ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಶಿವಕುಮಾರ್‌ ದಿಲ್ಲಿಗೆ: ನಾಗೇಂದ್ರ ಮನೆಗೆ ?

ಎಸ್‌ಐಟಿ ನಾಗೇಂದ್ರ ಅವರಿಗೆ ಕ್ಲೀನ್‌ಚಿಟ್ ನೀಡಿದ್ದರೂ, ಪಕ್ಷಕ್ಕೆ ಮುಜುಗರ ಉಂಟು ಮಾಡಲು ತಾನು ಬಯಸುವುದಿಲ್ಲ ಎಂದು ನಾಗೇಂದ್ರ ಅವರು ಮುಖ್ಯಮಂತ್ರಿಗೆ ತಿಳಿಸಿದ್ದಾರೆ ಎನ್ನಲಾಗಿದೆ. ಕಾಂಗ್ರೆಸ್ ಸರಕಾರದಲ್ಲಿ ಇಷ್ಟೊಂದು ಸಂಖ್ಯೆಯಲ್ಲಿ ದಲಿತರು ಸಚಿವರಾ ಗಿರುವುದನ್ನು ಬಿಜೆಪಿಗೆ ಸಹಿಸಿಕೊಳ್ಳಲು ಸಾಧ್ಯ ವಾಗುತ್ತಿಲ್ಲ ಎಂದು ಅವರು ಆರೋಪಿಸಿದ್ದಾರೆ. ರಾಜೀನಾಮೆ ಕೊಟ್ಟು ಪಕ್ಷ ಸಂಘಟನೆಯಲ್ಲಿ ಭಾಗಿಯಾಗಲು ನಿರ್ಧರಿಸಿzರೆ ಎನ್ನಲಾಗುತ್ತಿದೆ.

ಸಚಿವ ಸ್ಥಾನಕ್ಕೆ ರಾಜೀನಾಮೆ: ನಾಗೇಂದ್ರ ಇಂಗಿತ

-

Profile
Ashok Nayak Aug 27, 2026 8:15 AM

ತನ್ನಿಂದ ಪಕ್ಷಕ್ಕೆ ಮುಜುಗರ ಬೇಡ ಎಂಬ ಉದ್ದೇಶ

ಬೆಂಗಳೂರು: ವಾಲ್ಮೀಕಿ ನಿಗಮದ ಹಗರಣದ ಆರೋಪ ಹೊತ್ತಿರುವ ಸಚಿವ ಬಿ.ನಾಗೇಂದ್ರ ಅವರ ರಾಜೀನಾಮೆಗೆ ಪ್ರತಿಪಕ್ಷಗಳು ನಿರಂತರ ಒತ್ತಡ ಹಾಕುತ್ತಿರುವ ನಡುವೆಯೇ ತಮ್ಮ ಸ್ಥಾನಕ್ಕೆ ರಾಜೀನಾಮೆಗೆ ನೀಡುವ ಇಂಗಿತ ವ್ಯಕ್ತಪಡಿಸಿದ್ದಾರೆ ಎನ್ನಲಾಗುತ್ತಿದೆ. ಇದರ ನಡುವೆಯೇ ದೆಹಲಿಗೆ ತೆರಳಲಿರುವ ಮುಖ್ಯಮಂತ್ರಿ ಹೈಕಮಾಂಡ್ ಅನ್ನು ಭೇಟಿಯಾಗುತ್ತಿರುವುದು ಕುತೂಹಲ ಮೂಡಿ ಸಿದೆ. ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿರೋಧಪಕ್ಷಗಳು ಪ್ರತಿಭಟನೆ ನಡೆಸಿದ್ದವು.

