ಫೋಟೋ ಗ್ಯಾಲರಿ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Rajat Kishan: ರಜತ್‌ ಕಿಶನ್‌ಗೆ 14 ದಿನ ನ್ಯಾಯಾಂಗ ಬಂಧನ; ವಿನಯ್‌ ಗೌಡಗೆ ರಿಲೀಫ್‌

Rajat Kishan: ವಿಚಾರಣೆಗೆ ಹಾಜರಾಗದ ಹಿನ್ನೆಲೆ ರಜತ್‌ನನ್ನು ಬಸವೇಶ್ವರನಗರ ಪೊಲೀಸರು ಬಂಧಿಸಿ ಇಂದು ಕೋರ್ಟ್ ಹಾಜರುಪಡಿಸಿದ್ದರು. ವಿಚಾರಣೆ ನಡೆಸಿದ ಕೋರ್ಟ್ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ. ಆದರೆ, ವಿನಯ್ ಗೌಡ ಅವರಿಗೆ ಇಂದು ರಿಲೀಫ್ ಸಿಕ್ಕಿದೆ.

ರಜತ್‌ಗೆ 14 ದಿನ ನ್ಯಾಯಾಂಗ ಬಂಧನ; ಮತ್ತೆ ಪರಪ್ಪನ ಅಗ್ರಹಾರ ಜೈಲಿಗೆ

Profile Prabhakara R Apr 16, 2025 6:29 PM

ಬೆಂಗಳೂರು: ಮಚ್ಚು ಹಿಡಿದು ರೀಲ್ಸ್ ಮಾಡಿದ್ದ ಪ್ರಕರಣದಲ್ಲಿ ಬಿಗ್‌ ಬಾಸ್‌ ಮಾಜಿ ಸ್ಪರ್ಧಿ ರಜತ್‌ ಕಿಶನ್‌ಗೆ 24ನೇ ಎಸಿಎಂಎಂ ಕೋರ್ಟ್ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ. ರೀಲ್ಸ್ ಕೇಸ್‌ಗೆ ಸಂಬಂಧಿಸಿ ವಿಚಾರಣೆಗೆ ಹಾಜರಾಗಲು ರಜತ್‌ಗೆ 2 ಬಾರಿ ನೋಟಿಸ್ ನೀಡಲಾಗಿತ್ತು. ಆದರೆ ವಿಚಾರಣೆಗೆ ಹಾಜರಾಗದ ಹಿನ್ನೆಲೆ ರಜತ್‌ನನ್ನು ಬಸವೇಶ್ವರನಗರ ಪೊಲೀಸರು ಬಂಧಿಸಿ ಇಂದು ಕೋರ್ಟ್ ಹಾಜರುಪಡಿಸಿದ್ದರು. ವಿಚಾರಣೆ ನಡೆಸಿದ ಕೋರ್ಟ್ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ.

ಮಲ್ಲೇಶ್ವರಂ ಕೆ.ಸಿ.ಜನರಲ್‌ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ಮಾಡಿಸಿದ ಬಳಿಕ ಕೋರ್ಟ್‌ಗೆ ಹಾಜರುಪಡಿಸಲಾಗಿತ್ತು. ಈ ವೇಳೆ ರಜತ್ ಪರ ವಕೀಲರು ವಾದ ಮಂಡಿಸಿ, ವಿಚಾರಣೆಗೆ ಎಂದು ಕರೆದು ಅರೆಸ್ಟ್ ಮಾಡಿದ್ದಾರೆ ಎಂದರು. ಪ್ರತಿವಾದ ಮಂಡಿಸಿದ ಪಬ್ಲಿಕ್ ಪ್ರಾಸಿಕ್ಯೂಟರ್, ಆರೋಪಿಗಳು ಮೊದಲನೇ ಹಿಯರಿಂಗ್ ಡೇಟ್‌ಗೆ ಹಾಜರಾಗಿಲ್ಲ. ಇವರಿಗೆ ಜಾಮೀನು ರದ್ದು ಮಾಡಿ ಎಂದು ಮನವಿ ಮಾಡಿದ್ದಾರೆ.

