ಮತ್ತು ಪರಿಸರ ವ್ಯವಸ್ಥೆಯಲ್ಲಿ ಆಗುವ ಬದಲಾವಣೆಗಳು ಸ್ಥಳೀಯ ಜನಜೀವನದ ಮೇಲೂ ಪರಿಣಾಮ ಬೀರುವ ಸಾಧ್ಯತೆ ಇದೆ ಎಂಬುದು ಪರಿಸರ ಹೋರಾಟಗಾರರ ವಾದವಾಗಿದೆ. ಪಶ್ಚಿಮ ಘಟ್ಟದ ಕಾಡುಗಳು ಮಳೆ, ನೀರಿನ ಹರಿವು ಮತ್ತು ಜೀವವೈವಿಧ್ಯ ವನ್ನು ಕಾಪಾಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ.
ಹೀಗಾಗಿ ನದಿ ಹಾಗೂ ಕಾಡಿನ ಸಂರಕ್ಷಣೆಯನ್ನು ಪ್ರತ್ಯೇಕವಾಗಿ ನೋಡುವ ಬದಲು ಸಮಗ್ರ ಪರಿಸರದ ದೃಷ್ಟಿಕೋನದಿಂದ ನೋಡಬೇಕು ಎಂಬ ಒತ್ತಾಯ ಕೇಳಿಬಂದಿದೆ. ಪ್ರತಿಭಟನೆಯಲ್ಲಿ ಉತ್ತರ ಕನ್ನಡ, ಮಲೆನಾಡು ಹಾಗೂ ಕರಾವಳಿ ಭಾಗದ ಜನರ ಜತೆಗೆ ಬೆಂಗಳೂರಿನಲ್ಲಿ ನೆಲೆಸಿರುವ ವಿವಿಧ ಸಮುದಾಯಗಳ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡಲಾಗಿದೆ.
ಸಹಕಾರಿ ಕ್ಷೇತ್ರದ ನಾಯಕರು ತಮ್ಮ ಸಂಘಗಳ ಪದಾಧಿಕಾರಿಗಳು, ಸದಸ್ಯರು ಮತ್ತು ರೈತ ಬಂಧು ಗಳು ಮತ್ತು ಬೆಂಗಳೂರಿನಲ್ಲಿ ನೆಲೆಸಿರುವ ಸಹಕಾರಿ ಸದಸ್ಯರ ಮಕ್ಕಳು ಕೂಡ ಕಾರ್ಯಕ್ರಮ ದಲ್ಲಿ ಪಾಲ್ಗೊಳ್ಳುವಂತೆ ಕರೆ ನೀಡಲಾಗಿದೆ.
ರೈತ ಸಂಘಟನೆಗಳು ಹಾಗೂ ರೈತ ನಾಯಕರು ಹಸಿರು ಶಾಲು ಧರಿಸಿ ಪ್ರತಿಭಟನೆಯಲ್ಲಿ ಭಾಗವಹಿ ಸುವಂತೆ ಮನವಿ ಮಾಡಲಾಗಿದೆ. ಮಹಿಳಾ ಸಂಘಟನೆಗಳ ಸದಸ್ಯರು ಹಾಗೂ ಸ್ತ್ರೀಶಕ್ತಿ ಸಂಘಗಳ ಬಾಂಧವರು ಕುಟುಂಬ ಮತ್ತು ಮಕ್ಕಳ ಭವಿಷ್ಯದ ದೃಷ್ಟಿಯಿಂದ ಪ್ರತಿಭಟನೆಗೆ ಬೆಂಬಲ ನೀಡಬೇಕು ಎಂದು ಸಂಘಟಕರು ತಿಳಿಸಿದ್ದಾರೆ.