ಹೀಗಾಗಿ ವಿಧಾನಮಂಡಲದ ಮಳೆಗಾಲದ ಅಧಿವೇಶನಕ್ಕೂ ಅಡ್ಡಿಯಾಗಿ ನಿಗದಿತ ದಿನಕ್ಕಿಂತ ಮೂರು ದಿನ ಮೊದಲೇ ಮೊಟಕುಗೊಳಿಸಲಾಗಿತ್ತು. ಅಲ್ಲದೆ ಬಿಜೆಪಿ ಹಾಗೂ ಜೆಡಿಎಸ್ ಜಂಟಿ ಯಾಗಿ ಪಾದಯಾತ್ರೆ ಹಮ್ಮಿಕೊಂಡಿದೆ. ಹೀಗಾಗಿ ನನ್ನನ್ನು ಅನಗತ್ಯವಾಗಿ ಟಾರ್ಗೆಟ್ ಮಾಡು ತ್ತಿದ್ದಾರೆ. ನನ್ನಿಂದ ಪಕ್ಷಕ್ಕೆ ಮುಜುಗರ ಆಗುವುದು ಬೇಡ ಎಂದು ನಾಗೇಂದ್ರ ಅವರು ಮುಖ್ಯಮಂತ್ರಿಗೆ ತಿಳಿಸಿದ್ದಾರೆ.

ಈ ಕುರಿತು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರೊಂದಿಗೆ ದೂರವಾಣಿ ಮೂಲಕ ಮಾತ ನಾಡಿ ಚರ್ಚಿಸಿದ್ದಾರೆ ಎನ್ನಲಾಗಿದೆ. ಆದರೆ ಹೈಕ ಮಾಂಡ್ ಜೊತೆ ಚರ್ಚಿಸಿ ತಿಳಿಸುವುದಾಗಿ ಶಿವಕು ಮಾರ್ ತಿಳಿಸಿದ್ದಾರೆ. ಹೈಕಮಾಂಡ್‌ನೊಂದಿಗೆ ಚಚಿ ಸುವವರೆಗೆ ಯಾವುದೇ ನಿರ್ಧಾರ ಕೈಗೊಳ್ಳದಂತೆ ಮುಖ್ಯಮಂತ್ರಿಗಳು ನಾಗೇಂದ್ರ ಅವರಿಗೆ ಸೂಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಎಸ್‌ಐಟಿ ನಾಗೇಂದ್ರ ಅವರಿಗೆ ಕ್ಲೀನ್‌ಚಿಟ್ ನೀಡಿದ್ದರೂ, ಪಕ್ಷಕ್ಕೆ ಮುಜುಗರ ಉಂಟು ಮಾಡಲು ತಾನು ಬಯಸುವುದಿಲ್ಲ ಎಂದು ನಾಗೇಂದ್ರ ಅವರು ಮುಖ್ಯಮಂತ್ರಿಗೆ ತಿಳಿಸಿದ್ದಾರೆ ಎನ್ನಲಾಗಿದೆ. ಕಾಂಗ್ರೆಸ್ ಸರಕಾರದಲ್ಲಿ ಇಷ್ಟೊಂದು ಸಂಖ್ಯೆಯಲ್ಲಿ ದಲಿತರು ಸಚಿವರಾ ಗಿರುವುದನ್ನು ಬಿಜೆಪಿಗೆ ಸಹಿಸಿಕೊಳ್ಳಲು ಸಾಧ್ಯ ವಾಗುತ್ತಿಲ್ಲ ಎಂದು ಅವರು ಆರೋಪಿಸಿದ್ದಾರೆ. ರಾಜೀನಾಮೆ ಕೊಟ್ಟು ಪಕ್ಷ ಸಂಘಟನೆಯಲ್ಲಿ ಭಾಗಿಯಾಗಲು ನಿರ್ಧರಿಸಿzರೆ ಎನ್ನಲಾಗುತ್ತಿದೆ.

