Bengaluru Traffic Police: ಬೆಂಗಳೂರಿನಲ್ಲಿ ನಾಳೆ ರಾಹುಲ್ ಗಾಂಧಿ ನೇತೃತ್ವದಲ್ಲಿ ಪ್ರತಿಭಟನೆ: ಹಲವೆಡೆ ವಾಹನ ಸಂಚಾರ ಬಂದ್; ಈ ಪರ್ಯಾಯ ಮಾರ್ಗ ಬಳಸಿ
Rahul Gandhi: ಬಿಜೆಪಿ ಹಾಗೂ ಚುನಾವಣಾ ಆಯೋಗ ಸೇರಿ ಭಾರಿ ಪ್ರಮಾಣದ ಮತಕಳವು ನಡೆಸಿವೆ ಎಂದು ಆರೋಪಿಸಿ ಲೋಕಸಭೆಯ ಪ್ರತಿಪಕ್ಷ ನಾಯಕ, ಸಂಸದ ರಾಹುಲ್ ಗಾಂಧಿ ನೇತೃತ್ವದಲ್ಲಿ ಶುಕ್ರವಾರ (ಆಗಸ್ಟ್ 8) ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನೆ ಆಯೋಜಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹಲವೆಡೆ ವಾಹನ ಸಂಚಾರವನ್ನು ನಿರ್ಬಂಧಿಸಲಾಇದ್ದು, ಪೊಲೀಸರು ಪರ್ಯಾಯ ಮಾರ್ಗಗಳನ್ನು ಸೂಚಿಸಿದ್ದಾರೆ.


ಬೆಂಗಳೂರು: ಕರ್ನಾಟಕ (Karnataka) ಸೇರಿದಂತೆ ಹಲವು ರಾಜ್ಯಗಳ ಲೋಕಸಭೆ-ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ (BJP) ಹಾಗೂ ಚುನಾವಣಾ ಆಯೋಗ (Election commission) ಸೇರಿ ಭಾರಿ ಪ್ರಮಾಣದ ಮತಕಳವು ನಡೆಸಿವೆ ಎಂದು ಲೋಕಸಭೆಯ ಪ್ರತಿಪಕ್ಷ ನಾಯಕ, ಸಂಸದ ರಾಹುಲ್ ಗಾಂಧಿ (Rahul Gandhi) ಆರೋಪಿಸಿದ್ದು, ಶುಕ್ರವಾರ (ಆಗಸ್ಟ್ 8) ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಕಾಂಗ್ರೆಸ್ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ಆಯೋಜಿಸಲಾಗಿದೆ. ಈ ಹಿನ್ನೆಲೆಯಲ್ಲಿ ಕೆಲವು ರಸ್ತೆಗಳಲ್ಲಿ ವಾಹನ ಸಂಚಾರ ನಿರ್ಬಂಧಿಸಲಾಗಿದ್ದು (Bengaluru Traffic) ಪರ್ಯಾಯ ಮಾರ್ಗಗಳನ್ನು ಬಳಸಲು ಟ್ರಾಫಿಕ್ ಪೊಲೀಸರು (Bengaluru Traffic Police) ಸೂಚಿಸಿದ್ದಾರೆ.
