ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಎಸ್‌ಐಆರ್ ರದ್ದುಗೊಳಿಸಿ, ಜ್ಞಾನೇಶ್ ಕುಮಾರ್ ಹುದ್ದೆ ಬಿಡಿ: ಬೆಂಗಳೂರಿನಲ್ಲಿ ಸಿಜೆಪಿ ಘೋಷಣೆ; ಪ್ರತಿಭಟನೆಗೆ ಧ್ರುವ್‌ ರಾಠಿ, ಅಭಿಜಿತ್‌ ದೀಪ್ಕೆ ಸಾಥ್‌

ಚುನಾವಣಾ ಆಯೋಗ ನಡೆಸಿರುವ ಮತದಾರರ ಪಟ್ಟಿಯ ತೀವ್ರ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಅಕ್ರಮಗಳ ಆರೋಪದ ಹಿನ್ನೆಲೆಯಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಕಾಕ್ರೋಚ್ ಜನತಾ ಪಾರ್ಟಿ ನಡೆಸಿದ ಪ್ರತಿಭಟನೆ 'ಜನತಾ ನ್ಯಾಯಾಲಯ'ದಲ್ಲಿ ನಟ, ಸಾಮಾಜಿಕ ಕಾರ್ಯಕರ್ತ ಪ್ರಕಾಶ್ ರಾಜ್ ಮತ್ತು ಜನಪ್ರಿಯ ಯೂಟ್ಯೂಬರ್ ಧ್ರುವ್ ರಾಠಿ ಭಾಗವಹಿಸಿದ್ದರು.

ಸಿಜೆಪಿ ಪ್ರತಿಭಟನೆಗೆ ಧ್ರುವ್ ರಾಠಿ, ಪ್ರಕಾಶ್ ರಾಜ್ ಭಾಗಿ

ಸಂಗ್ರಹ ಚಿತ್ರ -

ಬೆಂಗಳೂರು: ಎಸ್‌ಐಆರ್ (SIR) ರದ್ದುಗೊಳಿಸಿ, ಜ್ಞಾನೇಶ್ ಕುಮಾರ್ (Gyanesh Kumar) ಹುದ್ದೆ ಬಿಡಿ ಎಂದು ಕಾಕ್ರೋಚ್ ಜನತಾ ಪಕ್ಷದ (Cockroach Janta Party) ನಾಯಕರು ಬೆಂಗಳೂರಿನಲ್ಲಿ (Bengaluru) ಘೋಷಣೆಯನ್ನು ಕೂಗಿದರು. ಚುನಾವಣಾ ಆಯೋಗ (Election Commission) ನಡೆಸಿರುವ ಮತದಾರರ ಪಟ್ಟಿಯ ತೀವ್ರ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ಆರೋಪದ ಹಿನ್ನೆಲೆಯಲ್ಲಿ ಫ್ರೀಡಂ ಪಾರ್ಕ್‌ನಲ್ಲಿ (Bengaluru's Freedom Park) ಗುರುವಾರ ಸಿಜೆಪಿ ನಡೆಸಿದ 'ಜನತಾ ನ್ಯಾಯಾಲಯ' ಪ್ರತಿಭಟನೆಯಲ್ಲಿ ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಅವರೊಂದಿಗೆ ನಟ, ಸಾಮಾಜಿಕ ಕಾರ್ಯಕರ್ತ ಪ್ರಕಾಶ್ ರಾಜ್ ಮತ್ತು ಜನಪ್ರಿಯ ಯೂಟ್ಯೂಬರ್ ಧ್ರುವ್ ರಾಠಿ ಭಾಗವಹಿಸಿದ್ದರು.

ಬೆಂಗಳೂರಿನ ಫ್ರಿಡಂ ಪಾರ್ಕ್ ನಲ್ಲಿ ಗುರುವಾರ ಬೆಳಗ್ಗೆಯಿಂದಲೇ ಸಾಮಾಜಿಕ ಕಾರ್ಯಕರ್ತರು ಮತ್ತು ನಾಗರಿಕ ಸಮಾಜದ ಸಂಘಟನೆಗಳ ಸದಸ್ಯರು ಸೇರಿ ಪ್ರತಿಭಟನೆಯನ್ನು ಪ್ರಾರಂಭಿಸಿದರು. ಮಧ್ಯಾಹ್ನ 1 ಗಂಟೆ ಸುಮಾರಿಗೆ ಸಿಜೆಪಿ ನಾಯಕರಾದ ಅಭಿಜೀತ್ ದಿಪ್ಕೆ, ಸೌರವ್ ದಾಸ್ ಮತ್ತು ಅಶುತೋಷ್ ರಂಕಾ ಅವರೊಂದಿಗೆ ಯೂಟ್ಯೂಬರ್ ಧ್ರುವ್ ರಾಠಿ ಮತ್ತು ಪ್ರಕಾಶ್ ರಾಜ್ ಕೂಡ ಅವರೊಂದಿಗೆ ಸೇರಿಕೊಂಡರು.



