ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Dearness Allowance: ಬಾಕಿ ತುಟ್ಟಿಭತ್ಯೆ ಬಿಡುಗಡೆ ಮಾಡಿ; ಸಿಎಂಗೆ ರಾಜ್ಯ ಸರ್ಕಾರಿ ನೌಕರರ ಸಂಘ ಮನವಿ

DA arrears: ಪ್ರಸ್ತುತ ಕೇಂದ್ರ ಸರ್ಕಾರವು ಅಖಿಲ ಭಾರತ ಬೆಲೆ ಸೂಚ್ಯಂಕವನ್ನಾಧರಿಸಿ ಕೇಂದ್ರ ಸರ್ಕಾರಿ ನೌಕರರಿಗೆ ಶೇ. 3%ರಷ್ಟು ತುಟ್ಟಿಭತ್ಯೆಯನ್ನು ಮಂಜೂರು ಮಾಡಿ ಆದೇಶಿಸಿದೆ. ಆದ್ದರಿಂದ, ಕರ್ನಾಟಕ ರಾಜ್ಯದ ಸರ್ಕಾರಿ ನೌಕರರಿಗೂ ತುಟ್ಟಿಭತ್ಯೆಯನ್ನು ಸಂಪೂರ್ಣ ನಗದು ರೂಪದಲ್ಲಿ ನೀಡಲು ಕ್ರಮ ವಹಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಅವರಿಗೆ ಕರ್ನಾಟಕ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್‌.ಷಡಾಕ್ಷರಿ ಕೋರಿದ್ದಾರೆ.

ಬಾಕಿ ತುಟ್ಟಿಭತ್ಯೆ ಬಿಡುಗಡೆ ಮಾಡಲು ರಾಜ್ಯ ಸರ್ಕಾರಿ ನೌಕರರ ಸಂಘ ಮನವಿ

-

Prabhakara R Prabhakara R Oct 7, 2025 6:55 PM

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಜುಲೈ 1ರಿಂದ ಅನ್ವಯವಾಗುವಂತೆ ಬಾಕಿ ಇರುವ ತುಟ್ಟಿಭತ್ಯೆಯನ್ನು (Dearness Allowance) ರಾಜ್ಯ ಸರ್ಕಾರವು ನಗದು ರೂಪದಲ್ಲಿ ಬಿಡುಗಡೆ ಮಾಡಬೇಕು ಎಂದು ಸಿಎಂ ಸಿದ್ದರಾಮಯ್ಯ ಅವರಿಗೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಮನವಿ ಮಾಡಿದೆ. ಅಖಿಲ ಭಾರತ ಬೆಲೆ ಸೂಚ್ಯಂಕವನ್ನಾಧರಿಸಿ ಕೇಂದ್ರ ಸರ್ಕಾರವು ತನ್ನ ನೌಕರರಿಗೆ ತುಟ್ಟಿಭತ್ಯೆಯನ್ನು ಮಂಜೂರು ಮಾಡಿದ ದಿನಾಂಕದಿಂದಲೇ ಕರ್ನಾಟಕ ರಾಜ್ಯ ಸರ್ಕಾರವು ರಾಜ್ಯ ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆಯನ್ನು ಮಂಜೂರು ಮಾಡುವುದು ಸಹ ಸಂಪ್ರದಾಯವಾಗಿರುತ್ತದೆ. ಹೀಗಾಗಿ ಬಾಕಿ ಇರುವ ತುಟ್ಟಿಭತ್ಯೆ ಬಿಡುಗಡೆಗೆ ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಕೋರಿದೆ.

ಪ್ರಸ್ತುತ ಕೇಂದ್ರ ಸರ್ಕಾರವು ಅಖಿಲ ಭಾರತ ಬೆಲೆ ಸೂಚ್ಯಂಕವನ್ನಾಧರಿಸಿ ಉಲ್ಲೇಖಿತ ಆದೇಶದಲ್ಲಿ ದಿನಾಂಕ: 01-07-2025ರಿಂದ ಅನ್ವಯವಾಗುವಂತೆ ಕೇಂದ್ರ ಸರ್ಕಾರಿ ನೌಕರರಿಗೆ ಶೇ. 3%ರಷ್ಟು ತುಟ್ಟಿಭತ್ಯೆಯನ್ನು ಮಂಜೂರು ಮಾಡಿ ಆದೇಶಿಸಿದೆ. ಆದ್ದರಿಂದ, ಕರ್ನಾಟಕ ರಾಜ್ಯದ ಸರ್ಕಾರಿ ನೌಕರರಿಗೂ ದಿನಾಂಕ: 01-07-2025 ರಿಂದ ಅನ್ವಯವಾಗುವಂತೆ ಶೇ. 3%ರಷ್ಟು ತುಟ್ಟಿಭತ್ಯೆಯನ್ನು ಸಂಪೂರ್ಣ ನಗದು ರೂಪದಲ್ಲಿ ನೀಡಿ ಆದೇಶ ಹೊರಡಿಸಲು ಸಂಬಂಧಪಟ್ಟವರಿಗೆ ನಿರ್ದೇಶನ ನೀಡಲು ಕರ್ನಾಟಕ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್‌.ಷಡಾಕ್ಷರಿ ಕೋರಿದ್ದಾರೆ.