ಆಗ ಆರೋಪಿ ಪರ ವಕೀಲರು, ಅದು ಉದ್ದೇಶಪೂರ್ವಕವಾಗಿ ಮಾಡಿಲ್ಲ. ಇನ್ನು ಮುಂದೆ ಈ ರೀತಿ ಆಗಲ್ಲ. ಮುಂದೆ ಹೀಗಾಗದಂತೆ ನೋಡಿಕೊಳ್ಳುತ್ತೇವೆ. ವಾರಂಟ್ ರೀ ಕಾಲ್ ಮಾಡಿ ಎಂದು ಮನವಿ ಮಾಡಿದರು. ವಾದ-ಪ್ರತಿವಾದ ಆಲಿಸಿದ ಕೋರ್ಟ್, ರಜತ್‌ಗೆ ಏ.29ರವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ.

ಇನ್ನು ಪ್ರಕರಣದಲ್ಲಿಆರೋಪಿ ರಜತ್‌ ವಿರುದ್ಧ ಮಾತ್ರ ಕೋರ್ಟ್ ಜಾಮೀನು ರಹಿತ ವಾರಂಟ್ ಹೊರಡಿಸಿತ್ತು. ಹೀಗಾಗಿ ವಿನಯ್ ಗೌಡ ಅವರಿಗೆ ರಿಲೀಫ್ ಸಿಕ್ಕಿದೆ. ರಜತ್‌ ಅವರು ಮಾತ್ರ ಮತ್ತೊಮ್ಮೆ ಪರಪ್ಪನ ಅಗ್ರಹಾರ ಜೈಲು ಸೇರಿದ್ದಾರೆ.

ಮತ್ತೊಂದೆಡೆ ರಜತ್ ಪರ ವಕೀಲರು ಜಾಮೀನು ಅರ್ಜಿ ಸಲ್ಲಿಕೆ ಮಾಡಿದ್ದು, ನಾಳೆಗೆ ಜಾಮೀನು ಅರ್ಜಿ ವಿಚಾರಣೆಯನ್ನು ಮುಂದೂಡಿಕೆ ಮಾಡಲಾಗಿದೆ.

ಈ ಸುದ್ದಿಯನ್ನೂ ಓದಿ | Assault Case: ಮಲಗಿದ್ದ ತಂದೆ, ತಾಯಿ, ಅಕ್ಕನಿಗೆ ಚಾಕುವಿನಿಂದ ಇರಿದ ವಿದ್ಯಾರ್ಥಿ!

ಮಚ್ಚು ಹಿಡಿದು ರೀಲ್ಸ್‌ ಮಾಡಿದ ಪ್ರಕರಣದಲ್ಲಿ ಈ ಹಿಂದೆ ಬಂಧನವಾಗಿದ್ದ ಬಿಗ್‌ ಬಾಸ್‌ ಮಾಜಿ ಸ್ಪರ್ಧಿಗಳಾದ ರಜತ್‌ ಕಿಶನ್‌, ವಿನಯ್‌ ಗೌಡಗೆ (Rajath and Vinay Gowda) ನಗರದ 24ನೇ ಎಸಿಎಂಎಂ ಕೋರ್ಟ್‌ ಮಾ.28ರಂದು ಷರತ್ತುಬದ್ಧ ಜಾಮೀನು ಮಂಜೂರು ಮಾಡಿತ್ತು. ಜಾಮೀನಿಗಾಗಿ 10 ಸಾವಿರ ರೂ. ಶ್ಯೂರಿಟಿ ಸಲ್ಲಿಸಲು ಆರೋಪಿಗಳಿಗೆ ಕೋರ್ಟ್‌ ಸೂಚನೆ ನೀಡಿತ್ತು. ಹೀಗಾಗಿ ಜೈಲಿನಿಂದ ರಜತ್‌ ಮತ್ತು ವಿನಯ್‌ ಗೌಡ ರಿಲೀಸ್‌ ಆಗಿದ್ದರು. ಆದರೆ, ಜಾಮೀನು ಷರತ್ತು ಉಲ್ಲಂಘಿಸಿದ ಹಿನ್ನೆಲೆ ರಜತ್‌ ಅವರನ್ನು ಪೊಲೀಸರು ಮತ್ತೆ ಬಂಧಿಸಿದ್ದಾರೆ.