ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

Vishwavani Impact: ನಾಗರಹೊಳೆ, ಬಂಡೀಪುರದಲ್ಲಿ ಸಫಾರಿ ಪುನರಾರಂಭಕ್ಕೆ ರಾಜ್ಯ ಸರ್ಕಾರ ಗ್ರೀನ್‌ ಸಿಗ್ನಲ್‌

Safari in Bandipur and Nagarahole: ಬಂಡೀಪುರ, ನಾಗರಹೊಳೆಯಲ್ಲಿ ಸಫಾರಿ ಮರು ಆರಂಭಕ್ಕೆ ಒತ್ತಾಯಿಸಿ ರಾಜ್ಯ ಸರ್ಕಾರದ ಗಮನ ಸೆಳೆಯಲು ವಿಶ್ವವಾಣಿ ಪತ್ರಿಕೆಯಲ್ಲಿ ವಿಶೇಷ ವರದಿಗಳು ಪ್ರಕಟವಾಗಿದ್ದವು. ಇದರಿಂದ ಅರಣ್ಯ ಇಲಾಖೆ ಎಚ್ಚೆತ್ತಿದ್ದು, ಕೊನೆಗೂ ಸಫಾರಿಗೆ ಅನುಮತಿ ನೀಡಿದೆ.

ನಾಗರಹೊಳೆ, ಬಂಡೀಪುರದಲ್ಲಿ ಸಫಾರಿ ಪುನರಾರಂಭಕ್ಕೆ ಗ್ರೀನ್‌ ಸಿಗ್ನಲ್‌

ಸಾಂದರ್ಭಿಕ ಚಿತ್ರ -

Prabhakara R
Prabhakara R Feb 18, 2026 6:59 PM

ಬೆಂಗಳೂರು, ಫೆ.18: ನಾಗರಹೊಳೆ, ಬಂಡೀಪುರ ಅಭಯಾರಣ್ಯದಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದ್ದ ಸಫಾರಿ ಪುನರಾರಂಭಕ್ಕೆ ರಾಜ್ಯ ಸರ್ಕಾರದಿಂದ ಗ್ರೀನ್‌ ಸಿಗ್ನಲ್‌ ಸಿಕ್ಕಿದೆ. ಈ ಬಗ್ಗೆ ಅರಣ್ಯ ಸಚಿವ ಈಶ್ವರ ಖಂಡ್ರೆ ಮಾಹಿತಿ ನೀಡಿದ್ದು, ಅರಣ್ಯ ಇಲಾಖೆಯಿಂದ ಸಫಾರಿ (Tiger Safari) ಪುನರಾರಂಭ ಮಾಡಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ. ವಿಕಾಸಸೌಧದಲ್ಲಿ ಅಧಿಕಾರಿಗಳೊಂದಿಗೆ ಬುಧವಾರ ಸಭೆ ಬಳಿಕ ಅವರು ಮಾತನಾಡಿದ್ದಾರೆ.

ಹಿರಿಯ ಅಧಿಕಾರಿಗಳ ನೇತೃತ್ವದ ತಾಂತ್ರಿಕ ಸಮಿತಿ ಮಧ್ಯಂತರ ವರದಿ ನೀಡಿದ್ದು, ಸಫಾರಿ ಮರು ಆರಂಭಕ್ಕೆ ಪ್ರಾರಂಭಕ್ಕೆ ಬೇಡಿಕೆ ಇದೆ. ಹೀಗಾಗಿ ಸಫಾರಿಗೆ ಅನುಮತಿ ನೀಡಲು ತೀರ್ಮಾನಿಸಲಾಗಿದೆ. ಈ ಬಗ್ಗೆ ಜನವರಿ 2ರಂದು ಸಿಎಂ ನೇತೃತ್ವದ ಸಭೆಯಲ್ಲಿ ಚರ್ಚೆ ಮಾಡಿದ್ದೆವು. ಹೀಗಾಗಿ ನಾಳೆಯಿಂದ ಶೇ.50ರಷ್ಟು ಸಫಾರಿ ಪುನರಾರಂಭಕ್ಕೆ ತೀರ್ಮಾನಿಸಲಾಗಿದೆ. ಪೂರ್ತಿ ವರದಿ ಬಂದ ಬಳಿಕ ಸಂಪೂರ್ಣ ಅನುಮತಿ ಬಗ್ಗೆ ನಿರ್ಧಾರ ಮಾಡುತ್ತೇವೆ ಎಂದು ಸಚಿವರು ತಿಳಿಸಿದ್ದಾರೆ.