ವಿಸ್ತರಣೆ ಸಮಸ್ಯೆ: ಸಿಎಂ ಡಿ.ಕೆ.ಶಿವಕುಮಾರ್ ದೆಹಲಿಗೆ ಹೋಗಿ ಹೈಕಮಾಂಡ್ ಜೊತೆ ಮಹತ್ವದ ಚರ್ಚೆ ನಡೆಸಲಿದ್ದಾರೆ. ಸಚಿವ ಸ್ಥಾನಕ್ಕಾಗಿ ಕೆಲವು ಹಿರಿಯ ನಾಯಕರು ಈಗಾಗಲೇ ಪಟ್ಟು ಹಿಡಿದಿದ್ದಾರೆ. ಇದೇ ವೇಳೆ ಸಂಪುಟದಿಂದ ಕೈಬಿಡಲಾಗುತ್ತದೆ ಎಂಬ ಚರ್ಚೆಯಿಂದ ಕೆಲ ನಾಯಕರು ಅಸಮಾಧಾನಗೊಂಡಿದ್ದಾರೆ. ಹೀಗಾಗಿ ಸಂಪುಟ ಪುನಾರಚನೆಯ ಮೂಲಕ ಅಸಮಾಧಾನ ಗೊಂಡಿರುವ ಹಾಗೂ ರೆಬೆಲ್ ನಾಯಕರಿಗೆ ಅವಕಾಶ ನೀಡುವ ಸಾಧ್ಯತೆಯ ಬಗ್ಗೆಯೂ ಚರ್ಚೆ ನಡೆಯುತ್ತಿದೆ. ಸಂಪುಟದಲ್ಲಿ ಹಿರಿತನಕ್ಕೆ ಆದ್ಯತೆ ನೀಡದಿರುವುದು ಹಾಗೂ ಜಾತಿ ಸಮೀಕರಣದ ವಿಚಾರದಲ್ಲೂ ಕೆಲ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.

ಜನತಾ ಪರಿವಾರದ ಹಿನ್ನೆಲೆಯ 17 ಮಂದಿಗೆ ಸಚಿವ ಸ್ಥಾನ ನೀಡಿರುವುದೇಕೆ ಎಂಬ ಪ್ರಶ್ನೆಯನ್ನೂ ಕೆಲವರು ಎತ್ತಿದ್ದಾರೆ. ಹೀಗಾಗಿ ಸಂಪುಟದಲ್ಲಿನ ಸಣ್ಣ ಬದಲಾವಣೆಗಳು ಆಗಲಿವೆ ಎನ್ನುವ ಮಾತು ಗಳು ಕೇಳಿಬಂದಿವೆ. ಇದರ ಮಧ್ಯೆ ಸಚಿವ ಸ್ಥಾನ ಸಿಗದಿದ್ದಕ್ಕೆ ಬೇಸರಗೊಂಡಿರುವ ಶಾಸಕರಿಗೆ ನಿಗಮ-ಮಂಡಳಿ ಅಧ್ಯಕ್ಷರ ನೀಡುವ ಬಗ್ಗೆಯೂ ಚಿಂತನೆ ನಡೆದಿವೆ. ಹಾಗೇ ಖಾಲಿ ಇರುವ ಮಹಿಳಾ ಕೋಟಾ ಸಚಿವ ಸ್ಥಾನ ಭರ್ತಿ ಬಾಕಿ ಇದೆ.

ಹೀಗಾಗಿ ಇವುಗಳ ಬಗ್ಗೆ ಹೈಕಮಾಂಡ್ ಜೊತೆ ಚರ್ಚಿಸಲು ಸಿಎಂ ಶಿವಕುಮಾರ್ ದೆಹಲಿಗೆ ತೆರಳಿ ದ್ದಾರೆ. ಈ ಮಧ್ಯೆ ಸಚಿವ ಸತೀಶ್ ಜಾರಕಿಹೊಳಿ ಅವರು ದೆಹಲಿಗೆ ದಿಢೀರ್ ಪ್ರಯಾಣ ಬೆಳೆಸಿದ್ದಾರೆ. ನಾಗೇಂದ್ರ ರಾಜೀನಾಮೆ ವದಂತಿ ಬೆನ್ನ ಸಚಿವ ಸತೀಶ್ ಜಾರಕಿಹೊಳಿ ಹೈಕಮಾಂಡ್ ನಾಯಕರ ಭೇಟಿಗೆ ಮುಂದಾಗಿದ್ದಾರೆ.