ಫ್ರೀಡಂ ಪಾರ್ಕ್‌ನಲ್ಲಿ ಆಯೋಜಿಸಿರುವ ಈ ಬೃಹತ್ ಪ್ರತಿಭಟನೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ಪ್ರಮುಖ ನಾಯಕರು ಹಾಗೂ ಸಾವಿರಾರು ಕಾಂಗ್ರೆಸ್ ಕಾರ್ಯಕರ್ತರು ಭಾಗವಹಿಸಲಿದ್ದಾರೆ. ಇದರಿಂದ ಸಂಚಾರ ವ್ಯವಸ್ಥೆಯಲ್ಲಿ ಏರುಪೇರಾಗಲಿದ್ದು, ಪೊಲೀಸರು ಸೂಚಿಸಿದ ಪರ್ಯಾಯ ಮಾರ್ಗಗಳ ವಿವರ ಇಂತಿದೆ:
ಈ ಸುದ್ದಿಯನ್ನೂ ಓದಿ: Rahul Gandhi: ವಿಧಾನಸಭೆ ಚುನಾವಣೆಯಲ್ಲಿ ಬೆಂಗಳೂರಿನಲ್ಲಿ ಲಕ್ಷಾಂತರ ಮತಗಳ ಗೋಲ್‌ಮಾಲ್: ರಾಹುಲ್ ಗಾಂಧಿ ಗಂಭೀರ ಆರೋಪ
- ಶಾಂತಲಾ ಜಂಕ್ಷನ್ ಮತ್ತು ಖೋಡ್ ಸರ್ಕಲ್‌ನಿಂದ ಆನಂದ್ ರಾವ್ ಫ್ಲೈ ಓವರ್, ಓಲ್ಡ್ ಜೆಡಿಎಸ್ ಕ್ರಾಸ್, ಶೇಷಾದ್ರಿ ರಸ್ತೆಯಿಂದ ಫ್ರೀಡಂ ಪಾರ್ಕ್ ಕಡೆಗೆ ಸಂಚರಿಸುವ ವಾಹನಗಳು ಲುಲು ಮಾಲ್, ಕೆಎಂಎಫ್, ರಾಜೀವ್ ಗಾಂಧಿ ಸರ್ಕಲ್, ಮಂತ್ರಿ ಮಾಲ್, ಸ್ವಸ್ತಿಕ್ ಸರ್ಕಲ್, ಶೇಷಾದ್ರಿಪುರಂ, ನೆಹರೂ ಸರ್ಕಲ್, ರೇಸ್ ಕೋರ್ಸ್ ಫ್ಲೈ ಓವರ್, ರೇಸ್ ಕೋರ್ಸ್ ರಸ್ತೆ ಮೂಲಕ ತೆರಳಬೇಕು.
- ಮೈಸೂರು ಬ್ಯಾಂಕ್ ಕಡೆಯಿಂದ ಚಾಲುಕ್ಯ ಸರ್ಕಲ್ ಕಡೆಗೆ ತೆರಳುವವರು ಕೆ.ಜಿ. ರಸ್ತೆ, ಮೈಸೂರು ಬ್ಯಾಂಕ್ ಜಂಕ್ಷನ್, ಸಾಗರ್ ಜಂಕ್ಷನ್, ಕೆ.ಜಿ. ಜಂಕ್ಷನ್, ಎಲೈಟ್, ಟಿಬಿ ರಸ್ತೆ, ಕೆಎಫ್‌ಎಂ, ರಾಜೀವ್ ಗಾಂಧಿ ಸಕರ್ಲ್, ಸ್ವಸ್ತಿಕ್, ನೆಹರೂ, ರೇಸ್ ಕೋರ್ಸ್ ಫ್ಲೈ ಓವರ್ ರಸ್ತೆ ಬಳಸಬೇಕು.
- ಚಾಲುಕ್ಯ ಸರ್ಕಲ್‌ನಿಂದ ಮೈಸೂರು ಬ್ಯಾಂಕ್ ಕಡೆಗೆ ಹೋಗುವವರು ಚಾಲುಕ್ಯ ಸರ್ಕಲ್, ಎಲ್‌ಆರ್‌ಡಿ, ರಾಜಭವನ ರಸ್ತೆ, ಇನ್ ಪೆಂಟ್ರಿ ರಸ್ತೆ, ಇಂಡಿಯನ್ ಎಕ್ಸ್‌ಪ್ರೆಸ್ ರಸ್ತೆ ಬಳಸಬೇಕು.
- ಕಾಳಿದಾಸ ರಸ್ತೆ, ಕನಕದಾಸ ಜಂಕ್ಷನ್ ಕಡೆಯಿಂದ ಫ್ರೀಡಂ ಪಾರ್ಕ್ ಕಡೆಗೆ ಸಂಚರಿಸುವವರು ಕನಕದಾಸ ಜಂಕ್ಷನ್‌ನಲ್ಲಿ ಬಲ ತಿರುವು ಪಡೆದು ಸಾಗರ ಜಂಕ್ಷನ್ ಮೂಲಕ ತೆರಳಬೇಕು.
- ಮೌರ್ಯ/ಸುಬ್ಬಣ್ಣ ಜಂಕ್ಷನ್‌ನಿಂದ ಫ್ರೀಡಂ ಪಾರ್ಕ್ ಕಡೆಗೆ ತೆರಲಬೇಕಾದವರು ಸುಬ್ಬಣ್ಣ ಜಂಕ್ಷನ್‌ನಿಂದ ಬಲ ತಿರುವುದು ಪಡೆದು ಆನಂದ್ ರಾವ್ ಸರ್ಕಲ್ ಕಡೆಗೆ ಸಂಚರಿಸಬಹುದು.