ಫೋಟೋ ಗ್ಯಾಲರಿ ಆಪರೇಷನ್​ ಸಿಂಧೂರ ಐಪಿಎಲ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Kamal Haasan: ಕಮಲ್‌ ಹಾಸನ್‌ಗೆ ಸುಪ್ರೀಂ ಕೋರ್ಟ್‌ನಲ್ಲೂ ಹಿನ್ನಡೆ; ಥಗ್‌ ಲೈಫ್‌ ಚಿತ್ರ ಬಿಡುಗಡೆಗೆ ರಕ್ಷಣೆ ಕೋರಿದ್ದ ಅರ್ಜಿ ವಜಾ

Kamal Haasan: ಕಮಲ್ ಹಾಸನ್ ಅಭಿನಯದ ಥಗ್‌ ಲೈಫ್ ಸಿನಿಮಾ ಕಳೆದ ಜೂನ್ 5ರಂದು ವಿಶ್ವದಾದ್ಯಂತ ಬಿಡುಗಡೆ ಆಗಿತ್ತು. ಆದರೆ, ಕರ್ನಾಟಕದಲ್ಲಿ ಚಿತ್ರ ರಿಲೀಸ್‌ಗೆ ವಿರೋಧ ವ್ಯಕ್ತವಾಗಿದ್ದರಿಂದ ರಕ್ಷಣೆ ಕೋರಿ ಕಮಲ್‌ ಹಾಸನ್‌ ಹೈಕೋರ್ಟ್‌ ಮೆಟ್ಟಿಲೇರಿದ್ದರು. ಆದರೆ, ಅರ್ಜಿ ವಿಚಾರಣೆಯನ್ನು ಉಚ್ಚ ನ್ಯಾಯಾಲಯ ಮುಂದೂಡಿತ್ತು. ಇದೀಗ ಸುಪ್ರೀಂ ಕೋರ್ಟ್‌ ಅರ್ಜಿ ವಿಚಾರಣೆಗೆ ನಿರಾಕರಿಸಿದೆ.

ಕಮಲ್‌ ಹಾಸನ್‌ಗೆ ಸುಪ್ರೀಂ ಕೋರ್ಟ್‌ನಲ್ಲೂ ಹಿನ್ನಡೆ

Profile Prabhakara R Jun 9, 2025 1:46 PM

ಬೆಂಗಳೂರು: ಕನ್ನಡದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿ ಕನ್ನಡಿಗರ ಆಕ್ರೋಶಕ್ಕೆ ಗುರಿಯಾಗಿರುವ ನಟ ಕಮಲ್ ಹಾಸನ್ (Kamal Haasan) ಅವರಿಗೆ ಸುಪ್ರೀಂ ಕೋರ್ಟ್‌ನಲ್ಲೂ ಹಿನ್ನಡೆಯಾಗಿದೆ. ಥಗ್‌ ಲೈಫ್ (Thug Life Movie) ಸಿನಿಮಾವನ್ನು ಕರ್ನಾಟಕದಲ್ಲಿ ಬಿಡುಗಡೆ ಮಾಡಲು ಅವರ ಚಿತ್ರತಂಡ ಸುಪ್ರೀಂಕೋರ್ಟ್ ಮೆಟ್ಟಿಲೇರಿತ್ತು. ಆದರೆ ಸುಪ್ರೀಂಕೋರ್ಟ್ ಅರ್ಜಿ ವಿಚಾರಣೆಗೆ ನಿರಾಕರಿಸಿದೆ.

ಕಮಲ್ ಹಾಸನ್ ಅಭಿನಯದ ಥಗ್‌ ಲೈಫ್ ಸಿನಿಮಾ ಕಳೆದ ಜೂನ್ 5ರಂದು ವಿಶ್ವದಾದ್ಯಂತ ಬಿಡುಗಡೆ ಆಗಿತ್ತು. ಆದರೆ ಕನ್ನಡಿಗರ ಹೋರಾಟ, ಪ್ರತಿಭಟನೆಯ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಬಿಡುಗಡೆಗೆ ಅನುಮತಿ ಸಿಕ್ಕಿರಲಿಲ್ಲ. ಒಂದು ವೇಳೆ ಕರ್ನಾಟಕದಲ್ಲಿ ಕಮಲ್ ಹಾಸನ್ ಸಿನಿಮಾ ಬಿಡುಗಡೆಯಾದರೆ ಬಂದ್ ಮಾಡುವ ಎಚ್ಚರಿಕೆಯನ್ನು ಹೋರಾಟಗಾರರು ನೀಡಿದ್ದರು.