ದೆಹಲಿಗೆ ತೆರಳಲಿರುವ ಸಿಎಂ, ಕೇಂದ್ರದ ಸಚಿವರ ಭೇಟಿ ಹಾಗೂ ಕಾವೇರಿ ನದಿ ನೀರಿನ ವಿವಾದದ ಸಂಬಂಧ ಸುಪ್ರೀಂಕೋರ್ಟ್ ವಕೀಲರೊಂದಿಗೆ ಚರ್ಚೆ ಮಾಡಲಿದ್ದಾರೆ. ಬಳಿಕ ಕಾಂಗ್ರೆಸ್ ಹೈಕಮಾಂಡ್ ನಾಯಕರ ಭೇಟಿ ಮಾಡಲಿದ್ದಾರೆ ಎಂದು ತಿಳಿದುಬಂದಿದೆ. ಹೈಕಮಾಂಡ್ ನಾಯಕರ ಭೇಟಿ ಮಾಡಿ ಚರ್ಚೆ ನಡೆಸಿ ನಾಳೆ ಸಂಜೆಯೇ ದೆಹಲಿಯಿಂದ ವಾಪಸ್ ಆಗಲಿದ್ದಾರೆ.

image

ನಾಗೇಂದ್ರ ಅವರಿಂದ ರಾಜೀನಾಮೆ ಪಡೆಯುವ ಪ್ರಶ್ನೆಯೇ ಉದ್ಭವಿಸಲ್ಲ. ನಾನು ದೆಹಲಿಯಲ್ಲಿ ಕಾಂಗ್ರೆಸ್ ಕಚೇರಿ ಶಂಕುಸ್ಥಾಪನೆಗಾಗಿ ಹೋಗುತ್ತಿದ್ದೇನೆ. ನಮ್ಮ ಪಕ್ಷದ ಎಲ್ಲಾ ಶಾಸಕರು ಶಿಸ್ತಿನ ಸಿಪಾಯಿಗಳು, ಪಕ್ಷದ ಒಳಿತಿಗೆ ಕೆಲಸ ಮಾಡುತ್ತೇವೆ.

-ಡಿ.ಕೆ.ಶಿವಕುಮಾರ್, ಮುಖ್ಯಮಂತ್ರಿ
image

187 ಕೋಟಿ ರು. ಹಣ ಲೂಟಿ ಆಗಿದೆ. ದಲಿತರಿಗೆ ನ್ಯಾಯ ಕೊಡಿಸುವ ನಿಟ್ಟಿನಲ್ಲಿ ಆ ಹಣ ವಾಪಸ್ ಬರಬೇಕು. ಆ ಸಮುದಾಯದ ಅಭಿವೃದ್ಧಿಗೆ ಹಣ ಬಳಕೆ ಆಗಬೇಕು. ಎಲ್ಲಿಯವರೆಗೆ ಬೇಕೋ ಅಲ್ಲಿಯವರೆಗೆ ಹೋರಾಟಕ್ಕೆ ಸಿದ್ಧ.

-ಬಿ.ವೈ.ವಿಜಯೇಂದ್ರ, ಬಿಜೆಪಿ ರಾಜ್ಯಾಧ್ಯಕ್ಷ
image

ಮುಖ್ಯಮಂತ್ರಿ ಅವರು ದೆಹಲಿಗೆ ಹೋಗುತ್ತಾರೆ. ಹೈಕಮಾಂಡ್ ಭೇಟಿಯಾದರೆ ಅಲ್ಲಿ ಈ ಬಗ್ಗೆ ಚರ್ಚೆಗಳು ನಡೆಯಬಹುದು. ಸಂಪುಟ ಪುನರ್ ರಚನೆ ಊಹಾಪೋಹವಷ್ಟೇ. ಹೈಕಮಾಂಡ್ ತೀರ್ಮಾನದಂತೆ ಆಗುತ್ತದೆ.

-ಡಾ.ಜಿ.ಪರಮೇಶ್ವರ್, ಡಿಸಿಎಂ