ಸಫಾರಿಗೆ ಶೇ.50ರಷ್ಟು ವಾಹನಗಳ ಬಳಕೆಗೆ ನಿರ್ಧರಿಸಲಾಗಿದ್ದು, ಸಫಾರಿ ಅವಧಿಯಲ್ಲಿಯೂ ಕೆಲ ಬದಲಾವಣೆ ಮಾಡಲಾಗಿದೆ. ಬಂಡೀಪುರದಲ್ಲಿ 8 ಗಂಟೆಯಿಂದ 5ಕ್ಕೆ ಅವಧಿ ಇಳಿಕೆ ಮಾಡಲಾಗಿದ್ದರೆ, ಸುಂಕದಕಟ್ಟೆಯಲ್ಲಿ 6 ಗಂಟೆ ಹಾಗೂ ನಾಗರಹೊಳೆಯಲ್ಲಿ 4 ಗಂಟೆ ಕಾಲ ಮಾತ್ರ ಸಫಾರಿಗೆ ಪ್ರಥಮ ಹಂತದಲ್ಲಿ ಅನುಮತಿ ನೀಡಲಾಗಿದೆ. ಅಲ್ಲದೆ ರೆಸಾರ್ಟ್​​ ಮತ್ತು ಹೋಂ ಸ್ಟೇಗಳಲ್ಲಿ ಕ್ಯಾಂಪ್​​ ಫೈರ್​​ ನಿರ್ಬಂಧಿಸಿಯೂ ಸೂಚನೆ ನೀಡಲಾಗಿದೆ ಎಂದು ಹೇಳಿದ್ದಾರೆ.

Safari Ban: ಇಲ್ಲಿ ಸಫಾರಿಗೆ ನಿರ್ಬಂಧ: ರಾಜ್ಯದ ಎಲ್ಲೆಲ್ಲೋ ಸಂಕಷ್ಟ

ವಿಶ್ವವಾಣಿ ವಿಶೇಷ ಅಭಿಯಾನ

ಬಂಡೀಪುರ, ನಾಗರಹೊಳೆಯಲ್ಲಿ ಸಫಾರಿ ಮರು ಆರಂಭಕ್ಕೆ ಒತ್ತಾಯಿಸಿ ರಾಜ್ಯ ಸರ್ಕಾರದ ಗಮನ ಸೆಳೆಯಲು ವಿಶ್ವವಾಣಿ ಪತ್ರಿಕೆಯಲ್ಲಿ ವಿಶೇಷ ವರದಿಗಳು ಪ್ರಕಟವಾಗಿದ್ದವು. ಸಫಾರಿ ಬಂದ್‌ನಿಂದ ಪ್ರವಾಸೋದ್ಯಮಕ್ಕೆ ಆಗುತ್ತಿರುವ ನಷ್ಟ, ರೆಸಾರ್ಟ್ ಹೋಮ್ ಸ್ಟೇ ಮಾಲೀಕರು, ನೌಕರರು, ಸಫಾರಿ ಚಾಲಕರಿಗೆ ಆಗುತ್ತಿರುವ ಸಮಸ್ಯೆಗಳ ಬಗ್ಗೆ ಬೆಳಕು ಚೆಲ್ಲಲಾಗಿತ್ತು. ಇದರಿಂದ ಅರಣ್ಯ ಇಲಾಖೆ ಎಚ್ಚೆತ್ತಿದ್ದು, ಕೊನೆಗೂ ಸಫಾರಿಗೆ ಅನುಮತಿ ನೀಡಿದೆ.

ರೈತರ ವಿರೋಧ

ಬಂಡೀಪುರ ಸಫಾರಿಗೆ ರಾಜ್ಯ ಸರ್ಕಾರ ಹಸಿರು ನಿಶಾನೆ ತೋರಿರುವುದಕ್ಕೆ ಗಡಿನಾಡ ರೈತರು ಆಕ್ರೋಶ ಹೊರಹಾಕಿದ್ದಾರೆ. ಸರ್ಕಾರದ ನಿರ್ಧಾರ ಖಂಡಿಸಿ, ನಾಳೆ ಬಂಡೀಪುರ ಮೇಲುಕಾಮನಹಳ್ಳಿಯ ಅರಣ್ಯ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಲು ನಿರ್ಧರಿಸಿದ್ದಾರೆ.