ಕನ್ನಡ ಸಂಘಟನೆಗಳ ಹೋರಾಟದ ಹಿನ್ನೆಲೆಯಲ್ಲಿ ಕಮಲ್ ಹಾಸನ್ ಅವರ ಚಿತ್ರತಂಡ ಹೈಕೋರ್ಟ್‌ಗೆ ಭದ್ರತೆ ನೀಡುವಂತೆ ಮನವಿ ಮಾಡಿತ್ತು. ಆದರೆ ಹೈಕೋರ್ಟ್ ಅರ್ಜಿ ವಿಚಾರಣೆಯನ್ನು ಮುಂದೂಡಿರುವುದರಿಂದ ಥಗ್‌ ಲೈಫ್ ಚಿತ್ರತಂಡ ಸುಪ್ರೀಂಕೋರ್ಟ್ ಮೆಟ್ಟಿಲೇರಿತ್ತು. ಕರ್ನಾಟಕದಲ್ಲಿ ಥಗ್ ಲೈಫ್ ಸಿನಿಮಾ ಬಿಡುಗಡೆಗೆ ರಕ್ಷಣೆ ನೀಡುವಂತೆ ನಿರ್ದೇಶನ ನೀಡುವಂತೆ ಚಿತ್ರತಂಡ ಅರ್ಜಿ ಸಲ್ಲಿಸಿತ್ತು. ಆದರೆ ತಕ್ಷಣವೇ ತಮ್ಮ ಅರ್ಜಿ ವಿಚಾರಣೆಗೆ ಸುಪ್ರೀಂಕೋರ್ಟ್ ನಿರಾಕರಿಸಿದೆ. ಥಗ್‌ ಲೈಫ್ ಚಿತ್ರತಂಡಕ್ಕೆ ಹೈಕೋರ್ಟ್‌ಗೆ ಹೋಗುವಂತೆ ಸುಪ್ರೀಂಕೋರ್ಟ್ ನಿರ್ದೇಶನ ನೀಡಿದೆ.

ಈ ಸುದ್ದಿಯನ್ನೂ ಓದಿ | Kamal Haasan: ಭಾಷಾ ಹೇರಿಕೆ ವಿರುದ್ಧ ಕರ್ನಾಟಕದ ಪರವಾಗಿದ್ದೇನೆ ಎಂದ ಕಮಲ್‌ ‌

ಕರ್ನಾಟಕದಲ್ಲಿ ಕಮಲ್ ಹಾಸನ್ (Kamal Hassan Controversy) ಅವರ ಹೊಸ ಸಿನಿಮಾ ʼಥಗ್‌ ಲೈಫ್‌ʼ ಬಿಡುಗಡೆಗೆ ರಾಜ್ಯದಲ್ಲಿ ತಾತ್ಕಾಲಿಕ ತಡೆ ಬಿದ್ದಿತ್ತು. ʼಥಗ್‌ ಲೈಫ್‌ʼ (Thug Life Movie) ಬಿಡುಗಡೆಗೆ ಭದ್ರತೆ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಹೈಕೋರ್ಟ್‌ನಲ್ಲಿ ಜೂನ್‌ 3ರಂದು ನಡೆದಿತ್ತು. ವಾದ-ಪ್ರತಿವಾದ ಆಲಿಸಿದ ನ್ಯಾಯಾಧೀಶರು ಅರ್ಜಿಯ ಮುಂದಿನ ವಿಚಾರಣೆಯನ್ನು ಜೂನ್‌ 10ಕ್ಕೆ ಮುಂದೂಡಿದ್ದರು.

ಕರ್ನಾಟಕದಲ್ಲಿ ಚಿತ್ರ ಬಿಡುಗಡೆ ಮಾಡುವುದಿಲ್ಲ. ವಾಣಿಜ್ಯ ಮಂಡಳಿ ಜತೆ ಚರ್ಚೆ ನಡೆಸುತ್ತೇವೆ. ಹೀಗಾಗಿ ಒಂದು ವಾರ ವಿಚಾರಣೆ ಮುಂದೂಡಲು ಥಗ್‌ ಲೈಫ್‌ ನಿರ್ಮಾಣ ಸಂಸ್ಥೆ ರಾಜ್‌ ಕಮಲ್‌ ಫಿಲ್ಮ್ಸ್‌ ಇಂಟರ್‌ನ್ಯಾಷನಲ್‌ ಪರ ವಕೀಲರು ಮನವಿ ಮಾಡಿದ್ದರು. ಹೀಗಾಗಿ ರಾಜ್ಯದಲ್ಲಿ ʼಥಗ್‌ ಲೈಫ್‌ʼ ಬಿಡುಗಡೆಯಾಗಿರಲಿಲ್ಲ.