ದಸರಾ ರಜೆ ವಿಸ್ತರಣೆ; ಸಿಎಂಗೆ ರಾಜ್ಯ ಸರ್ಕಾರಿ ನೌಕರರ ಸಂಘ ಧನ್ಯವಾದ

ಜಾತಿ ಸಮೀಕ್ಷೆ ಹಿನ್ನೆಲೆಯಲ್ಲಿ ಶಾಲೆಗಳಿಗೆ ದಸರಾ ರಜೆ ವಿಸ್ತರಣೆ ಮಾಡಿರುವುದಕ್ಕೆ ಸಿಎಂ ಸಿದ್ದರಾಮಯ್ಯ ಅವರಿಗೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಧನ್ಯವಾದ ಸಲ್ಲಿದೆ. ಈ ಬಗ್ಗೆ ಪತ್ರಿಕೆ ಹೇಳಿಕೆ ನೀಡಿರುವ ಸಂಘದ ಅಧ್ಯಕ್ಷ ಸಿ.ಎಸ್.ಷಡಾಕ್ಷರಿ ಅವರು, ಸಂಘದ ಕೋರಿಕೆಯನ್ನು ಪರಿಗಣಿಸಿ ದಸರಾ ರಜಾವಧಿಯನ್ನು ಸಮೀಕ್ಷಾ ಕಾರ್ಯವನ್ನು ಒಳಗೊಂಡಂತೆ ವಿಸ್ತರಣೆ ಮಾಡಿದಕ್ಕಾಗಿ ಮುಖ್ಯಮಂತ್ರಿಗಳಿಗೆ ಧನ್ಯವಾದಗಳು ಸಂಘವು ಸಲ್ಲಿಸುತ್ತದೆ ಎಂದು ತಿಳಿಸಿದ್ದಾರೆ.

ಕರ್ನಾಟಕ ರಾಜ್ಯದಲ್ಲಿ ಸರ್ಕಾರಿ ನೌಕರರು ಹಾಗೂ ಶಿಕ್ಷಕರ ಸಹಕಾರದಿಂದ ಸಾಮಾಜಿಕ ಶೈಕ್ಷಣಿಕ ಸಮೀಕ್ಷಾ ಕಾರ್ಯಕ್ರಮ ನಡೆಯುತ್ತಿದೆ. ಈ ಸಮೀಕ್ಷಾ ಕಾರ್ಯದಲ್ಲಿ ಬಹಳಷ್ಟು ಜನ ಶಿಕ್ಷಕರನ್ನ ಸರ್ಕಾರ ನೇಮಕಗೊಳಿಸಿದ್ದು, ಹಲವಾರು ಕಾರಣಗಳಿಗಾಗಿ ಸಮೀಕ್ಷಾ ಕಾರ್ಯ ನಿರ್ದಿಷ್ಟ ಗುರಿಯನ್ನು ಸಾಧಿಸಿರುವುದಿಲ್ಲ. ಅಲ್ಲದೆ ಪ್ರಾಥಮಿಕ ಶಾಲಾ ಹಾಗೂ ಪ್ರೌಢಶಾಲಾ ಶಿಕ್ಷಕರಿಗೆ ಶಾಲೆಗಳನ್ನು ಬೆಳಗ್ಗೆ 8 ರಿಂದ ಮಧ್ಯಾಹ್ನ 1 ಗಂಟೆವರೆಗೆ ನಡೆಸಿ ತದನಂತರ ಸಮೀಕ್ಷಾ ಕಾರ್ಯವನ್ನು ನಿರ್ವಹಿಸಲು ನೆನ್ನೆ ಶಿಕ್ಷಣ ಇಲಾಖೆ ಆದೇಶವನ್ನು ಹೊರಡಿಸಿತ್ತು.

ಈ ಸುದ್ದಿಯನ್ನೂ ಓದಿ | Dasara holidays: ಶಾಲೆಗಳ ದಸರಾ ರಜೆ ಅ.18 ರವರೆಗೆ ವಿಸ್ತರಣೆ; ಮೃತ ಸಮೀಕ್ಷಕರ ಕುಟುಂಬಕ್ಕೆ 20 ಲಕ್ಷ ಪರಿಹಾರ

ಈ ಸಂಬಂಧ ಕರ್ನಾಟಕ ರಾಜ್ಯ ಸರ್ಕಾರಿ ನೌಕರ ಸಂಘ ಮುಖ್ಯಮಂತ್ರಿಗಳಿಗೆ ಮನವಿಯನ್ನು ಸಲ್ಲಿಸಿ ಸಮೀಕ್ಷಾ ಕಾರ್ಯದಲ್ಲಿ ಶಿಕ್ಷಕರು ತೊಡಗಿಸಿಕೊಂಡಿರುವ ಕಾರಣ ಹಾಗೂ ದಸರಾ ರಜೆಯನ್ನು ಶಿಕ್ಷಕರು ಬಳಸಿಕೊಳ್ಳದೆ ಇರುವ ಕಾರಣಕ್ಕಾಗಿ ಸಮೀಕ್ಷಾ ರಜಾವಧಿಯನ್ನು ಅಕ್ಟೋಬರ್ 18 ನೇ ತಾರೀಖಿನವರೆಗೆ ವಿಸ್ತರಿಸಲು ಕೋರಲಾಗಿತ್ತು. ಇಂದು ಮುಖ್ಯಮಂತ್ರಿಗಳು ಅಧಿಕಾರಿಗಳ ಜೊತೆ ಸಭೆಯನ್ನು ನಡೆಸಿ ಸಂಘದ ಕೋರಿಕೆಯಂತೆ ರಜಾವಧಿಯನ್ನು ಅಕ್ಟೋಬರ್ 18ರವರೆಗೆ ವಿಸ್ತರಣೆ ಮಾಡಿದ್ದಾರೆ ಎಂದು ತಿಳಿಸಿದ್ದಾರೆ.