ಈ ಸಂದರ್ಭದಲ್ಲಿ ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಪ್ರಕಾಶ್ ರಾಜ್, ಎಸ್‌ಐಆರ್ ಪ್ರಕ್ರಿಯೆಯ ಮೂಲಕ ಚುನಾವಣಾ ಆಯೋಗವು ದೇಶಕ್ಕೆ ಅವಮಾನ ಮಾಡಿದೆ. ಈ ದೇಶದಲ್ಲಿ ಯಾರು ಸರ್ಕಾರ ರಚಿಸಬೇಕು ಎಂಬುದನ್ನು ಜನರು ನಿರ್ಧರಿಸುತ್ತಿದ್ದರು. ಆದರೆ ಎಸ್‌ಐಆರ್ ಮೂಲಕ ಯಾರು ಮತ ಚಲಾಯಿಸಬೇಕು ಎಂಬುದನ್ನು ಸರ್ಕಾರವೇ ನಿರ್ಧರಿಸುತ್ತಿದೆ ಎಂದು ಹೇಳಿದರು.

2047ರ ವೇಳೆಗೆ ವಿಕಸಿತ ಭಾರತ: ನುಡಿದಂತೆ ನಡೆಯಲು ಸಿದ್ಧ ಎಂದ ಪ್ರಧಾನಿ ಮೋದಿ

13 ಕೋಟಿಗೂ ಹೆಚ್ಚು ಜನರನ್ನು ಮತದಾರರ ಪಟ್ಟಿಯಿಂದ ಹೊರಗಿಡಲು ಕಾರಣವಾಗಿರುವ ಎಸ್‌ಐಆರ್ ಪ್ರಕ್ರಿಯೆಯನ್ನು ರದ್ದುಗೊಳಿಸುವಂತೆ ಆಗ್ರಹಿಸಿದ ಅವರು, ಎಸ್‌ಐಆರ್ ಪ್ರಕ್ರಿಯೆಯನ್ನು ರದ್ದುಗೊಳಿಸಬೇಕು. ನಾಗರಿಕರ ಹಕ್ಕುಗಳನ್ನು ಮರುಸ್ಥಾಪಿಸಬೇಕು ಎಂದು ಆಗ್ರಹಿಸಿದರು.

"ಸಮವಸ್ತ್ರ ಹರಿದು, ಕಚ್ಚಿದ್ದಾರೆ"; ರಾಹುಲ್ ಗಾಂಧಿ ಬಂಧನದ ವೇಳೆ ಪ್ರತಿಭಟನಾಕಾರರಿಂದ ದೆಹಲಿ ಪೊಲೀಸರ ಮೇಲೆ ಹಲ್ಲೆ?

ಚುನಾವಣಾ ಆಯೋಗವು ಕಳೆದ 10 ತಿಂಗಳುಗಳಲ್ಲಿ ನಡೆಸಿರುವ ಮತದಾರರ ಪಟ್ಟಿಯ ತೀವ್ರ ಪರಿಷ್ಕರಣೆಗೆ ಸಂಬಂಧಿಸಿದ ವಿವಿಧ ನಿರ್ಧಾರಗಳ ಕುರಿತು ಚುನಾವಣಾ ಆಯುಕ್ತರಾದ ಸುಖಬೀರ್ ಸಿಂಗ್ ಸಂಧು ಮತ್ತು ವಿವೇಕ್ ಜೋಶಿ ಅವರು ಕನಿಷ್ಠ 14 ಬಾರಿ ಆಕ್ಷೇಪ ವ್ಯಕ್ತಪಡಿಸಿದ್ದರು. ಇದರ ಬಳಿಕ ಚುನಾವಣಾ ಆಯೋಗದ ಮುಖ್ಯಸ್ಥ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಕೇಳಿ ಬರುತ್ತಿರುವ ಒತ್ತಾಯದ ನಡುವೆ ಕಾಕ್ರೋಚ್ ಜನತಾ ಪಕ್ಷ ಈ ಪ್ರತಿಭಟನೆಯನ್ನು ನಡೆಸುತ್ತಿದೆ.