ಹುಲಿ ಹಾಗೂ ಚಿರತೆಗಳ ದಾಳಿಯಿಂದ ಸಾವು ಪ್ರಕರಣಗಳು ಹೆಚ್ಚಾದ ಹಿನ್ನೆಲೆಯಲ್ಲಿ ಸರ್ಕಾರವು ಸಫಾರಿಯನ್ನು ತಾತ್ಕಾಲಿಕವಾಗಿ ಬಂದ್ ಮಾಡಿತ್ತು. ಆದರೆ, ಮತ್ತೊಂದೆಡೆ ಸಫಾರಿ ಪುನರಾರಂಭಕ್ಕೆ ಬಂಡೀಪುರ-ನಾಗರಹೊಳೆ ಭಾಗದ ರೆಸಾರ್ಟ್ ಮಾಲೀಕರು ಒತ್ತಾಯ ಮಾಡುತ್ತಿದ್ದರು. ಹೀಗಾಗಿ ಸಫಾರಿ ಅನುಮತಿ ನೀಡುವ ನಿರ್ಧಾರವನ್ನು ಸರ್ಕಾರ ಕೈಗೊಂಡಿದೆ.‌

ಸಫಾರಿ ಆದಾಯದಿಂದ ಅರಣ್ಯದಂಚಿನ ಗ್ರಾಮಗಳ ಅಭಿವೃದ್ಧಿ

ಪ್ರಸ್ತುತ ಪರಿಸರ ಪ್ರವಾಸೋದ್ಯಮ ಅಂದರೆ ಸಫಾರಿಯಿಂದ ಬರುವ ಒಟ್ಟು ಆದಾಯದ ಮೂರನೇ ಒಂದು ಭಾಗದಷ್ಟು ಹಣವನ್ನು ಅರಣ್ಯದಂಚಿನ ಗ್ರಾಮಗಳ ಸ್ಥಳೀಯ ಸಮುದಾಯದವರಿಗೆ ಕೌಶಲ್ಯ ಅಭಿವೃದ್ಧಿಗಾಗಿ, ಜಾನುವಾರುಗಳಿಗೆ ಮೇವು ಬೆಳೆಸಲು ಮತ್ತು ಪರಿಸರ ಅಭಿವೃದ್ಧಿ ಕಾಮಗಾರಿಗಳಿಗೆ ಬಳಸುವ ಷರತ್ತಿನೊಂದಿಗೆ ಆರಂಭಿಸಲು ಮತ್ತು ವನ್ಯಜೀವಿ-ಮಾನವ ಸಂಘರ್ಷ ತಡೆಯಲು ಸೂಕ್ತ ಸಿಬ್ಬಂದಿಯನ್ನು ಸೂಕ್ಷ್ಮ ಪ್ರದೇಶಗಳಲ್ಲಿ ನಿಯೋಜಿಸುವ ಷರತ್ತಿನೊಂದಿಗೆ ಸಫಾರಿ ಆರಂಭಿಸಲು ಸಮ್ಮತಿಸಲಾಗಿದೆ.

SAFARI: ಸಫಾರಿ ನಿಷೇಧಕ್ಕೆ ಮುನ್ನ ಅಕ್ರಮ ಪ್ರವೇಶ ನಿಯಂತ್ರಿಸಿ !

ಇನ್ನು ಸಫಾರಿ ವಾಹನಗಳನ್ನು ಕತ್ತಲಾದ ಬಳಿಕ ಓಡಿಸುವುದು, ಹೆಚ್ಚುವರಿ ಅವಧಿಗೆ ಓಡಿಸುವುದೇ ಮೊದಲಾದ ದುರ್ಬಳಕೆ ತಡೆಗಟ್ಟಲು ಕಡ್ಡಾಯವಾಗಿ ಮುಂದಿನ 2 ತಿಂಗಳೊಳಗಾಗಿ ಎಲ್ಲ ಸಫಾರಿ ವಾಹನಗಳಿಗೆ ಎಂಜಿನ್ ಸಂಪರ್ಕಿತ ಜಿಪಿಎಸ್ ಮತ್ತು ಡ್ಯಾಷ್ ಕ್ಯಾಮ್ ಅಳವಡಿಸಲು ಅರಣ್ಯ ಸಚಿವರು ಸೂಚಿಸಿದ್ದಾರೆ.